Breaking News
Home / ಕೊರೊನಾವೈರಸ್ (page 13)

ಕೊರೊನಾವೈರಸ್

ಒಂದೇ ದಿನದಲ್ಲಿ ಅತಿ ಹೆಚ್ಚು 1,074 ಮಂದಿ ಗುಣಮುಖ – 83 ಮಂದಿ ಕೊರೊನಾಗೆ ಬಲಿ

ನವದೆಹಲಿ: ದೇಶದಲ್ಲಿ ದಿನ ಕಳೆದಂತೆ ಕೊರೊನಾ ಮಹಾಮಾರಿಯ ಅಟ್ಟಹಾಸ ಮೇರೆ ಮೀರುತ್ತಿದೆ. ಕಳೆದ 24 ಗಂಟೆಗಳಲ್ಲಿ 2,573 ಹೊಸ ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿದ್ದೂ, ಸೋಂಕಿತರ ಸಂಖ್ಯೆ 43,836ಕ್ಕೆ ಏರಿದೆ. 83 ಮಂದಿ ಮೃತ ಪಟ್ಟಿದ್ದು, ದೇಶದಲ್ಲಿ ಒಟ್ಟು 1,389 ಮಂದಿ ಮೃತಪಟ್ಟಿದ್ದಾರೆ. ದೇಶದ ಶೇ.52ರಷ್ಟು ಪ್ರಕರಣಗಳು ಕೇವಲ ಮಹಾರಾಷ್ಟ್ರ, ದೆಹಲಿ, ಗುಜರಾತ್‍ನಿಂದಲೇ ಬಂದಿವೆ.ಕಳೆದ 24 ಗಂಟೆಯಲ್ಲಿ 1,074 ಮಂದಿ ಗುಣಮುಖರಾಗಿದ್ದಾರೆ. ಒಂದೇ ದಿನದಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ನಿನ್ನೆ …

Read More »

ಮದುವೆ ಕಾರ್ಯಕ್ರಮಗಳಿಗೆ ಷರತ್ತುಬದ್ಧ ಅನುಮತಿ …………

ನವದೆಹಲಿ: ದೇಶಾದ್ಯಂತ 2 ವಾರಗಳ ಕಾಲ ಲಾಕ್‍ಡೌನ್ ವಿಸ್ತರಣೆಯಾಗಿದೆ. ಆದರೆ ಕೇಂದ್ರ ಸರ್ಕಾರ ಗುರುತಿಸಿರುವ ಗ್ರೀನ್ ಝೋನ್ ಹಾಗೂ ಆರೆಂಜ್ ಝೋನ್‍ಗಳಲ್ಲಿ ಲಾಕ್‍ಡೌನ್‍ನಿಂದ ಕೆಲ ವಿನಾಯ್ತಿಗಳನ್ನು ನೀಡಲಾಗಿದೆ. ಎಂಎಚ್‍ಎ ಆದೇಶ ಅನ್ವಯ ಮೇ.3ರ ಬಳಿಕವೂ 2 ವಾರ ಲಾಕ್‍ಡೌನ್ ಮುಂದುವರಿಯಲಿದೆ. ಆದರೆ ಹಸಿರು ವಲಯಗಳಲ್ಲಿ ಮದುವೆ ಸಮಾರಂಭಗಳಿಗೆ ಅವಕಾಶ ನೀಡಲಾಗಿದೆ. ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವುದು ಕಡ್ಡಾಯ ಹಾಗೂ ಸಮಾರಂಭದಲ್ಲಿ ಭಾಗವಹಿಸಲು ಕೇವಲ 50 ಜನರಿಗಷ್ಟೇ ಅವಕಾಶ ನೀಡಲಾಗಿದೆ. …

Read More »

ಚೀನಾದಿಂದ ನಿರ್ಗಮಿಸಿದ ಕಂಪನಿಗಳಿಗೆ ಭಾರತದಲ್ಲಿ ರತ್ನಗಂಬಳಿ, ಮೋದಿ ಚಾಣಾಕ್ಷ ನಡೆ..!

ನವದೆಹಲಿ,ಮೇ2-ದೇಶವನ್ನು ಕಾಡುತ್ತಿರುವ ಕೊರೊನಾ ಸಂಕಷ್ಟದಲ್ಲಿ ದೇಶವನ್ನು ಆರ್ಥಿಕ ಬಿಕ್ಕಟ್ಟಿನಿಂದ ಪಾರು ಮಾಡಲು ಪ್ರಧಾನಿ ನರೇಂದ್ರ ಮೋದಿ ಅನೇಕ ಮಾರ್ಗೋಪಾಯಗಳನ್ನು ಅನುಷ್ಠಾನಗೊಳಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ. ಇಡೀ ವಿಶ್ವಕ್ಕೆ ಕೊರೊನಾ ವೈರಸ್ ಕೊಡುಗೆ ನೀಡಿ ಅಪಾರ ಸಾವುನೋವಿಗೆ ಕಾರಣವಾಗಿರುವ ಚೀನಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಅಮೆರಿಕ, ಜಪಾನ್ ಸೇರಿದಂತೆ ಅನೇಕ ದೇಶಗಳು ಕಮ್ಯುನಿಸ್ಟ್ ರಾಷ್ಟ್ರದಿಂದ ತನ್ನ ಕಂಪನಿಗಳನ್ನು ಹಿಂದಕ್ಕೆ ಕರೆಸಿಕೊಂಡಿವೆ. ಇದರ ಸದಾವಕಾಶ ಪಡೆಯುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಚತುರ ನಡೆ ಅನುಸರಿಸಿದ್ದಾರೆ. …

Read More »

ಬಾಲಚಂದ್ರ ಜಾರಕಿಹೊಳಿ ಮಾಡುತ್ತಿರುವ ಪುಣ್ಯದ ಕೆಲಸದಲ್ಲಿ ನಾವು ಭಾಗಿಯಾಗಿರುವ ಸಾರ್ಥಕದ ಕಾರ್ಯ

ಮೂಡಲಗಿ: ಲಾಕ್ ಡೌನ್‍ದಂತಹ ಸಂಕಷ್ಟದ ವೇಳೆಯಲ್ಲಿ ಕ್ಷೇತ್ರದ ಜನರ ಸಹಾಯಕ್ಕೆ ಮುಂದೆ ಬಂದು ಅರಭಾಂವಿ ಕ್ಷೇತ್ರದ ಎಲ್ಲ ಕುಟುಂಬಗಳಿಗೆ ದಿನ ನಿತ್ಯದ ಆಹಾರ ಧಾನ್ಯಗಳನ್ನು ನೀಡುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಮಾದರಿಯಾಗಿದೆ. ಇವರು ಮಾಡುತ್ತಿರುವ ಪುಣ್ಯದ ಕೆಲಸದಲ್ಲಿ ನಾವು ಭಾಗಿಯಾಗಿರುವ ಸಾರ್ಥಕದ ಕಾರ್ಯವಾಗಿದೆ ಎಂದು ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ ತಿಳಿಸಿದರು. ಶುಕ್ರವಾರದಂದು ತಾಲೂಕಿನ ನಾಗನೂರ ಪಟ್ಟಣದಲ್ಲಿ ಶಾಸಕ ಮತ್ತು ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು …

Read More »

ಐಟಿ ವೃತ್ತಿಪರರ ವರ್ಕ್‌ ಫ್ರಮ್‌ ಹೋಮ್‌ ಜು. 31ರ ವರೆಗೆ ವಿಸ್ತರಣೆ

ಬೆಂಗಳೂರು: ಕೊವಿಡ್‌ ಹಿನ್ನೆಲೆಯಲ್ಲಿ ಐಟಿ ವೃತ್ತಿಪರರು ಮುಂದಿನ ಜುಲೈ 31ರ ವರೆಗೆ ಮನೆಯಿಂದಲೇ ಕೆಲಸ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೊರೊನಾ ಲಾಕ್ ಡೌನ್ ನಿರ್ಬಂಧದಿಂದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಆಗಿರುವ ಸಮಸ್ಯೆಗಳ ಕುರಿತಂತೆ ಎಲ್ಲ ರಾಜ್ಯಗಳ ಮಾಹಿತಿ ತಂತ್ರಜ್ಞಾನ ಸಚಿವರ ಜತೆ ನಡೆಸಿದ ವೀಡಿಯೋ ಕಾನ್ಫರನ್ಸ್ ನಲ್ಲಿ ಕೇಂದ್ರ ಐಟಿ ಮತ್ತು ದೂರಸಂಪರ್ಕ ಖಾತೆ ಸಚಿವ ರವಿ ಶಂಕರ್​ ಪ್ರಸಾದ್​ ಅವರು ಈ ವಿಷಯ ಪ್ರಕಟಿಸಿದ್ದಾರೆ. ಲಾಕ್ …

Read More »

ತೂಕದಲ್ಲಿ ಮೋಸ ಮಾಡಿದ 146 ಪಡಿತರ ಅಂಗಡಿ ಲೈಸೆನ್ಸ್ ಅಮಾನತು : ಸಚಿವ ಗೋಪಾಲಯ್ಯ

ದಾವಣಗೆರೆ : ಚಿತ್ರದುರ್ಗದ ಬಳಿಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಗೋಪಾಲಯ್ಯ ಅವರು ದಾವಣಗೆರೆ ಬೇಟಿ ನೀಡದರು. ನಂತರ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನ ಸಭೆ ನಡೆಸಿ ಇಲಾಖೆಗೆ ಸಂಭಂದಪಟ್ಟ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವ ಕೆ. ಗೋಪಾಲಯ್ಯ ಅವರು, ದೇಶದಾದ್ಯಂತ ಕೋವಿಡ್- 19 ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರ ಲಾಕ್ ಡೌನ್ ಮಾಡ್ತಿದೆ. ಹಾಗಾಗಿ …

Read More »

ಬಾಲಿವುಡ್ ನಟ ಇರ್ಫಾನ್ ಖಾನ್‍ಗೆ ಕೊರೊನಾವೈರಸ್ ಪತ್ತೆ…….

ಮುಂಬೈ: ಬಾಲಿವುಡ್ ನಟ ಇರ್ಫಾನ್ ಖಾನ್‍ಗೆ    ಕೊರೊನಾವೈರಸ್ ಪತ್ತೆಯಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರವಷ್ಟೇ ಅವರ ತಾಯಿ ತೀರಿಕೊಂಡಿದ್ದರು. ಆದರೆ ಲಾಕ್‍ಡೌನ್ ಹಿನ್ನೆಲೆ ರರ್ಫಾನ್ ಖಾನ್ ಅವರು ತಾಯಿಯ ಅಂತಿಮ ಸಂಸ್ಕಾರಕ್ಕೆ ಹೋಗಿರಲಿಲ್ಲ. ವಿಡಿಯೋ ಕಾನ್ಫರೆನ್ಸ್ ಮೂಲಕ ಅಂತಿಮ ದರ್ಶನ ಪಡೆದಿದ್ದರು. ಮುಂಬೈನ ಕೋಕಿಲಾಬೆನ್ ಧೀರೂಭಾಯ್ ಅಂಬಾನಿ ಅಸ್ಪತ್ರೆಯ ಐಸಿಯುನಲ್ಲಿ ಇರ್ಫಾನ್ ಖಾನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ವೈದ್ಯಾಧಿಕಾರಿಗಳು ದೃಢಪಡಿಸಿದ್ದು,   ಕೊರೊನಾವೈರಸ್  ನಿಂದಾಗಿ ಇರ್ಫಾನ್ ಅವರನ್ನು ಅಬ್ಸರ್ವೇಶನ್‍ನಲ್ಲಿಡಲಾಗಿದೆ ಎಂದು …

Read More »

ದೇಶದಲ್ಲೇ ಮೊದಲ ಬಾರಿಗೆ ದಕ್ಷಿಣ ಕೊರಿಯಾ ರ‍್ಯಾಪಿಡ್ ಟೆಸ್ಟಿಂಗ್ ಕಿಟ್‍ಗಳ ಪ್ರಾಯೋಗಿಕ ಪರೀಕ್ಷೆಗೆ ಕೋಲಾರ ಜಿಲ್ಲೆ ಮುಂದಾಗಿದೆ.

ಕೋಲಾರ: ದೇಶದಲ್ಲೇ ಮೊದಲ ಬಾರಿಗೆ ದಕ್ಷಿಣ ಕೊರಿಯಾ ರ‍್ಯಾಪಿಡ್ ಟೆಸ್ಟಿಂಗ್ ಕಿಟ್‍ಗಳ ಪ್ರಾಯೋಗಿಕ ಪರೀಕ್ಷೆಗೆ ಕೋಲಾರ ಜಿಲ್ಲೆ ಮುಂದಾಗಿದೆ. ಸುಮಾರು 6 ಸಾವಿರ ಮಂದಿಗೆ ರ‍್ಯಾಪಿಡ್ ಟೆಸ್ಟ್ ಮಾಡುವುದಕ್ಕೆ ಕೋಲಾರ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಜ್ಜಾಗಿದೆ. ಎಲ್ಲೆಡೆ ಸಂಚಲನ ಮೂಡಿಸಿರುವ ಹಾಗೂ ಸಾಕಷ್ಟು ಸಮಯ ವ್ಯರ್ಥ ಮಾಡುತ್ತಿರುವ ರಕ್ತ ಮಾದರಿ ಹಾಗೂ ಗಂಟಲು ದ್ರವ ಸಂಗ್ರಹಿಸಿ ಎರಡು ದಿನಗಳ ಕಾಲ ವರದಿಗಾಗಿ ಕಾಯುವ ಬದಲಿಗೆ ಪ್ರಾಥಮಿಕ ಹಂತದಲ್ಲೆ ಪರೀಕ್ಷೆಗೆ …

Read More »

ಕೋವಿಡ್-19 ಪರೀಕ್ಷಿಸಲು ಚೀನಾದಿಂದ ಖರೀದಿಸಿದ್ದ ಕಿಟ್ ಗಳು ಕಳಪೆ: (ಐಸಿಎಂಆರ್) ಸೂಚಿಸಿದೆ.

ನವದೆಹಲಿ: ಕೋವಿಡ್-19 ಪರೀಕ್ಷಿಸಲು ಚೀನಾದಿಂದ ಖರೀದಿಸಿದ್ದ ಕಿಟ್ ಗಳು ಕಳಪೆಯಾಗಿದ್ದು ಅವುಗಳನ್ನು ಬಳಸಬೇಡಿ ಎಂದು ರಾಜ್ಯ ಸರ್ಕಾರಗಳಿಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಸೂಚಿಸಿದೆ. ಕಳಪೆ ಗುಣಮಟ್ಟದ ಕಿಟ್ ಗಳ ವಿಚಾರವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಅವುಗಳನ್ನು ಪೂರೈಸಿದ ಕಂಪನಿಗಳಿಗೆ ವಾಪಸ್ ಕಳುಹಿಸಿ ಎಂದು ಪತ್ರ ಬರೆದಿದೆ. ಚೀನಾದ ಗುವಾಂಗ್ಜೌ ವೊಂಡ್‍ಪೋ ಬಯೋಟೆಕ್ ಮತ್ತು ಲಿವ್ ಝೊನ್ ಡಯಾಗ್ನಿಸ್ಟಿಕ್ಸ್ ಕಂಪನಿಗಳಿಂದ ಭಾರತದ 5 ಲಕ್ಷ ರ್ಯಾಪಿಡ್ ಟೆಸ್ಟ್ ಕಿಟ್ …

Read More »

ಕೊರೊನಾದಿಂದ ಕಂಗೆಟ್ಟ ವಲಯಗಳಿಗೆ 6 ತಿಂಗಳು ಜಿಎಸ್‍ಟಿ ರಿಲೀಫ್..?!

ನವದೆಹಲಿ, ಏ.27-ಕೊರೊನಾದಿಂದ ದೇಶದಲ್ಲಿ ಸಾವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಇನ್ನೊಂದೆಡ ಆರ್ಥಿಕ ಚಟುವಟಿಕೆಗೆ ಭಾರೀ ಹೊಡೆತ ಬಿದ್ದಿದೆ. ಇದರಿಂದ ಎಲ್ಲಾ ಕ್ಷೇತ್ರಗಳು ಕಂಗೆಟ್ಟಿವೆ. ಪ್ರಸ್ತುತ ಆರ್ಥಿಕ ಸಂಕಷ್ಟ ಸ್ಥಿತಿಯನ್ನು ಮನಗಂಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೆಲವು ವಲಯಗಳಿಗೆ ಆರು ತಿಂಗಳ ಮಟ್ಟಿಗೆ ಸರಕುಗಳು ಮತ್ತು ಸೇವಾ ತೆರಿಗೆಗಳು (ಜಿಎಸ್‍ಟಿ) ವಿನಾಯಿತಿ ನೀಡುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ. ಹೋಟೆಲ್, ರೆಸ್ಟೋರೆಂಟ್‍ಗಳು, ರಿಯಲ್ ಎಸ್ಟೇಟ್‍ಗಳು, ಏರ್‍ಲೈನ್ಸ್ …

Read More »