Breaking News
Home / ಕೊರೊನಾವೈರಸ್ (page 14)

ಕೊರೊನಾವೈರಸ್

ಸ್ಯಾನಿಟೈಸರ್ ಜೊತೆಗೆ ಕೆಮ್ಮಿನ ಔಷಧಿ ಮಿಶ್ರಣ ಮಾಡಿ ಕುಡಿದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡ: ಸ್ಯಾನಿಟೈಸರ್ ಜೊತೆಗೆ ಕೆಮ್ಮಿನ ಔಷಧಿ ಮಿಶ್ರಣ ಮಾಡಿ ಕುಡಿದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಹೊಯ್ಸಳ ನಗರದಲ್ಲಿ ಈ ಘಟನೆ ನಡೆದಿದ್ದು, ಸುದೀಪ್ ಕೈರಾನ್ ಸಾವನ್ನಪ್ಪಿದ ವಿದ್ಯಾರ್ಥಿ. ಉತ್ತರ ಕನ್ನಡ ಜಿಲ್ಲೆಯ ಮೂಲದವನಾದ ಸುದೀಪ್, ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿದ್ದನು. ವಿದ್ಯಾಭ್ಯಾಸಕ್ಕಾಗಿ ಧಾರವಾಡದ ಹೊಯ್ಸಳ ನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದನು. ಲಾಕ್‍ಡೌನ್ ಪರಿಣಾಮ ಮದ್ಯ ಸಿಗದ ಹಿನ್ನೆಲೆಯಲ್ಲಿ ಸ್ಯಾನಿಟೈಸರ್ ಜೊತೆ …

Read More »

ಸಂಕಷ್ಟಕ್ಕೆ ಸಿಲುಕಿದ ರೈತ ಕುಟುಂಬ – ಜಮೀನಿನಲ್ಲೇ ಕೊಳೆಯುತ್ತಿದೆ ಚೆಂಡು ಹೂವು……..

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಕಾರಣದಿಂದಾಗಿ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಬಡವರು, ನಿರ್ಗತಿಕರು ಹಾಗೂ ರೈತರ ಬದುಕು ಅಸ್ತವ್ಯಸ್ತವಾಗಿದೆ. ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ಲಕ್ಕೂರು ಗ್ರಾಮದ ರೈತ ಕೆಂಪರಾಜು ಅವರು ಬೇರೆಯವರ ಜಮೀನನ್ನು ಗುತ್ತಿಗೆ ಪಡೆದು ವ್ಯವಸಾಯ ಮಾಡುತ್ತಿದ್ದಾರೆ. ಈ ಗುತ್ತೆಗೆ ಪಡೆದ ಜಮೀನಿನಲ್ಲಿ ಚೆಂಡು ಹೂವು ಬೆಳೆದು, ಸರಿಯಾದ ಮಾರುಕಟ್ಟೆ ಇಲ್ಲದೇ …

Read More »

ಮೇ 15ರವರೆಗೂ ಲಾಕ್‍ಡೌನ್ ವಿಸ್ತರಣೆ ಸಾಧ್ಯತೆ – ರಾಜ್ಯಗಳ ಬೇಡಿಕೆ ಏನು?

ನವದೆಹಲಿ: ಲಾಕ್‍ಡೌನ್ ವಿಸ್ತರಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಿದ್ದು ಸಭೆ ಬಳಿಕ ಲಾಕ್‍ಡೌನ್ ಮುಂದುವರಿಸುವ ತೀರ್ಮಾನಕ್ಕೆ ಬರಲಾಗಿದೆ ಎಂದು ಮೂಲಗಳು ಹೇಳಿವೆ. ಮತ್ತಷ್ಟು ವಿನಾಯ್ತಿಗಳೊಂದಿಗೆ ಮೇ 15ರವರೆಗೂ ಲಾಕ್‍ಡೌನ್ ಮುಂದುವರಿಸುವ ಸಾಧ್ಯತೆ ಇದ್ದು, ಈ ಬಗ್ಗೆ ಅಧಿಕೃತ ಆದೇಶ ಹೊರ ಬರಬೇಕಿದೆ. ಈ ವಾರದ ಅಂತ್ಯದಲ್ಲಿ ಪ್ರಧಾನಿ ಮೋದಿ ದೇಶದ ಜನರನ್ನುದ್ದೇಶಿಸಿ ಐದನೇ ಬಾರಿ ಮಾತನಾಡಿಲಿದ್ದು, ಈ …

Read More »

ಉಚಿತ ಆಹಾರ ಕಿಟ್ ಪಡೆಯಲು ನಾ ಮುಂದು ತಾ ಮುಂದು ಅಂತ ಮುಗಿಬಿದ್ದ ಜನ

ಬೆಂಗಳೂರು: ಉಚಿತ ಆಹಾರ ಕಿಟ್ ಪಡೆಯಲು ಜನರು ಮುಗಿಬಿದ್ದಿರುವ ಘಟನೆ ಬೆಂಗಳೂರಿನ ಓಕುಳಿಪುರಂನಲ್ಲಿ ನಡೆದಿದೆ. ಓಕುಳಿಪುರಂನಲ್ಲಿ ಜೆಡಿಎಸ್ ಮುಖಂಡ ಹಿರಿಗೌಡರು ಸ್ಥಳೀಯ ನಿವಾಸಿಗಳಿಗೆ ಆಹಾರದ ಕಿಟ್ ವಿತರಣೆ ಮಾಡುತ್ತಿದ್ದರು. ಅಕ್ಕಿ, ಬೇಳೆ ಸಿಗುವ ವಿಚಾರ ತಿಳಿದು ಜನರು ಸಾಮಾಜಿಕ ಅಂತರ ಸಹ ಕಾಯ್ದುಕೊಳ್ಳುವುದನ್ನು ಮರೆತು ಮುಗಿಬಿದ್ದಿದ್ದರು. ದಿನಸಿ ವಿತರಣೆ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬಾಕ್ಸ್ ಹಾಕಲಾಗಿತ್ತು. ಆದ್ರೆ ಈ ಒಂದು ಬಾಕ್ಸ್ ನಲ್ಲಿ ಇಬ್ಬಿಬ್ರು ನಿಂತಿರುವ ದೃಶ್ಯಗಳು ಕಂಡು …

Read More »

ಒಂದೇ ಕುಟುಂಬದ ಐವರ ಮೃತದೇಹ ಮನೆಯೊಳಗೆ ಪತ್ತೆ…………

ಲಕ್ನೋ: ಒಂದೇ ಕುಟುಂಬದ ಐವರ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಅವರ ಮನೆಯಲ್ಲಿಯೇ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಶೃಂಗಾರ್ ನಗರ ಕಾಲೋನಿಯಲ್ಲಿ ನಡೆದಿದ್ದು, ತಮ್ಮ ನಿವಾಸದಲ್ಲಿ ಕುಟುಂಬದ ಐವರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ನಿವೃತ್ತ ಆರೋಗ್ಯ ಕಾರ್ಯಕರ್ತ ರಾಜೇಶ್ವರ್ ಪ್ರಸಾದ್ ಪಚೌರಿ (80), ಅವರ ಸೊಸೆ ದಿವ್ಯಾ (33), ಅವರ ಇಬ್ಬರು ಮಕ್ಕಳಾದ ಲಾಲೂ (1), ಆರುಶ್ (10) …

Read More »

ಲಾಕ್‍ಡೌನ್ ಸಂಕಷ್ಟದಲ್ಲಿರುವ ಜನರಿಗೆ ಕುದ್ರೋಳಿ ಕ್ಷೇತ್ರದಿಂದ ಸಹಾಯ……….

ಮಂಗಳೂರು: ಕೊರೊನಾ ಲಾಕ್‍ಡೌನ್‍ನಿಂದಾಗಿ ಸಂಕಷ್ಟದಲ್ಲಿರುವ ಬಡವರು, ನಿರ್ಗತಿಕರಿಗೆ ರಾಜ್ಯದ ಪ್ರಮುಖ ಪುಣ್ಯ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ನಿತ್ಯವೂ ಹಸಿವು ನೀಗಿಸುವ ಮಹತ್ವ ಕಾರ್ಯ ನಡೆಯುತ್ತಿದೆ. ಕುದ್ರೋಳಿ ಕ್ಷೇತ್ರದ ಹರಿಕಾರ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರ ಸಲಹೆ ಹಾಗೂ ಮಾರ್ಗದರ್ಶನದಂತೆ ಅಕ್ಕಿ ವಿತರಣೆ ಕಾರ್ಯ ಆರಂಭಗೊಂಡಿದೆ. ಆರಂಭದಲ್ಲಿ 100 ಕ್ವಿಂಟಾಲ್ ಅಕ್ಕಿ ವಿತರಣೆ ಮಾಡುವ ಉದ್ದೇಶ ಹೊಂದಿತ್ತಾದರೂ ನಂತರ ಅದು ವಿಸ್ತರಣೆಗೊಂಡು ಇದುವರೆಗೆ ಒಟ್ಟ …

Read More »

ಪ್ಲಾಸ್ಮಾ ಥೆರಪಿ ಆರಂಭವಾಗಿರುವುದು ರಾಜ್ಯಕ್ಕೆ ಐತಿಹಾಸಿಕ ಕ್ಷಣ: ಡಾ. ಸುಧಾಕರ್

ಬೆಂಗಳೂರು: ಕೋವಿಡ್ ಸೋಂಕಿತರಿಗೆ ಹೆಚ್ಚು ಪರಿಣಾಮಕಾರಿ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿರುವ ಪ್ಲಾಸ್ಮಾ ಚಿಕಿತ್ಸೆಗೆ ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಅವರು ಈ ಉಪಕ್ರಮಕ್ಕೆ ಚಾಲನೆ ನೀಡಿದರು. ಗಂಭೀರ ಪರಿಸ್ಥಿತಿಯಲ್ಲಿರುವ ಕೊರೊನಾ ಸೋಂಕಿತ ವ್ಯಕ್ತಿಗಳಿಗೆ ಪ್ಲಾಸ್ಮಾ ಚಿಕಿತ್ಸೆ ಪರಿಣಾಮಕಾರಿಯಾಗಿ ಇರುವುದು ಕಂಡು ಬಂದಿದೆ. ಇದೀಗ ರಾಜ್ಯದಲ್ಲಿ ಕೂಡ ಈ ಪ್ರಕ್ರಿಯೆ ಲಭ್ಯವಾದಂತಾಗಿದೆ. ಈ …

Read More »

ಹೆಮ್ಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ನಿಯಂತ್ರಣಕ್ಕೆ ಸಿಗುತ್ತಿಲ್ಲ,ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆ

– ಬೆಂಗ್ಳೂರಿನ 11 ಮಂದಿ, ಬೆಳಗಾವಿಯ 9 ಜನರಿಗೆ – ಬಿಹಾರ ಕಾರ್ಮಿಕನಿಂದ 9 ಜನರಿಗೆ ಕೊರೊನಾ – ಬೆಳಗಾವಿಯಲ್ಲೂ ಒಬ್ಬನಿಂದ 9 ಮಂದಿಗೆ ಸೋಂಕು ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಕಳೆದ 24 ಗಂಟೆಯಲ್ಲಿ ರಾಜ್ಯದ 26 ಮಂದಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆ ಕಂಡಿದೆ. ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಇಂದು 11 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಅದರಲ್ಲೂ ಬಿಹಾರ ಕಾರ್ಮಿಕನಿಂದಲೇ …

Read More »

ಇದ್ದಕ್ಕಿದ್ದಂತೆ ಜಾನುವಾರಗಳ ಸಾವು – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಯಾದಗಿರಿ: ಸದ್ಯ ಕೊರೊನಾ ಗ್ರೀನ್ ಜೋನ್‍ನಲ್ಲಿರುವ ಯಾದಗಿರಿಗೆ ಮತ್ತೊಂದು ಆತಂಕ ಎದುರಾಗಿದೆ. ಜಿಲ್ಲೆಯಲ್ಲಿ ಕೆಳದ ಮೂರು ದಿನಗಳಿಂದ ದನ-ಕರುಗಳು ಇದ್ದಕ್ಕಿದ್ದಂತೆ ಸಾವನ್ನಪ್ಪುತ್ತಿವೆ. ಜಿಲ್ಲೆಯ ಯಾದಗಿರಿ ತಾಲೂಕಿನ ನಗಲಾಪುರ ಗ್ರಾಮದಲ್ಲಿ ಕಳೆದ ಮೂರು ದಿನದಲ್ಲಿ ಆರು ದನಗಳು ಸಾವನ್ನಪ್ಪಿದ್ದು, ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ದನಗಳ ಸಾವಿಗೆ ಯಾವುದೇ ಕಾರಣವಿಲ್ಲ ಮತ್ತು ಅವುಗಳಲ್ಲಿ ಯಾವುದೇ ರೋಗ ಲಕ್ಷಣಗಳು ಕಂಡುಬಂದಿಲ್ಲ. ಮೇಯಿಯಲು ಹೊರಗಡೆ ತಿರುಗಾಡಿ ಮನೆಗೆ ಬಂದು ನೀರು ಕುಡಿದ ತಕ್ಷಣವೇ ದನಗಳು …

Read More »

ಬೆಂಗಳೂರಿನ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಇಂದು ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಲಾಯಿತು.

ಹುಬ್ಬಳ್ಳಿ: ಬೆಂಗಳೂರಿನ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಇಂದು ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಲಾಯಿತು. ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಸ್ವಚ್ಛತಾ ಸೇನಾನಿಗಳಂತೆ ಕಾರ್ಯನಿರ್ವಹಿಸುತ್ತಿರುವ (Frontline workers) ಪಾಲಿಕೆಯ ಪೌರಕಾರ್ಮಿಕರು, ಆಟೋ ಟಿಪ್ಪರ್ ಚಾಲಕರು ಮತ್ತು ಸಹಾಯಕರು, ಟ್ರ್ಯಾಕ್ಟರ್ ಡ್ರೈವರ್‍ಗಳು, ಲೋಡರ್ಸ್, ಜೆಟ್ಟಿಂಗ್ ಯಂತ್ರದ ಸಿಬ್ಬಂದಿಗೆ 2,800 ಆಹಾರ ಸಾಮಗ್ರಿಗಳ ಕಿಟ್ ವಲಯವಾರು ವಿತರಿಸಲಾಯಿತು. ಕಿಟ್ 5 ಕೆ.ಜಿ ಅಕ್ಕಿ, 1ಕೆ.ಜಿ ತೊಗರಿ …

Read More »