Breaking News

ಘಟಪ್ರಭಾ

ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ, ಯುವ ನಾಯಕರಾದ ರಾಹುಲ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ

  ಘಟಪ್ರಭಾ : ಪ್ರಾಚೀನ ಕಾಲದಿಂದಲೂ ನಾವು ದೈವ ಭಕ್ತರು. ದೇವರನ್ನು ನಂಬಿ ಬದುಕುತ್ತಿರುವವರು. ದೇವರಿಂದಲೇ ಈ ಜಗತ್ತು ನಡೆದಿದೆ. ದೇಶವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವುದರಿಂದ ನಮ್ಮದು ಜಾತ್ಯಾತೀತ ರಾಷ್ಟ್ರವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸಂಜೆ ಸಮೀಪದ ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದ 25 ನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರು ದೇವರ ಮೇಲೆ …

Read More »

ನ್ಯಾಯವಾದಿಯಿಂದ ಮಹಿಳೆ ಮೇಲೆ ಅತ್ಯಾಚಾರ; ಆರೋಪಿ ಬಂಧನಕ್ಕೆ ಬಲೆ ಬೀಸಿದ ಪೊಲೀಸರು

ಗೋಕಾಕ : ಮನೆಯಲ್ಲಿ ರಾತ್ರಿ ಮಕ್ಕಳೊಂದಿಗೆ ಮಲಗಿದ್ದಾಗ ಮಹಿಳೆ ಮೇಲೆ ಅತ್ಯಾಚಾರ ಏಸಗಿದ ಘಟನೆ ಘಟಪ್ರಭ ಪೊಲೀಸ್‌ ಠಾಣೆ ವ್ಯಾಪ್ತಿಯ ಶಿಂಗಳಾಪುರ ಗ್ರಾಮದಲ್ಲಿ ಈಚೆಗೆ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.   22.02.2022ರ ರಾತ್ರಿ ಸಂತ್ರಸ್ತೆ ಮಹಿಳೆ ಮಕ್ಕಳೊಂದಿಗೆ ಮಲಗಿದ್ದ ವೇಳೆ ಬಾಗಿಲು ಬಡೆದು ಮನೆಗೆ ನುಗ್ಗಿ ಮಹಿಳೆ ಮೇಲೆ ಅತ್ಯಾಚಾರ ಏಸಗಿದ್ದಾನೆ. ಸಂತ್ರಸ್ತೆ ಮಹಿಳೆ ಕಿರುಚಿದಾಗ ಪಕ್ಕದ ಮನೆಯವರು ಸಹಾಯಕ್ಕೆ ಬಂದಿದ್ದು, ಆರೋಪಿಯಾಗಿರುವ ವಕೀಲ ಮಹಮ್ಮದ ಶಫಿ …

Read More »

ಅರಣ್ಯ ಇಲಾಖೆಯ ಸಿಬ್ಬಂದಿಗಳ ವಸತಿ ಗೃಹಗಳ ಶಂಕುಸ್ಥಾಪನೆ ನೆರೆವೇರಿ‌ಸಿದ ಸಚಿವ ಉಮೇಶ್ ಕತ್ತಿ

ಘಟಪ್ರಭಾ ಅರಣ್ಯ ವಿಭಾಗದ ಸಿಬ್ಬಂದಿ ವಸತಿ ಗೃಹಗಳ ಶಂಕುಸ್ಥಾಪನೆಯನ್ನು ಅರಣ್ಯ ಹಾಗೂ ಆಹಾರ ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿಯವರು ಸೋಮವಾರದಂದು ನಗರದಲ್ಲಿ ನೆರೆವೇರಿ‌ಸಿದರು .   ಈ ಸಂದರ್ಭದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯ ಕುಮಾರ ಸಾಲಿಮಠ ,ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂತೋನಿ ಎಸ್.ಮರಿಯಪ್ಪ , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಾಜೇಶ್ವರಿ ಈರನಟ್ಟಿ, ವಲಯ ಅರಣ್ಯ ಅಧಿಕಾರಿ ಕೆ.ಎನ್.ವಣ್ಣೂರ ಹಾಗೂ ಸಿಬ್ಬಂದಿ ಇದ್ದರು.

Read More »

ಕನ್ನಡ ದ್ವಜ ಸುಟ್ಟು ಹಾಕಿದ ಎಂ.ಇ.ಎಸ್ ಪುಂಡರ ವಿರುದ್ಧ ಸೂಕ್ತ ಕ್ರಮಕ್ಕೆ ಕನ್ನಡಪರ ಸಂಘಟನೆಗಳ ವತಿಯಿಂದ ಆಗ್ರಹ*

ಘಟಪ್ರಭಾ; ನಾಡ ದ್ರೋಹಿ ಎಂ.ಇ.ಎಸ್ ಸಂಘಟನೆಯನ್ನು ನಿಷೇದಿಸುವಂತೆ ಹಾಗೂ ಕೊಲ್ಹಾಪುರದಲ್ಲಿ ಕನ್ನಡ ದ್ವಜ ಸುಟ್ಟಂತಹ ನಾಡ ದ್ರೋಹಿಗಳ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಗುರುವಾರ ಘಟಪ್ರಭಾ ನಗರದಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ವತಿಯಿಂದ ಮೃತ್ಯುಂಜಯ ವೃತ್ತದಲ್ಲಿ ಟೈರಗೆ ಬೆಂಕಿ ಹಚ್ಚಿ ನಾಡ ದ್ರೋಹಿಗಳ ವಿರುದ್ದ ಆಕ್ರೋಶ ವ್ಯಕ್ತ ಪಡಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೆಂಪಣ್ಣ ಚೌಕಾಶಿ, ಕರ್ನಾಟಕ ರಕ್ಷಣಾ ವೇದಿಕೆ ಸಂತೋಷ …

Read More »

ಕಿಡಿಗೇಡಿಗಳ ಕಲ್ಲು ತೂರಾಟದಲ್ಲಿ ಸಾರ್ವಜನಿಕರ ತುರ್ತು ಸೇವೆಯ 112 ವಾಹನ.

  ಘಟಪ್ರಭಾ: ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ಘಟಪ್ರಭಾದ ದಳವಾಯಿ ನಗರದಲ್ಲಿ ಜನರ ತುರ್ತು ಸೇವೆಗಾಗಿರುವ ಪೊಲೀಸ್ ಇಲಾಖೆಯ 112 ವಾಹನದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿ ವಾಹನ ಜಖುಂಗೊಳಿಸಿ ಪರಾರಿಯಾಗಿದ್ದಾರೆ. ವಾಹನದಲ್ಲಿದ್ದ ಇಬ್ಬರು ಪೊಲೀಸರು ಅಪಾಯದಿಂದ ಪರಾಗಿದ್ದು 7 ಜನರ ಮೇಲೆ ಪೊಲೀಸರೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.   ಘಟನೆಯ ವಿವರ: ಗೋಕಾಕ ತಾಲೂಕಿನ ಶಿಂಗಳಾಪೂರ ಗ್ರಾಮದ ಯುವತಿಯೊರ್ವಳನ್ನ ಘಟಪ್ರಭಾ ದಳವಾಯಿ …

Read More »

ಘಟಪ್ರಭಾ : ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ.

ಘಟಪ್ರಭಾ : ಮೊನ್ನೆಯಷ್ಟೇ ಕ್ರೂರಿಗಳು ಮೈಸೂರಿನಲ್ಲಿ ಕಾಲೇಜು ಯುವತಿಯ ಮೇಲೆ ಗ್ಯಾಂಗ್ ರೇಪ್ ಮಾಡಿ ಅಟ್ಟಹಾಸ ಮೆರೆದಿರುವ ಘಟನೆ ಮಾಸುವ ಮುನ್ನವೇ ಇಂತಹದೆ ಹೀನ ಕೃತ್ಯ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಒಂದು ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.   ಸುಮಾರು 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ 5 ಜನ ಕ್ರೂರಿ ಕಾಮುಕರು ಪುಸಲಾಯಿಸಿ ಕರೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗುತ್ತಿದೆ. ಗೋಕಾಕ ತಾಲ್ಲೂಕಿನ ಘಟಪ್ರಭಾ ಪೊಲೀಸ್ …

Read More »

ಘಟಪ್ರಭಾ ಎಡದಂಡೆ ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಾವು : ಓರ್ವನ ಶವಪತ್ತೆ, ಮತ್ತೋರ್ವನ ಮೃತದೇಹಕ್ಕೆ ಹುಡುಕಾಟ

ಗೋಕಾಕ : ಘಟಪ್ರಭಾ ಎಡದಂಡೆ ಕಾಲುವೆಗೆ ಕಾಲು ಜಾರಿ ಬಿದ್ದ ಇಬ್ಬರು ವ್ಯಕ್ತಿಗಳು ಸಾವಿಗೀಡಾದ ಘಟನೆ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ಹುಬ್ಬರವಾಡಿ ಗ್ರಾಮದ ವಾಹನ ಚಾಲಕ ಅಶೋಕ ಶ್ರೀಶೈಲ ಡಬ್ಬನ್ನವರ (26), ಪಾಮಲದಿನ್ನಿ ಗ್ರಾಮದ ಕ್ಲೀನರ್ ನಾಗಪ್ಪ ಕಾಡಪ್ಪ ಅಂಗಡಿ (38) ಮೃತರು. ಕಾಲುವೆಯ ಪಕ್ಕದಲ್ಲಿ ಖಾಸಗಿ ಹಾಲಿನ ಡೈರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳು. ಹಾಲಿನ ವಾಹನ ಚಾಲಕ ನೀರು ತರಲು …

Read More »

ಗ್ರಾಮದ ಪ್ರತಿಯೊಬ್ಬ ಪ್ರಜೆಯೂ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಿ

ಘಟಪ್ರಭಾ: ಗ್ರಾಮದ ಪ್ರತಿಯೊಬ್ಬ ಪ್ರಜೆಯೂ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಿ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡಲು ಶ್ರಮಿಸಬೇಕು ಎಂದು ಶ್ರೀ ಸಿದ್ದರಾಮೇಶ್ವರ ಆದರ್ಶ ಕನ್ನಡ ಹಿರಿಯ ಅನುದಾನಿತ ಪ್ರಾಥಮಿಕ ಶಾಲೆಯ ಅಧ್ಯಕ್ಷ ಜ್ಯೋತ್ತೇಪ್ಪ ಬಂತಿ ಹೇಳಿದರು. ಅವರು ಸಮೀಪದ ಶಿಂದಿಕುರಬೇಟ ಗ್ರಾಮದಲ್ಲಿ ನೆಹರು ಯುವ ಕೇಂದ್ರ ಬೆಳಗಾವಿ, ಶ್ರೀ ಶಿವಶರಣ ಹರಳಯ್ಯ ಯುವಕ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಗೋಕಾಕ ಶ್ರೀ ಸಿದ್ದರಾಮೇಶ್ವರ ಆದರ್ಶ ಕನ್ನಡ ಹಿರಿಯ ಅನುದಾನಿತ …

Read More »

ನೂತನ ಶಾಲಾ ಕೊಠಡಿಗಳ ಅಡಿಗಲ್ಲು ಕಾರ್ಯಕ್ರಮಕ್ಕೆ ಭೂಮಿ ಪೂಜೆ

ಘಟಪ್ರಭಾ: ಸಮೀಪದ ಕೊಟಬಾಗಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕೊಠಡಿಯನ್ನು ಬಿಡಿಸಿಸಿ ಬ್ಯಾಂಕ ಅಧ್ಯಕ್ಷ ರಮೇಶ ಕತ್ತಿ ಉದ್ಘಾಟಿಸಿದರು. ಎರಡು ನೂತನ ಶಾಲಾ ಕೊಠಡಿ ನಿರ್ಮಾಣಕ್ಕೆ ಅಡಿಗಲ್ಲು ಕಾರ್ಯಕ್ರಮಕ್ಕೆ ಎಸ್‍ಡಿಎಂಸಿ ಅಧ್ಯಕ್ಷ ರಾಜಕುಮಾರ ಪಾಟೀಲ ಭೂಮಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಬಿಇಒ ಮೋಹನ ದಂಡಿನ, ಬಿಸಿಯೂಟ ಸಹ ನಿರ್ದೇಶಕ ಹಿರೇಮಠ, ಸಿಆರ್‍ಪಿಗಳಾದ ವಿ.ಎಸ್.ರಜಪೂತ, ಪ್ರಧಾನ ಗುರು ಎಸ್.ಬಿ.ಹೊಳೆಪ್ಪಗೋಳ ಸೇರಿದಂತೆ ಎಸ್ ಡಿಎಂಸಿ ಸದಸ್ಯರು,ಶಿಕ್ಷಣ ಪ್ರೇಮಿಗಳು ಹಾಗೂ …

Read More »

ಸಾರ್ವಜನಿಕರಿಂದ ಅತಿಕ್ರಮಣಗೊಂಡಿದ ಸರ್ಕಾರಿ ಜಾಗ ಮರು ವಶಕ್ಕೆ.

ಘಟಪ್ರಭಾ : ಕಳೆದ ಹತ್ತು ಹದಿನೈದು ವರ್ಷಗಳಿಂದ ಸಾರ್ವಜನಿಕರಿಂದ ಆಕ್ರಮಿಸಿಕೊಂಡಿದ್ದ ಸರ್ಕಾರಿ ಭೂಮಿಯನ್ನು ಮರು ವಶಪಡಿಸಿಕೊಂಡ ಘಟನೆ ಪಾಮಲದಿನ್ನಿ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.   ಪಾಮಲದಿನ್ನಿ ಗ್ರಾಮದಲ್ಲಿ ಸರ್ವೆ ನಂ. 4 ರಲ್ಲಿ ಸುಮಾರು 10 ಎಕರೆ ಭೂಮಿ ಇದ್ದು, ಅದರಲ್ಲಿಯ 2 ಎಕರೆಯಷ್ಟು ಭೂಮಿಯನ್ನು ಸರಕಾರಿ ಪ್ರೌಢಶಾಲೆಗೆ ಬಿಟ್ಟು ಕೊಡಲಾಗಿದೆ. ಇನ್ನುಳಿದ ಜಾಗದಲ್ಲಿ ಸಾರ್ವಜನಿಕರ ಅಭಿವೃದ್ಧಿಯ ಹಿತ ದೃಷ್ಟಿಯಿಂದ ವಿವಿಧ ಇಲಾಖೆಗಳ ಉಪಯೋಗಕೆಂದು ಕಾಯ್ದಿರಿಸಲಾಗಿತ್ತು. ಈಗ ಈ …

Read More »