ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಬಂದ ವ್ಯಕ್ತಿಯನ್ನು ಮಣಿಪಾಲ ಕೆಎಂಸಿಗೆ ಶಿಫ್ಟ್ ಮಾಡಲಾಗಿದೆ. ಅಜ್ಜರಕಾಡು ಜಿಲ್ಲಾ ಸರ್ಕಾರಿ ಆಸ್ಪತ್ರೆಯಿಂದ ಸೋಂಕಿತನನ್ನು ಕೆಎಂಸಿಗೆ ರವಾನಿಸಿದ್ದು, ಕೆಎಂಸಿ ತನ್ನ ಎಲ್ಲಾ ಒಪಿಡಿ ಸೇವೆಯನ್ನು ಸ್ಥಗಿತಗೊಳಿಸಿದೆ. ತುರ್ತು ಚಿಕಿತ್ಸೆ ಮಾತ್ರ ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ ಸಿಗಲಿದೆ ಎಂದು ವೈದ್ಯಕೀಯ ಅಧೀಕ್ಷಕರು ಪ್ರಕಟಣೆ ಹೊರಡಿಸಿದ್ದಾರೆ. ಕಿಮೋಥೆರಪಿ ಮತ್ತು ರೇಡಿಯೋ ತೆರಪಿ ಮಾಡಿಸಿಕೊಳ್ಳುವ ರೋಗಿಗಳು ಕೆಎಂಸಿಗೆ ಯಾವುದೇ ಕಾರಣಕ್ಕೆ ಕಾಲಿಡಬಾರದು. ಅವರು ನೇರವಾಗಿ ಶಿರಡಿ ಸಾಯಿಬಾಬಾ …
Read More »ಉಡುಪಿ ಡಿಸಿ ಕೈ ಸೇರಿದ ವೈದ್ಯಕೀಯ ವರದಿ – ಕೊರೊನಾ ದೃಢ
ಉಡುಪಿ: ಜಿಲ್ಲೆಯಲ್ಲಿ ಪ್ರಥಮ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿಯಲ್ಲಿ ಕೊರೊನಾ ಇರುವುದು ಸ್ಪಷ್ಟವಾಗಿದ್ದು, ಹಾಸನದಿಂದ ಬಂದ ವರದಿ ಕೂಡ ವ್ಯಕ್ತಿಯನ್ನು ಕೊರೊನಾ ಪಾಸಿಟಿವ್ ಎಂಬುದನ್ನು ದೃಢ ಮಾಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಜಿ.ಜಗದೀಶ್, ರಾಜ್ಯದ ನೋಡೆಲ್ ಅಧಿಕಾರಿ ಜೊತೆ ನಾನು ಮಾತನಾಡಿದ್ದೇನೆ. ಡಾಕ್ಟರ್ ಅರುಂಧತಿ ಚಂದ್ರಶೇಖರ್ ಜೊತೆ ಸಂಪರ್ಕದಲ್ಲಿದ್ದೇನೆ. ಆ ವ್ಯಕ್ತಿಯ ಚಲನವಲನಗಳನ್ನು ಟ್ರ್ಯಾಕ್ ಮಾಡುತ್ತಿದ್ದೇವೆ. ಆತ ಬಂದ ವಿಮಾನದ ಬಗ್ಗೆ ಕೂಡ ಪರಿಶೀಲನೆ …
Read More »ಮಂಗಳೂರು;:ಭಟ್ಕಳ ಮೂಲದ ಯುವಕನಲ್ಲಿ ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ.
ಮಂಗಳೂರು; ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಈ ನಡುವೆ ಭಟ್ಕಳ ಮೂಲದ ಯುವಕನಲ್ಲಿ ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ. ಭಟ್ಕಳದ 22 ವರ್ಷದ ಯುವಕ ಮಾರ್ಚ್ 19ರಂದು ದುಬೈನಿಂದ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿದ್ದ. ಏರ್ ಪೋರ್ಟ್ ನಲ್ಲಿ ತಪಾಸಣೆ ನಡೆಸಿದಾಗ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದಿದ್ದವು ಈ ಹಿನ್ನಲೆಯಲ್ಲಿ ಆತನನ್ನು ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಇದೀಗ ಯುವಕನಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು …
Read More »ಉಡುಪಿ :ದುಬೈನಿಂದ ಬಂದ ಗರ್ಭಿಣಿಗೆ ಕೊರೊನಾ ಸೋಂಕು ಇಲ್ಲ
ಉಡುಪಿ: ದುಬೈನಿಂದ ಬಂದ ಗರ್ಭಿಣಿಗೆ ಕೊರೊನಾ ಸೋಂಕಿನ ಸೋಂಕಿನ ಲಕ್ಷಣಗಳು ಇಲ್ಲ ಎಂದು ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ. ಗರ್ಭಿಣಿಯ ಕುಟುಂಬಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಉಡುಪಿ ಜಿಲ್ಲೆಯ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಮಾರ್ಚ್ 16ರಂದು ಗರ್ಭಿಣಿ ದಾಖಲಾಗಿದ್ದರು. ಆಕೆ ವಿಪರೀತ ಕಫದಿಂದ ನರಳಾಡುತ್ತಿದ್ದರು. ವಾರದ ಹಿಂದೆ ದುಬೈನಿಂದ ಬಂದಿರುವುದರಿಂದ ಗರ್ಭಿಣಿ ಮೇಲೆ ಸಂಶಯ ಬಂದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮಣಿಪಾಲ ಕೆಎಂಸಿಗೆ ಆಕೆಯನ್ನು ಅಡ್ಮಿಟ್ ಮಾಡಿದ್ದರು. ಗರ್ಭಿಣಿಯ ಗಂಟಲಿನ ದ್ರವವನ್ನು ಶಿವಮೊಗ್ಗ …
Read More »ಉಡುಪಿಯಲ್ಲಿ ಗರ್ಭಿಣಿಗೆ ಕೊರೊನಾ ಶಂಕೆ……………..?
ಉಡುಪಿ/ಮಂಗಳೂರು: ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಶಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೀಗ ಉಡುಪಿಯಲ್ಲಿ ಗರ್ಭಿಣಿಗೆ ಕೊರೊನಾ ಸೋಂಕಿನ ಲಕ್ಷಣ ಕಾಣಿಸಿಕೊಂಡಿದೆ. ಗರ್ಭಿಣಿಯನ್ನು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಹಿಳೆ ಮೂರು ದಿನಗಳ ಹಿಂದೆ ದುಬೈನಿಂದ ಬಂದಿದ್ದರು. ಕೆಮ್ಮು, ನೆಗಡಿ ಮತ್ತು ಶೀತ ಇದ್ದ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಶೇಷ ವಾರ್ಡ್ ನಲ್ಲಿ ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಶಿವಮೊಗ್ಗ ಲ್ಯಾಬ್‍ಗೆ ಗರ್ಭಿಣಿಯ ಗಂಟಲಿನ ದ್ರವ ರವಾನೆ ಮಾಡಲಾಗಿದೆ. …
Read More »ಕೊರೊನಾ ಹೆಸ್ರಲ್ಲಿ ಹುಟ್ಟಿಕೊಂಡಿದ್ದಾರೆ ನಕಲಿ ಅಧಿಕಾರಿಗಳು:ಐಡಿ ಇಲ್ಲದೆ ಮನೆಗೆ ಬಂದ್ರೆ ಮಾಹಿತಿ ಕೊಡಬೇಡಿ
ಉಡುಪಿ: ಕಿಲ್ಲರ್ ಕೊರೊನಾ ವೈರಸ್ ಇಡೀ ವಿಶ್ವವನ್ನು ನಲುಗಿಸಿಬಿಟ್ಟಿದೆ. ಮದ್ದೇ ಇಲ್ಲದ ಕೊರೊನಾ ವೈರಸ್ಸಿಗೆ ದೇಶದ ಜನ ಹೈರಾಣಾಗಿ ಹೋಗಿದ್ದಾರೆ. ರಾಜ್ಯದ ಜನಕ್ಕೆ ಕೊರೊನಾ ವೈರಸ್ ಒಂದು ಕಡೆಯಿಂದ ಕಿರುಕುಳ ಕೊಡುತ್ತಿದ್ದರೆ, ಉಡುಪಿ ಜಿಲ್ಲೆಯಲ್ಲಿ ಫೇಕ್ ಆಫೀಸರ್ಸ್ ಹುಟ್ಟಿಕೊಂಡಿದ್ದಾರೆ. ನಾವು ಕೊರೊನಾ ವೈರಸ್ ಪತ್ತೆ ಮಾಡುವವರು ಮತ್ತು ಅಂಕಿ ಅಂಶವನ್ನು ಸಂಗ್ರಹ ಮಾಡುವವರು ಎಂದು ಉಡುಪಿ ನಗರದ ಕೆಲ ವಾರ್ಡ್ ಗಳ ಮನೆಗಳಿಗೆ ನಕಲಿ ಆಫೀಸರ್ ಗಳು ಹೋಗುತ್ತಿದ್ದಾರೆ. ಮನೆಗಳಿಗೆ …
Read More »ಮಹಾಮಾರಿ ಕೊರೊನಾ ಭೀತಿ- ಮಣಿಪಾಲ ವಿವಿಗೆ 15 ದಿನ ರಜೆ
ಉಡುಪಿ: ಕರೊನಾ ವೈರಸ್ ಭೀತಿ ಹಿನ್ನೆಲೆ ರಾಜ್ಯ ಸರ್ಕಾರ ಒಂದು ವಾರ ಹೈ ಅಲರ್ಟ್ ಘೋಷಿಸಿದೆ. ಇದೀಗ ಜಿಲ್ಲೆಯ ಮಣಿಪಾಲ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಎರಡು ವಾರಗಳ ಕಾಲ ರಜೆ ಘೋಷಿಸಿದೆ. ವಿವಿಯ ಸಾವಿರಾರು ವಿದ್ಯಾರ್ಥಿಗಳು ವಿದೇಶದ ಸಂಪರ್ಕ ಹೊಂದಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ಆದೇಶವನ್ನು ಹೊರಡಿಸಿದೆ. ಹೊರ ರಾಜ್ಯದ ವಿದ್ಯಾರ್ಥಿಗಳು ಮಣಿಪಾಲದಿಂದ ತಮ್ಮ ರಾಜ್ಯಗಳಿಗೆ ತೆರಳಿದ್ದು, ವಿದೇಶದ ವಿದ್ಯಾರ್ಥಿಗಳು ಮಣಿಪಾಲದಲ್ಲೇ ಉಳಿದುಕೊಳ್ಳುವ ಸೂಚನೆಯನ್ನು ವಿವಿ ಕೊಟ್ಟಿದೆ. ಇಂಗ್ಲಿಷ್ ಮಾತನಾಡುವ ಐವತ್ನಾಲ್ಕು …
Read More »ಭಾರತದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಪಾಕಿಸ್ತಾನಕ್ಕೆ ಜೈ ಅನ್ನುವವರು ಯಾರೇ ಆಗಲಿ ಎಷ್ಟೇ ಪ್ರಭಾವಿಗಳಾಗಲಿ ಅಂತಹವರನ್ನು ನಿರ್ದಾಕ್ಷಿಣ್ಯ ವಾಗಿ ಬಂಧಿಸಿ ಜೈಲಿಗೆ ಹಾಕುತ್ತೇವೆ
ಬೆಂಗಳೂರು, ಮಾ : ಭಾರತದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಪಾಕಿಸ್ತಾನಕ್ಕೆ ಜೈ ಅನ್ನುವವರು ಯಾರೇ ಆಗಲಿ ಎಷ್ಟೇ ಪ್ರಭಾವಿಗಳಾಗಲಿ ಅಂತಹವರನ್ನು ನಿರ್ದಾಕ್ಷಿಣ್ಯ ವಾಗಿ ಬಂಧಿಸಿ ಜೈಲಿಗೆ ಹಾಕುತ್ತೇವೆ ಎಂದು ವಿಧಾನ ಪರಿಷತ್ ಸಭಾ ನಾಯಕ ಹಾಗೂ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು. ಸಂವಿಧಾನದ ಮೇಲೆ ಮುಂದುವರೆದ ಚರ್ಚೆಯಲ್ಲಿ ಜೆಡಿಎಸ್‍ನ ಟಿ.ಎ.ಶರವಣ ಅವರು ಸಿಎಎ ವಿರೋಧಿಸುವವರನ್ನು ಇಂದು ತುರ್ತು ಪರಿಸ್ಥಿತಿಯಲ್ಲಿ ಬಂಧಿಸಿದಂತೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ವರನ್ನು ಸರ್ಕಾರ …
Read More »ಜೈಲಿನಲ್ಲಿರುವ ಭೂಗತ ಪಾತಕಿ ರವಿ ಪೂಜಾರಿ ತನ್ನ ಮಗಳ ಓದು ಹಾಗೂ ಭವಿಷ್ಯದ ಕುರಿತು ಇರುವ ಆತಂಕ
ಬೆಂಗಳೂರು: ಜೈಲಿನಲ್ಲಿರುವ ಭೂಗತ ಪಾತಕಿ ರವಿ ಪೂಜಾರಿ ತನ್ನ ಮಗಳ ಓದು ಹಾಗೂ ಭವಿಷ್ಯದ ಕುರಿತು ಇರುವ ಆತಂಕವನ್ನ ಪೊಲೀಸರಿಗೆ ತಿಳಿಸಿದ್ದಾನೆ ಎನ್ನಲಾಗಿದೆ. ರವಿ ಪೂಜಾರಿಯನ್ನ ಪೊಲೀಸರು FSL ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಈ ವೇಳೆ ಪೊಲೀಸರು ಪ್ರಶ್ನೆಗಳಿಗೆ ಉತ್ತರಿಸಿದ ರವಿ ಪೂಜಾರಿ, ಸರ್ ಮಗಳು ನನ್ನನ್ನ ನೆನಪಿಸಿಕೊಳ್ಳುತ್ತ ಸರಿಯಾಗಿ ಓದದೇ ಪರೀಕ್ಷೆಯಲ್ಲಿ ಫೇಲ್ ಆಗುತ್ತಾಳೆನೋ..? ಅನ್ನೋ ಆತಂಕ ವ್ಯಕ್ತಪಡಿಸಿದ್ದಾನೆಂದು ತಿಳಿದು ಬಂದಿದೆ. ರವಿ ಪೂಜಾರಿ ಮಗಳು ಡಿಗ್ರಿ …
Read More »ತವರು ಜಿಲ್ಲೆಯಲ್ಲಿ ಬಿಗ್‍ಬಾಸ್ ವಿನ್ನರ್ ಶೈನ್‍ಗೆ ಅದ್ಧೂರಿ ಸ್ವಾಗತ
ಉಡುಪಿ: ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ರ ವಿನ್ನರ್ ಶೈನ್‍ಶೆಟ್ಟಿ ಗೆದ್ದ ನಂತರ ತವರು ಜಿಲ್ಲೆ ಉಡುಪಿಗೆ ಪ್ರಪ್ರಥಮ ಬಾರಿಗೆ ಆಗಮಿಸಿದ್ದು, ಅವರನ್ನು ಅದ್ಧೂರಿಯಾಗಿ ಸ್ವಾಗತ ಮಾಡಿಕೊಂಡಿದ್ದಾರೆ. ಶೈನ್ ಶೆಟ್ಟಿ ಬಿಗ್‍ಬಾಸ್ ಗೆದ್ದ ಬಳಿ ಮೊದಲ ಬಾರಿಗೆ ಉಡುಪಿಗೆ ಮಂಗಳವಾರ ಆಗಮಿಸಿದ್ದರು. ಹೀಗಾಗಿ ಶೈನ್ ಶೆಟ್ಟಿಯನ್ನು ನಗರದ ಜೋಡುಕಟ್ಟೆಯಿಂದ ಅದ್ಧೂರಿ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಗಿತ್ತು. ಶೈನ್ ಜೊತೆ ಸೆಲ್ಫಿ ತೆಗೆದುಕೊಳ್ಳಲು ನೂರಾರು ಅಭಿಮಾನಿಗಳು ಮುಗಿಬಿದ್ದರು. ನಗರದ ಪ್ರಮುಖ ರಸ್ತೆಗಳಲ್ಲಿ …
Read More »
Laxmi News 24×7