Breaking News

ಉಡುಪಿ

ಕುಡಿದ ಮತ್ತಿನಲ್ಲಿ ಎರಡು ತಂಡಗಳು ಕೈ ಕೈ ಮಿಲಾಯಿಸಿಕೊಂಡಿದ್ದು, ಜಗಳ ಅತಿರೇಕಕ್ಕೆ ಹೋಗಿ ಮೂರು ಬೈಕ್ ಗಳು ಭಸ್ಮ

ಉಡುಪಿ: ಕುಡಿದ ಮತ್ತಿನಲ್ಲಿ ಎರಡು ತಂಡಗಳು ಕೈ ಕೈ ಮಿಲಾಯಿಸಿಕೊಂಡಿದ್ದು, ಜಗಳ ಅತಿರೇಕಕ್ಕೆ ಹೋಗಿ ಮೂರು ಬೈಕ್ ಗಳು ಭಸ್ಮವಾಗಿದೆ. ಉಡುಪಿ ತಾಲೂಕಿನ ಕೊಳಲಗಿರಿಯಲ್ಲಿ ಈ ಘಟನೆ ಸಂಭವಿಸಿದ್ದು, ಕೊಳಲಗಿರಿ ಸರ್ಕಾರಿ ಶಾಲೆ ಬಳಿ ಕಳೆದ ರಾತ್ರಿ ಜಗಳ ನಡೆದಿತ್ತು. ಉಪ್ಪೂರಿನ ಸೂರಜ್, ಅಲ್ವಿನ್, ಮೋಹಿತ್, ಬಾಲಕೃಷ್ಣ, ಮಣಿಕಂಠ ಹಾಗೂ ಪಪ್ಪು ಮದ್ಯಪಾನ ಮಾಡಿ ಜಗಳವಾಡಿದ್ದಾರೆ. ಮಾತಿಗೆ ಮಾತು ಬೆಳೆದು ಹೊಡೆದಾಟ ಆರಂಭವಾಗಿದೆ. ಗುಂಪಲ್ಲಿದ್ದ ದುಷ್ಕರ್ಮಿ ಬೈಕಿಗೆ ಬೆಂಕಿ ಹಚ್ಚಿದ್ದಾನೆ.ಗಲಾಟೆ …

Read More »

ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಮಲ್ಪೆ ಮೀನುಗಾರಿಕಾ ಬಂದರಲ್ಲಿ ಮೀನು ಹೆಕ್ಕುತ್ತಿದ್ದ 17 ಮಕ್ಕಳು ಇಲಾಖೆ ರಕ್ಷಿಸಿದೆ.

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣಾ ಘಟಕ ಕಾರ್ಮಿಕ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಒಟ್ಟು 17 ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಮಲ್ಪೆ ಮೀನುಗಾರಿಕಾ ಬಂದರಲ್ಲಿ ಮೀನು ಹೆಕ್ಕುತ್ತಿದ್ದ 17 ಮಕ್ಕಳು ಇಲಾಖೆ ರಕ್ಷಿಸಿದೆ. ರಕ್ಷಿಸಲ್ಪಟ್ಟ ಬಾಲಕಾರ್ಮಿಕರೆಲ್ಲ ಕೊಪ್ಪಳ, ಬಳ್ಳಾರಿ ಮೂಲದವರು. ಈ ಜಂಟಿ ಕಾರ್ಯಾಚರಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಸಾಥ್ ನೀಡಿದೆ. ಹಾಗೂ ಮಕ್ಕಳ ಸಹಾಯವಾಣಿ ನಾಗರಿಕ ಸೇವಾ ಟ್ರಸ್ಟ್ ಕಾರ್ಯಕರ್ತರು ರಕ್ಷಣೆಗೆ …

Read More »

ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನು ಆಸ್ಪತ್ರೆಗೆ ಬಿಟ್ಟು ಯುವಕ ನಾಪತ್ತೆ

ಉಡುಪಿ: ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನು ಆಸ್ಪತ್ರೆಗೆ ಬಿಟ್ಟು ಯುವಕ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಆದರೆ ವಿಪರ್ಯಾಸ ಅಂದ್ರೆ ಆಸ್ಪತ್ರೆಗೆ ದಾಖಲಾದ ಕೆಲವೇ ಕ್ಷಣಗಳಲ್ಲಿ ಯುವತಿ ಮೃತಪಟ್ಟಿದ್ದಾಳೆ. ನಿನ್ನೆ 6:30ರ ಹೊತ್ತಿಗೆ ರಿಕ್ಷಾದಲ್ಲಿ ಯುವತಿಯನ್ನು ಆಸ್ಪತ್ರೆಗೆ ಕರೆದು ತಂದಿದ್ದ ಯುವಕ, ಆಕೆಯ ಮನೆಯವರಿಗೆ ಕರೆಮಾಡಿ ವಿಷಯ ತಿಳಿಸಿ ತನ್ನ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾನೆ. ರಕ್ಷಿತಾ ನಾಯಕ್ ನಿಗೂಢವಾಗಿ ಸಾವನ್ನಪ್ಪಿರುವ ಯುವತಿ. ಹಿರಿಯಡ್ಕ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ನಿವಾಸಿಯಾಗಿರುವ …

Read More »

ಆಸ್ಪತ್ರೆಗೆ ಬಿಟ್ಟು ಯುವಕ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿ: ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನು ಆಸ್ಪತ್ರೆಗೆ ಬಿಟ್ಟು ಯುವಕ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಆದರೆ ವಿಪರ್ಯಾಸ ಅಂದ್ರೆ ಆಸ್ಪತ್ರೆಗೆ ದಾಖಲಾದ ಕೆಲವೇ ಕ್ಷಣಗಳಲ್ಲಿ ಯುವತಿ ಮೃತಪಟ್ಟಿದ್ದಾಳೆ. ನಿನ್ನೆ 6:30ರ ಹೊತ್ತಿಗೆ ರಿಕ್ಷಾದಲ್ಲಿ ಯುವತಿಯನ್ನು ಆಸ್ಪತ್ರೆಗೆ ಕರೆದು ತಂದಿದ್ದ ಯುವಕ, ಆಕೆಯ ಮನೆಯವರಿಗೆ ಕರೆಮಾಡಿ ವಿಷಯ ತಿಳಿಸಿ ತನ್ನ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾನೆ. ರಕ್ಷಿತಾ ನಾಯಕ್ ನಿಗೂಢವಾಗಿ ಸಾವನ್ನಪ್ಪಿರುವ ಯುವತಿ. ಹಿರಿಯಡ್ಕ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ನಿವಾಸಿಯಾಗಿರುವ …

Read More »

ಮಲ್ಪೆ ಬಂದರಿನಲ್ಲಿ ಬಲೆಗೆ ಬಿದ್ವು 750, 250 ಕೆ.ಜಿ.ತೂಕದ ಮೀನುಗಳು- ಕ್ರೇನ್ ಬಳಸಿ ಸಾಗಣೆ

ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಬೃಹತ್ ಮೀನುಗಳು ಬಲೆಗೆ ಬಿದ್ದಿವೆ. ಭಾರೀ ಗಾತ್ರದ ಎರಡು ತೊರಕೆ ಮೀನುಗಳು ಆಳಸಮುದ್ರ ದೋಣಿಯ ಮೀನುಗಾರರ ಬಲೆಗೆ ಬಿದ್ದಿವೆ. ಒಂದು ಮೀನು 750 ಕೆ.ಜಿ. ಹಾಗೂ ಇನ್ನೊಂದು 250 ಕೆ.ಜಿ. ತೂಗುತ್ತಿದೆ. ಮಲ್ಪೆ ಸುಭಾಸ್ ಸಾಲಿಯಾನ್ ಅವರ ಮಾಲೀಕತ್ವದ ನಾಗಸಿದ್ಧಿ ದೋಣಿಯ ಬಲೆಗೆ ಬಿದ್ದಿರುವ ಈ ಮೀನುಗಳನ್ನು ಬಂದರಿನಲ್ಲಿ ಕ್ರೇನ್ ಮೂಲಕ ಇಳಿಸಲಾಯಿತು. ತೊರಕೆ ಮೀನು ತುಂಬಾ ರುಚಿಕರವಾಗಿದ್ದು, ವಿದೇಶಗಳಿಗೆ ರಫ್ತಾಗುತ್ತದೆ. ಬೃಹತ್ …

Read More »

ಕಾಪು ಬೀಚ್‍ಗೆ ಪ್ರವಾಸಕ್ಕೆಂದು ಬಂದ ಬೆಂಗಳೂರಿನ ಇಬ್ಬರು ಯುವಕರು ನೀರುಪಾಲಾಗಿದ್ದಾರೆ.

ಉಡುಪಿ: ಜಿಲ್ಲೆಯ ಕಾಪು ಬೀಚ್‍ಗೆ ಪ್ರವಾಸಕ್ಕೆಂದು ಬಂದ ಬೆಂಗಳೂರಿನ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. ಬೆಂಗಳೂರಿನ ಹೇಸರಘಟ್ಟದಿಂದ ಐವರು ಯುವಕರ ತಂಡ ಉಡುಪಿ ಪ್ರವಾಸಕ್ಕೆ ಬಂದಿತ್ತು. ಕಾರ್ತಿಕ್ ಮತ್ತು ರೂಪೇಶ್ ಎಂಬವರು ನೀರು ಪಾಲಾಗಿ ಸಾವನ್ನಪ್ಪಿದ್ದಾರೆ. ಸಂಜೆ ಕಾಪು ಬೀಚ್‍ನಲ್ಲಿ ಆಟವಾಡುತ್ತಿದ್ದ ಸಂದರ್ಭ ಈ ಘಟನೆ ಸಂಭವಿಸಿದೆ. ನೀರು ಪಾಲಾಗುತ್ತಿದ್ದ ರೂಪೇಶ್ ನನ್ನು ಬೀಚ್ ನಿರ್ವಾಹಕ ಪ್ರಶಾಂತ್ ಕರ್ಕೇರ, ವಿನೀತ್, ಪ್ರಥಮ್, ದಾಮೋದರ ಪುತ್ರನ್, ಚಂದ್ರಹಾಸ ಜೊತೆಗೂಡಿ ರಕ್ಷಿಸುವ ಪ್ರಯತ್ನ ಮಾಡಿದ್ದಾರೆ. …

Read More »

50 ಸಾವಿರ ರೂಪಾಯಿಯನ್ನು ಮರಳಿ ಮಹಿಳೆಗೆ ಹಿಂದಿರುಗಿಸಿ ರಿಕ್ಷಾ ಚಾಲಕ

ಉಡುಪಿ ; ಮಹಿಳೆಯೊಬ್ಬರು ರಿಕ್ಷಾದಲ್ಲಿ ಮರೆತು ಬಿಟ್ಟುಹೋದ 50 ಸಾವಿರ ರೂಪಾಯಿಯನ್ನು ಮರಳಿ ಮಹಿಳೆಗೆ ಹಿಂದಿರುಗಿಸಿ ರಿಕ್ಷಾ ಚಾಲಕ ಅಂಬಲಪಾಡಿಯ ಜಯ ಶೆಟ್ಟಿ ಅವರು ಮಾನವೀಯತೆ ಮೆರೆದಿದ್ದಾರೆ. ಬುಧವಾರ ಬೆಳಗ್ಗೆ ಕುರ್ಕಾಲಿನಿಂದ ಮಹಿಳೆಯೊಬ್ಬರು ಆಟೋರಿಕ್ಷಾದಲ್ಲಿ ಕಟಪಾಡಿ ಪೇಟೆಗೆ ಬಂದಿದ್ದು, ರಿಕ್ಷಾದಿಂದ ಇಳಿಯುವಾಗ ಗಡಿಬಿಡಿಯಲ್ಲಿ 50ಸಾವಿರ ರೂಪಾಯಿ ಹಣವನ್ನು ಮರೆತು ರಿಕ್ಷಾದಲ್ಲೇ ಬಿಟ್ಟುಹೋಗಿದ್ದರು. ಮಹಿಳೆಯನ್ನು ಬಸ್‍ಸ್ಟ್ಯಾಂಡಿನಲ್ಲಿ ಬಿಟ್ಟು ಉಡುಪಿಯ ಕಾರ್ತಿಕ್ ಎಸ್ಟೇಟ್ ಸಮೀಪದ ಆಟೋ ಸ್ಟ್ಯಾಂಡಿಗೆ ಮರಳಿದ್ದ ರಿಕ್ಷಾ ಚಾಲಕ ಜಯ …

Read More »

ಕಡಲ ಒಡಲಲ್ಲಿ ನಾಪತ್ತೆಯಾಗುತ್ತಿರುವ ಮೀನುಗಾರರಿಗೆ ಬೇಕಿದೆ ಉಪಗ್ರಹ ಆಧಾರಿತ ನೇವಿಗೇಷನ್‌ ವ್ಯವಸ್ಥೆ..

ಉಡುಪಿ: ಅರಬ್ಬೀ ಸಮುದ್ರ ಕಳೆದ ಒಂದೆರಡು ವರ್ಷಗಳಿಂದ ಆತಂಕದ ಸಮುದ್ರ ಆಗ್ತಿದೆ. ಮೇಲಿಂದ ಮೇಲೆ ಅವಘಡಗಳು ಸಂಭವಿಸುತ್ತಲೇ ಇವೆ. ದಡದಿಂದ ಹೊರಟು 15 ದಿನ ಸಮುದ್ರದಲ್ಲಿ ಜೀವನ ಮಾಡೋ ಕಡಲ ಮಕ್ಕಳು ಇದೀಗ ಉಪಗ್ರಹ ಆಧಾರಿತ ನೇವಿಗೇಷನ್‌ ವ್ಯವಸ್ಥೆಗೆ ಬೇಡಿಕೆ ಇಟ್ಟಿದ್ದಾರೆ. ಅದರಂತೆ ಮೋದಿ ಸರ್ಕಾರದ ಮೀನುಗಾರಿಕಾ ಸಚಿವಾಲಯದ ಕದ ತಟ್ಟಿದ್ದಾರೆ. ಅರಬ್ಬೀ ಸಮುದ್ರ ಒಂದು ಕಾಲದಲ್ಲಿ ಸೇಫ್‌ ಸಮುದ್ರ ಎಂಬ ಖ್ಯಾತಿ ಪಡೆದಿತ್ತು. ಕಡಲ ಮಕ್ಕಳು ಕಸುಬು ಮಾಡಿ …

Read More »

ಡಿಕೆ ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ -ಸಂಸದೆ ಶೋಭಾ

ಉಡುಪಿ: RR ನಗರದಿಂದ ದಿ. ಡಿಕೆ ರವಿ ಪತ್ನಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಸ್ಪರ್ಧೆಗೆ ಇಳಿದಿರುವ ವಿಚಾರಕ್ಕೆ ಸಂಬಂಧಿಸಿ ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ ಎಂದು ಸಂಸದೆ ಶೋಭಾ ಕೆರಂದ್ಲಾಜೆ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಶೋಭಾ ಡಿಕೆ.ರವಿ ವಿಚಾರ ಚರ್ಚೆಯ ವಿಷಯವೇ ಅಲ್ಲ. ಡಿಕೆ ರವಿ ಓರ್ವ ದಕ್ಷ ಅಧಿಕಾರಿಯಾಗಿದ್ರು, ಆದ್ರೆ ಇಂದು ಅವರು ನಮ್ಮ ಜೊತೆಯಲಿಲ್ಲ. ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ …

Read More »

ಪ್ರೀಮಿಯರ್ ಬಹುಮಹಡಿ ಕಟ್ಟಡದ ಹಿಂಭಾಗದಲ್ಲಿ ಮಳೆ ನೀರಿನ ರಭಸಕ್ಕೆ ಅಪಾಟ್ರ್ಮೆಂಟ್‍ನ ಹಿಂಭಾಗದ ತಡೆಗೋಡೆ ಕುಸಿದಿದೆ.

ಉಡುಪಿ: ಜಿಲ್ಲೆಯಲ್ಲಿ ಮಳೆಯ ಅವಾಂತರ ಮುಂದುವರೆದಿದ್ದು, ಮಣಿಪಾಲ ಸಿಂಡಿಕೇಟ್ ಸರ್ಕಲ್ ನಲ್ಲಿರುವ ಪ್ರೀಮಿಯರ್ ಬಹುಮಹಡಿ ಕಟ್ಟಡದ ಹಿಂಭಾಗದಲ್ಲಿ ಮಳೆ ನೀರಿನ ರಭಸಕ್ಕೆ ಅಪಾಟ್ರ್ಮೆಂಟ್‍ನ ಹಿಂಭಾಗದ ತಡೆಗೋಡೆ ಕುಸಿದಿದೆ. ಕಮರ್ಷಿಯಲ್ ಕಂಪ್ಲೆಕ್ಸ್ ಆಗಿರುವ ಪ್ರೀಮಿಯರ್ ಕಟ್ಟಡದ ಜೊತೆ ವಸತಿ ಸಮುಚ್ಛಯ ಸಹ ಇರುವುದರಿಂದ ಅಲ್ಲಿನ ಎಲ್ಲ ಜನರನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ಮಣಿಪಾಲ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಇದೇ ಕಟ್ಟಡದಲ್ಲಿ ವಾಸವಿದ್ದು, ಸದ್ಯ ಕಾಲೇಜುಗಳು ತೆರೆಯದ ಕಾರಣ ವಿದ್ಯಾರ್ಥಿಗಳ ಸಂಖ್ಯೆ ಬಹಳ ಕಮ್ಮಿ ಇದೆ. …

Read More »