Breaking News

ಉಡುಪಿ

ಮುಂಬೈನಿಂದ ಬಂದು ಮಣಿಪಾಲ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿಗೆ ಕೊರೊನಾ

ಉಡುಪಿ: ಮುಂಬೈನಿಂದ ಬಂದು ಮಣಿಪಾಲ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರೋದು ಇಂದು ದೃಢಪಟ್ಟಿದೆ. ಸಾವನ್ನಪ್ಪಿದ 54 ವರ್ಷದ ಸೋಂಕಿತ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ನಿವಾಸಿಯಾಗಿದ್ದು, ಮೇ 13ರಂದು ಹೃದಯಾಘಾತವಾಗಿತ್ತು. ಆರಂಭದಲ್ಲಿ ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ನೋವು ಉಲ್ಬಣಗೊಂಡು ಮಣಿಪಾಲ ಕೆಎಂಸಿಗೆ ಶಿಫ್ಟ್ ಮಾಡಲಾಗಿತ್ತು. ಮೇ 13ರ ರಾತ್ರಿಯೇ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದರು. ಮೇ 14ರ ಬೆಳಗ್ಗೆ ವ್ಯಕ್ತಿ ನಿಧನರಾಗಿದ್ದರು. ವ್ಯಕ್ತಿ ಮುಂಬೈನಿಂದ …

Read More »

ಕಾರ್ಕಳ ಶಾಸಕ ಸುನೀಲ್ ಕುಮಾರ್ ನೇತೃತ್ವದಲ್ಲಿ ತಾಲೂಕಿನಾದ್ಯಂತ ಕಷಾಯ ವಿತರಣೆ

ಉಡುಪಿ: ವಿಶ್ವಾದ್ಯಂತ ಮಹಾಮಾರಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಕೋವಿಡ್-19ಗೆ ಇನ್ನೂ ಚುಚ್ಚು ಮದ್ದು ಸಿಕ್ಕಿಲ್ಲ. ವಿಶ್ವದ ಎಲ್ಲಾ ದೇಶಗಳು ಕೊರೊನಾ ಚುಚ್ಚು ಮದ್ದನ್ನು ಕಂಡು ಹುಡುಕುವಲ್ಲಿ ಹಗಲು ರಾತ್ರಿ ಶ್ರಮಿಸುತ್ತಿವೆ. ಈ ನಡುವೆ ಕೊರೊನಾ ವೈರಸ್ ದೇಹಕ್ಕೆ ಬಾಧಿಸದಂತೆ ಆಯುರ್ವೇದದಲ್ಲಿ ಚಿಕಿತ್ಸೆ ಇದೆ ಎಂದು ಆಯುಷ್ ಇಲಾಖೆ ಹೇಳಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಇದನ್ನು ಪ್ರಯೋಗ ಮಾಡಲಾಗುತ್ತಿದೆ. ಕಾರ್ಕಳ ಶಾಸಕ ಸುನೀಲ್ ಕುಮಾರ್ ನೇತೃತ್ವದಲ್ಲಿ ತಾಲೂಕಿನಾದ್ಯಂತ ಕಷಾಯ ವಿತರಣೆ …

Read More »

ಯುಎಇಯಿಂದ ಉಡುಪಿಗೆ ಬಂದ ಐವರಿಗೆ ಕೊರೊನಾ……..

ಉಡುಪಿ: ಯುಎಇಯಿಂದ ಉಡುಪಿಗೆ ಬಂದ 49 ಮಂದಿ ಪೈಕಿ ಐವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇನ್ನಿಬ್ಬರ ವರದಿ ಬರುವುದು ಬಾಕಿಯಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಮಾಹಿತಿ ನೀಡಿದ್ದಾರೆ. 47 ದಿನದಿಂದ ಜಿಲ್ಲೆಯಲ್ಲಿ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿರಲಿಲ್ಲ, ಹೀಗಾಗಿ ಜಿಲ್ಲೆ ಗ್ರೀನ್ ಝೋನ್‍ನಲ್ಲಿ ಇತ್ತು. ಆದರೆ ವಿದೇಶಿ ನೆಲದಲ್ಲಿರುವ ಭಾರತೀಯರನ್ನು ರಕ್ಷಿಸುವ ಕಾರ್ಯಕ್ಕೆ ಭಾರತ ಮುಂದಾಗಿದ್ದು, ಉಡುಪಿ ಜಿಲ್ಲೆಗೆ 49 ಮಂದಿ ಯುಎಇಯಿಂದ ಬಂದಿದ್ದು, ಅವರಲ್ಲಿ …

Read More »

ಬಸ್ ಬಂದರೂ ಜನ ಬರುತ್ತಿಲ್ಲ……….

ಉಡುಪಿ: ಜಿಲ್ಲೆಯೊಳಗೆ ಇಂದಿನಿಂದ ಖಾಸಗಿ ಸರ್ಕಾರಿ ಬಸ್‍ಗಳು ಓಡಾಡುತ್ತಿವೆ. ಕುಂದಾಪುರ ರೂಟ್‍ನಲ್ಲಿ ಪ್ರತಿ ಅರ್ಧಗಂಟೆಗೊಂದು ಬಸ್, ಉಡುಪಿ-ಮಣಿಪಾಲ ನಗರದಲ್ಲಿ ನರ್ಮ್ ಬಸ್ ಸಂಚಾರ ಆರಂಭವಾಗಿದೆ. ಉಡುಪಿ ಜಿಲ್ಲೆಯನ್ನು ಕೇಂದ್ರ ಸರ್ಕಾರ ಗ್ರೀನ್ ಝೋನ್ ಎಂದು ಘೋಷಿಸಿದೆ. ನಿರ್ಬಂಧಿತ ವಿನಾಯಿತಿಗಳು ಜಿಲ್ಲೆಗೆ ಸಿಕ್ಕಿದೆ. ಹೀಗಾಗಿ ಜಿಲ್ಲೆಯ ಒಳಗೆ ಖಾಸಗಿ ಮತ್ತು ಸರ್ಕಾರಿ ಬಸ್‍ಗಳ ಓಡಾಟ ಆರಂಭಿಸಬಹುದು ಎಂದು ಜಿಲ್ಲಾಡಳಿತ ಹೇಳಿತ್ತು. ಬೆರಳೆಣಿಕೆಯ ಬಸ್‍ಗಳು ಮಾತ್ರ ಇಂದು ರಸ್ತೆಗೆ ಇಳಿದಿವೆ. ಆದರೆ ಜನ …

Read More »

ಯುಎಇಯಿಂದ 52 ಮಂದಿ ಉಡುಪಿಗೆ ಆಗಮನ- 9 ಮಂದಿ ಸರ್ಕಾರಿ ಕ್ವಾರಂಟೈನ್……….

ಉಡುಪಿ: ವಿದೇಶಗಳಲ್ಲಿ ಸಿಲುಕಿಕೊಂಡ ಭಾರತೀಯರನ್ನು ಕಳೆದ ಐದು ದಿನಗಳಿಂದ ಭಾರತಕ್ಕೆ ವಾಪಸ್ ಕರೆತರಲಾಗುತ್ತಿದೆ. ಯುನೈಟೆಡ್ ಅರಬ್ ಎಮಿರೇಟ್ಸಿಂದ ಉಡುಪಿಗೆ 52 ಪ್ರಯಾಣಿಕರು ವಾಪಸ್ಸಾಗಿದ್ದಾರೆ. ಮಂಗಳವಾರ ರಾತ್ರಿ 176 ಪ್ರಯಾಣಿಕರು ಮಂಗಳೂರು ಏರ್ ಪೋರ್ಟಿಗೆ ಬಂದಿಳಿದಿದ್ದು , ಈ ಪೈಕಿ 52 ಜನರು ವಿಮಾನ ನಿಲ್ದಾಣದಲ್ಲಿನ ಎಲ್ಲ ಪ್ರಕ್ರಿಯೆಗಳನ್ನು ಪೂರೈಸಿ ಉಡುಪಿ ಜಿಲ್ಲೆಗೆ ಬಂದಿದ್ದಾರೆ. ಈ ಪೈಕಿ 27 ಮಂದಿ ಪುರುಷರು ಮತ್ತು 26 ಮಂದಿ ಮಹಿಳೆಯರಿದ್ದಾರೆ. 41 ಜನ ಹೋಟೆಲ್, …

Read More »

ಉಡುಪಿಯಲ್ಲಿ ನಾಳೆಯಿಂದ ಖಾಸಗಿ, ಸರ್ಕಾರಿ ಬಸ್ ಸಂಚಾರ ಆರಂಭ…..

ಉಡುಪಿ: ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆಯಿಂದ ಖಾಸಗಿ ಮತ್ತು ಸರ್ಕಾರಿ ಬಸ್ ಸಂಚಾರ ಆರಂಭವಾಗಲಿದೆ. ಜನತಾ ಕಫ್ರ್ಯೂ ಘೋಷಣೆಯಾದ ನಂತರ ಉಡುಪಿ ಜಿಲ್ಲೆಯಲ್ಲಿ ಯಾವುದೇ ಬಸ್ ಸಂಚಾರ ಇರಲಿಲ್ಲ. ಇದೀಗ ಕೆಲವು ಷರತ್ತುಗಳನ್ನು ವಿಧಿಸಿ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಮೇ 13ರ ಬೆಳಗ್ಗೆಯಿಂದ ಜಿಲ್ಲೆಯೊಳಗೆ ಖಾಸಗಿ ಮತ್ತು ಸರ್ಕಾರಿ ಬಸ್‍ಗಳು ಸಂಚಾರ ಆರಂಭಿಸಲಿವೆ. ಒಂದು ಬಸ್‍ನಲ್ಲಿ ಶೇ.50ರಷ್ಟು ಪ್ರಯಾಣಿಕರು ಮಾತ್ರ ಓಡಾಡಬಹುದು. ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಮಾಸ್ಕ್ ಧರಿಸಿದ …

Read More »

ರಾಜ್ಯದ 34,000 ಅರ್ಚಕರಿಗೆ ದಿನಸಿ ಕಿಟ್: ಕೋಟ ಶ್ರೀನಿವಾಸ ಪೂಜಾರಿ………

ಉಡುಪಿ: ಕೊರೊನಾ ಲಾಕ್‍ಡೌನ್ ಬಿಸಿ ಎಲ್ಲಾ ಕ್ಷೇತ್ರಕ್ಕೆ ತಟ್ಟಿದೆ. ಅದರಲ್ಲೂ ತಟ್ಟೆ ಕಾಣಿಕೆ ನಂಬಿರುವ ಹಳ್ಳಿಯ ದೇವಸ್ಥಾನದ ಅರ್ಚಕರ ಸ್ಥಿತಿ ಕೇಳೋದೇ ಬೇಡ. ರಾಜ್ಯದ ಮುಜರಾಯಿ ಇಲಾಖೆ ಇದೀಗ ರಾಜ್ಯದ ದೇವಸ್ಥಾನಗಳ ಅರ್ಚಕರು ಸಂಕಷ್ಟಕ್ಕೆ ಪರಿಹಾರ ಕೊಡಲು ಮುಂದಾಗಿದೆ. ರಾಜ್ಯದ 34,000 ಅರ್ಚಕರಿಗೆ ದಿನಸಿ ಕಿಟ್ ವಿತರಿಸಲು ನಿರ್ಧಾರಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಅರ್ಚಕರಿಗೆ ದಿನಸಿ ಕಿಟ್ ವಿತರಣಾ ಜವಾಬ್ದಾರಿ …

Read More »

ಡಬ್ಬಲ್ ಶರ್ಟ್ ಹಾಕೋ ಆಟೋ ಚಾಲಕರಿಗೆ ನಾಳೆಯಿಂದ 500 ರೂ. ದಂಡ

ಉಡುಪಿ: ಪುನೀತ್ ರಾಜ್ ಕುಮಾರ್, ಪ್ರಿನ್ಸ್ ಮಹೇಶ್ ಬಾಬು ಸ್ಟೈಲ್ ಮಾಡಿಕೊಂಡು ಓಡಾಡುವ ಆಟೋ ಚಾಲಕರಿಗೆ ಉಡುಪಿಯಲ್ಲಿ ಫೈನ್ ಬೀಳುತ್ತೆ. ಉಡುಪಿಯ ಪ್ರಮುಖ ಜಂಕ್ಷನ್‍ಗಳಲ್ಲಿ ಇರುವ ಪೊಲೀಸರು ಡಬ್ಬಲ್ ಶರ್ಟ್ ಹಾಕುವ ಆಟೋ ಡ್ರೈವರ್‌ಗಳಿಗೆ ಪಾಠ ಮಾಡುತ್ತಿದ್ದಾರೆ. ಉಡುಪಿಯಲ್ಲಿ ಆಟೋ ಚಾಲಕರು ಒಳಗೊಂದು ಶರ್ಟ್ ಹಾಕಿ, ಹೊರಗೆ ಖಾಕಿ ಶರ್ಟ್  ಓಪನ್ ಬಿಟ್ಟುಕೊಳ್ಳುವುದು ಒಂದು ಟ್ರೆಂಡ್ ಆಗಿದೆ. ಫುಲ್ ಹ್ಯಾಂಡ್ ಶರ್ಟ್ ಮೇಲೆ ಹಾಫ್ ಖಾಕಿ ಶರ್ಟ್ ಹಾಕಿಕೊಂಡು ಅದನ್ನು …

Read More »

ಮದ್ಯ ಮಾರಾಟಕ್ಕೆ ಅವಕಾಶ ಕೊಟ್ಟಿದ್ದೇ ಕೊಟ್ಟಿದ್ದು ಎಣ್ಣೆಗೆ ಮಣಿಪಾಲದ ಮಾನಿನಿಯರು ಮುಗಿಬಿದ್ದ ಪ್ರಸಂಗ

ಸಾಮಾಜಿಕ ಅಂತರಕ್ಕೆ ಗೋಲಿ ಮಾರೋ ಉಡುಪಿ: ಮದ್ಯ ಮಾರಾಟಕ್ಕೆ ಅವಕಾಶ ಕೊಟ್ಟಿದ್ದೇ ಕೊಟ್ಟಿದ್ದು ಎಣ್ಣೆಗೆ ಮಣಿಪಾಲದ ಮಾನಿನಿಯರು ಮುಗಿಬಿದ್ದ ಪ್ರಸಂಗ ಇಂದು ನಡೆದಿದೆ. ಸಾಮಾಜಿಕ ಅಂತರಕ್ಕೆ ಗೋಲಿ ಮಾರೋ ಅಂತ ಎದ್ದು ಬಿದ್ದು ಮದ್ಯ ಖರೀದಿ ಮಾಡಿದರು. ರೂಲ್ಸ್ & ರೆಗ್ಯುಲೇಶನ್ ಅನ್ನು ಉಡುಪಿಯ ಮಣಿಪಾಲದಲ್ಲಿ ಗಾಳಿಗೆ ತೂರಿ, ಬಿಸಿಲ ದಾಹ ತೀರಿಸಲು ಬಿಯರ್ ಗಾಗಿ ಬಿಸಿಲಿನಲ್ಲೇ ಯುವತಿಯರು ಒಣಗಿದರು. ಮಣಿಪಾಲದಲ್ಲಿ ಮದ್ಯಕ್ಕಾಗಿ ಯುವತಿಯರು ಸರತಿ ಸಾಲು ಕಟ್ಟಿದ್ದರು. ಬಿಸಿಲ …

Read More »

ಉಡುಪಿಯಲ್ಲಿ ಯಥೇಚ್ಛವಾಗಿ ಮದ್ಯ ಸ್ಟಾಕ್ ಇದೆ: ಅಬಕಾರಿ ಉಪ ಆಯುಕ್ತ ಅಭಯ

ಉಡುಪಿ: ಜಿಲ್ಲೆಯಲ್ಲಿ ಯಥೇಚ್ಛ ಮದ್ಯ ಲಭ್ಯವಿದೆ. ಯಾರೂ ನೂಕುನುಗ್ಗಲು ಮಾಡಬೇಡಿ ಅಂತ ಉಡುಪಿ ಅಬಕಾರಿ ಉಪ ಆಯುಕ್ತ ನಾಗೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 1ರವರೆಗೆ ಮಾತ್ರ ಮದ್ಯ ಮಾರಾಟ ನಡೆಯಲಿದೆ. ಜಿಲ್ಲೆಯ 103 ವೈನ್ ಸ್ಟೋರ್ ಗಳಲ್ಲಿ ಮದ್ಯ ಲಭ್ಯವಿದೆ. ಈ ಪೈಕಿ 89 ವೈನ್ ಶಾಪ್ಸ್ , 14 ಎಂಎಸ್‍ಐಎಲ್ ಮಳಿಗೆಗಳಲ್ಲಿ ಮಾರಾಟ ನಡೆಯಲಿದೆ ಎಂದು ಹೇಳಿದರು. ಉಡುಪಿ ಜಿಲ್ಲೆಯಲ್ಲಿ …

Read More »