Breaking News

ಉತ್ತರಕನ್ನಡ

ಕಾರವಾರದಲ್ಲಿ ಸೋಂಕಿತರು ಗುಣಮುಖ – ನಾಲ್ವರು ಡಿಸ್ಚಾರ್ಜ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಪತಂಜಲಿ ನೌಕಾನೆಲೆ ಆಸ್ಪತ್ರೆಯಲ್ಲಿ ಕೊರೊನಾ ವೈರಸ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದರು. ಅವರಲ್ಲಿ ನಾಲ್ವರು ಗುಣಮುಖರಾಗಿದ್ದು, ಇಂದು ಅವರನ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಹರೀಶ್‍ಕುಮಾರ್ ಮಾಹಿತಿ ನೀಡಿದ್ದಾರೆ. ಜಿಲ್ಲೆಯ ಭಟ್ಕಳ ಮೂಲದ ಎಂಟು ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ತಕ್ಷಣ ಜಿಲ್ಲಾಡಳಿತ ಅವರಿಗೆ ಭಟ್ಕಳ ತಾಲೂಕು ಆಸ್ಪತ್ರೆಯಿಂದ ಕಾರವಾರ ತಾಲೂಕಿನ ಕದಂಬ ನೌಕಾನೆಲೆಯ ಪತಂಜಲಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ …

Read More »

ಅಣ್ಣನ ಪತ್ನಿಯೊಂದಿಗೆ ಅನೈತಿಕ ಸಂಬಂಧಕ್ಕೆ ಅಡ್ಡಿ – ಸ್ನೇಹಿತನ ರುಂಡ ತುಂಡರಿಸಿ ಕೊಲೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ವಾರದ ಹಿಂದೆ ನಡೆದ ಕೊಲೆ ಪ್ರಕರಣವೊಂದನ್ನು ಬೇಧಿಸಿರುವ ಪೊಲೀಸರು ನಾಲ್ಕು ದಿನದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಳಿಯಾಳ ತಾಲೂಕಿನ ಬೆಳವಟಗಿಯ ಮಾರುತಿ ಮಾದಪ್ಪಗೌಡ ಬಂಧಿತ ಆರೋಪಿ. ಈತ ತನ್ನ ಸ್ನೇಹಿತ ನಾಗರಾಜ್‍ನನ್ನು ಕೊಲೆ ಮಾಡಿದ್ದನು. ಏನಿದು ಪ್ರಕರಣ? ಏಪ್ರಿಲ್ 4 ರಂದು ಬೆಳವಟಗಿಯ ನಾಗರಾಜ್ ಕೊಳದಾರ (31) ಮನೆಯಿಂದ ದೇವಸ್ಥಾನದ ಹತ್ತಿರ ಹೋಗಿ ಬರುವುದಾಗಿ ಹೇಳಿ ನಾಪತ್ತೆಯಾಗಿದ್ದನು. ಆದರೆ ಈತನ ಮೃತದೇಹ ಏಪ್ರಿಲ್ …

Read More »

ಕಾರವಾರ:ಕೃಷಿ, ತೋಟಗಾರಿಕೆ ಬೆಳೆಗಳಿಗೆ ಅನುಮತಿ ಕಾಯಬೇಕಿಲ್ಲ: ಶಿವರಾಮ್ ಹೆಬ್ಬಾರ್

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಅಧಿಕಾರಿಗಳ ಮುಂಜಾಗೃತಾ ಕ್ರಮದಿಂದ ಕೊರೊನಾ ವೈರಸ್ ನಿಯಂತ್ರಣದಲ್ಲಿದ್ದು, ಮುಂದಿನ ದಿನಗಳಲ್ಲಿ ರೈತರಿಗೆ, ಮೀನುಗಾರರಿಗೆ ಹಾಗೂ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು. ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಕೊರೊನಾ ತಡೆ ಬಗ್ಗೆ ಸಭೆ ನಡೆಸಿದ ಅವರು, ಕೃಷಿ ಚಟುವಟಿಕೆಗೆ ಯಾವುದೇ ತೊಂದರೆ ಆಗದಂತೆ ಮುಕ್ತವಾಗಿ ಅವಕಾಶ ನೀಡಲಾಗಿದೆ. ಕೇಂದ್ರ ಸರ್ಕಾರದ ನಿರ್ಣಯದಂತೆ ಜಿಲ್ಲೆಯಲ್ಲಿಯೂ ಸಾಮಾಜಿಕ ಅಂತರ …

Read More »

ಕೊರೊನಾ ವೈರಸ್ ಭೀತಿ ಉಂಟು ಮಾಡಿರುವ ಬೆನ್ನಲ್ಲೇ ಉತ್ತರಕನ್ನಡ ಜಿಲ್ಲೆಯಲ್ಲಿ ಇದೀಗ ಡೆಂಗ್ಯೂ ಆತಂಕ ಮೂಡಿಸಿದೆ.

ಕಾರವಾರ: ರಾಜ್ಯದಲ್ಲಿ ಸದ್ಯ ಕೊರೊನಾ ವೈರಸ್ ಭೀತಿ ಉಂಟು ಮಾಡಿರುವ ಬೆನ್ನಲ್ಲೇ ಉತ್ತರಕನ್ನಡ ಜಿಲ್ಲೆಯಲ್ಲಿ ಇದೀಗ ಡೆಂಗ್ಯೂ ಆತಂಕ ಮೂಡಿಸಿದೆ. ಕಾರವಾರದ ಬೈತಖೋಲ ಬಂದರು ಪ್ರದೇಶದಲ್ಲಿನ ಮೀನುಗಾರಿಕಾ ಬೋಟ್ ಕಾರ್ಮಿಕನೋರ್ವನಲ್ಲಿ ಡೆಂಗ್ಯೂ ಕಾಣಿಸಿಕೊಂಡಿದೆ. ಕಳೆದ 11 ದಿನಗಳಿಂದ ಆಳ ಸಮುದ್ರ ಮೀನುಗಾರಿಕೆ ತೆರಳುವ ಬೋಟ್ ಗಳು ಬಂದರಿನಲ್ಲೇ ಲಂಗರು ಹಾಕಿ ನಿಂತಿದ್ದು, ಲಾಕ್ ಡೌನ್ ಆದ ಹಿನ್ನೆಲೆ ಬೋಟಿನ ಕಾರ್ಮಿಕರು ಊರಿಗೆ ತೆರಳಲಾಗದೇ ಅದರಲ್ಲೇ ವಾಸ್ತವ್ಯ ಹೂಡಿದ್ದಾರೆ. ಆದರೆ ಬೋಟುಗಳು …

Read More »

ಉತ್ತರಕನ್ನಡ ಜಿಲ್ಲೆಯ ಇಬ್ಬರಲ್ಲಿ ಇಂದು ಕೊವಿಡ್ 19 ಪಾಸಿಟಿವ್ ಇರುವುದು ದೃಢಪಟ್ಟಿದೆ.

ರಾಜ್ಯಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ದಿನಾದಿಮ್ದ ದಿನಕ್ಕೆ ಸೋಂಕು ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಉತ್ತರಕನ್ನಡ ಜಿಲ್ಲೆಯ ಇಬ್ಬರಲ್ಲಿ ಇಂದು ಕೊವಿಡ್ 19 ಪಾಸಿಟಿವ್ ಇರುವುದು ದೃಢಪಟ್ಟಿದೆ. ಇಂದು ಬೆಳಿಗ್ಗೆ ರಾಜ್ಯದಲ್ಲಿ ಕೊರೊನಾ ವೈರಸ್ ನ ನಾಲ್ಕು ಹೊಸ ಪ್ರಕರಣಗಳು ಪತ್ತೆಯಾಗಿತ್ತು. ಅವರಲ್ಲಿ ಇಬರು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದವರು ಎಂದು ತಿಳಿದುಬಂದಿದೆ. ಈ ಮೂಲಕ ಉತ್ತಾರ ಕನ್ನಡ ಜಿಲ್ಲೆಯಲ್ಲಿ ಮೂವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. …

Read More »

ಸಿದ್ದಾಪುರ ತಾಲೂಕಿನಲ್ಲಿ ಹೆಚ್ಚುತ್ತಿರುವ ಮಂಗನಕಾಯಿಲೆ (ಕೆ.ಎಫ್.ಡಿ)ಯಿಂದ ಜನರು ಭಯಪಟ್ಟು ಊರು ಬಿಡುತ್ತಿದ್ದಾರೆ:ವಿಶ್ವೇಶ್ವರ ಹೆಗಡೆ ಕಾಗೇರಿ ಸ್ವಕ್ಷೇತ್ರ

ಕಾರವಾರ: ಕೊರೊನಾ ವೈರಸ್‍ಗೆ ರಾಜ್ಯದ ಜನ ಭಯಗೊಂಡಿದ್ದರೆ ಇತ್ತ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ವಕ್ಷೇತ್ರ ಸಿದ್ದಾಪುರ ತಾಲೂಕಿನಲ್ಲಿ ಹೆಚ್ಚುತ್ತಿರುವ ಮಂಗನಕಾಯಿಲೆ (ಕೆ.ಎಫ್.ಡಿ)ಯಿಂದ ಜನರು ಭಯಪಟ್ಟು ಊರು ಬಿಡುತ್ತಿದ್ದಾರೆ. ಹೌದು. ಉತ್ತರ ಕನ್ನಡ ಜಿಲ್ಲೆಯ ಜನರೀಗ ಕೆ.ಎಫ್.ಡಿ ವೈರಸ್‍ಗೆ ಭಯಪಟ್ಟು ಊರು ತೊರೆಯುತಿದ್ದಾರೆ. ವಿಧಾನಸಭಾ ಸ್ಪೀಕರ್ ಕಾಗೇರಿಯವರ ಸ್ವಕ್ಷೇತ್ರ ಜಿಲ್ಲೆಯ ಸಿದ್ದಾಪುರ ತಾಲೂಕಿನ ಬಾಳಗೋಡು, ಮಳಗುಳಿ, ಹನುಮನಜಡ್ಡಿ, ಹೊನ್ನೆಗಟಗಿ, ತ್ಯಾಗಲಿಗಳಲ್ಲಿ 200ಕ್ಕೂ ಹೆಚ್ಚು ಮಂಗಗಳು ಈ ವರ್ಷ ಸಾವನ್ನಪ್ಪಿದ್ದು ಇವುಗಳಲ್ಲಿ …

Read More »

ಯಕ್ಷಗಾನಂ ಗೆಲ್ಗೆ! ಯಕ್ಷಗಾನಂ ಬಾಳ್ಗೆ!

ಯಕ್ಷಗಾನಂ ಗೆಲ್ಗೆ! ಯಕ್ಷಗಾನಂ ಬಾಳ್ಗೆ! ಉತ್ತರ ಕನ್ನಡ ಜಿಲ್ಲೆಯ ವಿಶ್ವ ಪ್ರಸಿದ್ಧ ಬನವಾಸಿಯ ಕದಂಬೋತ್ಸವದ ನಿಮಿತ್ತ ರಾಜ್ಯಮಟ್ಟದ ಕಲಾವಿದರುಗಳಿಂದ ನಡೆದ ಸಾಂಸ್ಕೃತಿಕ ವೈಭವ, ಯಕ್ಷ ವೈಭವದ ದೃಶ್ಯಾವಳಿಗಳನ್ನು ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ವೀಕ್ಷಿಸಿದರು. …

Read More »

ಭಾರತೀಯ ಕಲೆ ಸಂಸ್ಕೃತಿ ಅಳಿಸಿ ಹೋಗಬಾರದು,:ಶಶಿಕಲಾ ಜೊಲ್ಲೆ

ಜೋಯಿಡಾ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿದ್ದ ಜಿಲ್ಲಾ ಮಟ್ಟದ ಯುವಜನ ಮೇಳವನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಉದ್ಘಾಟಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಭಾರತೀಯ ಕಲೆ ಸಂಸ್ಕೃತಿ ಅಳಿಸಿ ಹೋಗಬಾರದು, ಅದು ಮುಂದಿನ ಪೀಳಿಗೆಗೆ …

Read More »

ಖಾಸಗಿಯವರ ಪಾಲಾಗಿದೆ ಜನ ಔಷಧಿ ಕೇಂದ್ರ- ಔಷಧಗಳು ನೋ ಸ್ಟಾಕ್!

ಕಾರವಾರ: ಜನಸಾಮಾನ್ಯರಿಗೆ ಅಗ್ಗದ ದರದಲ್ಲಿ ಔಷಧಗಳು ದೊರೆಯಲಿ ಅನ್ನೋ ಸದುದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಜನ ಔಷಧಿ ಎನ್ನುವ ಯೋಜನೆಯನ್ನು ಜಾರಿಗೆ ತಂದಿದ್ದರು. ಆದರೆ ಈ ಕೇಂದ್ರಗಳಲ್ಲಿ ಜನರಿಗೆ ಅಗ್ಗದ ದರದಲ್ಲಿ ಔಷಧಗಳು ದೊರೆಯುತ್ತಿಲ್ಲ ಅನ್ನೋದಕ್ಕೆ ಜಿಲ್ಲೆಯ ಹಲವಾರು ಕೇಂದ್ರಗಳು ಸಾಕ್ಷಿಯಾಗಿವೆ. ಜಿಲ್ಲೆಯ ಪ್ರತಿ ತಾಲೂಕಿನಲ್ಲೂ ಕೂಡ ಜನ ಔಷಧಿ ಕೇಂದ್ರಗಳನ್ನ ತೆರೆಯಲಾಗಿದೆ. ಈ ಕೇಂದ್ರಗಳೆಲ್ಲ ಖಾಸಗಿಯವರ ಸಹಭಾಗಿತ್ವದಲ್ಲಿ ನಡೆಸಲ್ಪಡುತ್ತಿವೆ. ಈ ಕೇಂದ್ರಗಳಲ್ಲಿ ಜನ ಔಷಧಿ ಮಾರ್ಕಿನ ಔಷಧಗಳು ದೊರೆಯುತ್ತಿಲ್ಲ …

Read More »