Breaking News

ಕಲಬುರ್ಗಿ

ಹಳ್ಳಿಯಲ್ಲಿ ವಾಸಿಸಲು ಇಷ್ಟವಿಲ್ಲವೆಂದು ನವ ವಿವಾಹಿತೆ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ನವ ವಿವಾಹಿತೆ ಎರಡೇ ತಿಂಗಳಲ್ಲಿ ನೇಣಿಗೆ ಶರಣಾದ ಘಟನೆ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ನಡೆದಿದೆ. ಅನುಸುಯಾ ಅವಿನಾಶ್ ಆಕಡೆ (26) ಮೃತ ದುರ್ದೈವಿ. ಅನುಸುಯಾ ತನ್ನ ಅತ್ತೆ ಮಗ ಅವಿನಾಶ್ ನನ್ನ ಪ್ರೀತಿಸಿ ಮದುವೆಯಾಗಿದ್ದಳು. ಎರಡು ತಿಂಗಳ ಹಿಂದೆ ಅನುಸುಯಾ-ಅವಿನಾಶ್ ಮದುವೆ ಎರಡು ಕುಟುಂಬಸ್ಥರ ಸಮ್ಮುಖದಲ್ಲಿ ನೇರವೇರಿತ್ತು. ಮದುವೆಯಾದ ಬಳಿಕ ಗಂಡನ ಜೊತೆ ಹಳ್ಳಿಯಲ್ಲಿ ಇರುವುದಕ್ಕೆ ಅನುಸುಯಾ ಬೇಸರ ಮಾಡಿಕೊಂಡಿದ್ದಳು. ಅನುಸುಯಾಳ ಮೂವರು ಸಹೋದರಿಯರು ಗಂಡನ …

Read More »

ಎಲ್‌ಪಿಜಿ ಸಿಲಿಂಡರ್‌ಗೆ ರಾತ್ರಿಯಿಡೀ ಕ್ಯೂ ಕೂತ ಜನ

ಬೆಂಗಳೂರು: ಮಧ್ಯಪ್ರಾಚ್ಯ ಯುದ್ಧದಿಂದ ಜಗತ್ತಿನಲ್ಲಿ ʻಎನರ್ಜಿ ಎಮರ್ಜೆನ್ಸಿʼ  ಸೃಷ್ಟಿ ಆಗಿಬಿಡುತ್ತಾ ಅನ್ನೋ ಕಳವಳ ಹೆಚ್ಚಾಗ್ತಿದೆ. ಕೊರೊನಾ ಬಳಿಕ ಜಗತ್ತಿನಲ್ಲಿ ಮೊದಲ ಬಾರಿಗೆ ಅನಿಲ ಸಂಕಷ್ಟ ಎದುರಾಗೋ ಆತಂಕ ಮನೆ ಮಾಡಿದೆ. ರಾಜ್ಯದಲ್ಲೂ ಪೆಟ್ರೋಲ್-ಡೀಸೆಲ್ ಸಿಗಲ್ಲ ಅನ್ನೋ ಗಾಳಿಸುದ್ದಿಗೆ ಜನ ಎದ್ನೋ ಬಿದ್ನೋ ಅಂತ ಬಂಕ್‌ಗಳಿಗೆ ಲಗ್ಗೆ ಇಟ್ಟಿದ್ದಾರೆ. ಬೆಂಗಳೂರು, ಬೀದರ್, ಶಿವಮೊಗ್ಗ, ಯಾದಗಿರಿ, ಬೆಳಗಾವಿ ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಬೆಂಗಳೂರಿನ ಸುತ್ತಮುತ್ತ ಆನೇಕಲ್, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರದ …

Read More »

ಕಬ್ಬು ನಾಟಿ ಮಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಸಾವು

ಕಲಬುರಗಿ: ಕಬ್ಬು ನಾಟಿ ಮಾಡುತ್ತಿದ್ದಾಗ ಸಿಡಿಲು ಬಡಿದು ಯುವ ರೈತ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಶಾದಿಪುರ ತಾಂಡಾದಲ್ಲಿ ನಡೆದಿದೆ. ಮಹೇಶ್ ಚೌವ್ಹಾಣ್ (24) ಸಿಡಿಲಿಗೆ ಬಲಿಯಾದ ರೈತ. ಕಲಬುರಗಿ ಜಿಲ್ಲೆಯ ವಿವಿಧೆಡೆ ಇಂದು ಬಿರುಗಾಳಿ, ಗುಡುಗು ಸಹಿತ ಮಳೆಯಾಗಿದೆ. ಈ ವೇಳೆ ಜಮೀನಿನಲ್ಲಿ ಕಬ್ಬು ನಾಟಿ ಮಾಡಲೆಂದು ಹೋಗಿದ್ದ ಮಹೇಶ್ ಸಿಡಿಲಿಗೆ ಬಲಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. …

Read More »

ಅವರ ತಂದೆ ಕಾರಣಕ್ಕೆ ಪ್ರಿಯಾಂಕ ಖರ್ಗೆ ಮಂತ್ರಿಯಾಗಿದ್ದಾರೆ;ಮಾಜಿ ಡಿಸಿಎಂ ಈಶ್ಚರಪ್ಪ

ಕಲಬುರಗಿ: ಪ್ರಿಯಾಂಕ್ ಖರ್ಗೆ ಇನ್ನೂ ಎಳಸು, ಅವರ ತಂದೆ ಕಾರಣಕ್ಕೆ ಮಂತ್ರಿಯಾಗಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಯಾಕೆ ಈ ಸರ್ಕಾರಕ್ಕೆ ಹಿಂದುಳಿದವರು, ದಲಿತರು ನೆನಪಿಗೆ ಬರಲಿಲ್ವಾ? ಈ ಸರ್ಕಾರ ಕೇವಲ ಮುಸ್ಲಿಮರಿಗೋಸ್ಕರ ಇದ್ದೀವಿ ಅನ್ನೋ ಥರ ಇದ್ದಾದೆ. ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ಬ್ಯಾನ್ ಮಾಡೇ ಬಿಡುತ್ತೇವೆ ಅನ್ನೋ ರೀತಿ ಮಾತನಾಡ್ತಾರೆ. ಪ್ರಿಯಾಂಕ್ ಖರ್ಗೆ ಇನ್ನೂ ಎಳಸು, ಅವರಪ್ಪನ ಕಾರಣಕ್ಕೆ ಮಂತ್ರಿಯಾಗಿದ್ದಾರೆ. ಇಂದಿರಾ, …

Read More »

ನವೀಕೃತ ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನ ಉದ್ಗಾಟಿಸಿದ :ಸಚಿವ‌ ಪ್ರಿಯಾಂಕ್ ಖರ್ಗೆ

ಕಲಬುರಗಿ : ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸ್ಥಳೀಯ ಶಾಸಕ ಡಾ.ಅವಿನಾಶ ಜಾಧವ ಅವರೊಂದಿಗೆ ಅರಣ್ಯ ಇಲಾಖೆಯಿಂದ ಚಿಂಚೋಳಿ ಬಳಿಯ ಪೋಲಕಪಲ್ಲಿಯಲ್ಲಿ ಸುಮಾರು 1.30 ಕೋಟಿ ರೂ.‌ ವೆಚ್ಚದಲ್ಲಿ ನವೀಕೃತ ಸಾಲು ಮರದ ತಿಮ್ಮಕ್ಕ ವೃಕ್ಷವನ ಇಂದು  (ಶನಿವಾರ) ಉದ್ಘಾಟಿಸಿದರು. ನಂತರ ಅಧಿಕಾರಿಗಳೊಂದಿಗೆ ವನದಲ್ಲಿ ಒಂದು ಸುತ್ತು ಹಾಕಿ ವಿವಿಧ ಸಸ್ಯ ರಾಶಿಗಳನ್ನು ವೀಕ್ಷಿಸಿದರು. ಲೋಟಸ್ ಎಕೋ ಪಾಂಡ್ ಬಳಿ ಪೋಟೋ ಗೆ ಪೋಸ್ ನೀಡಿದರು. ಇದೇ …

Read More »

ಅಂಗನವಾಡಿ ನೇಮಕಾತಿ; 412 ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು  ಕಲಬುರಗಿ ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 412 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ 89 ಅಂಗನವಾಡಿ ಕಾರ್ಯಕರ್ತೆಯರು ಮತ್ತು 323 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಲಭ್ಯವಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 16ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಅಗತ್ಯ. ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ …

Read More »

ದೇಶ ಹಾಳು ಮಾಡುವ ಮೋದಿಗೆ ತಕ್ಕಪಾಠ ಕಲಿಸಿ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ವಿದೇಶಾಂಗ ನೀತಿಯಿಂದ ದೇಶ ಹಾಳು ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿಗೆ ತಕ್ಕಪಾಠ ಕಲಿಸಬೇಕು ಎಂದು ರಾಜ್ಯಸಭೆ ವಿಪ ನಾಯಕರೂ ಆದ ಎಐಸಿಸಿ ಅಧ್ಯ ಮಲ್ಲಿಕಾರ್ಜುನ ರ್ಖಗೆ ಹೇಳಿದರು. ಪಟ್ಟಣದಲ್ಲಿ ಭಾನುವಾರ ಆಯೋಜಿಸಿದ್ದ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಗಳ 1069.41 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಅಡಿಗಲ್ಲು ಮತ್ತು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಟ್ರಂಪ್​ ಒಬ್ಬ ಡಿಕ್ಟೇಟರ್​, ಮೋದಿ ಅವರ ಗುಲಾಮ. ರಷ್ಯಾದಿಂದ …

Read More »

ಬಾಲಕಿ ಜೊತೆ ಅನುಚಿತ ವರ್ತನೆ – ಪ್ರಕರಣ ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

ಕಲಬುರಗಿ: ಬಾಲಕಿ ಜೊತೆ ಅನುಚಿತ ವರ್ತನೆ ಕೇಸ್‌ಗೆ ಸಂಬಂಧಿಸಿದಂತೆ ಪ್ರಕರಣ ರದ್ದು ಕೋರಿ ಕರ್ನಾಟಕ ಹೈಕೋರ್ಟ್ ಕಲಬುರಗಿ ವಿಭಾಗೀಯ ಪೀಠದ  ಮೆಟ್ಟಿಲೇರಿದ್ದಾರೆ. ಬಾಲಕಿಯ ಜೊತೆ ಮಲ್ಲಿಕಾರ್ಜುನ ಮುತ್ಯಾ ಅಸಭ್ಯವಾಗಿ ನಡೆದುಕೊಂಡಿದ್ದರು. ಹೀಗಾಗಿ ಮುತ್ಯಾನ ವಿರುದ್ಧ ಕ್ರಮ ಜರುಗಿಸಲು ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ದೂರು ದಾಖಲಿಸಿಕೊಂಡಿತ್ತು. ಯಾದಗಿರಿ ಎಸ್ಪಿ ಅವರಿಗೆ ಪತ್ರವನ್ನೂ ಬರೆದಿದ್ದರು. ಅದರಂತೆ ಗೋಗಿ ಪೊಲೀಸ್ ಠಾಣೆಯಲ್ಲಿ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಇದೀಗ ಮಲ್ಲಿಕಾರ್ಜುನ …

Read More »

ತಿಂಗಳೊಳಗೆ ಗುಲ್ಬರ್ಗ ವಿವಿ ಬಿ.ಇಡಿ ಫಲಿತಾಂಶಕ್ಕೆ ಸೂಚಿಸಿ ರಾಜ್ಯಪಾಲರ ಆದೇಶ

ಬೆಂಗಳೂರು: ಕಲಬುರಗಿಯ ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ 2024ರ ಡಿಸೆಂಬರ್‌ನಲ್ಲಿ ನಡೆದಿದ್ದ ಬಿ.ಇಡಿ 2 ಮತ್ತು 4ನೇ ಸೆಮಿಸ್ಟರ್‌ಗಳಿಗೆ ನಡೆಸಿದ ಪರೀಕ್ಷೆಗಳ ಫಲಿತಾಂಶವನ್ನು ಮುಂದಿನ ಒಂದು ತಿಂಗಳೊಳಗೆ ನೀಡುವಂತೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಏಕವ್ಯಕ್ತಿ ಸತ್ಯಶೋಧನಾ ಸಮಿತಿಯು ಮಧ್ಯಂತರ ವರದಿ ನೀಡಿದೆ. ಎರಡೂ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಸೌಲಭ್ಯಗಳನ್ನು ಬಳಸಿಕೊಂಡು ಮೌಲ್ಯಮಾಪನ ಮಾಡಿಸಿ ಫಲಿತಾಂಶ ನೀಡಲು ಸೂಚಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲರು …

Read More »

ಕಾಂಗ್ರೆಸ್ ಸರ್ಕಾರ ಗೊಂದಲ ಬಿಟ್ಟು ಸೂಕ್ತ ಆಡಳಿತ ನಡೆಸಲಿ: ಮುರುಗೇಶ್ ನಿರಾಣಿ

ಕಲಬುರಗಿ: ಕಾಂಗ್ರೆಸ್ ಸರ್ಕಾರ ಗೊಂದಲ ಬಿಟ್ಟು ಸೂಕ್ತ ಆಡಳಿತ ನಡೆಸಲಿ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ. ರಾಜ್ಯ ಸರ್ಕಾರದಲ್ಲಿ ಕಳೆದೊಂದು ವರ್ಷದಲ್ಲಿ ಬರೀ ಗೊಂದಲ ಇದೆ. ಸಿಎಂ ಸಿದ್ದರಾಮಯ್ಯ ಅನುಭವಸ್ಥರು. ಆದಷ್ಟು ಬೇಗ ಗೊಂದಲ ಬಗೆಹರಿಸಿ ಅಭಿವೃದ್ಧಿಯತ್ತ ಚಿತ್ತ ಹರಿಸಬೇಕು ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 31 ಹೊಸ ಕಾಂಗ್ರೆಸ್ ಶಾಸಕರು ಹೈಕಮಾಂಡ್ ಪತ್ರ ವಿಚಾರ ಪತ್ರ ಬರೆದಿದ್ದರಲ್ಲಿ ತಪ್ಪೇನಿಲ್ಲ. ಸಿದ್ದರಾಮಯ್ಯ ಸರ್ಕಾರಕ್ಕೆ …

Read More »