ಕಲಬುರ್ಗಿ: ಕೊರೊನಾ ಸೋಂಕು ಗಾಳಿಯಲ್ಲಿ ಹರಡುವ ಸೂಕ್ಷ್ಮಾಣು ಅಲ್ಲವಾದ್ದರಿಂದ ಸಾರ್ವಜನಿಕರು ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೊರೊನಾ ಶಂಕಿತರನ್ನು ಭೇಟಿಯಾದವರು ಅಥವಾ ಅವರ ಮನೆಯ ಸುತ್ತಮುತ್ತ ಸುಳಿದಾಡುವವರು ಮಾಸ್ಕ್ ಧರಿಸಬಹುದು. ಉಳಿದವರಿಗೆ ಮಾಸ್ಕ್ ಬೇಕಿಲ್ಲ. ಸ್ವಚ್ಛವಾಗಿ ಸಾಬೂನಿನಿಂದ ಕೈ ತೊಳೆದರೂ ಸಾಕು. ಇಲ್ಲಿ ಕುಳಿತಿರುವ ನಾನು, ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಡಾ.ಅವಿನಾಶ್ …
Read More »ಪತ್ರಕರ್ತರೇ ಎಚ್ಚರ..! ಕೊರೊನಾ ವೈರಸ್ ಸುದ್ದಿ ಕೊಡೋ ಧಾವಂತ ನಿಮ್ಮ ಜೀವಕ್ಕೇ ಎರವಾಗದಿರಲಿ.
ಕಲಬುರಗಿ: ವಿಶ್ವಾದ್ಯಂತ ಕೊರೊನಾ ವೈರಸ್ ಅಬ್ಬರಿಸುತ್ತಿರುವ ನಡುವಲ್ಲೇ, ಈ ಕುರಿತ ಸುದ್ದಿಗಳನ್ನು ಸಂಗ್ರಹಿಸುವ ಹಾಗೂ ಅದನ್ನು ಜನರಿಗೆ ತಲುಪಿಸುವ ಕಾರ್ಯ ಮಾಡುತ್ತಿರುವ ಮಾಧ್ಯಮ ಪ್ರತಿನಿಧಿಗಳೂ ಜೀವ ಕೈಯ್ಯಲ್ಲಿ ಹಿಡಿದು ಕಾರ್ಯನಿರ್ವಹಿಸಬೇಕಾದ ಅನಿವಾರ್ಯತೆ ಬಂದೊದಗಿದೆ. ಸುದ್ದಿ ಕೊಡುವ ಧಾವಂತದಲ್ಲಿ ಮಾಧ್ಯಮ ಪ್ರತಿನಿಧಿಗಳು ಸೋಂಕಿತರ ಹಾಗೂ ಅವರ ಒಡನಾಟದಲ್ಲಿ ಇರುವವರ ಸಂಪರ್ಕಕ್ಕೆ ಬರುವ ಸಾಧ್ಯತೆಗಳು ದಟ್ಟವಾಗುತ್ತಿವೆ. ಇದಕ್ಕೆ ಕಲಬುರಗಿಯ ಪ್ರಕರಣವೇ ಸಾಕ್ಷಿ. ಮಾಧ್ಯಮಕ್ಕೂ ತಟ್ಟಿದ ಕೊರೊನಾ ಬಿಸಿ..! ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮದ …
Read More »ಕೊರೊನಾ ಸೋಂಕಿನಿಂದ ಕಲ್ಯಾಣ ಕರ್ನಾಟಕದ ಸುಪ್ರಸಿದ್ಧ ಶ್ರೀ ಶರಣಬವೇಶ್ವರ ಜಾತ್ರೆಯನ್ನು ರದ್ದುಗೊಳಿಸಲಾಗಿದೆ.
ಕಲಬುರಗಿ: ಕೊರೊನಾ ಸೋಂಕಿನಿಂದ 76 ವರ್ಷದ ವೃದ್ಧ ಮೃತಪಟ್ಟ ಹಿನ್ನೆಲೆಯಲ್ಲಿ ಶುಕ್ರವಾರ ನಡೆಯಬೇಕಿದ್ದ ಕಲ್ಯಾಣ ಕರ್ನಾಟಕದ ಸುಪ್ರಸಿದ್ಧ ಶ್ರೀ ಶರಣಬವೇಶ್ವರ ಜಾತ್ರೆಯನ್ನು ರದ್ದುಗೊಳಿಸಲಾಗಿದೆ. ಕೆಮ್ಮು, ಜ್ವರ ಇದ್ದರೆ ಶ್ರೀ ಶರಣಬಸವೇಶ್ವರ ಜಾತ್ರೆಗೆ ಬರಬೇಡಿ ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್ ಈ ಮೊದಲು ಹೇಳಿದ್ದರು. ಆದರೆ ವೃದ್ಧ ಮೃತಪಟ್ಟಿದ್ದು ಕೊರೊನಾ ವೈರಸ್‍ನಿಂದಲೇ ಎಂದು ಲ್ಯಾಬ್ ರಿಪೋರ್ಟ್ ಬರುತ್ತಿದ್ದಂತೆ ಜಿಲ್ಲೆಯಲ್ಲಿ ಹೈಲರ್ಟ್ ಗೆ ಜಿಲ್ಲಾಡಳಿತ ಮುಂದಾಗಿದೆ. ಈ ನಿಟ್ಟಿನಲ್ಲಿ ಜಾತ್ರೆಯ ಆಯೋಜಕರು ಕೂಡ …
Read More »ಕಲಬುರಗಿ :ಕೊರೋನಾ ವೈರಸ್ ಗೆ ಶಂಕಿತ ವ್ಯಕ್ತಿ ಸಾವು
ಕಲಬುರಗಿ: COVID-19 ಕೊರೊನಾ ವೈರಸ್ ಗೆ ಕಲಬುರಗಿಯಲ್ಲಿ ಮಹ್ಮದ ಹುಸೇನ್ ಸಿದ್ದಿಕಿ ವಯಸ್ಸು 76 ಶoಕಿತ ಮರಣಹೊಂದಿರುವ ವ್ಯಕ್ತಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಕಲಬುರಗಿಯಲ್ಲಿ ಹೇಳಿದರು ಆರೋಗ್ಯ ಇಲಾಖೆಯಿಂದ ಮಾಹಿತಿ ಬಂದಿದೆ ಅಂತ್ಯಕ್ರಿಯೆ ಮುಗಿಯುವರೆಗು ಕಲಬುರಗಿ ತಾಲೂಕಾ ಆರೋಗ್ಯ ಅಧಿಕಾರಿಗಳು ಹಾಗೂ ತಂಡ ಉಸ್ತುವಾರಿ ವಹಿಸಿಕೊಂಡು ಎಲ್ಲಾ ತರಹದ ಮುಂಜಾಗ್ರತೆ ಹಾಗೂ ನಿಯಂತ್ರಣ ಕೈಗೊಳ್ಳಬೇಕು ಎಂದು ಆದೇಶಿಸಲಾಗಿದೆ
Read More »85ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕಗಳ ಖರೀದಿ ಭರಾಟೆ ಜೋರಾಗಿತ್ತು.
ಕಲಬುರಗಿ,ಫೆ,6- ಇಲ್ಲಿ ನಡೆಯುತ್ತಿರುವ 85ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕಗಳ ಖರೀದಿ ಭರಾಟೆ ಜೋರಾಗಿತ್ತು. ಪುಸ್ತಕಗಳ ಮಾರಾಟಕ್ಕಾಗಿ 300ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ವಿವಿಧ ಪ್ರಕಾಶಕರು, ಮುದ್ರಕರು, ಮಾರಾಟ ಮಳಿಗೆಗಳಲ್ಲಿ ಇಟ್ಟಿದ್ದ ಪುಸ್ತಕಗಳನ್ನು ಖರೀದಿಸಲು ಜನ ಮುಗಿಬಿದ್ದಿದ್ದರು. ಕೆಲವೊಂದು ಮಳಿಗೆಗಳಲ್ಲಿ ಹೆಚ್ಚಿನ ಸಂಖ್ಯೆಯ ಜನ ಇದ್ದರೆ, ಕೆಲವೊಂದು ಮಳಿಗೆಗಳಲ್ಲಿ ಗ್ರಾಹಕರು ವಿರಳವಾಗಿದ್ದರು. ಅಕ್ಷರ ಜಾತ್ರೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದ ಪುಸ್ತಕಗಳಿಗೆ ಹೆಚ್ಚಿನ ಬೇಡಿಕೆ ಸೃಷ್ಟಿಯಾಗಿದೆ. ಗುಲ್ಬರ್ಗ ವಿವಿ …
Read More »ಡಾ.ಬಿರ್.ಅಂಬೇಡ್ಕರ ರವರ ನಾಮ ಫಲಕಕ್ಕೆ ಸಗಣಿ ಎರಚಿ ಚಪ್ಪಲಿ ಹಾರ ಹಾಕಿ ಮಾನಸಿಕ ಅಸ್ವಸ್ಥತರಂತೆ ಕ್ರೌರ್ಯ ಮೇರೆದಿದ್ದವರನ್ನು ಕೂಡಲೇ ಬಂದಿಸಿ
ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಹಿತ್ತಲ ಶಿರೂರ ಗ್ರಾಮದ ಜನವೇರಿ 26ರಂದು ರಾತ್ರಿ ವೇಳೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿರ್.ಅಂಬೇಡ್ಕರ ರವರ ನಾಮ ಫಲಕಕ್ಕೆ ಸಗಣಿ ಎರಚಿ ಚಪ್ಪಲಿ ಹಾರ ಹಾಕಿ ಮಾನಸಿಕ ಅಸ್ವಸ್ಥತರಂತೆ ಕ್ರೌರ್ಯ ಮೇರೆದಿದ್ದವರನ್ನು ಕೂಡಲೇ ಬಂದಿಸಿ ಸೂಕ್ತ ಕಾನೂನು ಕ್ರಮಕೈಗೊಂಡು ನಮ್ಮ ರಾಜ್ಯದಿಂದ ಗಡಿಪಾರು ಮಾಡಿ ದೇಶದ್ರೋಹಿಗಳೆಂದು ಘೋಷಿಸಿಬೇಕೆಂದು ಹಾಗೂ ಇನ್ನುಮುಂದೆ ಈ ರೀತಿ ಘಟನೆಗಳನ್ನು ಮರುಕಳಿಸುವದಂತೆ ರಾಜ್ಯದ ಎಲ್ಲಾ ಭಾಗದಲ್ಲಿರುವ ಬಾಬಾಸಾಹೇಬರ್ ವೃತ್ತ, ಪ್ರತಿಮೆ, ಕಾಲೋನಿ …
Read More »ಹಾಸ್ಟೆಲ್‍ಗಳಿಗೆ ಕಳಪೆ ಮಟ್ಟದ ಆಹಾರ ಸಾಮಾಗ್ರಿ ವಿತರಿಸುವವರ ವಿರುದ್ಧ ಸೂಕ್ತ ಕ್ರಮ -ಸಿಇಒ ಡಾ.ಪಿ.ರಾಜಾ
ಕಲಬುರಗಿ,ಜ.20.(ಕ.ವಾ.)- ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಸುತ್ತಿರುವ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಮಟ್ಟದ ಆಹಾರ ನೀಡುತ್ತಿರುವ ಕುರಿತು ದೂರುಗಳು ಬಂದಿದ್ದು, ಅಧಿಕಾರಿಗಳು ವಸತಿ ನಿಲಯಗಳಿಗೆ ಭೇಟಿ ನೀಡುವ ಮೂಲಕ ಸಂಪೂರ್ಣ ವರದಿ ನೀಡಬೇಕು. ಅಲ್ಲದೇ ಕಳಪೆ ಮಟ್ಟದ ಆಹಾರ ಸಾಮಾಗ್ರಿ ಒದಗಿಸುತ್ತಿರುವ ಏಜೆಂಟ್‍ಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಪಿ.ರಾಜಾ ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ನಗರದ ಜಿಲ್ಲಾ …
Read More »ಬಿಸಿಲು ನಾಡು ಕಲಬುರಗಿಯಲ್ಲಿ ಫೆಬ್ರವರಿ 5, 6 ಮತ್ತು 7 ರಂದು ಮೂರು ದಿನಗಳ ಕಾಲ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
ಕಲಬುರಗಿ: ಬಿಸಿಲು ನಾಡು ಕಲಬುರಗಿಯಲ್ಲಿ ಫೆಬ್ರವರಿ 5, 6 ಮತ್ತು 7 ರಂದು ಮೂರು ದಿನಗಳ ಕಾಲ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾವಿರಾರು ಸಂಖ್ಯೆಯಲ್ಲಿ ನೊಂದಾಯಿತ ಪ್ರತಿನಿಧಿಗಳು ಆಗಮಿಸಲಿದ್ದು, ಅವರಿಗೆ ಟ್ರಾವೆಲಿಂಗ್ ಬ್ಯಾಗ್ ನೀಡುವ ಸಂದರ್ಭದಲ್ಲಿ ಯಾವುದೇ ಗೊಂದಲವಾಗದಂತೆ ಸೂಕ್ತ ಭದ್ರತಾ ಸಿಬ್ಬಂದಿ ನೇಮಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಸಾಹಿತ್ಯ ಸಮ್ಮೇಳನದ ನೋಂದಣಿ ಸಮಿತಿ ಅಧ್ಯಕ್ಷ ತಿಪ್ಪಣಪ್ಪ ಕಮಕನೂರ್ ತಿಳಿಸಿದರು. ನಗರದ …
Read More »