ಕಲಬುರಗಿ: ಚಂದ್ರಂಪಳ್ಳಿ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆಯಾದ ಹಿನ್ನೆಲೆಯಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಚಿಂಚೋಳಿ ತಾಲೂಕಿನ ಐನೊಳ್ಳಿ ಗ್ರಾಮದ ಬಳಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಕೆಲಸದ ಸ್ಥಳದಲ್ಲೇ ಬಿಹಾರ ಮೂಲದ ಮೂವರು ಕಾರ್ಮಿಕರು ಶೆಡ್ ನಿರ್ಮಿಸಿಕೊಂಡಿದ್ದರು. ಆದರೆ ಶೆಡ್ಗೆ ಏಕಾಏಕಿ ಮಳೆ ನೀರು ನುಗ್ಗಿ ಪ್ರವಾಹಕ್ಕೆ ಸಿಲುಕಿಕೊಂಡಿದ್ದರು. ಬಳಿಕ ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಮೂವರು ಕಾರ್ಮಿಕರ …
Read More »ಮನೆಗೆ ನುಗ್ಗಿದ ಮಳೆ ನೀರು.. ವಿದ್ಯುತ್ ಪ್ರವಹಿಸಿ ಮಲಗಿದ್ದಲ್ಲೇ ಅಜ್ಜಿ ಸಾವು
ಕಲಬುರಗಿ: ಜಿಲ್ಲೆಯಾದ್ಯಂತ ಧಾರಕಾರ ಮಳೆ ಸುರಿಯುತ್ತಿದೆ. ವರುಣನ ಆರ್ಭಟಕ್ಕೆ ಸುಂದರ ನಗರದಲ್ಲಿ ಅಜ್ಜಿ ಬಲಿಯಾಗಿದ್ದಾಳೆ. ಭೀಮಾಬಾಯಿ (96) ಮೃತಪಟ್ಟ ವೃದ್ಧೆ. ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಮನೆಯಲ್ಲಿ ಮಲಗಿದ್ದ ಅಜ್ಜಿ ಜೀವ ಕಳೆದುಕೊಂಡಿದ್ದಾರೆ. ಕಣ್ಣು ತೆರೆದು ನೋಡುವಷ್ಟರಲ್ಲಿ ವಿದ್ಯುತ್ ಸ್ಪರ್ಶಿಸಿ ಯಮನ ಪಾದ ಸೇರಿದ್ದಾರೆ. ಮಳೆಯಿಂದಾಗಿ ಮನೆಯೊಳಗೆ ಮಳೆ ನೀರು ಹೊಕ್ಕಿತ್ತು. ಈ ವೇಳೆ ನೀರಿನೊಂದಿಗೆ ವಿದ್ಯುತ್ ಸಹ ಪ್ರವೇಶಿಸಿ ಅಜ್ಜಿ ಮಲಗಿದ್ದಲ್ಲೆ ಮೃತಪಟ್ಟಿದ್ದಾರೆ. ಅಜ್ಜಿಯ ಮನೆ ಶೇಕಡಾ ಅರ್ಧದಷ್ಟು …
Read More »ಸೀತಾಫಲ ಹಣ್ಣು ತರಲು ಬೆಟ್ಟಕ್ಕೆ ಹೋದ ಮಹಿಳೆ ವಾಪಸ್ ಬರಲೇ ಇಲ್ಲ..
ಕಲಬುರಗಿ: ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿಹೋಗಿದ್ದ ಮಹಿಳೆಯೊಬ್ಬಳ ಮೃತದೇಹ ಇಂದು ಪತ್ತೆಯಾಗಿದೆ. ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ತಾಂಡಾದ ನಿವಾಸಿ ಶಾಂತಾಬಾಯಿ(40) ಮೃತ ದರ್ದೈವಿ. ದಡದ ಮರದ ಕೊಂಬೆಯಲ್ಲಿ ಶವ ಪತ್ತೆ.. ಶಾಂತಾಬಾಯಿ ಹಳ್ಳ ದಾಟಲು ಹೋಗಿ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿಹೋಗಿದ್ದಳು. ಸೀತಾಫಲ ಹಣ್ಣು ತರಲು ಬೆಟ್ಟಕ್ಕೆ ಹೋಗಿ ವಾಪಸ್ ಬರುವಾಗ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಳು. ಇಂದು ಕಮಲಾಪುರ ತಾಲೂಕಿನ ಮರಗುತ್ತಿ ತಾಂಡಾ ಬಳಿಯಿರುವ ಹಳ್ಳದ ದಡದ ಮರದ ಕೊಂಬೆಯಲ್ಲಿ …
Read More »ಸಾವಳಗಿ ಬಳಿ ಮುಂಜಾನೆ ಸಂಭವಿಸಿದ ಈ ಭೀಕರ ದುರಂತದಲ್ಲಿ ಕಾರಿನಲ್ಲಿದ್ದ ಏಳು ಮಂದಿ ಸ್ಥಳದಲ್ಲೇ ಮೃತ
ಕಲಬುರಗಿ: ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಅಪಘಾತವಾಗಿರುವ ದಾರುಣ ಘಟನೆ ನಡಿದೆ. ನಿಂತಿದ್ದ ಲಾರಿಯೊಂದಕ್ಕೆ ಗರ್ಭಿಣಿ ಸೇರಿದಂತೆ 7 ಮಂದಿ ಪ್ರಯಾಣಿಸುತ್ತಿದ್ದ ಕಾರೊಂದು ನಸುಕಿನ ಜಾವ ಬಲವಾಗಿ ಗುದ್ದಿದೆ. ಸಾವಳಗಿ ಬಳಿ ಮುಂಜಾನೆ ಸಂಭವಿಸಿದ ಈ ಭೀಕರ ದುರಂತದಲ್ಲಿ ಕಾರಿನಲ್ಲಿದ್ದ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮೃತರ ಪೈಕಿ ನಾಲ್ವರು ಮಹಿಳೆಯರು, ಮೂವರು ಪುರುಷರಿದ್ದರು. ಮೃತರೆಲ್ಲರೂ ಕಲಬುರಗಿ ಜಿಲ್ಲೆ ಆಳಂದದವರು ಎಂದು …
Read More »ಫಾದರ್ ಲೈಂಗಿಕ ಕಿರುಕುಳ: SP ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನ
ಕಲಬುರಗಿ: ಫಾದರ್ನಿಂದ ಲೈಂಗಿಕ ಕಿರುಕುಳ ಆರೋಪಿಸಿ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರಗಿ ನಗರದ ಪೊಲೀಸ್ ಕಮೀಷನರ್ ಕಚೇರಿ ಮುಂದೆ ನಡೆದಿದೆ. ಕಲಬುರಗಿ ನಗರದ ಸೆಂಟ್ ಮೇರಿ ಕ್ಯಾಥೆಡ್ರಲ್ ಚರ್ಚ್ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಸಂತ್ರಸ್ತೆಗೆ ಚರ್ಚ್ನ ಫಾದರ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ಥೆಗೆ ಆರೋಪಿಸಿದ್ದಾರೆ. ಒಮ್ಮೆ ಚರ್ಚ್ನ ಫಾದರ್ ಕ್ಲೀವನ್ ಎಂಬುವವರು ರೂಂ ಕ್ಲೀನ್ ಮಾಡಲು ಕರೆದು ಸಂತ್ರಸ್ತೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು …
Read More »ಕೊಚ್ಚಿ ಹೋಗುತ್ತಿದ್ದಾಗ ಹಗ್ಗ ನೀಡಿದ್ರೂ ಬಾರದ ಯುವಕ – ಹೃದಯಾಘಾತದಿಂದ ಸಾವು
ಕಲಬುರಗಿ: ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಯುವನೋರ್ವ ಭಯಗೊಂಡು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆ ಕಮಲಾಪುರ ತಾಕೂಕಿನ ಚಂದನಲ್ಲಿ ಗ್ರಾಮದ ಬಳಿ ನಡೆದಿದೆ. ಸಾವನ್ನಪ್ಪಿದ ಯುವಕನನ್ನು ಪೀರಶೆಟ್ಟಿ (29) ಎಂದು ಗುರುತಿಸಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆ ನೀರಿನಿಂದ ಹಳ್ಳ ಕೊಳ್ಳಗಳು ತುಂಬಿ ರಭಸದಿಂದ ಹರಿಯುತ್ತಿವೆ. ಈ ಸಮಯದಲ್ಲಿ ಹಳ್ಳ ದಾಟಲು ಹೋದ ಪೀರಶೆಟ್ಟಿ ನೀರನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಾನೆ. ಆದರೆ ಹಳ್ಳಕ್ಕೆ ಆಡಲಾಗಿ ಹಾಕಿದ್ದ ಕಂಬವನ್ನು …
Read More »ಕಲಬುರಗಿಗೆ ಬಂದಿಳಿದ ಸಿಎಂ ಬಿಎಸ್ ವೈ: ಸಂಜೆ ಇಲ್ಲಿಂದಲೇ ದಿಲ್ಲಿ ಪ್ರವಾಸ ಆರಂಭ
ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶೇಷ ವಿಮಾನ ಮೂಲಕ ಗುರುವಾರ ಕಲಬುರಗಿಗೆ ಬಂದಿಳಿದರು. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಭಾಗಿಯಾಗಲು ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಜೊತೆಗೆ ಉಪ ಮುಖ್ಯಮಂತ್ರಿಗಳು ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸಹ ಆಗಮಿಸಿದರು. ಆರ್ ಸಿ ಡಾ.ಎನ್.ವಿ.ಪ್ರಸಾದ, ಐ.ಜಿ.ಪಿ. ಮನೀಷ ಖರ್ಬಿಕರ್, ಡಿಸಿ …
Read More »ರಾಜ್ಯ ಸರ್ಕಾರದಿಂದ `ಕಲ್ಯಾಣ ಕರ್ನಾಟಕಕ್ಕೆ’ ಬಂಪರ್ ಗಿಫ್ಟ್
ಕಲಬುರಗಿ : ಕಲ್ಯಾಣ ಕರ್ನಾಟಕಕ್ಕೆ ರಾಜ್ಯ ಸರ್ಕಾರ ಬಂಪರ್ ಗಿಫ್ಟ್ ಘೋಷಿಸಿದ್ದು, ಇಂದು 73 ನೇ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ 1,300 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ರ ಪುತ್ತಳಿಗೆ ಪೂಜೆ ಸಲ್ಲಿಸಿ ಸಿಎಂ ಮಲಾರ್ಪಣೆ ಮಾಡಿದರು. ನಂತರ ಡಿಎಆರ್ ಮೈದಾನದಲ್ಲಿ ದ್ವಜಾರೋಹಣ ನೇರವೇರಿಸಿದರು. ಈ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, …
Read More »ಎಲ್ಲವನ್ನೂ ಬಿಎಸ್‌ವೈ ಮಾಡುವುದಾದರೆ ನಿಮ್ಮ ಕೆಲಸವೇನು: ಲಕ್ಷ್ಮಣ ದಸ್ತಿ ಪ್ರಶ್ನೆ
ಕಲಬುರ್ಗಿ: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಳೆದ ವರ್ಷವೇ ಹೇಳಿದ್ದರು. ಅವರನ್ನು ಭೇಟಿ ಮಾಡಿ ನಿರಂತರವಾಗಿ ಒತ್ತಡ ಹಾಕಿಲ್ಲ. ಎಲ್ಲವನ್ನೂ ಮುಖ್ಯಮಂತ್ರಿ ಮಾಡುವುದಾದರೆ ನಿಮ್ಮ ಕೆಲಸವೇನು ಎಂದು ಹೈದರಾಬಾದ್ ಕರ್ನಾಟಕ ಜನಪರ ಸಂಘರ್ಷ ಸಮಿತಿ ಅಧ್ಯಕ್ಷ ಲಕ್ಷ್ಮಣ ದಸ್ತಿ ಜನಪ್ರತಿನಿಧಿಗಳ ಕಾರ್ಯವೈಖರಿಯನ್ನು ಟೀಕಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರಂತರವಾಗಿ ಒತ್ತಡ ಹಾಕಿದರೆ ಮಾತ್ರ ಈ ಭಾಗದ ಜನತೆಯ ಬೇಡಿಕೆಗಳು …
Read More »ವೈಜನಾಥ ಪಾಟೀಲ ಸಂಸ್ಮರಣ ಗ್ರಂಥ ಪ್ರಕಟಿಸಲು ನಿರ್ಧಾರ
ಕಲಬುರ್ಗಿ: ‘371 (ಜೆ) ತಿದ್ದುಪಡಿ ಹೋರಾಟದ ರೂವಾರಿ, ಮಾಜಿ ಸಚಿವ ವೈಜನಾಥ ಪಾಟೀಲ ಅವರ ಪ್ರಥಮ ಪುಣ್ಯಸ್ಮರಣೆ ಅಂಗವಾಗಿ ಸಂಸ್ಮರಣ ಗ್ರಂಥ ಹೊರತರಲು ನಿರ್ಧರಿಸಲಾಗಿದೆ. ಈ ಬಗ್ಗೆ ಸಂಪಾದಕೀಯ ಸಮಿತಿ ರಚನೆ ಮಾಡಲಾಗಿದೆ’ ಎಂದು ವೈಜನಾಥ ಪಾಟೀಲರ ಸಂಸ್ಮರಣಾ ಸಂಚಿಕೆ ಸಮಿತಿ ಸಂಚಾಲಕ ಎಂ.ಬಿ.ಅಂಬಲಗಿ ಮತ್ತು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಗೌತಮ ಪಾಟೀಲ ತಿಳಿಸಿದರು. ನಗರದಲ್ಲಿ ಮಂಗಳವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, ‘ವೈಜನಾಥ …
Read More »