ಕಲಬುರಗಿ : ನದಿಗೆ ಈಜುಲು ಹೋಗಿದ್ದ ಯುವಕನೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ಜಲಸಮಾಧಿಯಾದ ಘಟನೆ ಕಲಬುರಗಿ ಜಿಲ್ಲೆಯ ಕಾಗಿಣಾ ನದಿಯಲ್ಲಿ ನಡೆದಿದೆ. ಚಿತ್ತಾಪುರ ತಾಲ್ಲೂಕಿನ ಇಂಗಳಗಿ ಗ್ರಾಮದ ಸಂಪತ್ ಸಂಕ(18) ಮೃತ ಯುವಕ. ಶಾಲೆ, ಕಾಲೇಜ್ ರಜೆ ಇರುವ ಹಿನ್ನೆಲೆಯಲ್ಲಿ ಪ್ರತಿದಿನ ಸ್ನೇಹಿತರೊಂದಿಗೆ ಕಾಗಿಣಾ ನದಿಗೆ ಈಜುಲು ಹೋಗುತ್ತಿದ್ದರು. ಅದೇ ರೀತಿ ಗುರುವಾರವೂ ಸಹ ಹೋಗಿದ್ದಾರೆ. ಈಜು ಬರುತ್ತಿದ್ದ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ನೀರಿಗೆ ಧುಮುಕ್ಕಿದ್ದ ಯುವಕ, ದುರದೃಷ್ಟವಶಾತ್ …
Read More »ನಾಲ್ಕು ಜಿಲ್ಲೆಗಳಿಗೆ ಸಚಿವ ಸ್ಥಾನ ಮರೀಚಿಕೆ?
ಕಲಬುರ್ಗಿ: ಸಚಿವ ಸ್ಥಾನಕ್ಕೆ ತೀವ್ರ ಲಾಬಿ ನಡೆಸಿದ್ದ ಮೂವರೂ ಸೇರಿದಂತೆ ಕಲ್ಯಾಣ ಕರ್ನಾಟಕದ ಐವರು ಶಾಸಕರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಿಗಮ-ಮಂಡಳಿಗೆ ನೇಮಕ ಮಾಡಿದ್ದಾರೆ. ಆ ಮೂಲಕ ಈ ಜಿಲ್ಲೆಗಳಿಗೆ ಸದ್ಯ ಸಚಿವ ಸ್ಥಾನ ದೊರೆಯುವುದಿಲ್ಲ ಎಂಬ ಸಂದೇಶವೂ ರವಾನೆಯಾದಂತಾಗಿದೆ. ಬಳ್ಳಾರಿ ಜಿಲ್ಲೆಯ ಆನಂದ ಸಿಂಗ್ ಹಾಗೂ ಬೀದರ್ ಜಿಲ್ಲೆಯ ಏಕೈಕ ಬಿಜೆಪಿ ಶಾಸಕ ಪ್ರಭು ಚವ್ಹಾಣ್ ಅವರು ಸಚಿವರಾಗಿದ್ದಾರೆ. ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಿಗೆ ಸಂಪುಟದಲ್ಲಿ ಪ್ರಾತಿನಿಧ್ಯ …
Read More »ಕಲಬುರಗಿಲಾಕ್‍ಡೌನ್ ಅವಧಿಯನ್ನು ಮತ್ತೆ ಜು.27ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ರವಿವಾರ ಆದೇಶ
ಕಲಬುರಗಿ: ಕೊರೋನಾ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಜು.14 ರಿಂದ 20 ವರೆಗೆ ಕಲಬುರಗಿ ನಗರ & ಜಿಲ್ಲೆಯ ನಗರ-ಸ್ಥಳೀಯ ಸಂಸ್ಥೆಗಳ ಪ್ರದೇಶದಲ್ಲಿ ವಿಧಿಸಲಾಗಿದ್ದ ಸಂಪೂರ್ಣ ಲಾಕ್‍ಡೌನ್ ಅವಧಿಯನ್ನು ಮತ್ತೆ ಜು.27ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ರವಿವಾರ ಆದೇಶ ಹೊರಡಿಸಿದ್ದಾರೆ. ಲಾಕ್‍ಡೌನ್ ಸಂದರ್ಭದಲ್ಲಿ ಅನುಮತಿಸಲಾದ ಚಟುವಟಿಕೆಗಳು ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ತೆರೆದು ಮುಚ್ಚತಕ್ಕದು. ಆಸ್ಪತ್ರೆ ಮತ್ತು ಔಷಧಿ ಅಂಗಡಿಗಳಿಗೆ ಈ ಸಮಯದ ನಿರ್ಬಂಧ …
Read More »ಆಸ್ಪತ್ರೆ ವರೆಗೆ ಬಂದರೂ ಸೋಂಕಿತನನ್ನು ಅಡ್ಮಿಟ್ ಮಾಡಿಕೊಳ್ಳದ ಜಿಮ್ಸ್ ಸಿಬ್ಬಂದಿ ; ಆರೋಗ್ಯ ಇಲಾಖೆ ನಿರ್ಲಕ್ಷ್ಯ ಬಟಾಬಯಲು
ಕಲಬುರ್ಗಿ: ಕಲಬುರ್ಗಿಯಲ್ಲಿ ಕೊರೋನಾ ದಿನೇ ದಿನೇ ವ್ಯಾಪಕಗೊಳ್ಳಲು ಆರೋಗ್ಯ ಇಲಾಖೆ ಸಿಬ್ಬಂದಿಯ ನಿರ್ಲಕ್ಷ್ಯವೂ ಕಾರಣವಾಗುತ್ತಿದೆ. ಕಲಬುರ್ಗಿ ನಗರಗಲ್ಲಿ ಆರೋಗ್ಯ ಇಲಾಖೆ ನಿರ್ಲಕ್ಷ್ಯ ಎಷ್ಟರಮಟ್ಟಿಗೆ ಇದೇ ಎನ್ನುವುದು ಬಟಾಬಯಲಾಗಿದೆ. ವ್ಯಕ್ತಿಗೆ ಸೋಂಕು ದೃಢವಾಗಿ ಒಂದು ದಿನವಾದ್ರೂ ಕೇರ್ ಮಾಡದ ಸಿಬ್ಬಂದಿ. ಮೊನ್ನೆ ಸೋಂಕು ಬಂದ್ರು ಆಸ್ಪತ್ರೆಗೆ ಕರೆದೊಯ್ಯದೆ ಸಿಬ್ಬಂದಿ ನಿರ್ಲಕ್ಷ್ಯ. ಆಸ್ಪತ್ರೆಗೆ ಬಂದರೂ ಅಡ್ಮಿಟ್ ಮಾಡಿಕೊಳ್ಳದೆ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಕೊರೋನಾ ಸೋಂಕಿತನನ್ನು ಮನೆಯಿಂದ ಕರೆದೊಯ್ಯದ ಆರೋಗ್ಯ ಇಲಾಖೆ ಸಿಬ್ಬಂದಿ. ಕೊನೆಗೆ …
Read More »ತಾಯಿಯ ಸಾಲ ವಾಪಸ್ ಕೊಡದ್ದಕ್ಕೆ ಯುವಕನ ಕೊಲೆ-
ಕಲಬುರಗಿ: ಹಣಕಾಸಿನ ವಿಚಾರಕ್ಕೆ ಮೂವರು ಸ್ನೇಹಿತರು ಯುವಕನನ್ನು ಕೊಲೆ ಮಾಡಿದ್ದರು. ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ತಾರಫೈಲ್ ಬಡಾವಣೆ ನಿವಾಸಿಗಳಾದ ಸುನೀಲ್ ಅಲಿಯಾಸ್ ಸೋನು, ಶಿವಲಿಂಗ ಹುಲಿಮನಿ ಮತ್ತು ರಾಜು ಬಂಧಿತ ಆರೋಪಿಗಳು. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ತಾರಫೈಲ್ ಬಡಾವಣೆ ನಿವಾಸಿ ವಿಶಾಲ್‍ನನ್ನ ಜೂನ್ 26 ರಂದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಮೃತ ವಿಶಾಲ್ ಆರೋಪಿ ಸುನೀಲ್ ತಾಯಿ ಬಳಿ 3 ಲಕ್ಷ …
Read More »ಕೊರೊನಾಗೆ ಮೊದಲ ಬಲಿಯಾದ ಕಲಬುರಗಿಯಲ್ಲಿ ಇನ್ನೂ ಪ್ರಾರಂಭಿಸಿಲ್ಲ ಲ್ಯಾಬ್: ಪ್ರಿಯಾಂಕ್ ಖರ್ಗೆ ಆಕ್ರೋಶ
ಕಲಬುರಗಿ: ದೇಶದಲ್ಲೇ ಕಿಲ್ಲರ್ ಕೊರೊನಾಗೆ ಮೊದಲು ಬಲಿ ಪಡೆದಿದ್ದೇ ಕಲಬುರಗಿ ಜಿಲ್ಲೆಯಲ್ಲಿ. ಆದರೆ ಇಲ್ಲಿವರಗೆ ಜಿಲ್ಲೆಯಲ್ಲಿ ಇರುವುದು ಒಂದೇ ಪರೀಕ್ಷಾ ಕೇಂದ್ರ. ಸರ್ಕಾರದ ನಿರ್ಲಕ್ಷ್ಯದಿಂದ ಜಿಲ್ಲೆಯ ಜನರು ಕಂಗಾಲಾಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಜಿಮ್ಸ್ ಆಸ್ಪತ್ರೆಯಲ್ಲಿ ಮಾತ್ರ ಕೊರೊನಾ ಟೆಸ್ಟ್ ಲ್ಯಾಬ್ ಇದೆ. ಇಲ್ಲಿ ಪ್ರತಿನಿತ್ಯ ಸಾವಿರ ಸ್ಯಾಂಪಲ್ಸ್ ಗಳನ್ನು ಮಾತ್ರ ಟೆಸ್ಟ್ ಮಾಡಲಾಗುತ್ತಿದೆ. ಇನ್ನೂ …
Read More »ಮೊಬೈಲ್ ನಲ್ಲಿ ವಿಡಿಯೋ ಗೇಮ್ ಆಡಬೇಡ ಎಂದು ಪೋಷಕರು ಬೈದಿದಕ್ಕೆ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬ್ರಹ್ಮಪುರ ಬಡಾವಣೆಯಲ್ಲಿ ನಡೆದಿದೆ…
ಕಲಬುರಗಿ: ಮೊಬೈಲ್ ನಲ್ಲಿ ವಿಡಿಯೋ ಗೇಮ್ ಆಡಬೇಡ ಎಂದು ಪೋಷಕರು ಬೈದಿದಕ್ಕೆ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬ್ರಹ್ಮಪುರ ಬಡಾವಣೆಯಲ್ಲಿ ನಡೆದಿದೆ. ರಾಹುಲ್ (15) ಆತ್ಮಹತ್ಯೆಗೆ ಶರಣಾದ ಬಾಲಕ. ಗುರುವಾರ ಸಂಜೆ ಮೊಬೈಲ್ನಲ್ಲಿ ವಿಡಿಯೋ ಗೇಮ್ ಆಡಬೇಡ ಎಂದು ಹೆತ್ತವರು ಬೈದಿದ್ದಾರೆ. ಇದರಿಂದ ಮನನೊಂದು ರಾತ್ರಿ ಮನೆಯಲ್ಲೇ ಫ್ಯಾನ್ ಗೆ ನೇಣು ಬಿಗಿದುಕೊಂಡಿದ್ದಾನೆ. ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಹಿರಿಯ ಸಾಹಿತಿ ಗಿತಾ ನಾಗಭೂಷಣ್ (78) ಹೃದಯಾಘಾತದಿಂದ ನಿಧನ…..
ಕಲಬುರಗಿ: ಹಿರಿಯ ಸಾಹಿತಿ ಗಿತಾ ನಾಗಭೂಷಣ್ (78) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗೀತಾ ನಾಗಭೂಷಣ್ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಗೀತಾ ನಾಗಭೂಷಣ ನಿಧನಾರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಗೀತಾ ನಾಗಭೂಷಣ್ ಕಲಬುರಗಿಯ ಸ್ವಸ್ತಿಕ ನಗರದಲ್ಲಿ ವಾಸವಾಗಿದ್ದರು. ಶೋಷಿತರ ಪರವಾಗಿ ಬರವಣಿಗೆ ಮೂಲಕ ಗೀತಾ ನಾಗಭೂಷಣ್ ಧ್ವನಿ ಎತ್ತಿದ್ದರು. ಅದರಲ್ಲಿ ಶೋಷಿತ ಮಹಿಳೆಯರ ಪರವಾಗಿ ಧ್ವನಿ ಎತ್ತಿ ಸರ್ಕಾರದ ಕಣ್ಣತೆರಸುವ …
Read More »ತಡರಾತ್ರಿ ಬೀದಿ ದೀಪದ ಬೆಳಕಲ್ಲಿ SSLC ಪರೀಕ್ಷೆಗೆ ಓದುತ್ತಿದ್ದ ವಿದ್ಯಾರ್ಥಿನಿ, ಬಳಿಗೆ ಬಂದ ವಿವಾಹಿತನಿಂದ ಆಘಾತಕಾರಿ ಕೃ
ಕಲಬುರ್ಗಿ ಜಿಲ್ಲೆ ಕಮಲಾಪುರ ತಾಲೂಕಿನ ತಾಂಡಾವೊಂದರಲ್ಲಿ ಎಸ್‌ಎಸ್‌ಎಲ್ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ. ಜೂನ್ 24 ರಂದು ತಡರಾತ್ರಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬೀದಿ ದೀಪದ ಬೆಳಕಲ್ಲಿ ವಿದ್ಯಾರ್ಥಿನಿ ಓದಿಕೊಳ್ಳುತ್ತಿದ್ದ ವೇಳೆ ಮಾತನಾಡಿಸುವ ನೆಪದಲ್ಲಿ ಸಮೀಪಕ್ಕೆ ಬಂದಿದ್ದ ವಿವಾಹಿತ, ವಿದ್ಯಾರ್ಥಿನಿ ಬಾಯಿಗೆ ಬಟ್ಟೆ ತುರುಕಿ ಎಳೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಜೋರಾಗಿ ಕೂಗಾಡಿದ್ದರಿಂದ ಅಕ್ಕಪಕ್ಕದವರು ಧಾವಿಸಿ ಬಂದಿದ್ದಾರೆ. …
Read More »ಜಿಲ್ಲೆಯಲ್ಲಿ ಸೂರ್ಯಗ್ರಹಣದ ವೇಳೆ ನಡೆಯುವ ಮೌಢ್ಯಾಚರಣೆಯನ್ನು ಆಚರಿಸದಂತೆ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.
ಕಲಬುರಗಿ: ಜಿಲ್ಲೆಯಲ್ಲಿ ಸೂರ್ಯಗ್ರಹಣದ ವೇಳೆ ನಡೆಯುವ ಮೌಢ್ಯಾಚರಣೆಯನ್ನು ಆಚರಿಸದಂತೆ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ. ನಾಳೆ ಸೂರ್ಯಗ್ರಹಣ ಸಂಭವಿಸಲಿದೆ. ಸೂರ್ಯಗ್ರಹಣದ ವೇಳೆ ಮಕ್ಕಳನ್ನು ಮಣ್ಣಲ್ಲಿ ಹೂತಿಟ್ಟರೆ ಅಂಗವಿಕಲತೆ ವಾಸಿಯಾಗುತ್ತೆ ಎಂಬ ನಂಬಿಕೆ ಇದೆ. ಕಳೆದ ವರ್ಷ ಈ ಆಚರಣೆ ನಡೆದಿದ್ದ ಕಾರಣದಿಂದ ಜಿಲ್ಲಾಧಿಕಾರಿಗಳು ಇನ್ನುಮುಂದೆ ಈ ರೀತಿ ಮೂಢನಂಬಿಕೆಯ ಆಚರಣೆ ಮಾಡದಂತೆ ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ಆಚರಿಸುವುದು ಕಂಡುಬಂದರೆ ಅಂತಹವರ ವಿರುದ್ಧ ಕೇಸ್ ದಾಖಲಿಸುವುದಾಗಿ ಡಿಸಿ ಶರತ್, …
Read More »