ಕಲಬುರಗಿ: ಹಿರಿಯ ಸಾಹಿತಿ ಗಿತಾ ನಾಗಭೂಷಣ್ (78) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗೀತಾ ನಾಗಭೂಷಣ್ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಗೀತಾ ನಾಗಭೂಷಣ ನಿಧನಾರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಗೀತಾ ನಾಗಭೂಷಣ್ ಕಲಬುರಗಿಯ ಸ್ವಸ್ತಿಕ ನಗರದಲ್ಲಿ ವಾಸವಾಗಿದ್ದರು. ಶೋಷಿತರ ಪರವಾಗಿ ಬರವಣಿಗೆ ಮೂಲಕ ಗೀತಾ ನಾಗಭೂಷಣ್ ಧ್ವನಿ ಎತ್ತಿದ್ದರು. ಅದರಲ್ಲಿ ಶೋಷಿತ ಮಹಿಳೆಯರ ಪರವಾಗಿ ಧ್ವನಿ ಎತ್ತಿ ಸರ್ಕಾರದ ಕಣ್ಣತೆರಸುವ …
Read More »ತಡರಾತ್ರಿ ಬೀದಿ ದೀಪದ ಬೆಳಕಲ್ಲಿ SSLC ಪರೀಕ್ಷೆಗೆ ಓದುತ್ತಿದ್ದ ವಿದ್ಯಾರ್ಥಿನಿ, ಬಳಿಗೆ ಬಂದ ವಿವಾಹಿತನಿಂದ ಆಘಾತಕಾರಿ ಕೃ
ಕಲಬುರ್ಗಿ ಜಿಲ್ಲೆ ಕಮಲಾಪುರ ತಾಲೂಕಿನ ತಾಂಡಾವೊಂದರಲ್ಲಿ ಎಸ್‌ಎಸ್‌ಎಲ್ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ. ಜೂನ್ 24 ರಂದು ತಡರಾತ್ರಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬೀದಿ ದೀಪದ ಬೆಳಕಲ್ಲಿ ವಿದ್ಯಾರ್ಥಿನಿ ಓದಿಕೊಳ್ಳುತ್ತಿದ್ದ ವೇಳೆ ಮಾತನಾಡಿಸುವ ನೆಪದಲ್ಲಿ ಸಮೀಪಕ್ಕೆ ಬಂದಿದ್ದ ವಿವಾಹಿತ, ವಿದ್ಯಾರ್ಥಿನಿ ಬಾಯಿಗೆ ಬಟ್ಟೆ ತುರುಕಿ ಎಳೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಜೋರಾಗಿ ಕೂಗಾಡಿದ್ದರಿಂದ ಅಕ್ಕಪಕ್ಕದವರು ಧಾವಿಸಿ ಬಂದಿದ್ದಾರೆ. …
Read More »ಜಿಲ್ಲೆಯಲ್ಲಿ ಸೂರ್ಯಗ್ರಹಣದ ವೇಳೆ ನಡೆಯುವ ಮೌಢ್ಯಾಚರಣೆಯನ್ನು ಆಚರಿಸದಂತೆ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.
ಕಲಬುರಗಿ: ಜಿಲ್ಲೆಯಲ್ಲಿ ಸೂರ್ಯಗ್ರಹಣದ ವೇಳೆ ನಡೆಯುವ ಮೌಢ್ಯಾಚರಣೆಯನ್ನು ಆಚರಿಸದಂತೆ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ. ನಾಳೆ ಸೂರ್ಯಗ್ರಹಣ ಸಂಭವಿಸಲಿದೆ. ಸೂರ್ಯಗ್ರಹಣದ ವೇಳೆ ಮಕ್ಕಳನ್ನು ಮಣ್ಣಲ್ಲಿ ಹೂತಿಟ್ಟರೆ ಅಂಗವಿಕಲತೆ ವಾಸಿಯಾಗುತ್ತೆ ಎಂಬ ನಂಬಿಕೆ ಇದೆ. ಕಳೆದ ವರ್ಷ ಈ ಆಚರಣೆ ನಡೆದಿದ್ದ ಕಾರಣದಿಂದ ಜಿಲ್ಲಾಧಿಕಾರಿಗಳು ಇನ್ನುಮುಂದೆ ಈ ರೀತಿ ಮೂಢನಂಬಿಕೆಯ ಆಚರಣೆ ಮಾಡದಂತೆ ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ಆಚರಿಸುವುದು ಕಂಡುಬಂದರೆ ಅಂತಹವರ ವಿರುದ್ಧ ಕೇಸ್ ದಾಖಲಿಸುವುದಾಗಿ ಡಿಸಿ ಶರತ್, …
Read More »ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಜಾರಿಯಾಗುತ್ತೇ?; ಕಲಬುರ್ಗಿಯಲ್ಲಿ ಸ್ಪಷ್ಟನೆ ನೀಡಿದ ಸಚಿವ ಕೆ. ಸುಧಾಕರ್
ಕಲಬುರ್ಗಿ (ಜೂ.14): ಜಿಲ್ಲೆಗೆ ಭೇಟಿ ನೀಡಿರುವ ವೈದ್ಯಕೀಯ ಸಚಿವ ಕೆ.ಸುಧಾಕರ್ ಟೆಂಪಲ್ ರನ್ ನಡೆಸಿದರು. ಅಫಜಲಪುರ ತಾಲೂಕಿನ ಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ಸುಧಾಕರ್ ಭೇಟಿ ನೀಡಿದರು. ರಾಜ್ಯ ಪ್ರವಾಸದಲ್ಲಿರುವ ಸುಧಾಕರ್ ಇಂದು ಬೆಳಿಗ್ಗೆಯೇ ದತ್ತಾತ್ರೇಯನ ಪಾದುಕೆ ದರ್ಶನ ಪಡೆದುಕೊಂಡಿದ್ದಾರೆ. ದತ್ತನ ಸನ್ನಿಧಿಯಲ್ಲಿ ಸಚಿವರಿಂದ ವಿಶೇಷ ಪೂಜೆ ನೆರವೇರಿಸಿ ವಿಶ್ವದಿಂದ ಕೊರೊನ ಹೆಮ್ಮಾರಿ ದೂರ ಆಗಲಿ, ಜನ ಈ ಸಂಕಷ್ಟದಿಂದ ದೂರ ಆಗಲಿ ಎಂದು ಪ್ರಾರ್ಥಿಸಿದ್ದಾರೆ. ಈ ವೇಳೆ ಮಾತನಾಡಿದ ಸಚಿವರು, …
Read More »ಮನೆಯಿಂದ ಹೊರ ಬರ್ತಿದ್ದಂತೆ ಬಿದ್ದ ಮರ- ವ್ಯಕ್ತಿ ಸಾವು
ಕಲಬುರಗಿ: ಮೈ ಮೇಲೆ ಮರ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕಲಬುರಗಿ ಹೊರವಲಯದಲ್ಲಿ ನಡೆದಿದೆ. ಕಲಬುರಗಿ ಹೊರವಲಯದ ಸೆಂಟ್ರಲ್ ಜೈಲು ಕ್ವಾರ್ಟರ್ಸ್‌ನಲ್ಲಿ ಈ ಘಟನೆ ನಡೆದಿದೆ. ಗೋವಿಂದ ಚೌವಾಣ್ (41) ಮೃತ ದುರ್ದೈವಿ. ಮೃತ ಗೋವಿಂದ ಚೌವಾಣ್ ಕಾರಾಗೃಹದ ಡಿ.ಗ್ರೂಪ್ ಮಹಿಳಾ ಸಿಬ್ಬಂದಿ ಪಾರುಬಾಯಿ ಪತಿ ಎಂದು ತಿಳಿದು ಬಂದಿದೆ. ಮೃತ ಗೋವಿಂದ ಚೌವಾಣ್ ಇಂದು ಬೆಳಗ್ಗೆ ಸುಮಾರು 5.30ಕ್ಕೆ ಕಸ ಚೆಲ್ಲಲು ಮನೆ ಹೊರಗೆ ಬಂದಿದ್ದಾರೆ. ಆಗ …
Read More »ಕ್ವಾರಂಟೈನ್ ಕೇಂದ್ರದಲ್ಲಿ ತಂಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ
ಕಲಬುರಗಿ: ಶಹಾಬಾದ್ ಪಟ್ಟಣದಲ್ಲಿನ ಕ್ವಾರಂಟೈನ್ ಕೇಂದ್ರದಲ್ಲಿ ತಂಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಸೋಮನಹಳ್ಳಿ ಗ್ರಾಮದಿಂದ ಕೆಲ ದಿನಗಳ ಹಿಂದಷ್ಟೇ ಬಾಲಕಿ ಕಲಬುರಗಿಗೆ ಬಂದಿದ್ದು, ಬಳಿಕ ಆಕೆಯನ್ನು ಸಾಂಸ್ಥಿಕ ಕ್ವಾರಂಟೈನ್ ಕೇಂದ್ರದಲ್ಲಿರಿಸಲಾಗಿತ್ತು. ತನ್ನ ಪೋಷಕರೊಂದಿಗೆ ಇತ್ತೀಚೆಗಷ್ಟೇ ಬಂದಿದ್ದ ಬಾಲಕಿಗೆ ಇಂದು ಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಕ್ವಾರಂಟೈನ್ ಕೇಂದ್ರದಲ್ಲಿದ್ದ ಇತರೆ ಮಹಿಳೆಯರೇ ಆಕೆಗೆ ಹೆರಿಗೆ ಮಾಡಿಸಲು ಸಹಕರಿಸಿದ್ದಾರೆ. ಸೋಮನಹಳ್ಳಿಯಲ್ಲಿ ಬಾಲಕಿಯ …
Read More »ಕ್ವಾರಂಟೈನ್ ಕೇಂದ್ರದಲ್ಲಿ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ……….
ಕಲಬುರಗಿ: ಕ್ವಾರಂಟೈನ್ ಕೇಂದ್ರದಲ್ಲಿದ್ದ ಅಪ್ರಾಪ್ತೆ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪ್ರಾಪ್ತೆ ಅವಿವಾಹಿತಳಾಗಿದ್ದು, ಉದ್ಯೋಗ ಅರಸಿ ಕುಟುಂಬಸ್ಥರ ಜೊತೆ ಮಹಾರಾಷ್ಟ್ರದ ಮುಂಬೈಗೆ ಹೋಗಿದ್ದಳು. ಲಾಕ್‍ಡೌನ್ ಹಿನ್ನೆಲೆಯಲ್ಲಿ ಮೇ 17ರಂದು ಮಹಾರಾಷ್ಟ್ರದಿಂದ ವಾಪಸ್ ಬಂದ ಹಿನ್ನೆಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಇಂದು ಬೆಳಗ್ಗೆ ಅಪ್ರಾಪ್ತೆ ಕ್ವಾರಂಟೈನ್ ಕೇಂದ್ರದಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಆರೋಗ್ಯಾಧಿಕಾರಿಗಳು ಅಪ್ರಾಪ್ತೆ ಮತ್ತು ಮಗುವನ್ನು ತಾಲೂಕು …
Read More »ಚಿಕನ್ ಊಟ ಕೊಟ್ಟಿಲ್ಲವೆಂದು ಆಶಾಕಾರ್ಯಕರ್ತೆಯ ಕೈ ಮುರಿದ ಭೂಪ!
ಕಲಬುರಗಿ: ಕ್ವಾರಂಟೈನ್ ಕೇಂದ್ರದಲ್ಲಿದ್ದ ವ್ಯಕ್ತಿಯೊಬ್ಬ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಿಣ್ಣಿ ಅಬ್ಬಾಸ್ ಗ್ರಾಮದಲ್ಲಿ ನಡೆದಿದೆ. ರೇಣುಕಾ ಕುಡಕಿ ಗಾಯಗೊಂಡ ಆಶಾ ಕಾರ್ಯಕರ್ತೆಯಾಗಿದ್ದು ಇವರ ಮೇಲೆ ಸೋಮನಾಥ್ ಕಾಂಬಳೆ ಹಲ್ಲೆ ಮಾಡಿದ್ದಾನೆ. ಚಿಕನ್ ಊಟ ಕೊಡದಿದ್ದಕ್ಕೆ ಸಿಟ್ಟಿಗೆದ್ದ ಸೋಮನಾಥ್, ಆಶಾ ಕಾರ್ಯಕರ್ತೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಪರಿಣಾಮ ರೇಣುಕಾ ಅವರ ಕೈ ಮುರಿದು ಆಳಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. …
Read More »ಕಲಬುರಗಿಗೆ ತಬ್ಲಿಘಿ ಬಳಿಕ ಧಾರಾವಿ ಕಂಟಕ……….
ಕಲಬುರಗಿ: ಇಷ್ಟು ದಿನ ತಬ್ಲಿಘಿಗಳ ಸೋಂಕಿನಿಂದ ನರಳಿದ ಕಲಬುರಗಿ ಜಿಲ್ಲೆಗೆ ಇದೀಗ ಮುಂಬೈನ ಧಾರಾವಿ ಸ್ಲಂ ಪ್ರದೇಶ ಕಂಟಕವಾಗಿದ್ದು, ಬುಧವಾರ ದಾಖಲಾದ 8 ಪ್ರಕರಣಗಳಲ್ಲಿ 4 ಜನರಲ್ಲಿ ಮುಂಬೈ ವಲಸಿಗ ಕಾರ್ಮಿಕನಿಂದಲೇ ಬಂದಿದೆ. ಅದರಲ್ಲೂ ಜಿಲ್ಲೆಗೆ 10 ಸಾವಿರಕ್ಕೂ ಹೆಚ್ಚು ವಲಸಿಗ ಕಾರ್ಮಿಕರು ಬಂದಿದ್ದಾರೆ. ಇಡೀ ದೇಶದಲ್ಲಿ ಕೊರೊನಾದಿಂದ ಅತಿ ಹೆಚ್ಚು ನಲುಗಿದ ರಾಜ್ಯ ಅಂದರೆ ಅದು ಮಹಾರಾಷ್ಟ್ರ. ಮುಂಬೈನ ಧಾರಾವಿಯಲ್ಲಿ ನೆಲೆಸಿದ್ದ ಕಲಬುರಗಿ ಮೂಲದ 10 ಸಾವಿರಕ್ಕೂ ಹೆಚ್ಚು …
Read More »ಕಲಬುರಗಿ: ಮೃತ 60 ವರ್ಷದ ವೃದ್ಧ ಸೇರಿ ಬುಧವಾರ ಕಲಬುರಗಿ ನಗರದಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢ
ಕಲಬುರಗಿ: ಮೃತ 60 ವರ್ಷದ ವೃದ್ಧ ಸೇರಿ ಬುಧವಾರ ಕಲಬುರಗಿ ನಗರದಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢವಾಗಿದೆ. ಕಲಬುರಗಿ ನಗರದ ರೋಗಿ ಸಂಖ್ಯೆ-848 ಸಂಪರ್ಕದಲ್ಲಿದ್ದ ಖೂಬಾ ಫ್ಲಾಟ್ ಪ್ರದೇಶದ 45 ವರ್ಷದ ಪುರುಷ(ರೋಗಿ-926) ಮತ್ತು ಮೋಮಿನಪುರ ಕಂಟೈನ್‍ಮೆಂಟ್ ಝೋನ್‍ನಲ್ಲಿದ್ದ 60 ವರ್ಷದ ವೃದ್ಧ(ಮೃತ ರೋಗಿ-927) ಕೊರೊನಾ ಸೋಂಕಿಗೆ ತುತ್ತಾಗಿರುವುದು ವರದಿಯಾಗಿದೆ. ಮೋಮಿನಪುರ ಕಂಟೈನ್‍ಮೆಂಟ್ ಝೋನ್‍ನ ನಿವಾಸಿ 60 ವರ್ಷದ ವೃದ್ಧ ಮೇ 11ರಂದೇ ಆಸ್ಪತ್ರೆಗೆ ಬರುವ ಮುನ್ನವೆ ನಿಧನರಾಗಿದ್ದಾರೆ. ಆದರೆ …
Read More »