ಕೊಪ್ಪಳ : ಸಧ್ಯ ಇಡಿ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ತಮ್ಮ ಸಹೋದರಿ ಪ್ರೀಯಾಂಕ ವಾದ್ರಾ ಜೊತೆಗೆ ಸಧ್ಯದಲ್ಲೇ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸಲಿದ್ದಾರೆ ಎಂದು ವರದಿಯಾಗಿದೆ. ಹೌದು, ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತ ಭೇಟಿಗೆ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ವಾದ್ರಾ ಕಾತರರಾಗಿದ್ದಾರೆ ಎಂಬ ಚರ್ಚೆ ನಡೆದಿದ್ದು, ಈ ಮೂಲಕ ಸರ್ವ ಧರ್ಮ, ಸಮುದಾಯಗಳನ್ನ ಏಕಭಾವದಿಂದ ಕಾಂಗ್ರೆಸ್ ನೋಡುತ್ತದೆ ಎಂಬ ಸಂದೇಶ ಸಾರಲು ಮುಂದಾಗಿದ್ದಾರೆ …
Read More »ಮೋದಿ ನಾಯಕತ್ವದ ಚುನಾವಣೆ ಗೆದ್ದಂಗೆ : ಕರಡಿ ಸಂಗಣ್ಣ
ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಬಗ್ಗೆ ಮಾತನಾಡಿರುವ ಬಿಜೆಪಿ ಸಂಸದ ಕರಡಿ ಸಂಗಣ್ಣ ಅವರ ನಾಯಕತ್ವ ನಂಬಿಕೊಂಡರೆ ಚುನಾವಣೆ ಗೆದ್ದಂಗೆ ಎಂದು ವ್ಯಂಗ್ಯವಾಡಿದ್ದಾರೆ. ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಕಾರ್ಯಕ್ರಮವಾಗಲಿ ರಾಷ್ಟ್ರೀಯ ನಾಯಕರ ಫೋಟೋಗಳನ್ನು ಹಾಕುತ್ತಾರೆ. ಎಲ್ಲಿಯೇ ನಡೆದರೂ ಅವರ ಫೋಟೋಗಳಿರುತ್ತವೆ. ಇದನ್ನು ಯಾರು ಹೇಳಿದ್ದಾರೋ ಏನೋ ಗೊತ್ತಿಲ್ಲ. ಹಾಕಿಕೊಳ್ಳಲಿ ಅದರಲ್ಲಿ ತಪ್ಪೇನು ಇಲ್ಲ. ಆದರೆ ಅದಕ್ಕೆಂದು ಒಂದು ನೀತಿ, ನಿಯಮ ಇರುತ್ತೆ ಅಲ್ಲವಾ. …
Read More »ಕೊಪ್ಪಳ ಜಿಲ್ಲೆ ಆರೋಗ್ಯ ಇಲಾಖೆ ಎಡವಟ್ಟು; ಲಸಿಕೆ ಪಡೆಯದಿದ್ದರೂ 2ನೇ ಡೋಸ್ ಲಸಿಕೆ ಪಡೆದಿರುವುದಾಗಿ ಮೆಸೇಜ್
ಕೊಪ್ಪಳ: ಕೊರೊನಾ ವಿಚಾರದಲ್ಲಿ ಸರ್ಕಾರ ಅನೇಕ ಬಾರಿ ಪದೇ ಪದೇ ಎಡವುತ್ತಿದ್ದು, ಆರೋಗ್ಯ ಇಲಾಖೆ ಎಡವಟ್ಟಿನಿಂದಾಗಿ ಲಸಿಕೆ ಪಡೆಯದವರಿಗೂ ಲಸಿಕೆ ಸಂಪೂರ್ಣವಾಗಿದೆ ಎನ್ನುವ ಪ್ರಮಾಣ ಪತ್ರ ದೊರೆತಿರುವುದು ಲಸಿಕೆ ಹಾಕಿಸಿಕೊಳ್ಳದವರನ್ಬು ಚಿಂತೆಗೀಡುಮಾಡಿದೆ. ಜಿಲ್ಲೆಯ ಆರೋಗ್ಯ ಇಲಾಖೆ ಮಹಾ ಎಡವಟ್ಟು ಮಾಡಿದೆ. 2ನೇ ಡೋಸ್ ಲಸಿಕೆಯನ್ನು ಪಡೆಯದಿದ್ದರೂ ಪಡೆದಿರುವುದಾಗಿ ಹಲವರ ಮೊಬೈಲ್‌ಗೆ ಮೆಸೇಜ್ ಬಂದಿದೆ. ಇದರಿಂದ ಜನ ಆರೋಗ್ಯ ಇಲಾಖೆ ನಡೆಯ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು …
Read More »ಡೆತ್ ಸ್ಪಾಟ್’ ಕಳಂಕ ತಪ್ಪಿಸಲು ‘ಕೊಪ್ಪಳ ಡಿಸಿ’ ಮಾಡಿದ್ದೇನು ಗೊತ್ತಾ.?
ಕೊಪ್ಪಳ: ಸದಾ ಕ್ರಿಯಾಶೀಲರಾಗಿ, ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಆಡಳಿತಾಧಿಕಾರಿಯಾಗಿಯೂ ಕೆಲಸ ನಿರ್ವಹಿಸುತ್ತಿರುವಂತ ಕೊಪ್ಪಳ ಜಿಲ್ಲಾಧಿಕಾರಿ ಕಿಶೋರ್ ಸುರಾಳ್ಕರ್, ಇಂದು ಹೊಸ ಸಾಹಸ ಮೆರೆದರು. ಜಿಲ್ಲೆಯ ಪ್ರವಾಸಿ ತಾಣಗಳಿಗೆ ಆಕರ್ಷಿಸೋ ನಿಟ್ಟಿನಲ್ಲಿ, ಸಣಾಪುರ ಜಲಾಶಯದಲ್ಲಿನ ಡೆತ್ ಸ್ಪಾಟ್ ಕಳಂಕ ತಪ್ಪಿಸೋ ಸಲುವಾಗಿ ಮಾಡಿದ ಕಾರ್ಯ ಮಾತ್ರ, ವಿಶೇಷವಾಗಿತ್ತು. ಸದಾ ಕ್ರೀಯಾಶೀಲವಾಗಿ, ಜಿಲ್ಲಾಧಿಕಾರಿಯಲ್ಲದೇ, ಜಿಲ್ಲೆಯ ಅಭಿವೃದ್ಧಿಗಾಗಿ, ಜನರ ಸಮಸ್ಯೆ ಪರಿಹಾರಕ್ಕಾಗಿ ಕೆಲಸಕೂ ಸೈ ಎನಿಸಿಕೊಂಡವರು ವಿಕಾಸ್ ಕಿಶೋರ್ ಸುರಾಳ್ಕರ್ ( DC Vikash …
Read More »ವಿದ್ಯಾರ್ಥಿಗಳು ತರಗತಿಗೆ ಚಕ್ಕರ್, ರೊಮ್ಯಾನ್ಸ್ಗೆ ಹಾಜರ್
ಕೊಪ್ಪಳ: ಆತ ಪ್ರೇಮಿಯೇ ಇರಲಿ, ಪತಿಯೇ ಆಗಿರಲಿ. ತನ್ನ ಹೊರತಾಗಿ ಬೇರೊಂದು ಹೆಣ್ಣನ್ನು ಕಣ್ಣೆತ್ತಿ ನೋಡಿದ್ರೂ ಸಿಡಿಮಿಡಿಗೊಳ್ಳುವುದು ಭಾರತೀಯ ಹೆಣ್ಣು ಮಕ್ಕಳ ಹುಟ್ಟುಗುಣ. ಆದರೆ ಇಲ್ಲೊಂದು ಕಡೆ ಅಕ್ಕ ಪಕ್ಕ ಕುಳಿತು ಇಬ್ಬರು ಯುವತಿಯರನ್ನು ಒಬ್ಬನೇ ಮುದ್ದಾಡುವ ದೃಶ್ಯ ಸಾಮಾನ್ಯವಾಗಿದ್ದು, ಇದು ಸ್ವಾತಂತ್ರ್ಯನಾ? ಸ್ವೇಚ್ಚಾಚಾರವೇ ಎಂಬ ಪ್ರಶ್ನೆ ಮೂಡಿದೆ. ಕೊಪ್ಪಳದ ಗಂಗಾವತಿಯ ನ್ಯಾಯಾಧೀಶರ ನಿವಾಸ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹಿಂದಿನ ಜಾಗವನ್ನು ಕಾಲೇಜ್ ವಿದ್ಯಾರ್ಥಿಗಳು ಪ್ರಣಯದ ಅಡ್ಡ ಮಾಡಿಕೊಂಡಿದ್ದಾರೆ. …
Read More »ಸರ್ಕಾರದ ಜಸ್ಟ್ ಪಾಸ್ ಆಫರ್ ತಿರಸ್ಕರಿಸಿದ ವಿದ್ಯಾರ್ಥಿನಿ, ಇಡೀ ಕೊಪ್ಪಳದಲ್ಲಿ ಪರೀಕ್ಷೆ ಬರೆದ ಏಕೈಕ ಅಭ್ಯರ್ಥಿ
ಕೊಪ್ಪಳ: ಕೊರೊನಾ ಹಿನ್ನೆಲೆ ಈ ವರ್ಷ ದ್ವಿತೀಯ ಪಿಯುಸಿಯಲ್ಲಿ ಪರೀಕ್ಷೆ ಬರೆಯದೇ ಎಲ್ಲರನ್ನೂ ಪಾಸ್ ಮಾಡಲಾಗಿದೆ. ಆದರೆ ವಿದ್ಯಾರ್ಥಿನಿಯೊಬ್ಬಳು ನಾನು ಚೆನ್ನಾಗಿ ಓದಿದ್ದೇನೆ. ನಿಮ್ಮ ಜಸ್ಟ್ ಪಾಸ್ ಆಫರ್ ಬೇಡ ಎಂದು ತಿರಸ್ಕರಿಸಿ ಗುರುವಾರ ಗಣಿತ ಪರೀಕ್ಷೆಯನ್ನು ಬರೆದಿದ್ದಾಳೆ. ಈ ಮೂಲಕ ಇಡೀ ಕೊಪ್ಪಳ ಜಿಲ್ಲೆಯಲ್ಲಿ ಪರೀಕ್ಷೆ ಬರೆದ ಏಕೈಕ ಅಭ್ಯರ್ಥಿಯಾಗಿದ್ದಾಳೆ. ಒಬ್ಬ ವಿದ್ಯಾರ್ಥಿಗಾಗಿ 26 ಜನ ಪರೀಕ್ಷಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಿದ್ದಾರೆ. ಹೌದು, ವಿದ್ಯಾರ್ಥಿ ಭೂಮಿಕಾ ತಾವರಗೆರೆ ಗಂಗಾವತಿಯ …
Read More »ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಆನಂದ್ ಸಿಂಗ್ ಗೆ ಟಾಂಗ್ ನೀಡಿದ ಗೋವಿಂದ ಕಾರಜೋಳ
ಕೊಪ್ಪಳ: ತುಂಗಭದ್ರಾ ಜಲಾಶಯವು ಭರ್ತಿಯಾದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಶುಭ ಘಳಿಗೆಯಲ್ಲಿ ಬೃಹತ್ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಗಂಗಾಮಾತೆಗೆ ಬಾಗಿನ ಅರ್ಪಿಸಿದರು. ಡ್ಯಾಂ ಜಲಾಶಯದ ತಟದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರು ಮಾತನಾಡಿ, ತುಂಗಭದ್ರಾ ಎಲ್ಲೆಡೆಯೂ ಮಳೆ ಚೆನ್ನಾಗಿ ಆಗುತ್ತಿವೆ. ಹಾಗಾಗಿ ತುಂಗಭದ್ರಾ ಜಲಾಶಯದ ಇತಿಹಾಸದಲ್ಲಿ ಅವಧಿ ಮೊದಲೇ ತುಂಬಿದೆ. ಇದರಿಂದ ಲಕ್ಷಾಂತರ ರೈತರು ಖುಷಿಯಲ್ಲಿದ್ದಾರೆ. ಹಾಗಾಗಿ ಎಲ್ಲ ಜಲಾಶಯಗಳಿಗೆ ಬಾಗಿನ ಅರ್ಪಿಸಲಾಗುತ್ತಿದೆ ಎಂದರು. ಆಲಮಟ್ಟಿ …
Read More »ಲಾರಿಯಲ್ಲಿ ಸಿಕ್ಕಿಕೊಂಡಿದ್ದವರನ್ನು ಅಗ್ನಿ ಶಾಮಕ ದಳ ಸಿಬ್ಬಂದಿ ರಕ್ಷಿಸಿದೆ
ಕೊಪ್ಪಳ: ಎರಡು ಲಾರಿಗಳ (Lorry) ನಡುವೆ ಅಪಘಾತ (Accident)ನಡೆದಿರುವ ಘಟನೆ ಕೊಪ್ಪಳ ತಾಲೂಕಿನ ಹಲಗೇರಿ ಬಳಿ ತಡರಾತ್ರಿ ನಡೆದಿದೆ. ಅಪಘಾತಕ್ಕೆ ಎರಡು ಲಾರಿಗಳು ನುಜ್ಜು ಗುಜ್ಜಾಗಿವೆ. ಅಪಘಾತದ ರಭಸಕ್ಕೆ ಎರಡು ಲಾರಿಗಳ ನಡುವೆ ನಾಲ್ವರು ಸಿಕ್ಕಿಹಾಕಿಕೊಂಡಿದ್ದು, ಸತತ ಒಂದು ಗಂಟೆಗಳ ಅಗ್ನಿ ಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಆ ನಾಲ್ವರನ್ನು ರಕ್ಷಣೆ ಮಾಡಲಾಗಿದೆ. ಒಂದು ಲಾರಿಯಲ್ಲಿ ಮೂರು ಜನ, ಇನ್ನೊಂದು ಲಾರಿಯಲ್ಲಿ ಓರ್ವ ಚಾಲಕ ಸಿಕ್ಕಿಹಾಕಿಕೊಂಡಿದ್ದ. ಲಾರಿಗಳು ಮಧ್ಯಪ್ರದೇಶ ಹಾಗೂ …
Read More »ಮನಸ್ಫೂರ್ತಿ ಹಾಗೂ ಶ್ರದ್ಧೆಯಿಂದ ಮಾಡಿದ್ರೆ ಯಾವುದು ಅಸಾಧ್ಯವಲ್ಲ ಎನ್ನುವುದು ಸಾಧಕರ ಮಾತು.
ಕೊಪ್ಪಳ: ಮನಸ್ಫೂರ್ತಿ ಹಾಗೂ ಶ್ರದ್ಧೆಯಿಂದ ಮಾಡಿದ್ರೆ ಯಾವುದು ಅಸಾಧ್ಯವಲ್ಲ ಎನ್ನುವುದು ಸಾಧಕರ ಮಾತು. ನಿಜ! ಸಾಧಿಸುವ ಛಲ ಇದ್ರೆ ಪಡೆಯುವ ಹುಚ್ಚು ಇರಬೇಕು ಅಂತಾರೆ. ಅದರಂತೆ ಇಲ್ಲೊಬ್ಬ ಪದವಿ ವಿದ್ಯಾರ್ಥಿ ತಾನು ಕಲಿತ ಚಿತ್ರಕಲೆಗಳ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಹೌದು! ಕಲೆಯೆನ್ನುವುದೇ ಹಾಗೆ ಒಂದು ಸಲ ಅದರ ಹುಚ್ಚು ಹಿಡಿದ್ರೆ, ಬರಿ ಬಣ್ಣ ಹಾಗೂ ಪೆನ್ಸಿಲ್, ಪೇಂಟಿಂಗ್ ಬ್ರಷ್ಗಳ ಮಧ್ಯೆ ಕಲಾವಿದರು ತಮ್ಮ ಕಾಲವನ್ನು ಕಳೆಯುತ್ತಾರೆ. ಕೊಪ್ಪಳದ …
Read More »ಕೊಪ್ಪಳ ಜಿಲ್ಲೆ 5 ದಿನ ಕಂಪ್ಲೀಟ್ ಲಾಕ್ ಡೌನ್
ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, 5 ದಿನ ಲಾಕ್ ಡೌನ್ ಜಾರಿ ಮಾಡುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕ್ರಮೇಣ ಇಳಿಕೆಯಾಗುತ್ತಿದೆ. ಆದರೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಮೇ 17ರಿಂದ ಐದು ದಿನ ಲಾಕ್ ಡೌನ್ ಜಾರಿಗೆ ನಿರ್ಧರಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ಅಗತ್ಯ …
Read More »