Breaking News

ಕೊಪ್ಪಳ

ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾಗೆ ಮೊದಲ ಬಲಿ………..

ಕೊಪ್ಪಳ: ಹೆಮ್ಮಾರಿ ಕೊರೊನಾ ವೈರಸ್ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದುಕೊಂಡಿದೆ. ನಗರದ ಕೋವಿಡ್-19 ಆಸ್ಪತ್ರೆಯಲ್ಲಿ ಸೋಂಕಿತ 50 ವರ್ಷದ ಮಹಿಳೆ ಇಂದು ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ರೋಗಿ-7105 ಆಗಿದ್ದು, ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ. ಜಿಂದಾಲ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮಗನಿಗೆ ಕೊರೊನಾ ದೃಢಪಟ್ಟಿತ್ತು. ಈ ಹಿನ್ನೆಲೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಆತನ ತಂದೆ-ತಾಯಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದಾಗ ಅವರಿಗೂ ಸೋಂಕು …

Read More »

ಸಿದ್ದರಾಮಯ್ಯ ಗೊಂದಲ ಸೃಷ್ಟಿಮಾಡೋದರಲ್ಲಿ ನಂಬರ್ ಒನ್: ನಳಿನ್ ಕುಮಾರ್ ಕಟೀಲ್

ಕೊಪ್ಪಳ: ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ, ಎಲ್ಲರೂ ಒಂದಾಗಿದ್ದೇವೆ. ಎಲ್ಲರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಇಂದು ಕೊಪ್ಪಳ ಜಿಲ್ಲೆ ಕಾರಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಟಿಲ್, ಶಾಸಕರು ಸೇರಿ ಒಟ್ಟಾಗಿ ಊಟ ಮಾಡಿದ್ರೆ, ಚಹಾ ಕುಡಿದ್ರೆ ಭಿನ್ನಮತನಾ ಎಂದು ಪ್ರಶ್ನೆ ಮಾಡಿದ್ರು. ರಾಜ್ಯದಲ್ಲಿ ಇಬ್ಬರು ಸಿಎಂ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಕಟಿಲ್, ಸಿದ್ದರಾಮಯ್ಯ ಗೊಂದಲ ಸೃಷ್ಟಿಮಾಡೋದರಲ್ಲಿ …

Read More »

ರಾಜ್ಯ ಬಿಜೆಪಿ ಸರ್ಕಾರ ಸತ್ತು ಹೋಗಿದೆ.: ಮಾಜಿ ಸಿಎಂ ಸಿದ್ದರಾಮಯ್ಯ

ಕೊಪ್ಪಳ: ರಾಜ್ಯ ಬಿಜೆಪಿ ಸರ್ಕಾರ ಸತ್ತು ಹೋಗಿದೆ. ಬಿಜೆಪಿಯಲ್ಲಿ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಸಂವಿಧಾನಾತ್ಮಕ ಮುಖ್ಯಮಂತ್ರಿ ಒಬ್ಬರಿದ್ದರೆ, ಅಸಂವಿಧಾನಿಕವಾಗಿ ಇನ್ನೊಬ್ಬರು ಮುಖ್ಯಮಂತ್ರಿ ಇದ್ದಾರೆ. ವಿಜಯೇಂದ್ರ ಇನ್ನೋರ್ವ ಮುಖ್ಯಮಂತ್ರಿ, ಇನ್ನೊಂದು ಸಲಾ ಹೇಳಲಾ ಎಂದು ಎರಡು ಬಾರಿ ವಿಜಯೇಂದ್ರನ ಹೆಸರು ಹೇಳುವ ಮೂಲಕ ಇದು ನಾನು ಹೇಳಿದ್ದಲ್ಲ ಬಿಜೆಪಿ ಶಾಸಕರೇ ಹೇಳಿರುವುದು ಎಂದು …

Read More »

15 ವರ್ಷಗಳ ಹಿಂದಿನ ತಂದೆಯ ಕೊಲೆ ರಹಸ್ಯ ಮಗಳಿಂದ ಬಯಲು_ ತಾಯಿ ಸೇರಿ ಐವರು ಅರೆಸ್ಟ್

ಕೊಪ್ಪಳ: 15 ವರ್ಷಗಳ ಹಿಂದೆ ಮಹಿಳೆಯೊಬ್ಬಳು ತನ್ನ ಪತಿಯನ್ನು ಕೊಲೆ ಮಾಡಿಸಿ ಮುಚ್ಚಿ ಹಾಕಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದೀಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಶಂಕರ್‍ಸಿಂಗ್ ಮೃತ ವ್ಯಕ್ತಿ. ಬಂಧಿತ ಆರೋಪಿಗಳನ್ನು ಗಂಗಾವತಿಯ ವಿರುಪಾಪೂರ ನಗರದ ಮೃತನ ಪತ್ನಿ ಲಕ್ಷ್ಮೀಸಿಂಗ್, ರಾಂಪೂರ ಪೇಟೆಯ ಅಮ್ಜದ್‍ಖಾನ್, ಕಿಲ್ಲಾ ಏರಿಯಾದ ಅಬ್ದುಲ್ ಹಫೀಜ್, ಬಾಬಾ ಜಾಕೀರಬಾಷಾ ಹಾಗೂ ಈಳಿಗನೂರ ಗ್ರಾಮದ ಶಿವನಗೌಡ …

Read More »

ಮಹಾರಾಷ್ಟ್ರದಿಂದ ವಲಸೆ ಕಾರ್ಮಿಕರು ಬಂದರೂ ಕ್ವಾರಂಟೈನ್ ಮಾಡದ ಜಿಲ್ಲಾಡಳಿತ

ಕೊಪ್ಪಳ: ದೇಶದಲ್ಲೇ ಅತೀ ಹೆಚ್ಚು ಕೊರೊನಾ ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಿಂದ ನಾಲ್ವರು ಕಾರ್ಮಿಕರು ರಾಜ್ಯಕ್ಕೆ ವಲಸೆ ಬಂದರೂ ಅವರನ್ನು ಕ್ವಾರಂಟೈನ್ ಮಾಡದೆ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೆ. ಇದರಿಂದಾಗಿ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ. ಸೋಮವಾರ ಸಂಜೆ 6ಕ್ಕೆ ಮಹಾರಾಷ್ಟ್ರದಿಂದ ಕೊಪ್ಪಳಕ್ಕೆ ಆಗಮಿಸಿದ್ದು, ಇದುವರೆಗೂ ಕಾರ್ಮಿಕರನ್ನು ಕ್ವಾರಂಟೈನ್ ಮಾಡಿಲ್ಲ. ಕೊಪ್ಪಳ ಜಿಲ್ಲೆಯ ನಾಲ್ವರು ಕಾರ್ಮಿಕರು ಸಹ ಬೇಕರಿಯಲ್ಲಿ ಕೆಲಸ ಮಾಡುವವರಾಗಿದ್ದು, ಮಾಹಾರಾಷ್ಟ್ರದ ಖೇಡ್ ನಿಂದ ಆಗಮಿಸಿದ್ದಾರೆ. ಸೋಮವಾರ ಸಂಜೆಯಿಂದ ಕೊಪ್ಪಳ …

Read More »

ಅನಾವಶ್ಯಕವಾಗಿ ರಸ್ತೆಗೆ ಬಂದು ತಿರುಗಾಡುತ್ತಿದ್ದರು. ಅಂತವರಿಗೆ ಕೊಪ್ಪಳ ಪೊಲೀಸರು ವಿನೂತನ ಶಿಕ್ಷೆ ನೀಡಿದ್ದಾರೆ.

ಕೊಪ್ಪಳ: ಲಾಕ್‍ಡೌನ್ ಶುರುವಾದಗಿನಿಂದ ಪೊಲೀಸರು ಹಗಲಿರುಳು ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೂ ಕೆಲವರು ಅನಾವಶ್ಯಕವಾಗಿ ರಸ್ತೆಗೆ ಬಂದು ತಿರುಗಾಡುತ್ತಿದ್ದರು. ಅಂತವರಿಗೆ ಕೊಪ್ಪಳ ಪೊಲೀಸರು ವಿನೂತನ ಶಿಕ್ಷೆ ನೀಡಿದ್ದಾರೆ. ಪೊಲೀಸರು ಅನಾವಶ್ಯಕವಾಗಿ ರಸ್ತೆಯಲ್ಲಿ ತಿರುಗಾಡುತ್ತಿದ್ದ ವಾಹನ ಸವಾರರಿಗೆ ಗೋಣಿ ಚೀಲದ ಪಿಪಿಇ ಕಿಟ್ ಹಾಕಿಸಿದ್ದಾರೆ. ಈ ಮೂಲಕ ಕೊಪ್ಪಳ ನಗರ ಠಾಣಾ ಪೊಲೀಸರು ವಿಭಿನ್ನ ರೀತಿಯಲ್ಲಿ ಕೊರೊನಾ ವೈರಸ್ ಜಾಗೃತಿ ಮೂಡಿಸಿದ್ದಾರೆ. ಭಾರತ ಲಾಕ್‍ಡೌನ್ ನಡುವೆಯೂ ವಾಹನ …

Read More »

ಪ್ರತಿ ಮನೆಗೆ ತೆರಳಿ ಕೊರೊನಾ ಪರೀಕ್ಷೆ ನಡೆಸಿ: ಬಿ.ಸಿ.ಪಾಟೀಲ್

ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಥರ್ಮಲ್ ಸ್ಕ್ಯಾನರ್ ನೀಡಿ – 263 ಜನರ ಸ್ಯಾಂಪಲ್ ಪರೀಕ್ಷೆ, ಎಲ್ಲವೂ ನೆಗೆಟಿವ್ – ಜಿಲ್ಲೆಯಲ್ಲಿ ಈ ವರೆಗೆ ಯಾವುದೇ ಕೊರೊನಾ ಪ್ರಕರಣವಿಲ್ಲ ಕೊಪ್ಪಳ: ಗ್ರಾಮೀಣ ಭಾಗದಲ್ಲಿ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಪ್ರತಿ ಮನೆಗೆ ತೆರಳಿ ಥರ್ಮಲ್ ಸ್ಕ್ಯಾನರ್ ಬಳಸಿ ಪ್ರತಿಯೊಬ್ಬರ ಆರೋಗ್ಯ ಪರೀಕ್ಷಿಸಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಅಧಿಕಾರಿಗಳಿಗೆ …

Read More »

” ಕೊಪ್ಪಳ:ಅಂಜನಾದ್ರಿ ಬೆಟ್ಟದಲ್ಲಿ ಆಹಾರ, ನೀರಿಗಾಗಿ ಮಂಗಗಳ ನರಳಾಟ”

ಕೊಪ್ಪಳ: ಮಹಾಮಾರಿ ಕೊರೊನಾ ವೈರಸ್ ವಿಶ್ವದ ಮನುಕುಲವನ್ನೇ ಬೆಚ್ಚಿ ಬೀಳಿಸಿದ್ದಲ್ಲದೇ ಮೂಕ ಪ್ರಾಣಿಗಳನ್ನು ಕಂಗಾಲಾಗಿಸಿದೆ. ಕೊರೊನಾ ಭೀತಿಯಿಂದ ದೇಶವನ್ನು ಲಾಕ್‍ಡೌನ್ ಮಾಡಿ ಜನರಿಗೆ ಅಗತ್ಯ ವಸ್ತು, ಆಹಾರ ಒದಗಿಸುವ ಪ್ರಯತ್ನವೆನೋ ನಡೆಯುತ್ತಿದೆ. ಆದರೆ ಲಾಕ್‍ಡೌನಿಂದ ಆಹಾರ ಸಿಗದೇ ಮೂಕ ಪ್ರಾಣಿಗಳು ನರಳುತ್ತಿವೆ. ಕೊಪ್ಪಳ ಜಿಲ್ಲೆಯಲ್ಲಿರುವ ಆಂಜನೇಯ ಹುಟ್ಟಿದ ಸ್ಥಳ ಎಂದೇ ಪ್ರಖ್ಯಾತಿ ಪಡೆದ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿರುವ ಸಾವಿರಾರು ಮಂಗಗಳು ನಿತ್ಯ ಆಹಾರಕ್ಕಾಗಿ ಪರದಾಡುವಂತಾಗಿದೆ. ಲಾಕ್‍ಡೌನ್‍ನಿಂದಾಗಿ ಕಳೆದ ಒಂದು …

Read More »

ಮಾಸ್ಕ್ ಹಾಕಿಕೊಂಡು ಡಿಸಿ ಭೇಟಿ ಮಾಡಿದ ಅರ್ಜುನ್ ಇಟಗಿ

ಕೊಪ್ಪಳ: ಗಾಯಕ ಅರ್ಜುನ್ ಇಟಗಿಗೂ ಕೊರೊನಾ ಭೀತಿ ಎದುರಾಗಿದೆ. ಹೀಗಾಗಿ ಇಂದು ಅರ್ಜುನ್ ಮಾಸ್ಕ್ ಹಾಕಿಕೊಂಡು ಬಂದು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿದ್ದಾರೆ. ಕೊಪ್ಪಳ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿರುವ ಅರ್ಜುನ್ ಇಟಗಿ, ಡಿಸಿ ಸುನೀಲ್ ಕುಮಾರ್ ಭೇಟಿ ಮಾಡಿದ್ದಾರೆ. ಕಾರ್ಯಕ್ರಮವೊಂದಕ್ಕೆ ಅನುಮತಿ ಪಡೆಯಲು ಅರ್ಜುನ್ ತನ್ನ ತಂದೆಯೊಂದಿಗೆ ಆಗಮಿಸಿದ್ದಾರೆ. ಅರ್ಜುನ್ ಜೊತೆಗೆ ತಂದೆ ಕೂಡ ಮಾಸ್ಕ್ ಹಾಕಿಕೊಂಡು ಬಂದಿದ್ದಾರೆ. ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ತಾನು ಮಾಸ್ಕ್ ಹಾಕಿಕೊಂಡು ಬಂದಿರುವ ಅರ್ಜುನ್, …

Read More »

ಸತೀಶ ಜಾರಕಿಹೊಳಿ ಅವರಿಗೆ ದೇವರು ಒಳ್ಳೆಯದು ಮಾಡಲಿ :ರಮೇಶ ಜಾರಕಿಹೊಳಿ ..

ಕೊಪ್ಪಳ: ಸತೀಶ ಜಾರಕಿಹೊಳಿ ಅವರಿಗೆ ದೇವರು ಒಳ್ಳೆಯದು ಮಾಡಲಿ ಅಂತಾ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಸತೀಶ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ಒಲಿದು ಬಂದ ಹಿನ್ನೆಲೆ ಮಾಧ್ಯದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಮ್ಮದು ಬಿಜೆಪಿ ಪಕ್ಷ. ಕಾಂಗ್ರೆಸ್ ಮುಗಿದು ಹೋದ ಅಧ್ಯಾಯ. ಹೀಗಾಗಿ ಸಹೋದರರ ಕುರಿತು ನಾನು ಯಾವುದೇ ಹೇಳಿಕೆ ನೀಡಲ್ಲ. ಅವರಿಗೆ ದೇವರು ಒಳ್ಳೆಯದು ಮಾಡಲಿ. ನಮ್ಮ ಸಹೋದದರರ ಬಗ್ಗೆ ಯಾಕೆ ಗೊಂದಲ ಸೃಷ್ಠಿ …

Read More »