Breaking News
Home / ಜಿಲ್ಲೆ / ಕೋಲಾರ

ಕೋಲಾರ

ಸಿದ್ದರಾಮಯ್ಯಗೆ ಒಂದು ಮತವನ್ನೂ ಹಾಕಲ್ಲ; ಇಡೀ ಗ್ರಾಮದಿಂದ ವರ್ತೂರು ಪ್ರಕಾಶ್‌ಗೆ ಭರವಸೆ

ಕೋಲಾರ: ತಾಲೂಕಿನ ವೇಮಗಲ್‌ ಹೋಬಳಿಯ ಕುರುಬರಹಳ್ಳಿ ಗ್ರಾಮಕ್ಕೆ ಇತ್ತೀಚೆಗಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಚುನಾವಣೆಯಲ್ಲಿ ಬೆಂಬಲಿಸುವಂತೆ ಕೋರಿದ್ದ ಬೆನ್ನಲ್ಲಿಯೇ ಗ್ರಾಮಸ್ಥರು ವರ್ತೂರು ಪ್ರಕಾಶ್‌ ಅವರನ್ನು ಆಹ್ವಾನಿಸಿ ಸಿದ್ದರಾಮಯ್ಯರಿಗೆ ಒಂದು ಮತವನ್ನೂ ಹಾಕುವುದಿಲ್ಲ ಎಂದು ಭರವಸೆ ನೀಡಿರುವ ಕುತೂಹಲ ಸಂಗತಿ ನಡೆದಿದೆ. ಕುರುಬರಹಳ್ಳಿ ಗ್ರಾಮಸ್ಥರು ಸಾಮೂಹಿಕವಾಗಿ ಮಾಜಿ ಸಚಿವ ವರ್ತೂರು ಪ್ರಕಾಶ್‌ ಅವರನ್ನು ಗ್ರಾಮಕ್ಕೆ ಕರೆಯಿಸಿ ಅದ್ಧೂರಿಯಾಗಿ ಕಾರ್ಯಕ್ರಮ ಮಾಡಿ ಸನ್ಮಾನಿಸಿ, ನಮ್ಮ ಗ್ರಾಮದಿಂದ ಒಂದು ಮತ ಕೂಡ ಸಿದ್ಧರಾಮಯ್ಯನವರಿಗೆ …

Read More »

ಪ್ರೀತಿಸಿ ಮದುವೆಯಾಗಿ ದಾರಿ ತಪ್ಪಿದ ಪತ್ನಿ: ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಪತಿ ಕೊಲೆ ರಹಸ್ಯ.

ಕೋಲಾರ: ದಾರಿ ತಪ್ಪಿದ ಪತ್ನಿ ಅಕ್ರಮ ಸಂಬಂಧ ಬೆಳೆಸಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿಸಿದ ಘಟನೆ ನಡೆದಿದೆ. ಪೊಲೀಸರ ತನಿಖೆಯಲ್ಲಿ ಕೊಲೆ ರಹಸ್ಯ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನ. 28 ರಂದು ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆನಂದ್ ನಾಪತ್ತೆಯಾಗಿರುವುದಾಗಿ ಆತನ ಅಣ್ಣ ವೆಂಕಟೇಶ್ ದೂರು ನೀಡಿದ್ದರು. ನಂತರ ಎರಡು ದಿನಗಳ ಬಳಿಕ ಮತ್ತೊಂದು ದೂರು ನೀಡಿ ತಮ್ಮನ ಪತ್ನಿ …

Read More »

ಬಿ.ವೈ.ವಿಜಯೇಂದ್ರ ‘ಮುಂದಿನ ಸಿಎಂ’; ಬಿಜೆಪಿ ಕಾರ್ಯಕರ್ತರಿಂದ ಘೋಷಣೆ

ಕೋಲಾರ: ಬಿಜೆಪಿ ರಾಜ್ಯ ಉಪಾಧ್ಯಕ್ಷ್ಯ ಬಿ.ವೈ.ವಿಜಯೇಂದ್ರ ಅವರು ನ.2 ರಂದು ಕೋಲಾರಕ್ಕೆ ಆಗಮಿಸಿದ ವೇಳೆ ‘ಮುಂದಿನ ಸಿಎಂ’ ಎಂಬ ಘೋಷಣೆಗಳು ಕೇಳಿಬಂದಿವೆ. ವಿಜಯೇಂದ್ರ ಅವರು ಬುಧವಾರ ಮುಳಬಾಗಿಲು ತಾಲೂಕಿನಲ್ಲಿರುವ ದೇಗುಲ ಕಾರ್ಯಕ್ರಮವೊಂದಕ್ಕೆ ತೆರಳುಲು ಕೋಲಾರ ಮಾರ್ಗವಾಗಿ ಹೊರಟ್ಟಿದ್ದರು. ಈ ವೇಳೆ ಕೋಲಾರದಲ್ಲಿ ಬಿಜೆಪಿ ಮುಖಂಡ ಓಂ ಶಕ್ತಿ ಚಲಪತಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೇಂದ್ರ ಅವರಿಗೆ ಹೂವಿನ ಸುರಿಮಳೆ ಸುರಿಸಿ, ಪಠಾಕಿ ಸಿಡಿಸಿ ಅದ್ಧೂರಿಯಾಗಿ ಸ್ವಾಗತ ಮಾಡಿದರು. ಬಿಜೆಪಿ ಕಾರ್ಯಕರ್ತರು …

Read More »

ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನ ಬಂಧನ

ಕೋಲಾರ: ಬೈಕ್​ನಲ್ಲಿ ಅಕ್ರಮವಾಗಿ ಗಾಂಜಾ (Ganja) ಸಾಗಾಟ ಮಾಡುತ್ತಿದ್ದ ಓರ್ವನನ್ನು ಕ್ಯಾಸಂಬಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆಂದ್ರ ಮೂಲದ‌ ವೆಂಕಟರಾಮಪ್ಪ‌ ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ 45 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಆಂದ್ರದಿಂದ ಕರ್ನಾಟಕಕ್ಕೆ ಗಡಿಯಿಂದ ಗಾಂಜಾ ಸಾಗಾಟ ಮಾಡುತ್ತಿದ್ದನು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕ್ಯಾಸಂಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.  

Read More »

ಮಕ್ಕಳ ಮಾರಾಟ ಪ್ರಕರಣ : ಆಶಾಕಾರ್ಯಕರ್ತೆ ಬಂಧನ

ಕೋಲಾರ: ರಾಜ್ಯದಲ್ಲಿ ದಿನದಿಂದದಿನಕ್ಕೆ ಮಕ್ಕಳ ಮಾರಾಟ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಸ್ವತ: ಆಶಾ ಕಾರ್ಯಕರ್ತೆಯರೇ ಮಕ್ಕಳ ಮಾರಾಟ ಜಾಲದ ಹಿಂದೆ ಇದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಕ್ಕಳ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೋಲಾರದಲ್ಲಿ ಇಬ್ಬರು ಆಶಾ ಕಾರ್ಯಕರ್ತೆಯರು ಹಾಗೂ ಮಗು ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ.   ಕೋಲಾರದ ಕೆಜಿಎಫ್ ತಾಲೂಕಿನ ಪಂತನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ನೀಲಮ್ಮ ಹಾಗೂ ಬಾಬು ದಂಪತಿ ಮಗುವನ್ನು ಮಾರಾಟ ಮಾಡಿದ್ದಾರೆ ಎನ್ನಲಾಗಿದೆ. …

Read More »

ವರ್ತೂರು ಕಿಡ್ನಾಪ್ ಕೇಸ್: ಇಬ್ಬರು ವಿದ್ಯಾರ್ಥಿಗಳು ಸೇರಿ 6 ಜನರ ಬಂಧನ

ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನು ಕಾರಿನಲ್ಲಿ ಅಪಹರಿಸಿ 30 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಬೆಂಗಳೂರಿನ ಆರು ಮಂದಿಯನ್ನು ಬಂಧಿಸುವಲ್ಲಿ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಕೇಂದ್ರ ವಲಯದ ಐಜಿಪಿ ಸೀಮಂತ್‍ಕುಮಾರ್ ಸಿಂಗ್ ತಿಳಿಸಿದರು.   ಮೂಲತಃ ತಮಿಳುನಾಡಿನ ಬೆಂಗಳೂರಿನ ವಿನಾಯಕನಗರದಲ್ಲಿ ವಾಸಿಸುತ್ತಿರುವ ಕವಿರಾಜ್ (43), ಬೆಳ್ಳಂದೂರು-ಸರ್ಜಾಪುರ ರಸ್ತೆಯ ಅರಳೂರು ನಿವಾಸಿ, ಬಿಕಾಂ ವಿದ್ಯಾರ್ಥಿಗಳಾದ ಲಿಖಿತ್ (20), ಉಲ್ಲಾಸ್ (21), …

Read More »

ರಸ್ತೆ ಮಾಡದಿದ್ರೆ ವೋಟ್ ಇಲ್ಲ ಐದು ಸರಿ ಚುನಾವಣೆ ಬಹಿಷ್ಕಾರ ಮಾಡಿದ ಗ್ರಾಮಸ್ಥರು

ಕೋಲಾರ: ರಸ್ತೆಗಾಗಿ ಗ್ರಾಮ ಪಂಚಾಯಿತಿ ಮತದಾನದಿಂದ ದೂರ ಉಳಿಯುವ ಮೂಲಕ ಗ್ರಾಮಸ್ಥರು ಬಹಿಷ್ಕಾರ ಹಾಕಿದ್ದಾರೆ. ಈ ಮೂಲಕ ಗ್ರಾಮಸ್ಥರು 5 ಚುನಾವಣೆ ಬಹಿಷ್ಕರಿಸಿದಂತಾಗಿದೆ.ಜಿಲ್ಲೆಯ ಮಾಲೂರು ತಾಲೂಕಿನ ಮತಗಟ್ಟೆ ಸಂಖ್ಯೆ 17 ಕಂಬಿಪುರ ಗ್ರಾಮಸ್ಥರು ಮತದಾನದಿಂದ ದೂರ ಉಳಿಯುವ ಮೂಲಕ ಬಹಿಷ್ಕಾರ ಹಾಕಿದರು. ಬೆಳಗ್ಗೆ 9 ಗಂಟೆಯಾದರೂ ಮತ ಕೇಂದ್ರದತ್ತ ಸುಳಿಯದ ಮತದಾರರು, ಬಹಿಷ್ಕಾರ ಹಾಕಿದ್ದಾರೆ. ಈ ಮೂಲಕ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡಿದರ ಹಿನ್ನೆಲೆಯಲ್ಲಿ ಮತಗಟ್ಟೆ …

Read More »

₹1 ಕೋಟಿ ಲಂಚ ಕೇಳಿದ್ರಾ ಅಬಕಾರಿ ಸಚಿವ ಹೆಚ್​​. ನಾಗೇಶ್? ಪ್ರಧಾನಿ ಮೋದಿಗೆ ದೂರು

ಕೋಲಾರ: ಕೋಲಾರದ ಉಸ್ತುವಾರಿ ಸಚಿವ ಹಾಗೂ ಅಬಕಾರಿ ಸಚಿವ ಹೆಚ್.ನಾಗೇಶ್ ವಿರುದ್ಧ ಪ್ರಧಾನ ಮಂತ್ರಿ ಕಚೇರಿಯಲ್ಲಿ ಭ್ರಷ್ಟಾಚಾರ ಆರೋಪದ ದೂರು ದಾಖಲಾಗಿದೆ. ಅಬಕಾರಿ ಅಧಿಕಾರಿಯೊಬ್ಬರ ವರ್ಗಾವಣೆಗೆ ಒಂದು ಕೋಟಿ ರೂಪಾಯಿ ಲಂಚಕ್ಕೆ ಒತ್ತಾಯಿಸಿರುವ ಆರೋಪದ ಮೇಲೆ ಸಚಿವ ಹೆಚ್​​​.ನಾಗೇಶ್ ಅವರ ವಿರುದ್ದ ಸಲ್ಲಿಕೆಯಾಗಿರುವ ದೂರು ತಡವಾಗಿ ಬೆಳಕಿಗೆ ಬಂದಿದೆ. ಅಧಿಕಾರಿಯ ಪುತ್ರಿಯೊಬ್ಬರು ಪ್ರಧಾನ ಮಂತ್ರಿ ಕಚೇರಿಗೆ ಸಲ್ಲಿಸಿರುವ ಈ ದೂರು ರಾಜ್ಯದ ಇ-ಜನಸ್ಪಂದನ ವಿಭಾಗದಲ್ಲಿಯೂ ಸಹ ಅಧಿಕೃತವಾಗಿ ದಾಖಲಾಗಿದೆ ಎನ್ನಲಾಗಿದೆ. …

Read More »

ಟಿಕೆಟ್ ಹಿಂದೆ ಬರೆದಿದ್ದ 5 ರೂ. ಚಿಲ್ಲರೆಗಾಗಿ ಕೆಎಸ್‍ಆರ್ ಟಿಸಿ ಬಸ್ ಕಂಡಕ್ಟರ್ ಹಾಗೂ ಪ್ರಯಾಣಿಕನ ನಡುವೆ ಮಾರಾರಿ

ಕೋಲಾರ: ಟಿಕೆಟ್ ಹಿಂದೆ ಬರೆದಿದ್ದ 5 ರೂ. ಚಿಲ್ಲರೆಗಾಗಿ ಕೆಎಸ್‍ಆರ್ ಟಿಸಿ ಬಸ್ ಕಂಡಕ್ಟರ್ ಹಾಗೂ ಪ್ರಯಾಣಿಕನ ನಡುವೆ ಮಾರಾರಿ ನಡೆದಿದೆ. ಜಿಲ್ಲೆಯ ಮುಳುಬಾಗಿಲು ಪಟ್ಟಣದ ಹಳೇ ಕೋರ್ಟ್ ಸರ್ಕಲ್ ಬಳಿ ಘಟನೆ ನಡೆದಿದ್ದು, ಚಿಲ್ಲರೆ ಹಣಕ್ಕಾಗಿ ಕೆಎಸ್‍ಆರ್‍ಟಿಸಿ ಕಂಡಕ್ಟರ್ ಮತ್ತು ಪ್ರಯಾಣಿಕ ಹೊಡೆದಾಡಿಕೊಂಡಿದ್ದಾರೆ. ಕೆಎಸ್‍ಆರ್‍ಟಿಸಿ ಬಸ್ ಕಂಡಕ್ಟರ್ ಟಿಕೆಟ್ ಹಿಂದೆ ಐದು ರೂಪಾಯಿ ಚಿಲ್ಲರೆ ಬರೆದುಕೊಟ್ಟಿದ್ದರು. ನಿಲ್ದಾಣ ಬರುತ್ತಿದ್ದಂತೆ ಪ್ರಯಾಣಿಕ ಚಿಲ್ಲರೆ ಕೊಡುವಂತೆ ಕೇಳಿದ್ದಾರೆ. ಈ ವೇಳೆ ನಿರ್ವಾಹಕ …

Read More »

ನಿವಾರ್ ಅಬ್ಬರ- ಕೋಲಾರದಲ್ಲಿ ಭಾರೀ ಮಳೆ,

ಕೋಲಾರ: ಚೆನ್ನೈ ನಿವಾರ್ ಚಂಡ ಮಾರುತದ ಅಬ್ಬರ ಮುಂದುವರೆದಿದ್ದು, ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಪರಿಣಾಮ ಮನೆಯ ಗೋಡೆ ಕುಸಿದಿದ್ದು, ವ್ಯಕ್ತಿಯ ಕಾಲು ಮುರಿದಿದೆ. ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ಪ್ರತ್ಯೇಕ ಪ್ರಕರಣದಲ್ಲಿ ನಾಲ್ಕು ಮನೆ ಗೋಡೆ ಕುಸಿತವಾಗಿವೆ. ಪೆದ್ದೂರು ಗ್ರಾಮದ ಸೂರ್ಯ ನಾರಾಯಣ ಅವರ ಕಾಲು ಮುರಿದಿದೆ. ಮಲಗಿದ್ದಾಗ ಗೋಡೆ ಕುಸಿದ್ದರಿಂದ ಕಾಲು ಮುರಿದಿದೆ. ಮುಷ್ಟೂರಲ್ಲಿ ನಾಗಮಣಿ, ವಿಜಿಯಮ್ಮ ಅವರ 2 ಮನೆಯ ಗೋಡೆ ಕುಸಿತವಾಗಿದೆ. ಅಬ್ಬೆಹಳ್ಳಿಯ ಭಾಗ್ಯಮ್ಮ ಅವರ …

Read More »