ಕೋಲಾರ: ಕೊರೊನಾ ವಿರುದ್ಧ ಹೋರಾಡುತ್ತಿರುವ ಸುಮಾರು 5 ಸಾವಿರ ಜನ ವಾರಿಯರ್ಸ್‍ಗೆ ದಿನಸಿ ಕಿಟ್ ಜೊತೆಗೆ ಮಡಿಲು ತುಂಬಿ ಗೌರವಿಸುವ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೊಮ್ಮನಹಳ್ಳಿಯಲ್ಲಿ ಮಾಲೂರು ಶಾಸಕ ನಂಜೇಗೌಡ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಹಗಲಿರುಳು ದುಡಿಯುತ್ತಿರುವ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ದಿನಸಿ ಕಿಟ್ ವಿತರಿಸಿದರು. ಅಲ್ಲದೆ ಶಾಸಕರ ಕುಟುಂಬಸ್ಥರು ಅರಿಶಿನ ಕುಂಕುಮ ನೀಡಿ ಮಡಿಲು ತುಂಬಿದರು. ಮಾಲೂರು …
Read More »ಕುಡಿದ ಮತ್ತಿನಲ್ಲಿ ಹಾವನ್ನ ಕಚ್ಚಿ ಕೊಂದ ಭೂಪ……….
ಕೋಲಾರ: ಕುಡಿದ ಮತ್ತಿನಲ್ಲಿ ಭೂಪನೊಬ್ಬ ಹಾವನ್ನು ಬಾಯಿಂದ ಕಚ್ಚಿ ಸಾಯಿಸಿದ್ದಾನೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಷ್ಟೂರು ಗ್ರಾಮದ ಕುಮಾರ್ ಹಾವನ್ನು ಸಾಯಿಸಿದ ಭೂಪ. ನಶೆಯಲ್ಲಿದ್ದ ಕುಡುಕ ದಾರಿಯಲ್ಲಿ ಹೋಗುತ್ತಿದ್ದ ಹಾವನ್ನು ಹಿಡಿದು ಕತ್ತಿಗೆ ಸುತ್ತಿಕೊಂಡು ಗ್ರಾಮ ಪ್ರವೇಶಿಸಿದ್ದಾನೆ. ಗ್ರಾಮದ ಮಧ್ಯೆ ಬರುತ್ತಿದ್ದಂತೆ ಕುತ್ತಿಗೆ ಹಾವನ್ನು ಬಾಯಿಂದ ಕಚ್ಚಿ ಸಾಯಿಸಿದ್ದಾನೆ. ಕುಮಾರ್ ಹಾವನ್ನು ಕಚ್ಚಿ ಸಾಯಿಸುತ್ತಿರುವ ದೃಶ್ಯಗಳನ್ನು ಸ್ಥಳೀಯರು ಮೊಬೈಲಿನಲ್ಲಿ ಸೆರೆಹಿಡಿದುಕೊಂಡಿದ್ದಾರೆ. ಆದ್ರೆ …
Read More »ಸರ್ಕಾರಕ್ಕೆ ಲಾಕ್‍ಡೌನ್ ಮೇಲಿರುವ ಕಾಳಜಿ, ರೈತರ ಮೇಲೆ ಇಲ್- ಎಚ್‍ಡಿಕೆ ಆರೋಪ……
ಕೋಲಾರ: ಸರ್ಕಾರಕ್ಕೆ ಲಾಕ್‍ಡೌನ್ ಮೇಲಿರುವ ಕಾಳಜಿ, ರೈತರ ಮೇಲೆ ಇಲ್ಲ. ಜನ ಸಾಮಾನ್ಯರ ನೋವಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೋಲಾರದಲ್ಲಿ ಬಡವರಿಗೆ ಹಾಗೂ ನಿರ್ಗತಿಕರಿಗೆ ಆಹಾರದ ಕಿಟ್‍ಗಳನ್ನು ವಿತರಣೆ ಮಾಡಿದರು. ಮುಳಬಾಗಿಲಿನ ಜೆಡಿಎಸ್ ಮುಖಂಡ ಸಮೃದ್ಧಿ ಮಂಜುನಾಥ್ ಅವರು ತಾಲೂಕಿನಲ್ಲಿ 46 ಸಾವಿರ ಆಹಾರದ ಕಿಟ್ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಮುಂಬೈನಿಂದ ಮಂಡ್ಯಗೆ …
Read More »ಆಲಿಕಲ್ಲು ಸಹಿತ ಸುರಿದ ಮಳೆಯಿಂದ ಲಕ್ಷಾಂತರ ರೂ. ಬೆಳೆ ನಾಶ………..
ಕೋಲಾರ: ಜಿಲ್ಲೆಯಲ್ಲಿ ಎರಡು ದಿನದಿಂದ ಆಲಿಕಲ್ಲು ಸಹಿತ ಬಾರಿ ಮಳೆಯಾಗುತ್ತಿದೆ. ಕಳೆದ ದಿನ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಿಂದಾಗಿ ಟೊಮೆಟೊ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಹಾನಿಯಾಗಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಲಕ್ಷ್ಮೀಪುರ ಗ್ರಾಮದ ಸೊಣ್ಣೇಗೌಡ ಎಂಬವರ ಲಕ್ಷಾಂತರ ಮೌಲ್ಯದ ಟೊಮೆಟೊ ಬೆಳೆ ಹಾನಿಯಾಗಿದೆ. ಬಂಗಾರಪೇಟೆ ತಾಲೂಕಿನ ಐತಾಂಡಹಳ್ಳಿ ಮುನಿರಾಜು ಸೇರಿದಂತೆ ಬಂಗಾರಪೇಟೆ ತಾಲೂಕಿನ ವಿವಿಧೆಡೆ ಲಕ್ಷಾಂತರ ರೂಪಾಯಿಯ ನೂರಾರು ಎಕರೆ ಬೆಳೆ ನಾಶವಾಗಿದೆ. ಕೋಲಾರ …
Read More »ಬಿಜೆಪಿ ಮುಖಂಡರು ಕೊರೊನಾ ವಾರಿಯರ್ಸ್ ಪೌರಕಾರ್ಮಿಕರಿಗೆ ಚಿಕನ್ ಬಿರಿಯಾನಿ ವಿತರಿಸುವುದರ ಜೊತೆಗೆ ಪಾದ ಪೂಜೆ ಮಾಡಿ ಗೌರವ
ಕೋಲಾರ: ಜಿಲ್ಲೆಯ ಬಿಜೆಪಿ ಮುಖಂಡರು ಕೊರೊನಾ ವಾರಿಯರ್ಸ್ ಪೌರಕಾರ್ಮಿಕರಿಗೆ ಚಿಕನ್ ಬಿರಿಯಾನಿ ವಿತರಿಸುವುದರ ಜೊತೆಗೆ ಪಾದ ಪೂಜೆ ಮಾಡಿ ಗೌರವ ಸಲ್ಲಿಸಿದರು. ಕೆಜಿಎಫ್ ನಗರದಲ್ಲಿ ಪೌರಕಾರ್ಮಿಕರಿಗೆ ತಾಲೂಕು ಬಿಜೆಪಿ ಘಟಕದ ವತಿಯಿಂದ ಹೀಗೆ ವಿಭಿನ್ನವಾಗಿ ಗೌರವ ಸಲ್ಲಿಸಲಾಯಿತು. ಕಳೆದ ಒಂದು ತಿಂಗಳಿನಿಂದ ಪ್ರತಿನಿತ್ಯ ಸಾರ್ವಜನಿಕರಿಗೆ ಆಹಾರ ಪದಾರ್ಥ ಹಾಗೂ ಊಟವನ್ನ ನೀಡುತ್ತಿದ್ದ ತಾಲೂಕು ಬಿಜೆಪಿ ಮುಖಂಡರು ಮಂಗಳವಾರ ಪೌರಕಾರ್ಮಿಕರಿಗೆ ಪಾದ ಪೂಜೆ ಸಲ್ಲಿಸಿ, ಆಹಾರ ಪದಾರ್ಥಗಳೊಂದಿಗೆ ಚಿಕನ್ ಬಿರಿಯಾನಿ ನೀಡಿದರು. …
Read More »ದೇಶದಲ್ಲೇ ಮೊದಲ ಬಾರಿಗೆ ದಕ್ಷಿಣ ಕೊರಿಯಾ ರ‍್ಯಾಪಿಡ್ ಟೆಸ್ಟಿಂಗ್ ಕಿಟ್‍ಗಳ ಪ್ರಾಯೋಗಿಕ ಪರೀಕ್ಷೆಗೆ ಕೋಲಾರ ಜಿಲ್ಲೆ ಮುಂದಾಗಿದೆ.
ಕೋಲಾರ: ದೇಶದಲ್ಲೇ ಮೊದಲ ಬಾರಿಗೆ ದಕ್ಷಿಣ ಕೊರಿಯಾ ರ‍್ಯಾಪಿಡ್ ಟೆಸ್ಟಿಂಗ್ ಕಿಟ್‍ಗಳ ಪ್ರಾಯೋಗಿಕ ಪರೀಕ್ಷೆಗೆ ಕೋಲಾರ ಜಿಲ್ಲೆ ಮುಂದಾಗಿದೆ. ಸುಮಾರು 6 ಸಾವಿರ ಮಂದಿಗೆ ರ‍್ಯಾಪಿಡ್ ಟೆಸ್ಟ್ ಮಾಡುವುದಕ್ಕೆ ಕೋಲಾರ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಜ್ಜಾಗಿದೆ. ಎಲ್ಲೆಡೆ ಸಂಚಲನ ಮೂಡಿಸಿರುವ ಹಾಗೂ ಸಾಕಷ್ಟು ಸಮಯ ವ್ಯರ್ಥ ಮಾಡುತ್ತಿರುವ ರಕ್ತ ಮಾದರಿ ಹಾಗೂ ಗಂಟಲು ದ್ರವ ಸಂಗ್ರಹಿಸಿ ಎರಡು ದಿನಗಳ ಕಾಲ ವರದಿಗಾಗಿ ಕಾಯುವ ಬದಲಿಗೆ ಪ್ರಾಥಮಿಕ ಹಂತದಲ್ಲೆ ಪರೀಕ್ಷೆಗೆ …
Read More »ಸರ್ಕಾರದ ಖಜಾನೆ ಖಾಲಿ ಮುಖ್ಯಮಂತ್ರಿಗಳಿಗೆ ಮದ್ಯದಂಗಡಿಗಳನ್ನ ತೆರೆಯುವ ಒಲವಿದೆ:ಅಬಕಾರಿ ಸಚಿವ ಎಚ್.ನಾಗೇಶ್
ಕೋಲಾರ: ಸರ್ಕಾರದ ಖಜಾನೆ ಖಾಲಿಯಾಗಿದ್ದು, ಮುಖ್ಯಮಂತ್ರಿಗಳಿಗೆ ಮದ್ಯದಂಗಡಿಗಳನ್ನ ತೆರೆಯುವ ಒಲವಿದೆ ಎಂದು ಕೋಲಾರದಲ್ಲಿ ಅಬಕಾರಿ ಸಚಿವ ಎಚ್.ನಾಗೇಶ್ ಹೇಳಿದ್ದಾರೆ. ಕೋಲಾರದ ಜಿಲ್ಲಾಪಂಚಾಯತಿ ಬಳಿ ಮಾತನಾಡಿದ ಸಚಿವ ನಾಗೇಶ್ ಅವರು, ಮೇ 3ರ ನಂತರ ಮದ್ಯದಂಗಡಿಗಳನ್ನ ತೆರೆಯುವ ಮುನ್ಸೂಚನೆಯನ್ನು ನೀಡಿದರು. ಕೊರೊನಾ ಕಾರಣದಿಂದ ಸರ್ಕಾರಿ ಅಧಿಕಾರಗಳ ವೇತನ ನೀಡುವುದು ಸೇರಿದಂತೆ ಯೋಜನೆಗಳಿಗೆ ಹಣ ನೀಡಲು ಸರ್ಕಾರಕ್ಕೆ ತುಂಬಾ ಹೊರೆಯಾಗಿದೆ. ಸರ್ಕಾರದ ಖಜಾನೆ ಖಾಲಿಯಾಗಿರುವ ಕಾರಣ ಮುಖ್ಯಮಂತ್ರಿಗಳು ಮದ್ಯದಂಗಡಿಗಳನ್ನು ತೆರೆಯುವ ಒಲವನ್ನು ಹೊಂದಿದ್ದಾರೆ. …
Read More »ವೈದ್ಯರ ಸಲಹೆ ಪಡೆದು ಮದ್ಯ ಸೇವನೆ ಬಿಟ್ಬಿಡಿ: ಅಬಕಾರಿ ಸಚಿವ ನಾಗೇಶ್ ಸಲಹೆ
ಕೋಲಾರ: ಮದ್ಯವ್ಯಸನಿಗಳೇ ಬೇರೆ ಮದ್ಯಪ್ರಿಯರೇ ಬೇರೆ ಎನ್ನುವ ಮೂಲಕ ಮದ್ಯಪಾನಿಗಳ ಬಗ್ಗೆ ಸಚಿವ ಎಚ್.ನಾಗೇಶ್ ವಿಭಿನ್ನ ರೀತಿಯಲ್ಲಿ ವಿಶ್ಲೇಷಣೆ ನೀಡಿದ್ದಾರೆ. ಕೋಲಾರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜನರ ಸುರಕ್ಷತೆಗಾಗಿಯೇ ಮದ್ಯ ಬಂದ್ ತೀರ್ಮಾನ ಮಾಡಿದ್ದೇವೆ. ವೈದ್ಯರಿಂದ ಸಲಹೆ ಪಡೆದುಕೊಂಡು ಚಟವನ್ನು ಬಿಟ್ಡು ಬಿಡಿ ಎಂದು ಕಿವಿ ಮಾತು ಹೇಳಿದ್ರು. ತಾಳ್ಮೆ, ಚಟ ತ್ಯಜಿಸಿ ಕೌನ್ಸಿಲಿಂಗ್ ಮಾಡಿಸಿಕೊಳ್ಳಿ. ಮದ್ಯ ಬಿಟ್ಟು ಕುಟುಂಬದ ಜೊತೆ ಚೆನ್ನಾಗಿರಿ. ಇನ್ನೂ ಇದೆ …
Read More »ಮಂಗಗಳಲ್ಲಿ ಕಾಣಿಸಿಕೊಂಡ ಕೆಮ್ಮು, ಸುಸ್ತು: ಗ್ರಾಮದಲ್ಲಿ ಆತಂಕ…….
ಕೋಲಾರ: ನಿತ್ಯ ತರ್ಲೆ ಮಾಡೋ ಕೋತಿಗಳು ಇದ್ದಕ್ಕಿದಂತೆ ಮಂಕಾಗಿವೆ. ಕಳೆದ ಕೆಲವು ದಿನಗಳಿಂದ ಈ ಕೋತಿಗಳ ಆರೋಗ್ಯದಲ್ಲಾದ ಏರು ಪೇರು ಇಡೀ ಗ್ರಾಮವನ್ನೇ ಬೆಚ್ಚಿ ಬೀಳಿಸಿದ್ದು, ಕೊರೊನಾ ಆತಂಕದ ನಡುವೆ ಕೋತಿಗಳು ಮಂಕಾಗಿರುವುದು ಜನರಲ್ಲಿ ಭಯ ಹುಟ್ಟಿಸಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ಕೋಡುಗುರ್ಕಿ ಗ್ರಾಮದಲ್ಲಿ ಮಂಗಗಳು ಈ ರೀತಿ ವರ್ತಿಸುತ್ತಿದ್ದು, ಕೆಲವು ನಿತ್ರಾಣವಾಗಿ ಮಲಗಿದರೆ, ಇನ್ನೂ ಕೆಲವು ಏಳಲು ಸಾಧ್ಯವಾಗದೇ ಅಸಹಾಯಕ ಸ್ಥಿತಿಯಲ್ಲಿ ನೋಡುತ್ತಿವೆ. ಇನ್ನೂ ಹಲವು ಕೋತಿಗಳು …
Read More »ಕ್ವಾರಂಟೈನ್ ಮಾಡಿದ್ದಕ್ಕೆ ಕುಟುಂಬದಿಂದ ಆತ್ಮಹತ್ಯೆ ಬೆದರಿಕೆ
ಕೋಲಾರ: ಕೊರೊನಾ ಮಹಾಮಾರಿ ಹರಡುವ ನಿಟ್ಟಿನಲ್ಲಿ ಶಂಕಿತರನ್ನು ಹೋಂ ಕ್ವಾರಂಟೈನ್ ಮಾಡಿದ್ದಕ್ಕೆ ಆಕ್ರೋಶಗೊಂಡ ಕುಟುಂಬವೊಂದು ಪೆಟ್ರೋಲ್ ಬಾಟಲ್ ನೊಂದಿಗೆ ಗ್ರಾಮ ಪಂಚಾಯ್ತಿಯ ಒಳಗೆ ನುಗ್ಗಿ ಆತ್ಮಹತ್ಯೆ ಬೆದರಿಕೆ ಹಾಕಿದ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಸಂತೆಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಈ ಘಟನೆ ನಡೆದಿದ್ದು, ಪೆಟ್ರೋಲ್ ಬಾಟಲ್ ಹಿಡಿದು ಆತ್ಮಹತ್ಯೆ ಮಾಡುವ ಬೆದರಿಕೆ ಹಾಕಿದ್ದಾರೆ. ಸಂತೇಹಳ್ಳಿ ಗ್ರಾಮದ ಮಂಜುನಾಥ್ ಹಾಗೂ ಕುಟುಂಬದವರನ್ನು ಕಳೆದ ಎರಡು ದಿನದ ಹಿಂದೆ …
Read More »