Breaking News

ಗದಗ

ನೀರಿನ ವಿಚಾರಕ್ಕೆ ಗಲಾಟೆ – 2 ಸಮುದಾಯದ 21 ಮಂದಿ ಅರೆಸ್ಟ್‌

ಗದಗ: ಎರಡು ಸಮುದಾಯಗಳ  ನಡುವೆ ನೀರಿನ ವಿಚಾರಕ್ಕೆ ನಡೆದ ಗಲಾಟೆ  ಪ್ರಕರಣಕ್ಕೆ ಸಂಬಂಧಿಸಿದಂತೆ 21 ಮಂದಿಯನ್ನು ಬಂಧನ ಮಾಡಲಾಗಿದೆ. ಮುಂಡರಗಿ ತಾಲೂಕಿನ ಚಿಕ್ಕ ವಡ್ಡಟ್ಟಿ ಗ್ರಾಮದಲ್ಲಿ ಎಸ್‌ಟಿ (ST) ಜನಾಂಗದ ರೈತನ ಜಮೀನಿನಲ್ಲಿ ದಲಿತ (Dalit) ವ್ಯಕ್ತಿ ನೀರಿನ ಬಳಕೆ ವಿಚಾರಕ್ಕೆ ಗಲಾಟೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಗುಂಪಿನ 21 ಜನರ ಬಂಧನ ಮಾಡಲಾಗಿದೆ ಎಂದು ಗದಗ ಎಸ್‌ಪಿ ರೋಹನ್ ಜಗದೀಶ್ ಹೇಳಿದ್ದಾರೆ. ಚಿಕ್ಕ ವಡ್ಡಟ್ಟಿ ಗ್ರಾಮದಲ್ಲಿ …

Read More »

ಗದಗ: ರಥೋತ್ಸವದ ವೇಳೆ ಕಾರು ಅಡ್ಡ ನಿಲ್ಲಿಸಿ ಕಿರಿಕ್, ದಾರಿ ಬಿಡುವಂತೆ ಹೇಳಿದ್ದಕ್ಕೆ ಹಲ್ಲೆ? ಸಲೀಂ ಗ್ಯಾಂಗ್ ಅರೆಸ್ಟ್!

ಗದಗ ರಥೋತ್ಸವ ವೇಳೆ ಕಾರು ಅಡ್ಡ ನಿಲ್ಲಿಸಿ ಕಿರಿಕ್, ತೆಗೆಯೋಕೆ ಹೇಳಿದ್ದಕ್ಕೆ ಹಲ್ಲೆ ಭಕ್ತರ ಮೇಲೆ ಹಲ್ಲೆ ನಡೆಸಿದ ಆರೋಪಿಗಳು ಅರೆಸ್ಟ್ ಮಾಡಲಾಗಿದೆ. ಘಟನೆ ನಡೆದಿದ್ದು ಹೇಗೆ? ಗದಗ ಜಿಲ್ಲೆಯ ಮಲ್ಲಸಮುದ್ರ ಗ್ರಾಮದಲ್ಲಿ ಬಸವೇಶ್ವರ ಜಾತ್ರೆಯ ರಥೋತ್ಸವದ ಸಂಭ್ರಮದ ನಡುವೆಯೇ ಕಿರಿಕ್ ನಡೆದಿದ್ದು, ಕಾರು ತೆರವುಗೊಳಿಸುವ ವಿಚಾರವಾಗಿ ಆರಂಭವಾದ ಜಗಳ ಹಲ್ಲೆಯಲ್ಲಿ ಅಂತ್ಯವಾಗಿದೆ. ಇದನ್ನು ಕಂಡ ಜಾತ್ರಾ ಕಮಿಟಿಯ ಯುವಕರು, ರಥ ಬರಲು ದಾರಿ ಮಾಡಿಕೊಡುವಂತೆ ಮತ್ತು ಕಾರನ್ನು ಪಕ್ಕಕ್ಕೆ …

Read More »

ಕೆಲಸ ಮುಗಿಸಿ ಬರುವಾಗ ಸಿಡಿಲು ಬಡಿದು ರೈತ ಸಾವು

ಗದಗ: ಸಿಡಿಲು ಬಡಿದು ರೈತ ಸಾವನ್ನಪ್ಪಿರುವ ಘಟನೆ ಗದಗ  ಜಿಲ್ಲೆಯ ರೋಣ  ತಾಲೂಕಿನ ಮೆಣಸಗಿ ಗ್ರಾಮದಲ್ಲಿ ನಡೆದಿದೆ. 58 ವರ್ಷದ ನಿಂಗಪ್ಪ ಅಮಾತ್ಯ ಮೃತ ರೈತ ಎಂದು ಗುರುತಿಸಲಾಗಿದ್ದು, ಜಮೀನಿನಲ್ಲಿ ಕೆಲಸಕ್ಕೆ ಹೋಗಿದ್ದಾಗ ಈ ಅವಘಡ ಸಂಭವಿಸಿದೆ. ಮೃತ ವ್ಯಕ್ತಿ ಬೆಣ್ಣೆಹಳ್ಳ ಸಮೀಪದ ಜಮೀನಿನಲ್ಲಿ ಕೆಲಸಕ್ಕೆ ಹೋಗಿದ್ದರು. ಮಳೆ ಆರಂಭವಾಗುತ್ತಿದ್ದAತೆ ಕೆಲಸ ಮುಗಿಸಿಕೊಂಡು ಮನೆಗೆ ಬರುವ ವೇಳೆ ಸಿಡಿಲು ಬಡಿದಿದ್ದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ರೋಣ ತಾಲೂಕಿನ ಹಲವೆಡೆ ಆಲಿಕಲ್ಲು, …

Read More »

ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನಕ್ಕೆ ತೆರೆ

ಗದಗ: ಐತಿಹಾಸಿಕ ಸ್ಥಳ ಗದಗ  ಜಿಲ್ಲೆ ಲಕ್ಕುಂಡಿಯಲ್ಲಿ ನಡೆಯುತ್ತಿದ್ದ ಉತ್ಖನನ ಕಾಮಗಾರಿಗೆ ಇಂದು ತೆರೆ ಬಿದ್ದಿದೆ. ಶ್ರೀ ಕೋಟೆ ವೀರಭದ್ರೇಶ್ವರ ದೇವಸ್ಥಾನ ಅಂಗಳದಲ್ಲಿ 47 ದಿನಗಳವರೆಗೆ ನಡೆದ ಉತ್ಖನನ  ಇಂದು ಮುಕ್ತಾಯವಾಗಿದೆ. ಜನವರಿ 10ರಂದು ಲಕ್ಕುಂಡಿ ರಿತ್ತಿ ಕುಟುಂಬಕ್ಕೆ ನಿಧಿ ಸಿಕ್ಕಿತ್ತು. ಇದರ ಬೆನ್ನಲ್ಲೇ ಜನವರಿ 16ರಿಂದ ಉತ್ಖನನ ಕಾರ್ಯ ಆರಂಭ ಮಾಡಲಾಗಿತ್ತು. 35 ಜನ ಕಾರ್ಮಿಕರೊಂದಿಗೆ 47 ದಿನಗಳ ಕಾಲ ಉತ್ಖನನ ಕಾಮಗಾರಿ ನಡೆಯಿತು. 10*10 ಮೀಟರ್ ಸುತ್ತಳತೆ …

Read More »

ರಾಜ್ಯದಲ್ಲಿ ಮಕ್ಕಳಿಗೆ ಕೊಡಬೇಕಿದ್ದ ಹಾಸಿಗೆ, ಬೆಡ್‌ಶೀಟ್‌ ಅಧಿಕಾರಿ ಮನೆಯಲ್ಲಿ!

ಗದಗ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಶಿರಹಟ್ಟಿ ತಾಲ್ಲೂಕು ಬಿಸಿಎಂ ಅಧಿಕಾರಿ ಎಂ.ಕೆ.ಸುರಕೋಡ ಅವರಿಗೆ ಸಂಬಂಧಿಸಿದ ಆರು ಕಡೆಗಳಲ್ಲಿ ಗುರುವಾರ ಬೆಳಿಗ್ಗೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಶೇ 227 ಅಧಿಕ ಆಸ್ತಿ ಹೊಂದಿರುವುದನ್ನು ಪತ್ತೆ ಮಾಡಿದ್ದಾರೆ. ಲೋಕಾಯುಕ್ತ ಪೊಲೀಸರ ಶೋಧನೆ ವೇಳೆ ಅಧಿಕಾರಿಯ ಮನೆಯಲ್ಲಿ ಬಿಸಿಎಂ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಸರಬರಾಜು ಮಾಡಲಾಗಿದ್ದ ಹಾಸಿಗೆ– ಬೆಡ್‌ಶೀಟ್‌ಗಳು, ಹಾಸ್ಟೆಲ್‌ನಲ್ಲಿ ಅಡುಗೆ ಮಾಡಲು ಬಳಸುವ ದೊಡ್ಡ ದೊಡ್ಡ ಪಾತ್ರೆಗಳು, ನೋಟ್‌ಪುಸ್ತಕಗಳು …

Read More »

ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಕಾರ್ಯಾಗಾರ, ಶೈಕ್ಷಣಿಕ ಸಮಾವೇಶ

ಗದಗ: ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ರಾಜ್ಯ ಘಟಕ, ಗದಗ ಜಿಲ್ಲಾ ಘಟಕ ಹಾಗೂ ಉಪ ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ, ಗದಗ ಇವರ ಸಂಯುಕ್ತ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ. ಶೇ. 100% ರಷ್ಟು ಫಲಿತಾಂಶ ಪಡೆದ ಶಾಲಾ ಮುಖ್ಯಸ್ಥರಿಗೆ ಗೌರವ ಹಾಗೂ ಜಿಲ್ಲಾ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಕುರಿತು ಕಾರ್ಯಾಗಾರ ಹಾಗೂ ಶೈಕ್ಷಣಿಕ ಸಮಾವೇಶ – 2026 ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ ಮಾರ್ಚ್ 4 …

Read More »

ಅವಳಿ ಮಕ್ಕಳ ಜೊತೆ ಬಾವಿಗೆ ಹಾರಿದ ತಾಯಿ: ಮಹಿಳೆಯ ರಕ್ಷಣೆ, ಪುಣಾಣಿಗಳು ಸಾವು

ಗದಗ: ಕೌಟುಂಬಿಕ ಕಲಹ ಹಿನ್ನೆಲೆ ಇಬ್ಬರು ಮಕ್ಕಳ ಜೊತೆ ತಾಯಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ 3 ವರ್ಷದ ಹರ್ಷಿತ್​ ಮತ್ತು ಹಿತೇಶ್ ಮೃತಪಟ್ಟಿದ್ದು, ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಉಷಾರನ್ನು ಪ್ರವಾಸಿ ಮಿತ್ರ ಸಿಬ್ಬಂದಿ ರಕ್ಷಿಸಿದ್ದಾರೆ. ಮೃತ ಪುಟಾಣಿಗಳಿಬ್ಬರೂ ಅವಳಿ-ಜವಳಿ ಎಂಬುದು ಗೊತ್ತಾಗಿದೆ. ಬೂದಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಡಿವೈಎಸ್ಪಿ ಲಕ್ಷ್ಮಯ್ಯ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. …

Read More »

ಪ್ರೇಯಸಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಕ್ಕೆ ಹತ್ಯೆಗೈದ ಪ್ರಿಯಕರ

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ಹೊರವಲಯದ ಜಮೀನಲ್ಲಿ ಯುವಕ ಫಾರೂಕ್ ಸನದಿ  ಎನ್ನುವಾತನನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದು, ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನಿಶ್ವಿತಾರ್ಥ ಮಾಡಿಕೊಂಡಿದ್ದ ಹುಡುಗಿ ಪ್ರಿಯಕರನೇ ಫಾರೂಕ್ ಸನದಿಯನ್ನು ಕೊಲೆ ಮಾಡಿರುವುದು ಎಂದು ಗೊತ್ತಾಗಿದೆ. ಪ್ರಿಯಕರ ದಾವಲಸಾಬ್ ಹಾಗೂ ಸ್ನೇಹಿತ ಮಕ್ಕಬೂಲ್ ಸಾಬ್ ಹಾಗೂ ಇಬ್ಬರು ಅಪ್ರಾಪ್ತರು ಸೇರಿಕೊಂಡು ಕೊಲೆ ಮಾಡಿರುವುದು ಬೆಳಕಿಗೆ ಬಂದಿದ್ದು, ಹತ್ಯೆ ನಡೆದ 24 ಗಂಟೆಯಲ್ಲಿ ನಾಲ್ಕು ಜನರನ್ನು ಪೊಲೀಸರು …

Read More »

ಗದಗ: ಕೆರೆಯಲ್ಲಿ ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿಗಳಿಬ್ಬರು ಸಾವು; ಓರ್ವ ಬಚಾವ್​

ಗದಗ: ಕರೆಯಲ್ಲಿ ಈಜಲು ತೆರಳಿ 9ನೇ ತರಗತಿಯ ಮೂವರ ಪೈಕಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವಂತಹ ಘಟನೆ ಗದಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ನಡೆದಿದೆ. ಡಾ. ಅಂಬೇಡ್ಕರ ಮೆಟ್ರಿಕ್ ಪೂರ್ವ ವಸತಿ ನಿಲಯದ ಪರಶುರಾಮ ವಡ್ಡರ ಮತ್ತು ಬಸವರಾಜ ಬಡಿಗೇರ ಮೃತ ವಿದ್ಯಾರ್ಥಿಗಳು. ಓರ್ವ ವಿದ್ಯಾರ್ಥಿ ಬಚಾವ್ ಆಗಿದ್ದಾನೆ. ಮುಳಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದ ಪರಶುರಾಮ ವಡ್ಡರ, ಬೆಳದಡಿ ಗ್ರಾಮದ ಬಸವರಾಜ ಬಡಿಗೇರ ಮತ್ತು …

Read More »

ಕತ್ತು ಕೊಯ್ದು ಯುವಕನ ಕೊ*ಲೆ -ಹೊಲದಲ್ಲಿ ಶವ ಪತ್ತೆ

ಗದಗ: ಜಿಲ್ಲೆಯ ಲಕ್ಷ್ಮೀಶ್ವರ ಸಮೀಪದ ಶಿಗ್ಲಿ ಗ್ರಾಮದ ಯುವಕನನ್ನು ಕತ್ತು ಕೊಯ್ದು ಕ್ರೂರವಾಗಿ ಹ*ತ್ಯೆ ಮಾಡಿರುವ ದುರ್ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಮೃತರನ್ನು ಮಹಮ್ಮದ ಫಾರೋಕ್ ಶೇಖ್ ಸನದಿ (25) ಎಂದು ಗುರುತಿಸಲಾಗಿದೆ ಮೂಲತಃ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹರ್ಲಾಪುರ ಗ್ರಾಮದ ನಿವಾಸಿ ಆಗಿರುವ ಫಾರೋಕ್ ಸದ್ಯ ಶಿಗ್ಲಿ ಗ್ರಾಮದಲ್ಲಿ ವಾಸವಾಗಿದ್ದ ಇದೀಗ ಲಕ್ಷ್ಮೀಶ್ವರ ಸಮೀಪದ ಜಮೀನೊಂದರಲ್ಲಿ ಆತನ ಶವ ಪತ್ತೆಯಾಗಿದೆ.ಅಪರಿಚಿತರು ಕತ್ತು ಕೊಯ್ದು ಹ*ತ್ಯೆ ನಡೆಸಿ ಬಳಿಕ …

Read More »