Breaking News

ಗದಗ

ಗದಗ:ಲಾಕ್‍ಡೌನ್ ಮಧ್ಯೆಯೂ ಅಕ್ಷತ್ತದಗಿ ಅಮವಾಸ್ಯೆ ನೆಪದಲ್ಲಿ ಜನರು ಮನೆಬಿಟ್ಟು ಮಾರ್ಕೆಟ್‍ಗೆ

ಗದಗ: ಕೊರೊನಾ ವೈರಸ್ ತಡೆಗೆ ಲಾಕ್‍ಡೌನ್ ಮಧ್ಯೆಯೂ ಅಕ್ಷತ್ತದಗಿ ಅಮವಾಸ್ಯೆ ನೆಪದಲ್ಲಿ ಜನರು ಮನೆಬಿಟ್ಟು ಮಾರ್ಕೆಟ್‍ಗೆ ಲಗ್ಗೆ ಇಟ್ಟಿದ್ದಾರೆ. ಈ ಹಿನ್ನೆಲೆ ಜಿಲ್ಲೆಯ ಅನೇಕ ಕಡೆಗಳಲ್ಲಿ ಜನರನ್ನು ಗುಂಪು ಸೇರುವುದನ್ನು ತಡೆಯುವುದೇ ಪೊಲೀಸರಿಗೆ ತಲೆನೋವಾಗಿದೆ. ನಗರದ ಗ್ರೇನ್ ಮಾರ್ಕೆಟ್ ಹಾಗೂ ಲಕ್ಷ್ಮೇಶ್ವರ ಪಟ್ಟಣದ ಮಾರ್ಕೆಟ್‍ನಲ್ಲಿ ಜನಸ್ತೋಮ ನಿರ್ಮಾಣವಾಗಿದೆ. ಜಿಲ್ಲೆನಲ್ಲಿ ಲಾಕ್‍ಡೌನ್ ನಿಯಮ ಸಂಪೂರ್ಣ ಉಲ್ಲಂಘನೆ ಮಾಡಲಾಗಿದೆ. ಕೊರೊನಾ ಮಧ್ಯೆಯೂ ಅಕ್ಷತ್ತದಗಿ ಅಮವಾಸ್ಯೆ ಮಾಡಲು ಜನರು ಹೂವು, ಹಣ್ಣು, ದಿನಸಿ, ಬಟ್ಟೆ …

Read More »

ಗದಗ​ದಲ್ಲಿ ಕೊರೋನಾ ಪ್ರಕರಣ ಇದ್ದರೂ ಟೆಸ್ಟಿಂಗ್ ಕಿಟ್ ಲಭ್ಯವಿಲ್ಲ: ಹೆಚ್.ಕೆ. ಪಾಟೀಲ್​​ ಆಕ್ರೋಶ

ಗದಗ(ಏ. 17): ಗದಗ ಜಿಲ್ಲೆಯಲ್ಲಿ ಈಗಾಗಲೇ ಎರಡು ಕೊರೋನಾ ಪಾಸಿಟಿವ್ ಪ್ರಕರಣ ಬಂದೀವೆ. ಸರ್ಕಾರ ಗದಗ ಜಿಲ್ಲೆಗೆ ಈವರೆಗೂ ಟೆಸ್ಟಿಂಗ್ ಕಿಟ್ ಕೊಡದೇ‌ ಇರುವುದು ದುರ್ದೈವ ಎಂದು ಶಾಸಕ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಜಿಲ್ಲೆಗೊಂದು ಟೆಸ್ಟಿಂಗ್ ಲ್ಯಾಬೊರೇಟರಿ ಆಗಲಿ ಅಂತ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿದ್ದೆ. ಕಳೆದ ಮಾರ್ಚ್ 23 ರಂದೇ ಹೇಳಿದ್ದೆ. ಈ ವಿಚಾರವಾಗಿ ಮುಖ್ಯಮಂತ್ರಿಗಳ ಗಮನಕ್ಕೆ ಹಲವಾರು ಬಾರಿ ತಂದಿದ್ದೆ. ಇವತ್ತಿಗೆ ಕೆಎಂಸಿಯಲ್ಲಿ‌ ಲ್ಯಾಬೊರೇಟರಿ ಬಿಟ್ರೆ ಎಲ್ಲಿಯೂ …

Read More »

ಗದಗ:ಅನಾಮಧೇಯ ವ್ಯಕ್ತಿಗಳಿಂದ ಫುಡ್ ಕಿಟ್ ವಿತರಣೆ……..

ಗದಗ: ಕೊರೊನಾ ಲಾಕ್‍ಡೌನ್ ವೇಳೆ ಅನ್ಯಕೋಮಿನ ಅನಾಮಧೇಯ ವ್ಯಕ್ತಿಗಳು ದಿನಸಿ ಕಿಟ್ ವಿತರಿಸಿದ್ದು, ಗ್ರಾಮಸ್ಥರು ಆತಂಕಕ್ಕೊಳಗಾಗಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ಹೊಳೆ ಆಲೂರ ಗ್ರಾಮದಲ್ಲಿ ನಡೆದಿದೆ. ಗುರುವಾರ ರಾತ್ರಿ 3 ಜನರ ಯುವಕರು, ಗ್ರಾಮದ ಹತ್ತಾರು ಮನೆಗಳಿಗೆ ಅಕ್ಕಿ, ಗೋಧಿ, ಬೆಳೆ, ಸಕ್ಕರೆ, ಎಣ್ಣೆ ಪ್ಯಾಕೆಟ್ ಹೀಗೆ ಅನೇಕ ವಸ್ತುವಿನ ದಿನಸಿ ಕಿಟ್ ವಿತರಿಸಿದ್ದಾರೆ. ನಮಗೆ ಬೇಡ ಅಂದರೂ ಕೊಟ್ಟು ಹೋಗಿದ್ದಾರೆ ಎಂದು ಸ್ಥಳೀಯ ಅಜ್ಜಿಯರಿಬ್ಬರು ಹೇಳುತ್ತಿದ್ದಾರೆ. ಇವರು …

Read More »

ಕೊರೊನಾ ಮಹಾಮಾರಿಗೆ ರಾಜ್ಯದಲ್ಲಿ 6ನೇ ಬಲಿ- ಗದಗನಲ್ಲಿ ಮೊದಲ ಸಾವು

ಗದಗ: ರಾಜ್ಯದಲ್ಲಿ ಕೊರೊನಾ ತನ್ನ ಕಬಂದಬಾಹುವನ್ನು ಚಾಚುತ್ತಿದ್ದು, ಗದಗನಲ್ಲಿ 6ನೇ ಬಲಿ ಪಡೆದುಕೊಂಡಿದೆ. ಏಪ್ರಿಲ್ 4ರಂದು ಗದಗನ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ 80 ವರ್ಷದ ವೃದ್ಧೆ ಸಾವನ್ನಪ್ಪಿದ್ದಾರೆ. ವೃದ್ಧೆಗೆ ಏಪ್ರಿಲ್ 7ರಂದು ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇದೀಗ ಗದಗ ನಗರದ ನಿವಾಸಿಯಾಗಿದ್ದ ರೋಗಿ ನಂಬರ್ 166 ಸಾವನ್ನಪ್ಪಿದ್ದಾರೆ. ಈ ಕುರಿತು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಈವರೆಗೆ 181 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇಂದು ಸಾವನ್ನಪ್ಪಿದ ವೃದ್ಧೆ …

Read More »

ದುಬಾರಿ ಮದ್ಯ ಬಿಟ್ಟು ಕಡಿಮೆ ಬೆಲೆ ಬಿಯರ್, ಬ್ರ್ಯಾಂಡಿ ಕದ್ದೊಯ್ದ ಕಳ್ಳರು

ಗದಗ: ಕೊರೊನಾ ವೈರಸ್ ಅಟ್ಟಹಾಸಕ್ಕೆ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಇದರಿಂದ ಮದ್ಯ ಮಾರಾಟ ಸಂಪೂರ್ಣ ಬಂದ್ ಮಾಡಲಾಗಿದೆ. ಈ ಸಂದರ್ಭವನ್ನೇ ದುರುಪಯೋಗ ಮಾಡಿಕೊಂಡು ಕೆಲವರು ಮದ್ಯ ಕಳ್ಳತನಕ್ಕೆ ಮುಂದಾಗಿದ್ದಾರೆ. ಗದಗ ತಾಲೂಕಿನ ಕಳಸಾಪೂರ ಗ್ರಾಮದ ಹೊರವಲಯದ ನಾಗಾವಿ ರಸ್ತೆಯಲ್ಲಿರುವ ಎಂಎಸ್‍ಐಎಲ್ ಮದ್ಯದಂಗಡಿಯ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ವಿಚಿತ್ರ ಎಂದರೆ ಖದೀಮರು ತಮಗೆ ಇಷ್ಟವಾಗಿರುವ ಬಿಯರ್, ಬ್ರ್ಯಾಂಡಿ ಸೇರಿದಂತೆ ಇತರೆ ಕಡಿಮೆ ಬೆಲೆಯ ಮದ್ಯವನ್ನು ಮಾತ್ರ ಕಳ್ಳತನ ಮಾಡಿದ್ದಾರೆ. …

Read More »

ಮನೆ ಬಾಗಿಲಿಗೆ ತರಕಾರಿ, ಹೂ, ಹಣ್ಣು ಬರುತ್ ಮಾರ್ಕೆಟ್‍ಗೆ ಯಾರೂ ಬರಬೇಡಿತ:ಗದಗ ಎಸ್.ಪಿ ಯತೀಶ್

ಗದಗ: ಲಾಕ್‍ಡೌನ್ ಮುಗಿಯುವರೆಗೆ ತರಕಾರಿ ಮಾರ್ಕೆಟ್ ಬಂದ್ ಮಾಡಲಾಗಿದ್ದು, ವ್ಯಾಪಾರಸ್ಥರು ತಳ್ಳುವ ಗಾಡಿ ಮೂಲಕ ನಗರದ ವಾರ್ಡ್‍ಗಳಿಗೆ ಸಂಚರಿಸಿ ಮಾರಾಟ ಮಾಡಬೇಕು ಎಂದು ಎಸ್.ಪಿ ಯತೀಶ್ ತಿಳಿಸಿದರು. ನಗರಸಭೆ ಆವರಣದಲ್ಲಿ ತರಕಾರಿ ಹಾಗೂ ಬೀದಿಬದಿ ವ್ಯಾಪಾರಸ್ಥರೊಂದಿಗೆ ಸಭೆ ನಡೆಸಿದರು. ಈ ಸಭೆನಲ್ಲಿ ಅಧಿಕಾರಿಗಳು ಹಾಗೂ ವ್ಯಾಪಾರಸ್ಥರು ಅಂತರ ಕಾಯ್ದುಕೊಂಡಿದ್ದರು. ಪ್ರತಿ ವಾರ್ಡ್‍ಗೆ ಎಂಟು ಜನ ತರಕಾರಿ ಮಾರಾಟಗಾರರನ್ನು ನೇಮಕ ಮಾಡಲಾಗುತ್ತದೆ. ಯಾರ್ಯಾರು ಯಾವ ಯಾವ ಏರಿಯಾ ಎಂಬುದನ್ನು ತರಕಾರಿ ಹಾಗೂ …

Read More »

ಗ್ರಾಮಕ್ಕೆ ಯಾರೂ ಬರುವಂತಿಲ್ಲ, ಹೋಗುವಂತಿಲ್ಲ :ಊರಿಗೆ ದಿಗ್ಭಂಧನ

ಗದಗ: ಕೊರೊನಾ ವೈರಸ್ ಹರಡುವುದನ್ನ ತಡೆಗಟ್ಟಲು ಜಿಲ್ಲೆಯ ಕೊಟುಮಚಗಿ ಹಾಗೂ ರೋಣ ತಾಲೂಕಿನ ಗುನಗುಂಡಿ ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ದಿಗ್ಭಂಧನ ಹಾಕಿಕೊಂಡಿದ್ದಾರೆ. ಇಡೀ ದೇಶವೇ ಲಾಕ್‍ಡೌನ್ ಮಾಡಬೇಕೆಂಬ ಪ್ರಧಾನಿ ಮೋದಿ ಅವರ ಮನವಿಗೆ ಗದಗ ಜಿಲ್ಲೆ ಕೊಟುಮಚಗಿ ಗ್ರಾಮದ ಜನರು ಸಖತ್ ರೆಸ್ಪಾನ್ಸ್ ಮಾಡಿದ್ದಾರೆ. ಇಂದಿನಿಂದ ಏಪ್ರಿಲ್ 14 ರವರೆಗೆ ಕೊಟುಮಚಗಿ ಗ್ರಾಮಕ್ಕೆ ಬೇರೆ ಗ್ರಾಮಗಳ ಜನರು ಬರುವಂತಿಲ್ಲ. ಈ ಗ್ರಾಮದ ಜನರು ಸಹ ಬೇರೆ ಕಡೆ ಹೋಗುವಂತಿಲ್ಲ ಎಂದು …

Read More »

ಕಲಬುರಗಿಯಿಂದ ಅಣ್ಣಿಗೇರಿಗೆ ಬಂದ 21 ವರ್ಷದ ಯುವಕನಿಗೆ ಕೊರೊನಾ ವೈರಸ್ ಇರುವ ಶಂಕೆ

ಗದಗ: ಕಲಬುರಗಿಯಿಂದ ಅಣ್ಣಿಗೇರಿಗೆ ಬಂದ 21 ವರ್ಷದ ಯುವಕನಿಗೆ ಕೊರೊನಾ ವೈರಸ್ ಇರುವ ಶಂಕೆ ವ್ಯಕ್ತವಾಗುತ್ತಿದೆ. ಸದ್ಯ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯದೊಂದಿಗೆ ಯುವಕನ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ. ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ಕೆಲಸ ಮಾಡ್ತಿದ್ದ ಯುವಕನಿಗೆ ಕೆಮ್ಮು, ಶೀತ, ಜ್ವರ ಗಂಟಲು ಸಮಸ್ಯೆ ಕಾಣಿಸಿಕೊಂಡಿದೆ. ಹೀಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಮುಂದಾದ ವೇಳೆ ಖಾಸಗಿ ಆಸ್ಪತ್ರೆ ವೈದ್ಯರು ಗದಗ ಜಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.ಯುವಕ ಗದಗ …

Read More »

ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾದ ಹಿನ್ನೆಲೆ ಪರೀಕ್ಷಾರ್ಥಿಗಳಿಗೆ ಗದಗನಲ್ಲಿ ಮಾಸ್ಕ್ ಗಳನ್ನ ವಿತರಣೆ ಮಾಡಲಾಗುತ್ತಿದೆ.

ಗದಗ: ಡೆಡ್ಲಿ ಕೊರೊನಾ ವೈರಸ್ ಎಲ್ಲಡೆ ರಣಕೇಕೆ ಹಾಕುತ್ತಿರುವ ಸಂದರ್ಭದಲ್ಲಿ ಜನ ಭಯಭೀತರಾಗಿದ್ದಾರೆ. ಅದರಲ್ಲೂ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾದ ಹಿನ್ನೆಲೆ ಪರೀಕ್ಷಾರ್ಥಿಗಳಿಗೆ ಗದಗನಲ್ಲಿ ಮಾಸ್ಕ್ ಗಳನ್ನ ವಿತರಣೆ ಮಾಡಲಾಗುತ್ತಿದೆ. ಕೆಲವು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಒಟ್ಟಾಗಿ ಪರೀಕ್ಷೆ ನಡೆಯುವ ಕಾಲೇಜ್‍ಗಳಿಗೆ ತೆರಳಿ ಮಾಸ್ಕ್ ಹಂಚಿದರು. ಪರೀಕ್ಷಾರ್ಥಿ ವಿದ್ಯಾರ್ಥಿಗಳು ಮಾಸ್ಕ್ ಧರಿಸಿಕೊಂಡು ಪರೀಕ್ಷಾ ಕೊಠಡಿಗಳಿಗೆ ಹೋದರು. ನಗರದ ಸರ್ಕಾರಿ ಹಾಗೂ ಖಾಸಗಿ ಕಾಲೇಜಿನಲ್ಲಿ ನಡೆಯುತ್ತಿರುವ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಹಂಚಿಕೆ …

Read More »

ಗದಗದಲ್ಲಿ ಮೂರುವರೆ ವರ್ಷದ ಕಂದಮ್ಮನಿಗೆ ಕೊರೊನಾ ಸೋಂಕಿರುವ ಶಂಕೆ…….,

ಗದಗ: ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ತಗುಲಿರುವ ಶಂಕಿತ ಪ್ರಕರಣ ವರಿದಿಯಾಗಿದ್ದು, ಲಂಡನ್‍ನಿಂದ ಗದಗಕ್ಕೆ ಬಂದ ಮೂರುವರೆ ವರ್ಷದ ಮಗುವಿಗೆ ಸೋಂಕು ತಟ್ಟಿರುವ ಶಂಕೆ ವ್ಯಕ್ತವಾಗಿದೆ. ಲಂಡನ್‍ನಿಂದ ಜಿಲ್ಲೆಗೆ ಬಂದಿದ್ದ ಕುಟುಂಬಕ್ಕೆ ಕೊರೊನಾ ಸೋಂಕಿರುವ ಶಂಕೆ ವ್ಯಕ್ತವಾಗಿದೆ. ಸೋಂಕು ಶಂಕಿತ ವ್ಯಕ್ತಿಗಳನ್ನ ಗದಗ ಜಿಮ್ಸ್ ಆಸ್ಪತ್ರೆಯ ಐಸೊಲೇಷನ್ ವಾರ್ಡಿಗೆ ದಾಖಲಿಸಿ, ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಗದಗ ಮೂಲದ ಕುಟುಂಬ ಲಂಡನ್‍ನಲ್ಲಿ ನೆಲೆಸಿತ್ತು. ಆದರೆ ತಂದೆ, ತಾಯಿ ಮಗುವಿನೊಂದಿಗೆ ಮಾರ್ಚ್ 9ರಂದು …

Read More »