ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣ ಮಾಡುವಂತೆ ಒತ್ತಾಯಿಸಿ ಮುಖಂಡ ವಿಜಯ ಕುಮಾರ್ ಜಟ್ಟಪ್ಪ ನೇತೃತ್ವದಲ್ಲಿ ನಗರಸಭೆ ಕಚೇರಿಯಲ್ಲಿ ಪೌರಾಯುಕ್ತ ಪರಶುರಾಮ ಛಲವಾದಿ ಅವರಿಗೆ ಮನವಿ ಸಲ್ಲಿಸಲಾಯಿತು. 2020-21ರಿಂದಲೂ ಚಾಮರಾಜನಗರದಲ್ಲಿ ಸುಸಜ್ಜಿತ ವಿದ್ಯುತ್ ಚಾಲಿತ ಚಿತಾಗಾರ ನಿರ್ಮಾಣಕ್ಕೆ ಹೋರಾಟ ಮಾಡಲು ಒತ್ತಾಯ ಮಾಡಿಕೊಂಡು ಬಂದಿದ್ದೇವೆ. ಜಿಲ್ಲೆಯ ಶಾಸಕರು, ಸಂಸದರು, ಉಸ್ತುವಾರಿ ಸಚಿವರು, ಮುಖ್ಯಮಂತ್ರಿ, ಜಿಲ್ಲಾಧಿಕಾರಿ ಸಹಿತ ಎಲ್ಲರಿಗೂ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. 2024-25ನೇ ಸಾಲಿನ ಬಜೆಟ್‌ನಲ್ಲಿ ಅಂದಿನ ಆಡಳಿತಾಧಿಕಾರಿಗಳು …
Read More »ಮಲೆ ಮಹದೇಶ್ವರ ಬೆಟ್ಟದ ತಿರುವಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದೆ. ತಾಳುಬೆಟ್ಟದಿಂದ ಮಹದೇಶ್ವರ ಬೆಟ್ಟ ಮಾರ್ಗದ 5ನೇ ತಿರುವಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ದ್ವಿಚಕ್ರ ವಾಹನ ಸವಾರರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಚಿರತೆಯ ಚಿತ್ರ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ರಾತ್ರಿ ವೇಳೆ ಯಾರೂ ಕೂಡ ದ್ವಿಚಕ್ರ ವಾಹನದಲ್ಲಿ ತೆರಳದಂತೆ ಮನವಿ ಮಾಡಿದ್ದಾರೆ. ಈಗಾಗಲೇ ಚಿರತೆ ಸೆರೆಗೆ ಬೋನುಗಳನ್ನು ಕೂಡ ಅರಣ್ಯ ಇಲಾಖೆ …
Read More »ಮಹಾ ಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪಾದಯಾತ್ರೆ – ಅರಣ್ಯ, ಪೊಲೀಸ್ ಇಲಾಖೆ ಕಣ್ಗಾವಲು
ಚಾಮರಾಜನಗರ: ಮಹಾ ಶಿವರಾತ್ರಿ ಹಿನ್ನೆಲೆ ಏಳು ಮಲೆಯ ಒಡೆಯ ಮಲೆ ಮಾದಪ್ಪನ ದರ್ಶನಕ್ಕೆ ಕಾಲ್ನಡಿಗೆಯಲ್ಲಿ ಲಕ್ಷಾಂತರ ಭಕ್ತರ ದಂಡೇ ಹರಿದು ಬರಲಿದೆ. ಭಕ್ತರ ಸುರಕ್ಷತೆಗೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆ ಸಜ್ಜಾಗಿದೆ. ಕಾರಣ ಮಲೆಹದೇಶ್ವರ ಬೆಟ್ಟದ ಸುತ್ತಮುತ್ತ ಚಿರತೆ ಆತಂಕ ಮನೆ ಮಾಡಿದೆ. ಚಿರತೆ ಆತಂಕ ಮಧ್ಯೆ ಮಲೆಮಹದೇಶ್ವರ ಬೆಟ್ಟಕ್ಕೆ ಭಕ್ತರು ಪಾದಯಾತ್ರೆ ಕೈಗೊಂಡಿದ್ದಾರೆ. ಇಂದಿನಿಂದ 20ರವರೆಗೆ ನಡೆಯಲಿರುವ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ …
Read More »ಕೊಳ್ಳೇಗಾಲದಲ್ಲಿ ವರನಿಗೆ ಚಾಕು ಇರಿತ – ಹತ್ಯೆಗೆ ಸುಪಾರಿ ಕೊಟ್ಟಿದ್ದೇ ವಧು!
ಚಾಮರಾಜನಗರ: ಕೊಳ್ಳೇಗಾಲದಲ್ಲಿ ಕಲ್ಯಾಣ ಮಂಟಪಕ್ಕೆ ಬರುತ್ತಿದ್ದ ವರನಿಗೆ ಚಾಕು ಇರಿತ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ವರನಿಗೆ ಚಾಕು ಇರಿತದ ಹಿಂದೆ ಇದ್ದ ಸೂತ್ರದಾರಿಯೇ ವಧು ಎನ್ನುವುದು ತನಿಖೆಯಲ್ಲಿ ಬಯಲಾಗಿದೆ. ಡಿ.30ರಂದು ಕುಣಗಳ್ಳಿ ಗ್ರಾಮದ ರವೀಶ್ ಮತ್ತು ನಯನ ಮದುವೆ ನಡೆಯಬೇಕಿತ್ತು. ರವೀಶ್ ಹೊಸ ಜೀವನಕ್ಕೆ ಕಾಲಿಡುವ ಸಂತೋಷದಲ್ಲಿದ್ದರು. ಹಿಂದಿನ ದಿನ ರಿಸೆಪ್ಶನ್‌ಗೆ ರವೀಶ್ ಸೇರಿದಂತೆ ಸಂಬಂಧಿಕರು ಕಲ್ಯಾಣ ಮಂಟಪದತ್ತ ಹೊರಟಿದ್ದರು. ಕೊಳ್ಳೇಗಾಲದ ವೆಂಕಟೇಶ್ವರ ಮಂಟಪಕ್ಕೆ ಕಾರಿನಲ್ಲಿ ಬರುತ್ತಿದ್ದಾಗ …
Read More »5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.
ಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶ ಹೊರಡಿಸಿದ್ದಾರೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಉಲ್ಲೇಖಿಸಿದ ಟಿಪ್ಪಣಿ ಮೇರೆಗೆ ಮಲೆಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಚಕ್ರಪಾಣಿ, ಎಸಿಎಫ್ ಗಜಾನನ ಹೆಗಡೆ ಹಾಗೂ ಹೂಗ್ಯಂ ವಲಯ ಅರಣ್ಯಾಧಿಕಾರಿ ಮಾದೇಶ್ ಅವರಿಗೆ ಮುಂದಿನ ಆದೇಶದ ತನಕ ಕಡ್ಡಾಯ ರಜೆ ಮೇಲೆ ತೆರಳಲು ಆದೇಶಿಸಲಾಗಿದೆ. ಐದು ಹುಲಿಗಳು ರಸ್ತೆಯಿಂದ ಕೇವಲ …
Read More »5 ಹುಲಿಗಳ ಸಾವು ಪ್ರಕರಣ: ಹಸು ಮಾಲೀಕ ಸೇರಿ ವಿಷ ಹಾಕಿದ್ದ ಮೂವರ ಬಂಧನ
ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿತರನ್ನು ಅರಣ್ಯ ಇಲಾಖೆ ಶನಿವಾರ ಬಂಧಿಸಿ, ಹೆಚ್ಚಿನ ವಿಚಾರಣೆ ಕೈಗೊಂಡಿದೆ. ಹನೂರು ತಾಲೂಕಿನ ಕೊಪ್ಪ ಗ್ರಾಮದ ಹಸುವಿನ ಮಾಲೀಕ ಕೋನಪ್ಪ ಹಾಗೂ ಹಸುವಿನ ಮೃತದೇಹಕ್ಕೆ ವಿಷಪ್ರಾಶನ ಮಾಡಿದ ಆರೋಪದ ಮೇಲೆ ಮಾದುರಾಜ್ ಹಾಗೂ ನಾಗರಾಜು ಪೂಜಾರಿಗೌಡ ಎಂಬ ದನಗಾಹಿಗಳನ್ನು ಅಧಿಕಾರಿಗಳು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ. ಮೀಣ್ಯಂ ಸಮೀಪವೇ ಕೊಪ್ಪ ಗ್ರಾಮವಿದ್ದು ಜಾನುವಾರುಗಳಿಗೆ …
Read More »ಶಕ್ತಿ ಯೋಜನೆ ಎಫೆಕ್ಟ್… ಖಾಸಗಿ ಬಸ್ಗಳ ‘ಖಾಲಿ’ ಓಡಾಟ.
ಚಾಮರಾಜನಗರ: ರಾಜ್ಯ ಸರ್ಕಾರದ ಶಕ್ತಿ ಯೋಜನೆಯು ಮಹಿಳೆಯರಲ್ಲಿ ಸಂತಸ ಮೂಡಿಸಿದ್ದರೇ, ಖಾಸಗಿ ಬಸ್ ಮಾಲೀಕರಿಗೆ ಸಂಕಷ್ಟ ತಂದಿಟ್ಟಿದೆ. ಚಾಮರಾಜನಗರ ಜಿಲ್ಲಾ ಕೇಂದ್ರದಿಂದ ಸುಮಾರು 70ರಿಂದ 80 ಖಾಸಗಿ ಬಸ್ಗಳು ದಿನನಿತ್ಯ ಸಂಚರಿಸುತ್ತಿವೆ. ಉಚಿತ ಪ್ರಯಾಣದಿಂದ ಮಹಿಳೆಯರು ಸರ್ಕಾರಿ ಬಸ್ಗಳ ಕಡೆ ಮುಖ ಮಾಡಿದ್ದಾರೆ. ಖಾಸಗಿ ಬಸ್ಗಳಲ್ಲಿ ಪ್ರಯಾಣಿಕರು ಬಾರದಿದ್ದರಿಂದ ಖಾಸಗಿ ಬಸ್ ನಿಲ್ದಾಣ ಬಿಕೋ ಎನ್ನುತ್ತಿದ್ದ ದೃಶ್ಯಗಳು ಕಂಡುಬಂದವು. ಟಂಟಂ, ಖಾಸಗಿ ಬಸ್ಗಳನ್ನು ಆಶ್ರಯಿಸಿದ್ದ ಪ್ರಯಾಣಿಕರು ಈಗ ಕೆಎಸ್ಆರ್ಟಿಸಿ ಬಸ್ಗಳತ್ತ …
Read More »ಸೆಪ್ಟೆಂಬರ್ 1 ರಿಂದ ಲಸಿಕೆ ಪಡೆಯದಿದ್ದರೆ ಪಡಿತರ, ಪಿಂಚಣಿ ತಡೆ ಹಿಡಿಯುವ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.
ಚಾಮರಾಜನಗರ : ಜಿಲ್ಲೆಯಲ್ಲಿ ಕೊರೊನಾ ಲಸಿಕೆ ವೇಗ ಹೆಚ್ಚಿಸಲು ಚಾಮರಾಜನಗರ ಜಿಲ್ಲಾಡಳಿತ ವಿಭಿನ್ನ ಅಭಿಯಾನ ಆರಂಭಿಸಿದ್ದು, ವ್ಯಾಕ್ಸಿನೇಷನ್ ಪ್ರಮಾಣಪತ್ರ ತಂದ್ರೆ ಮಾತ್ರ ಪಡಿತರ ವಿತರಣೆ ಮಾಡುವಂತೆ ನ್ಯಾಯಬೆಲೆ ಅಂಗಡಿಗಳಿಗೆ ಜಿಲ್ಲಾಧಿಕಾರಿ ಎಂ.ಆರ್. ರವಿ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಡಾ ಎಂಆರ್ ರವಿ ಹೊಸ ಮಾರ್ಗವೊಂದನ್ನು ಕಂಡುಕೊಂಡಿದ್ದು, ಸೆಪ್ಟೆಂಬರ್ 1 ರಿಂದ ಲಸಿಕೆ ಪಡೆಯದಿದ್ದರೆ ಪಡಿತರ, ಪಿಂಚಣಿ ತಡೆ ಹಿಡಿಯುವ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಜನರ ಆರೋಗ್ಯದ ಹಿತದೃಷ್ಟಿಯಿಂದ …
Read More »ಟೊಮ್ಯಾಟೋ ಟ್ರೇನಲ್ಲಿ ತಮಿಳುನಾಡಿಗೆ ಅಕ್ರಮ ಮದ್ಯ ಸಾಗಾಟ- ಕೇರಳದ ಆರೋಪಿ ಅರೆಸ್ಟ್
ಚಾಮರಾಜನಗರ: ಟೊಮ್ಯಾಟೋ ಟ್ರೇಯಲ್ಲಿ ಅಕ್ರಮ ಮದ್ಯ ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಜಿಲ್ಲೆಯ ಗುಂಡ್ಲುಪೇಟೆ ನಗರದಲ್ಲಿ ಆರೋಪಿ ಸಿಕ್ಕಿಬಿದ್ದಿದ್ದು, ಕೇರಳ ಮೂಲದ ಗಫೂರ್(37) ಬಂಧಿತ ಆರೋಪಿ. ತಮಿಳುನಾಡಿನಲ್ಲಿ ಕಠಿಣ ಲಾಕ್‍ಡೌನ್ ಜಾರಿಯಲ್ಲಿದ್ದು, ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಅಕ್ರಮವಾಗಿ ತಮಿಳುನಾಡಿಗೆ ಮದ್ಯ ಸಾಗಣೆ ಮಾಡುತ್ತಿದ್ದ. ಅಲ್ಲದೆ ಯಾರಿಗೂ ತಿಳಿಯದಂತೆ ಟೊಮ್ಯಾಟೋ ಟ್ರೇಗಳ ಜೊತೆ ಮದ್ಯದ ಬಾಟಲಿ ಇಟ್ಟು ಸಾಗಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ …
Read More »ಗುಂಡಿನ ಕಾಳಗದಲ್ಲಿ ಕಾಡುಗಳ್ಳ ವೀರಪ್ಪನ ಬೆವರಿಳಿಸಿದ ಪಿಎಸ್‌ಐ ಸಿದ್ದರಾಜನಾಯಕ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಚಾಮರಾಜನಗರ: ಗುಂಡಿನ ಕಾಳಗದಲ್ಲಿ ಕಾಡುಗಳ್ಳ ವೀರಪ್ಪನ ಬೆವರಿಳಿಸಿದ ಪಿಎಸ್‌ಐ ಸಿದ್ದರಾಜನಾಯಕ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಅಪರಾಧ ವಿಭಾಗದಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿದ್ದರಾಜನಾಯಕ್ ಮಂಗಳವಾರ ವಿಧಿವಶರಾಗಿದ್ದಾರೆ. ಕಾಡುಗಳ್ಳ ವೀರಪ್ಪನ ಜತೆ ಮೀಣ್ಯಂನಲ್ಲಿ ನಡೆದಿದ್ದ ಗುಂಡಿನ ಕಾಳಗದಲ್ಲಿ ಸಿದ್ದರಾಜ ನಾಯಕ್ ಅವರು ಬದುಕುಳಿದಿದ್ದರು. 1992ರಲ್ಲಿ ಎಸ್ಪಿ ಹರಿಕೃಷ್ಣ ಹಾಗೂ ಎಸ್‌ಐ ಶಕೀಲ್ ಅಹಮದ್ ಜೊತೆ ಕಾರ್ಯಾಚರಣೆಯಲ್ಲಿ ಇವರು ಭಾಗಿಯಾಗಿದ್ದರು.
Read More »
Laxmi News 24×7