ಚಾಮರಾಜನಗರ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಆದರೆ ಇದೀಗ ಜಿಲ್ಲೆಯಲ್ಲಿ ಸಚಿವ ಮತ್ತು ಶಾಸಕರು ಲಾಕ್‍ಡೌನ್ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಚಾಮರಾಜನಗರ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಮತ್ತು ಗುಂಡ್ಲುಪೇಟೆ ಶಾಸಕ ನಿರಂಜನ್ ಕುಮಾರ್ ಇಬ್ಬರು ಲಾಕ್‍ಡೌನ್ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಜಿಲ್ಲಾ ರೈತ ಸಂಘದಿಂದ ಎಸ್‍ಪಿಗೆ ಇವರ ವಿರುದ್ಧ ದೂರು ನೀಡಿದ್ದಾರೆ. ದೂರಿನಲ್ಲಿ ಏನಿದೆ? ನೂರಾರು ಬೆಂಬಲಿಗರೊಂದಿಗೆ …
Read More »ಲಾಕ್‍ಡೌನ್ ಎಫೆಕ್ಟ್: ಮಗುವಿಗೆ ಚಿಕಿತ್ಸೆ ಕೊಡಿಸಲಾಗದೆ ಪೋಷಕರ ಪರದಾಟ
ಚಾಮರಾಜನಗರ: ಲಾಕ್‍ಡೌನ್ ಪರಿಣಾಮ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗದೆ ಹೆತ್ತವರು ಸಂಕಟ ಪಡುತ್ತಿರುವ ಘಟನೆ ಚಾಮರಾಜನಗರದ ಕೊಳ್ಳೇಗಾಲದಲ್ಲಿ ನಡೆದಿದೆ. ಕೂಲಿಗಾಗಿ ಬಂದ ಧಾರವಾಡ ಮೂಲದ 14 ವಲಸೆ ಕಾರ್ಮಿಕರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಅವರ ಕಷ್ಟ ಹೇಳತೀರದಾಗಿದೆ. ಈ ಪೈಕಿ ಗುರುನಾಥ್ ಮತ್ತು ತುಳಸಮ್ಮನ ಅವರ ಚಿಕ್ಕ ಮಗುವಿನ ಆರೋಗ್ಯ ಹದಗೆಟ್ಟಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ ಹೆತ್ತವರು ಒದ್ದಾಡುತ್ತಿದ್ದಾರೆ. ಗುರುನಾಥ್ ದಂಪತಿ ಧಾರವಾಡ ಜಿಲ್ಲೆ ಕುಂಬಾರಕೊಪ್ಪ ಗ್ರಾಮದವರಾಗಿದ್ದು, ಕೊಳ್ಳೇಗಾಲದ ಚೆಸ್ಕಾಂ ಕಟ್ಟಡ ನಿರ್ಮಾಣಕ್ಕೆ ಬಂದಿದ್ದಾರೆ. …
Read More »ಚಾಮರಾಜನಗರ:400 ಬುಡಕಟ್ಟು ಕುಟುಂಬಗಳಿಗೆ ಪಡಿತರ ಕೊಡದೆ ವಂಚನೆ – ಡಿಸಿಯಿಂದ ನ್ಯಾಯಬೆಲೆ ಅಂಗಡಿ ಲೈಸೆನ್ಸ್ ರದ್ದು
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಹಿರಿಯಂಬಲ ಹಾಗೂ ಕತ್ತೆಕಾಲು ಪೋಡಿನ 400 ಬುಡಕಟ್ಟು ಸೋಲಿಗರ ಕುಟುಂಬಗಳಿಗೆ ಪಡಿತರ ಧಾನ್ಯ ವಿತರಣೆ ಮಾಡದೆ ಅನ್ಯಾಯ ಮಾಡಲಾಗುತ್ತಿದೆ ಎಂದು ವರದಿ ಮಾಡಲಾಗಿತ್ತು. ಈ ವರದಿಯಿಂದ ಎಚ್ಚೆತ್ತ ಜಿಲ್ಲಾಡಳಿತ ಕೊನೆಗೂ ವಿತರಣೆಯಲ್ಲಿ ವಂಚನೆ ಮಾಡಿದ್ದ ನ್ಯಾಯಬೆಲೆ ಅಂಗಡಿಯ ಲೈಸೆನ್ಸ್ ಅನ್ನು ಅಮಾನತು ಮಾಡಿ ಆದೇಶಿಸಿದೆ. ಪಬ್ಲಿಕ್ ಟಿವಿ ವರದಿಯಿಂದ ಎಚ್ಚೆತ್ತ ಜಿಲ್ಲಾಡಳಿತ ಸ್ಥಳಕ್ಕೆ ಅಧಿಕಾರಿಗಳನ್ನು ಕಳುಹಿಸಿ ವರದಿ ತರಿಸಿಕೊಂಡು ಹಿರಿಯಂಬಲ ಬ್ರಹ್ಮೇಶ್ವರ ನ್ಯಾಯಬೆಲೆ ಅಂಗಡಿಯ …
Read More »ಕೊರೊನಾ ಭೀತಿ ನಡುವೆ ರಕ್ತದಾನ- ದಾನಿಗಳಿಗೆ ಆರೋಗ್ಯ ಸಚಿವರಿಂದ ಮೆಚ್ಚುಗೆ
ಚಾಮರಾಜನಗರ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ರಕ್ತದ ಕೊರತೆ ಎದುರಾಗಿದೆ. ಲಾಕ್‍ಡೌನ್ ಹಾಗೂ ಕೊರೊನಾ ಬರುತ್ತೆ ಎಂಬ ತಪ್ಪು ಕಲ್ಪನೆಯಿಂದ ರಕ್ತದಾನಿಗಳು ರಕ್ತದಾನಕ್ಕೆ ಮುಂದೆ ಬಾರದೆ ರಕ್ತನಿಧಿ ಕೇಂದ್ರದಲ್ಲಿ ರಕ್ತ ಸಂಗ್ರಹ ಕಡಿಮೆಯಾಗಿದೆ. ಇದರಿಂದ ಸಿಜೇರಿಯನ್ ನಂತಹ ಪ್ರಕರಣಗಳಲ್ಲಿ ರಕ್ತ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ರಕ್ತದಾನ ಮಾಡುವ ಮೂಲಕ ಜಿಲ್ಲಾ ಸರ್ಕಾರಿ ನೌಕರರು ಮಾನವೀಯತೆ ಮೆರೆದಿದ್ದಾರೆ. ರಕ್ತನಿಧಿ ಕೇಂದ್ರದಲ್ಲಿ ರಕ್ತದ ಕೊರತೆ ಇರುವುದನ್ನು ಅರಿತ …
Read More »ದೇಶದಲ್ಲಿ ಕೊರೊನಾ ಎಫೆಕ್ಟ್ ನಿಂದಾಗಿ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೂ ಕರಿಛಾಯೆ ಬೀರಿದೆ
ಹನೂರು, ಮಾ.16- ದೇಶದಲ್ಲಿ ಕೊರೊನಾ ಎಫೆಕ್ಟ್ ನಿಂದಾಗಿ ತಾಲ್ಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೂ ಕರಿಛಾಯೆ ಬೀರಿದೆ. ಇದೇ ತಿಂಗಳು 21 ರಿಂದ 25ರ ವರೆಗೆ ಅದ್ಧೂರಿಯಾಗಿ ನಡೆಯಬೇಕಾಗಿದ್ದ ಯುಗಾದಿ ಹಬ್ಬದ ಜಾತಾ ಮಹೋತ್ಸವವನ್ನು ಸಂಪ್ರದಾಯದಂತೆ ಸ್ಥಳೀಯರಿಗೆ ಮಾತ್ರ ಸೀಮಿತಗೊಳಿಸಿದೆ. ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧ ಮೂಲೆಗಳಿಂದ ಬರುತ್ತಿದ್ದ ಮಾದಪ್ಪನ ಭಕ್ತರು ಮ.ಬೆಟ್ಟಕ್ಕೆ ಬಾರದಂತೆ ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ನಿರ್ಬಂಧ ಹೇರಲಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ …
Read More »ಜಿಲ್ಲಾಸ್ಪತ್ರೆ ಆವರಣದಲ್ಲೆ ಹೆರಿಗೆ: ಜಿಲ್ಲಾಸ್ಪತ್ರೆ ಸಿಬ್ಬಂದಿಯಿಂದ ನಿರ್ಲಕ್ಷ್ಯ ಆರೋಪ
ಚಾಮರಾಜನಗರ: ಹೆರಿಗಾಗಿ ಜಿಲ್ಲಾಸ್ಪತ್ರೆಗೆ ಆಗಮಿಸಿದ ಬಿಳಿಗಿರಿ ರಂಗನಬೆಟ್ಟದ ಸೋಲಿಗರ ಪೋಡಿನ ಮಹಿಳೆಯೊಬ್ಬರನ್ನು ಜಿಲ್ಲಾಸ್ಪತ್ರೆ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಹೆರಿಗೆ ವಾರ್ಡ್ ಗೆ ಕರೆದುಕೊಂಡು ಹೋಗದೆ ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ ಎಂದು ಆರೋಪ ಎದುರಾಗಿದೆ. ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದೆದುರೇ ಮಹಿಳೆಯರು ಸೀರೆಯನ್ನು ಮರೆಮಾಡಿ ಹೆರಿಗೆ ಮಾಡಿಸಿದ ಘಟನೆ ಜರುಗಿದೆ. ಹೆರಿಗಾಗಿ ಸೋಲಿಗ ಮಹಿಳೆಯನ್ನು ಅರಣ್ಯ ಇಲಾಖೆಯ ವಾಹನದಲ್ಲಿ ಜಿಲ್ಲಾಸ್ಪತ್ರೆಗೆ ಕರೆತರಲಾಯಿತು. ಕರೆತಂದ ಗರ್ಭಿಣಿಯನ್ನು ಹೆರಿಗೆ ವಾರ್ಡ್ ಗೆ ಕರೆದುಕೊಂಡು ಹೋಗುವ ವ್ಯವಸ್ಥೆಯನ್ನು …
Read More »ನೂತನ 10 ಸಚಿವರೂ ಕೂಡ ಸಿದ್ದರಾಮಯ್ಯ ಬೆಂಬಲಿಗರು. ಹೀಗಾಗಿ ಅವರನ್ನು ಒಳ್ಳೆಯ ಕೆಲಸ ಮಾಡಿ ಎಂದು ಬೆನ್ನು ತಟ್ಟಿ
ಚಾಮರಾಜನಗರ: ಮಾಜಿ ಸಿಎಂ ಸಿದ್ದರಾಮಯ್ಯ ಪ್ರಬುದ್ಧರು. ಅನರ್ಹರು ಜನತಾ ನ್ಯಾಯಾಲಯದಲ್ಲಿ ಗೆದ್ದು ಅರ್ಹರಾಗಿದ್ದಾರೆ. ನೂತನ 10 ಸಚಿವರೂ ಕೂಡ ಸಿದ್ದರಾಮಯ್ಯ ಬೆಂಬಲಿಗರು. ಹೀಗಾಗಿ ಅವರನ್ನು ಒಳ್ಳೆಯ ಕೆಲಸ ಮಾಡಿ ಎಂದು ಬೆನ್ನು ತಟ್ಟಿ ಪ್ರೋತ್ಸಾಹಿಸಬೇಕು ಎಂದು ಬಿಎಸ್‍ಪಿ ಉಚ್ಛಾಟಿತ ಶಾಸಕ ಎನ್ ಮಹೇಶ್ ಸಲಹೆ ನೀಡಿದ್ದಾರೆ. ಚಾಮರಾಜನಗರದ ಯಳಂದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹರು ಯಾವುದೇ ಪಕ್ಷಕ್ಕೆ ಹೋಗಿ ಮಂತ್ರಿಯಾದರೂ ಆವರು ಅನರ್ಹರೇ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಮಹೇಶ್, …
Read More »