Breaking News

ಚಿಕ್ಕ ಬಳ್ಳಾಪುರ

ಆರೋಗ್ಯ ಇಲಾಖೆ ಕಾರ್ಯಕ್ರಮದಲ್ಲಿ ಉರ್ದು ಬಳಕೆ ಮಾಡಿದ್ರೆ ಖಂಡಿಸುತ್ತೇನೆ: ಪ್ರದೀಪ್ ಈಶ್ವರ್

ಬೆಂಗಳೂರು: ಆರೋಗ್ಯ ಇಲಾಖೆ  ಕಾರ್ಯಕ್ರಮದಲ್ಲಿ ಉರ್ದು ಬಳಕೆ ಮಾಡಿರೋ ವಿಚಾರ ಗೊತ್ತಿಲ್ಲ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್  ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಆರೋಗ್ಯ ಇಲಾಖೆ ಕಾರ್ಯಕ್ರಮದಲ್ಲಿ ಉರ್ದು ಭಾಷೆ ಬಳಕೆ ಮಾಡಿರೋ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಗಮನಕ್ಕೆ ಬಂದಿಲ್ಲ. ತಿಳಿದುಕೊಂಡು ಹೇಳುತ್ತೇನೆ ಎಂದರು. ನಮ್ಮಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ. ನಮ್ಮ ಮಣ್ಣಿನ ಭಾಷೆ, ನಮ್ಮ ತಾಯಿ ಭಾಷೆ ಕನ್ನಡನೇ. ಬೇರೆ ಭಾಷೆಗಳು ಹೊಟ್ಟೆ ತುಂಬಿಸಿಕೊಳ್ಳೋಕೆ, …

Read More »

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಕರೆ

ಚಿಕ್ಕಬಳ್ಳಾಪುರ: ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ (MGNREGA) ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್  ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಕರೆ ನೀಡಿದರು. ಇಂದು ಚಿಕ್ಕಬಳ್ಳಾಪುರದಲ್ಲಿನಡೆದ ನರೇಗಾ ಬಚಾವ್ ಆಂದೋಲನದಲ್ಲಿ ಭಾಗವಹಿಸಿ ಮಾತನಾಡಿದರು. ಇಂದು ದೇಶಾದ್ಯಂತ ‘ಮನರೇಗಾವನ್ನು ಉಳಿಸಿ’ ಅಭಿಯಾನ ಪ್ರಾರಂಭಿಸಲಾಗಿದೆ. ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಭಾಜಪ ಸರ್ಕಾರ ಮನರೆಗಾವನ್ನು ರದ್ದುಪಡಿಸಿ, ವಿಬಿಜಿರಾಮ್ ಜಿ (VB-G RAM G) ಕಾಯ್ದೆಯನ್ನು …

Read More »

ಬಾಗೇಪಲ್ಲಿ `ಕೈ’ ಶಾಸಕ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು: ಹೈಕೋರ್ಟ್‌ ಆದೇಶ

ಬೆಂಗಳೂರು: ಬಾಗೇಪಲ್ಲಿಯ  ಕಾಂಗ್ರೆಸ್‌  ವಿಜಯಿ ಅಭ್ಯರ್ಥಿ ಸುಬ್ಬಾರೆಡ್ಡಿಯವರ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್‌  ಮಹತ್ವದ ಆದೇಶ ಪ್ರಕಟಿಸಿದೆ. ನಾಮಪತ್ರ ಸಲ್ಲಿಕೆ ವೇಳೆ ಸಂಪೂರ್ಣ ಆಸ್ತಿ ಘೋಷಣೆ ಮಾಡಿಲ್ಲ, ಕ್ರಿಮಿನಲ್ ಕೇಸ್‌ಗಳ ಮಾಹಿತಿಯನ್ನು ಮರೆಮಾಚಿದ್ದಾರೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜು ಅವರು 2023 ಜೂನ್ 24ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಆಸ್ತಿ ಮಾಹಿತಿಯನ್ನು ಉಲ್ಲಂಘನೆ ಮಾಡಿದ್ದು ದೃಢಪಟ್ಟ ಹಿನ್ನೆಲೆಯಲ್ಲಿ ಸುಬ್ಬಾರೆಡ್ಡಿ ಶಾಸಕ ಸ್ಥಾನವನ್ನು ಹೈಕೋರ್ಟ್‌ ಅಸಿಂಧುಗೊಳಿಸಿದೆ. ಒಂದು …

Read More »

ಮನೆ ತೆರವಿಗೆ ಮುಂದಾದ ತಹಶೀಲ್ದಾರ್ – ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಚಿಕ್ಕಬಳ್ಳಾಪುರ: ನಿರ್ಮಾಣ ಹಂತದ ಮನೆ ತೆರವು ಮಾಡಲು ಮುಂದಾಗಿದ್ದಕ್ಕೆ ವ್ಯಕ್ತಿಯೋರ್ವ ತಹಶೀಲ್ದಾರ್  ಹೆಸರು ಉಲ್ಲೇಖಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಬಳ್ಳಾಪುರ  ಜಿಲ್ಲೆ ಮಂಚೇನಹಳ್ಳಿ  ತಾಲೂಕಿನ ಗಿಡಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾಧಕೃಷ್ಣ ಜಿ ಎಂಬವರು ಆಂಟಿಬಯೊಟಿಕ್ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆತ್ಮಹತ್ಯೆಗೆ ಯತ್ನಕ್ಕೂ ಮುನ್ನ ರಾಧಾಕೃಷ್ಣ ಅವರು ಡೆತ್ ನೋಟ್ ಬರೆದಿಟ್ಟಿದ್ದಾರೆ. ತನ್ನ ಸಾವಿಗೆ ಮಂಚೇನಹಳ್ಳಿ ತಹಶೀಲ್ದಾರ್ ಪೂರ್ಣಿಮಾ ಹಾಗೂ ಜಿಲ್ಲಾಡಳಿತ ಕಾರಣ ಎಂದು ಡೆತ್ …

Read More »

ಅನ್ಯ ಜಾತಿ ಯುವಕನ ಜತೆ ಮಗಳು ಪರಾರಿ: ಮರ್ಯಾದೆಗೆ ಅಂಜಿ ಸಾವಿನ ಹಾದಿ ಹಿಡಿದ ತಂದೆ, ತಾಯಿ, ಸಹೋದರ

ಚಿಕ್ಕಬಳ್ಳಾಪುರ: ಮಾನ-ಮರ್ಯಾದೆಗೆ ಹೆದರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ. ತಾಯಿ ಸರೋಜಮ್ಮ, ತಂದೆ ಶ್ರೀರಾಮಪ್ಪ ಹಾಗೂ ಮಗ ಮನೋಜ್ ಮೃತ ದುರ್ದೈವಿಗಳು. ಹೆತ್ತ ಮಗಳು ಅನ್ಯ ಜಾತಿಯ ಯುವಕನ ಜೊತೆ ಪರಾರಿಯಾಗಿದ್ದಕ್ಕೆ ಮನನೊಂದು ಸಾವಿನ ಹಾದಿ ಹಿಡಿದಿದ್ದಾರೆ. 26 ವರ್ಷದ ಮಗಳು ಅರ್ಚನಾ, ನಾರಾಯಣಸ್ವಾಮಿ ಎಂಬಾತನ ಜೊತೆ ಪರಾರಿಯಾಗಿದ್ದಾಳೆ. ಯುವಕ ಅನ್ಯಜಾತಿಯವನಾಗಿರುವುದರಿಂದ ಊರಿನವರಿಂದ ನಿಂದನೆ ಒಳಗಾಗಬಹುದು ಎಂದು ಹೆದರಿ …

Read More »

ಮಾಂಸಾಹಾರ ತಿಂದು ದೇವಾಲಯಕ್ಕೆ ಹೋದ್ರೆ ತಪ್ಪೇನು..? ಸಿದ್ದರಾಮಯ್ಯ ಆಕ್ರೋಶ

ಚಿಕ್ಕಬಳ್ಳಾಪುರ: ಮಡಿಕೇರಿ ಪ್ರವಾಸದಲ್ಲಿದ್ದ ಸಿದ್ದರಾಮಯ್ಯ, ಮಾಂಸ ಆಹಾರ ಸೇವಿಸಿ ಕೊಡ್ಲಿಪೇಟೆಯ ಬಸವೇಶ್ವರ ದೇವಸ್ಥಾನಕ್ಕೆ ಹೋಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಆರೋಪಕ್ಕೆ ಸಿದ್ದರಾಮಯ್ಯ ಇದೀಗ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಊಟದ ಬಗ್ಗೆ ಪ್ರಶ್ನಿಸಲು‌ ನೀವ್ಯಾರು?  ನಾನು ‌ಊಟ ಮಾಡಿದ್ದು, ಸುದರ್ಶನ್ ಗೆಸ್ಟ್ ಹೌಸ್​ನಲ್ಲಿ. ಸಂಜೆ‌ ನಾನು ಬಸವೇಶ್ವರ ‌ದೇವಾಲಯಕ್ಕೆ ಹೋಗಿರೋದು. ನಾನ್​ವೆಜ್ ತಿಂದು ದೇವಸ್ಥಾನಕ್ಕೆ ಹೋದ್ರೆ ತಪ್ಪೇನು? ಮಧ್ಯಾಹ್ನ ತಿಂದು ಸಂಜೆ ದೇವಾಲಯಕ್ಕೆ ಹೋದ್ರೆ ತಪ್ಪೇನು? ನನ್ನ ಊಟದ ಬಗ್ಗೆ …

Read More »

ಮರದ ಮೇಲೆ ಸೆಲ್ಫಿ ವಿಡಿಯೋ ಹುಚ್ಚಾಟ: ಬರ್ತ್​​ ಡೇ ಪಾರ್ಟಿ, ಜಕ್ಕಲಮಡಗು ಹಿನ್ನೀರಿನಲ್ಲಿ ಶವವಾದ ಬೆಂಗಳೂರಿನ ಅಕ್ಸೆಂಚರ್ ಟೆಕ್ಕಿ

ಚಿಕ್ಕಬಳ್ಳಾಪುರ: ಬೆಂಗಳೂರು ನಗರದ ಸುಂಕದಕಟ್ಟೆಯ ಯುವಕ ಬರ್ತ್​​ ಡೇ ಪಾರ್ಟಿ ಆಗಮಿಸಿ ಜಕ್ಕಲಮಡಗು ನೀರಿನಲ್ಲಿ ಜಲಸಮಾಧಿಯಾಗಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಜಕ್ಕಲಮಡಗು ಜಲಾಶಯದ ಹಿನ್ನೀರಿನಲ್ಲಿ ಈ ದುರ್ಘಟನೆ ನಡೆದಿದ್ದು, ಅಕ್ಸೆಂಚರ್ ಕಂಪನಿಯ ಸಾಫ್ಟ್​​ವೇರ್ ಎಂಜಿನಿಯರ್​ ರೋಹಿತ್ (24) ಮೃತಪಟ್ಟ ಯುವಕ. ಕುಡಿದ ಅಮಲಿನಲ್ಲಿ ಮರದ ಮೇಲೆ ಸೆಲ್ಫಿ ವಿಡಿಯೋ ಹುಚ್ಚಾಟ: ಅಕ್ಸೆಂಚರ್ ಸಾಫ್ಟ್​​ವೇರ್​ ಎಂಜಿನಿಯರ್ ರೋಹಿತ್ 5 ಮಂದಿ ಸ್ನೇಹಿತರೊಂದಿಗೆ ಬರ್ತ್​​ ಡೇ ಪಾರ್ಟಿ ಆಚರಣೆಗೆ ಬಂದಿದ್ದರು. ಆತನ ಸ್ನೇಹಿತರು ಹಿನ್ನೀರಿನಲ್ಲಿರುವ …

Read More »

ಪೂಜೆ ವೇಳೆ ಕಾಲು ಜಾರಿ ಪ್ರಪಾತಕ್ಕೆ ಬಿದ್ದ ಪೂಜಾರಿ ಸಾವು; ನೋಡನೋಡುತ್ತಿದ್ದಂತೆ ನೂರಾರು ಅಡಿ ಆಳಕ್ಕೆ ಉರುಳಿದ ದೇಹ..

ಚಿಕ್ಕಬಳ್ಳಾಪುರ: ಪೂಜೆಯ ವೇಳೆ ಕಾಲು ಜಾರಿ ಪ್ರಪಾತಕ್ಕೆ ಬಿದ್ದು ಪೂಜಾರಿಯೊಬ್ಬರು ಮೃತಪಟ್ಟಿದ್ದು, ನೆರೆದಿದ್ದ ಭಕ್ತರೆಲ್ಲ ನೋಡನೋಡುತ್ತಿದ್ದಂತೆ ಅವರ ದೇಹ ನೂರಾರು ಅಡಿ ಆಳಕ್ಕೆ ಉರುಳಿ ಬಿದ್ದಿದೆ. ಬೆಟ್ಟದ ಮೇಲಿನಿಂದ ಪೂಜಾರಿ ಕೆಳಕ್ಕೆ ಬೀಳುವ ದೃಶ್ಯ ಭಕ್ತರ ಕ್ಯಾಮರಾಗಳಲ್ಲಿ ಸೆರೆಯಾಗಿದ್ದು, ವೈರಲ್ ಆಗಿವೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಸಿಂಗನಮಲ ಗ್ರಾಮದ ಗಂಪಮಲ್ಲಯ್ಯಸ್ವಾಮಿ ಬೆಟ್ಟದಲ್ಲಿ ಈ ಅವಘಡ ನಡೆದಿದೆ. ಶ್ರಾವಣ ಮಾಸದಲ್ಲಿ ನಡೆಯುವ ವಿಶೇಷ ಪೂಜೆಯ ಸಂದರ್ಭದಲ್ಲಿ ಈ ದುರಂತ ನಡೆದುಹೋಗಿದೆ. ಪೂಜೆಗೆ …

Read More »

ರಾಜ್ಯ ಸರ್ಕಾರದಿಂದ ಗ್ರಾಮೀಣಾ ಜನತೆಗೆ ಭರ್ಜರಿ ಸಿಹಿಸುದ್ದಿ

ಚಿಕ್ಕಬಳ್ಳಾಪುರ : ರಾಜ್ಯ ಸರ್ಕಾರವು ಗ್ರಾಮೀಣಾ ಜನತೆಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ಆರ್ಥಿಕ ವರ್ಷದಲ್ಲಿ ಗ್ರಾಮಗಳ ಸಶಕ್ತಿಕರಣಕ್ಕೆ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗೂ 1.5 ಕೋಟಿ ರೂ. ಹಣ ನೀಡಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ರಾಜ್ಯದ ಪ್ರತಿ ಗ್ರಾಮಪಂಚಾಯಿತಿಗೂ 1.5 ಕೋಟಿ ಹಣ ನೀಡಲು ಯೋಜನೆ ಹಾಕಿಕೊಳ್ಳಲಾಗಿದ್ದು, ಅದರ ಜೊತೆಗೆ ಗ್ರಾಮಪಂಚಾಯಿತಳ ಅಭಿವೃದ್ಧಿಗೆ 31 ಸಾವಿರ ಕೋಟಿ ರೂ. ಹಣ …

Read More »

ಶ್ರೀಭೋಗನಂದೀಶ್ವರ ಆಲಯದಲ್ಲಿ ಭಕ್ತರು ದೀಪ ಹಚ್ಚುವಂತಿಲ್

ಚಿಕ್ಕಬಳ್ಳಾಪುರ: ಇತಿಹಾಸ ಪ್ರಸಿದ್ಧ ದಕ್ಷಿಣ ಕಾಶೀ ಕ್ಷೇತ್ರವೆಂದೇ ಪ್ರತೀತಿಯಾಗಿರೋ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದ ಶ್ರೀಭೋಗನಂದೀಶ್ವರ ದೇಗುಲ ಹಾಗೂ ಆವರಣದಲ್ಲಿ ಈ ಬಾರಿ ದೀಪ ಹಚ್ಚುವಂತಿಲ್ಲ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್ ಲತಾ ತಿಳಿಸಿದ್ದಾರೆ. ನಾಳೆ ಕಾರ್ತಿಕ ಸೋಮವಾರದ ಹಿನ್ನೆಲೆಯಲ್ಲಿ ಶ್ರೀಭೋಗನಂದೀಶ್ವರನಿಗೆ ವಿಶೇಷ ಪೂಜಾ ಕೈಂಕರ್ಯಗಳು ನೇರವೇರಲಿವೆ. ಪ್ರತಿ ವರ್ಷದಂತೆ ಈ ವರ್ಷವೂ ಕಾರ್ತಿಕ ಸೋಮವಾರದ ಪ್ರಯುಕ್ತ ಸಾವಿರಾರು ಮಂದಿ ಭಕ್ತರು ಆಗಮಿಸುವ ಸಾಧ್ಯತೆಯಿದೆ. ಹೀಗಾಗಿ ಕೊರೊನಾ ಭೀತಿ ಆತಂಕದಿಂದ …

Read More »