Breaking News

ಚಿಕ್ಕ ಬಳ್ಳಾಪುರ

ಅರೆಬೆತ್ತಲೆಯಾಗಿ ಮಹಿಳೆಯ ಶವ ಪತ್ತೆ – ಅತ್ಯಾಚಾರ ನಡೆಸಿ ಕೊಲೆ ….?

ಚಿಕ್ಕಬಳ್ಳಾಪುರ: ಅಪರಿಚಿತ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಕಾರಕೂರು ಕ್ರಾಸ್ ಬಳಿ ನಡೆದಿದೆ. ಕಾರಕೂರು ಕ್ರಾಸ್ ಬಳಿಯ ನಿರ್ಮಾಣ ಹಂತದ ಬಡವಾಣೆಯ ಕಮಾನು ಗೋಡೆಯ ಸೆಕ್ಯೂರಿಟಿ ಗಾರ್ಡ್ ಕೊಠಡಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ವೇಲ್‍ನಿಂದ ಕತ್ತು ಬಿಗಿದು ಕೊಲೆ ಮಾಡಲಾಗಿದ್ದು, ಅರೆಬೆತ್ತಲೆಯಾಗಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮಾಹಿತಿ ತಿಳಿದು ಬಾಗೇಪಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ …

Read More »

ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಇಂದಿನಿಂದ ಬೆಳಗ್ಗೆ 6 ಗಂಟೆಯಿಂದಲೇ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ

ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಇಂದಿನಿಂದ ಬೆಳಗ್ಗೆ 6 ಗಂಟೆಯಿಂದಲೇ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.ಕೊರೊನಾ ಅನ್‍ಲಾಕ್ ಆದ ನಂತರ ಬೆಳಗ್ಗೆ 08 ಗಂಟೆಯ ನಂತರವಷ್ಟೇ ಪ್ರವಾಸಿಗರಿಗೆ ನಂದಿಗಿರಿಧಾಮ ಪ್ರವೇಶಕ್ಕೆ ಅನುಮತಿ ಕಲ್ಪಿಸಲಾಗಿತ್ತು. ಆದರೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ಆಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸಮಯ ಬದಲಾವಣೆ ಮಾಡಲಾಗಿದೆ. ಹೀಗಾಗಿ ಇಂದು ಬೆಳಗ್ಗೆ 06 ಗಂಟೆಯಿಂದಲೇ ನಂದಿಗಿರಿಧಾಮ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ ಎಂದು ಚಿಕ್ಕಬಳ್ಳಾಪುರ ಎಸ್‌ಪಿ ಮಿಥುನ್ …

Read More »

ಕೊರೊನಾ ರೋಗಿಯಿಂದಲೂ ಹಣ ವಸೂಲಿ- ಸರ್ಕಾರದಿಂದಲೂ ದುಡ್ಡು ಗುಳಂ

ಚಿಕ್ಕಬಳ್ಳಾಪುರ: ಕೊರೊನಾ ಸೋಂಕಿತರಿಂದಲೂ ಹಣ ಪಡೆದು, ಇತ್ತ ಸರ್ಕಾರಕ್ಕೂ ಬಿಲ್ ಪಾವತಿಸಿ ಎಂದು ಚಿಕ್ಕಬಳ್ಳಾಪುರದ ಖಾಸಗಿ ಆಸ್ಪತ್ರೆ ಚಿಕಿತ್ಸೆ ದಾಖಲಾತಿ ಸಲ್ಲಿಸಿದೆ. ಈ ಮೂಲಕ ಎರಡೂ ಕಡೆಯಿಂದ ಹಣ ಹೊಡೆಯುವ ಪ್ಲಾನ್ ಮಾಡಿಕೊಂಡಿದ್ದ ಆಸ್ಪತ್ರೆಯ ನಿಜ ಬಣ್ಣ ಬಯಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಸರ್ಕಾರ ಉಚಿತ ಚಿಕಿತ್ಸೆ ನೀಡುತ್ತಿದೆ. ದಿನೇ ದಿನೇ ಏರುತ್ತಿರೋ ಕೊರೊನಾ ಸೋಂಕಿತರ ಸಂಖ್ಯೆಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್ ಕೊರತೆ ಎದುರಾಗಿದೆ. ಹೀಗಾಗಿ …

Read More »

ಸೋಮವಾರ ಕರೆ ನೀಡಿರುವ ಕರ್ನಾಟಕ ಬಂದ್‌ :ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರ ವಿವಿಧ ಕಾಯ್ದೆಗಳ ತಿದ್ದುಪಡಿ ಮಾಡಲು ಹೊರಟಿರುವುದನ್ನು ವಿರೋಧಿಸಿ ಸೋಮವಾರ ಕರೆ ನೀಡಿರುವ ಕರ್ನಾಟಕ ಬಂದ್‌ ಬೆಂಬಲಿಸಿ ನಗರದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸಿದವು. ರಾಜ್ಯ ರೈತ ಸಂಘದ ವಿವಿಧ ಬಣಗಳು, ಕೇಂದ್ರಿಯ ಕಾರ್ಮಿಕ ಸಂಘಟನೆಗಳಾದ ಎಐಟಿಯುಸಿ ( ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್), ರೈತ-ದಲಿತ-ಕಾರ್ಮಿಕ ಸಂಘಟನೆಗಳ ಐಕ್ಯ ವೇದಿಕೆ, ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ, ಕನ್ನಡಪರ ಸಂಘಟನೆಗಳು ಸೇರಿ …

Read More »

ಅಂಗಡಿ ಮುಂದೆ ಎಂಜಲು ಉಗಿದ ಎಂಬಕಾರಣಕ್ಕೆ ಯುವಕನ ಕೊಲೆ

ಚಿಕ್ಕಬಳ್ಳಾಪುರ:ಅಂಗಡಿ ಮುಂದೆ ಎಂಜಲು ಉಗಿದ ಎಂಬಕಾರಣಕ್ಕೆ ಯುವಕನ ಕೊಲೆಯೇ ಆಗಿಹೋಗಿದೆ. ತನ್ನ ಅಂಗಡಿ ಮುಂದೆ ಎಂಜಲು ಉಗಿದ ಯುವಕನನ್ನು ಅಂಗಡಿ ಮಾಲೀಕ ಚಾಕುವಿನಿಂದ ತಿವಿದು ಕೊಲೆ ಮಾಡಿದ್ದಾನೆ. ಜಿಲ್ಲೆಯ ಚಿಂತಾಮಣಿ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಉಲ್ಲಪ್ಪನಹಳ್ಳಿ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ಪ್ರಕರಣ ನಡೆದಿದೆ. ಕೊಲೆಗೀಡಾದ ಯುವಕನನ್ನು ಗ್ರಾಮದ ಮುನಿಕೃಷ್ಣ ಎಂದು ಗುರುತಿಸಲಾಗಿದ್ದು ಕೊಲೆ ಆರೋಪಿ ಅದೇ ಗ್ರಾಮದ ಚೇತನ್. ಕಾಂಡೋಮ್ ಬಳಸು ಎಂದಿದ್ದಕ್ಕೆ ಕೊಲೆ ಮಾಡಿದ ಬೆಳಗ್ಗೆ …

Read More »

ಸಿನಿಮಾ ರಂಗದಲ್ಲಿ ಮಾತ್ರ ಇಲ್ಲ. ರಾಜಕೀಯ, ವ್ಯಾಪಾರಸ್ಥರ ರಂಗ, ಅಧಿಕಾರಿ ವಲಯ ಹಾಗೂ ಐಟಿ-ಬಿಟಿ ಯಲ್ಲೂ ಡ್ರಗ್ಸ್ ದಂಧೆ ಇದೆ:ಬಿ.ಸಿ.ಪಾಟೀಲ್

ಚಿಕ್ಕಬಳ್ಳಾಪುರ: ಡ್ರಗ್ಸ್ ದಂಧೆ ಕೇವಲ ಸಿನಿಮಾ ರಂಗದಲ್ಲಿ ಮಾತ್ರ ಇಲ್ಲ. ರಾಜಕೀಯ, ವ್ಯಾಪಾರಸ್ಥರ ರಂಗ, ಅಧಿಕಾರಿ ವಲಯ ಹಾಗೂ ಐಟಿ-ಬಿಟಿ ಯಲ್ಲೂ ಡ್ರಗ್ಸ್ ದಂಧೆ ಇದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಜಿಲ್ಲೆಯ ಚಿಂತಾಮಣಿಯಲ್ಲಿ ಮಾತನಾಡಿ, ಸಿನಿಮಾದವರು ಗಾಜಿನ ಮನೆಯಲ್ಲಿರುವುದರಿಂದ ಬೇಗ ತೋರಿಸುತ್ತೀದ್ದೀರಿ. ಸಮಾಜ ಹುಟ್ಟಿದಾಗಿಂದಲೂ ಈ ಸಾಮಾಜಿಕ ದಾಸ್ಯಗಳಿವೆ. ಅವುಗಳಿಗೆ ಕಡಿವಾಣ ಹಾಕುವಂತಹ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದರು. ಸಿಎಂ ಯಡಿಯೂರಪ್ಪ ದೆಹಲಿ ಭೇಟಿ ವಿಚಾರಕ್ಕೆ …

Read More »

ಹಿಂಬದಿಯಿಂದ ಲಾರಿ ಡಿಕ್ಕಿ, ಕಾರ್ ಅಪ್ಪಚ್ಚಿ- ಮೂವರು ದಾರುಣ ಸಾವು

ಚಿಕ್ಕಬಳ್ಳಾಪುರ: ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಚಿಕ್ಕಬಳ್ಳಾಪುರ ತಾಲೂಕು ದೊಡ್ಡಪ್ಯಾಯಲಗುರ್ಕಿ ಬಳಿ ರಾತ್ರಿ 1 ಗಂಟೆಗೆ ಘಟನೆ ಸಂಭವಿಸಿದ್ದು, ಹಿಂಬದಿಯಿಂದ ಲಾರಿ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ತಾಯಿ ಹಾಗೂ ಇಬ್ಬರು ಗಂಡು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಂದೆ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಲಾರಿ ಡಿಕ್ಕಿ ಹೊಡೆತಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಗುರುತಿಸಲು …

Read More »

ಅನ್‍ಲಾಕ್ ಬಳಿಕ ಮೊದಲ ವೀಕೆಂಡ್, ಪ್ರವಾಸಿಗರಿಂದ ತುಂಬಿ ತುಳುಕಿದ ನಂದಿಬೆಟ್ಟ- ಫುಲ್ ಟ್ರಾಫಿಕ್

ಚಿಕ್ಕಬಳ್ಳಾಪುರ: ಕೊರೊನಾ ವೈರಸ್ ಹರಡುವ ಭೀತಿಯಿಂದ ನಂದಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಅನ್‍ಲಾಕ್ ನಿಯಮ ಜಾರಿ ಬಳಿಕ ಕೆಲ ದಿನಗಳ ಹಿಂದಷ್ಟೇ ಸಾರ್ವಜನಿಕರಿಗೆ ಮುಕ್ತವಾಗಿಸಲಾಗಿದೆ. ಲಾಕ್‍ಡೌನ್ ವೇಳೆ ಪ್ರಶಾಂತವಾಗಿದ್ದ ನಂದಿ ಬೆಟ್ಟ ಇದೀಗ ಅನ್‍ಲಾಕ್ ರೂಲ್ಸ್ ಜಾರಿ ಬಳಿಕ ಗಿಜುಗುಡುತ್ತಿದೆ. ಅದ್ರಲ್ಲೂ ನಂದಿಬೆಟ್ಟ ಅನ್‍ಲಾಕ್ ಆದ ನಂತರ ಮೊದಲ ವೀಕೆಂಡ್ ದಿನವಾದ ಭಾನುವಾರದಂದು ಜನಜಂಗುಳಿಯಿಂದ ಕೂಡಿತ್ತು. ಪ್ರವಾಸಿಗರಿಂದ ತುಂಬಿ ತುಳುಕುತ್ತಿತ್ತು. ಮಾರ್ಚ್ 14ರಿಂದ ಲಾಕ್‍ಡೌನ್ ಆಗಿದ್ದ ನಂದಿಗಿರಿಧಾಮ ಬರೋಬ್ಬರಿ …

Read More »

ದಿನಸಿ ಅಂಗಡಿ ಮಾಲೀಕನ, ಕೊಲೆ, ಮೃತದೇಹ ರಸ್ತೆ ಬದಿ ಬಿಸಾಕಿ ಪರಾರಿ

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕು ಜಂಗಮಕೋಟೆ ಬಳಿ ನಡೆದಿದ್ದ ದಿನಸಿ ಅಂಗಡಿ ಮಾಲೀಕನ ಕೊಲೆ ಪ್ರಕರಣವನ್ನ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಭೇದಿಸಿದ್ದು, ಕೊಲೆಗಾರನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದೇವನಹಳ್ಳಿ ತಾಲೂಕು ಐಬಸಾಪುರ ಗ್ರಾಮದ ನಿವಾಸಿಯಾಗಿದ್ದ ನಿರಂಜನಮೂರ್ತಿ(55) ಶಿಡ್ಲಘಟ್ಟ ತಾಲೂಕು ಜಂಗಮಕೋಟೆ ಕ್ರಾಸ್ ನಲ್ಲಿ ದಿನಸಿ ಅಂಗಡಿ ಇಟ್ಟುಕೊಂಡಿದ್ದರು. ಇವರು ಆಗಸ್ಟ್ 27 ರಂದು ಜಂಗಮಕೋಟೆ-ಹೊಸಕೋಟೆ ಮಾರ್ಗದ ರಸ್ತೆಬದಿ ಶವವಾಗಿ ಪತ್ತೆಯಾಗಿದ್ದಾರೆ. ಮೃತದೇಹದ ಮೇಲೆ ಚಾಕು ಇರಿತದ …

Read More »

5 ತಿಂಗಳಿಂದ ಪ್ರವಾಸಿಗರಿಂದ ದೂರವಿದ್ದ ವಿಶ್ವ ಪ್ರಸಿದ್ದ ಗಿರಿಧಾಮ ಈಗ ಮುಕ್ತ

ಚಿಕ್ಕಬಳ್ಳಾಪುರ : ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದ್ದ ಜಿಲ್ಲೆಯ ವಿಶ್ವವಿಖ್ಯಾತ ನಂದಿ ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಅವಕಾಶ ನಿಡುತ್ತಿದ್ದು ಗಿರಿಧಾಮ ವೀಕ್ಷಣೆಗೆ ಪ್ರವಾಸಿಗರು ತುದಿಗಾಲಲ್ಲಿ ನಿಂತಿದ್ದಾರೆ. ಪ್ರತಿ ಶನಿವಾರ, ಭಾನುವಾರ ಸಹಸ್ರಾರು ಸಂಖ್ಯೆಯಲ್ಲಿ ಗಿರಿಧಾಮಕ್ಕೆ ಲಗ್ಗೆ ಇಟ್ಟು ಬೆಟ್ಟದ ಕಾನನ ಮಧ್ಯೆ ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದು ಹೋಗುತ್ತಿದ್ದ ಐಟಿ, ಬಿಟಿ ಉದ್ಯೋಗಿಗಳಿಗೆ, ಪ್ರೇಮಿಗಳಿಗೆ ಸತತ ಐದು ತಿಂಗಳಿಂದ ಗಿರಿಧಾಮಕ್ಕೆ ಪ್ರವೇಶವಿಲ್ಲವಾಗಿತ್ತು. ಆದರೆ ಕೇಂದ್ರ ಸರ್ಕಾರ …

Read More »