ಚಿಕ್ಕಬಳ್ಳಾಪುರ: ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಕೊರೊನಾ ವೈರಸ್ ಪತ್ತೆ ಹಚ್ಚುವ ಪರೀಕ್ಷಾ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಉದ್ಘಾಟನೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಪರೀಕ್ಷಾ ಕೇಂದ್ರದಲ್ಲಿ ಎರಡು ಯಂತ್ರಗಳಿದ್ದು, ದಿನದ 24 ಗಂಟೆಯೂ ಈ ಕೇಂದ್ರ ಕಾರ್ಯನಿರ್ವಹಿಸಲಿದ್ದು, ಪ್ರತಿದಿನ 80 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸುಹುದಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಾದರಿಗಳ ಪರೀಕ್ಷೆ ನಡೆಸಲು ಅಗತ್ಯವಾದ ಕ್ರಮಗಳನ್ನ ಕೈಗೊಳ್ಳುವುದಾಗಿ …
Read More »ಮದ್ಯ ಖರೀದಿ ಫುಲ್ ಡಲ್ – ಮದ್ಯದಂಗಡಿಗಳತ್ತ ಮುಖ ಮಾಡದ ಮದ್ಯಪ್ರಿಯರು
ಚಿಕ್ಕಬಳ್ಳಾಪುರ: ಲಾಕ್‍ಡೌನ್ ನಡುವೆ ಮದ್ಯ ಮಾರಾಟಕ್ಕೆ ಅವಕಾಶ ಕೊಟ್ಟಿದ್ದೆ ತಡ ಮದ್ಯಪ್ರಿಯರು ಸರದಿ ಸಾಲಿನಲ್ಲಿ ನಿಂತು ಮದ್ಯ ಖರೀದಿಗೆ ಮುಗಿಬಿದ್ದಿದ್ದರು. ಆದರೆ ಇದೀಗ ಮದ್ಯಪ್ರಿಯರು ಎಣ್ಣೆ ಅಂಗಡಿಯತ್ತ ಮುಖ ಮಾಡುತ್ತಿಲ್ಲ. ಇಷ್ಟು ದಿನ ಕೇವಲ ಎಂಎಸ್‍ಐಎಲ್‍ನಲ್ಲಿ ಮಾತ್ರ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ಇಂದಿನಿಂದ ಬಾರ್ ಮತ್ತು ರೆಸ್ಟೋರೆಂಟ್‍ಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ. ಆದರೆ ಇಷ್ಟು ದಿನ ಚಿಕ್ಕಬಳ್ಳಾಪುರದ ಮದ್ಯದಂಗಡಿಗಳ ಮುಂದೆ ಮದ್ಯಪ್ರಿಯರು ಕ್ಯೂ ಇರುತ್ತಿದ್ದರು. ಆದರೆ ಇಂದು …
Read More »ಪತಿಯ ಚಿಕಿತ್ಸೆಗಾಗಿ ಪತ್ನಿ ತನ್ನ ತಾಳಿಯನ್ನೇ ಮಾರಿರುವ ಮನಕಲಕುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆ.ಕುರಪ್ಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಚಿಕ್ಕಬಳ್ಳಾಪುರ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಪತಿಯ ಚಿಕಿತ್ಸೆಗಾಗಿ ಪತ್ನಿ ತನ್ನ ತಾಳಿಯನ್ನೇ ಮಾರಿರುವ ಮನಕಲಕುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆ.ಕುರಪ್ಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಗ್ರಾಮದ ಬೀರಮ್ಮ ಹಾಗೂ ಬೆಂಗಳೂರು ಮೂಲದ ಲಿಂಗಪ್ಪ ವಿವಾಹವಾಗಿ ಇಬ್ಬರು ಮಕ್ಕಳಿದ್ದಾರೆ. ಇಷ್ಟು ದಿನ ಬೆಂಗಳೂರಿನಲ್ಲಿ ಗಾರೆಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಆದರೆ ಲಾಕ್‍ಡೌನ್‍ಗೂ ಮುನ್ನ ಬೀರಮ್ಮಳ ಸ್ವಗ್ರಾಮ ಕೆ.ಕುರಪ್ಪಲ್ಲಿಗೆ ಬಂದು ಬಾಡಿಗೆ ಮನೆ ಮಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಆದರೆ ಲಿಂಗಪ್ಪನಿಗೆ ಹೃದಯಾಘಾತವಾಗಿದ್ದು, …
Read More »ಮದ್ಯದ ಅಮಲಿನಲ್ಲಿ ತಮ್ಮನ ಕೈ ಕಟ್ ಮಾಡಿದ ಅಣ್ಣ….
ಚಿಕ್ಕಬಳ್ಳಾಪುರ: ಮದ್ಯದ ಅಮಲಿನಲ್ಲಿ ಸಹೋದರರ ನಡುವೆ ಜಗಳ ನಡೆದಿದ್ದು, ಕೋಪದ ಕೈಗೆ ಬುದ್ಧಿ ಕೊಟ್ಟ ಅಣ್ಣ, ತಮ್ಮನ ಕೈಯನ್ನೇ ತುಂಡರಿಸಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ರಮಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿಗಳಾದ 38 ವರ್ಷದ ಕೃಷ್ಣಪ್ಪ ಹಾಗೂ ತಮ್ಮ 33 ವರ್ಷದ ಹನುಮಂತರಾಯಪ್ಪ ಇಬ್ಬರು ಸಹೋದರರು. ಇಂದು ಮದ್ಯ ಸೇವಿಸಿ ಬಳಿಕ ಇಬ್ಬರು ಮನೆಯಲ್ಲಿ ಊಟ ಮಾಡಿದ್ದಾರೆ. ಈ ವೇಳೆ ಇಬ್ಬರ ನಡುವೆ ತಟ್ಟೆ ತೊಳೆಯುವ ವಿಚಾರಕ್ಕೆ ಜಗಳ …
Read More »ಕಾಂಪೌಂಡ್‍ಗೆ ಕಾರು ಡಿಕ್ಕಿಯಾಗಿ ಚಾಲಕ ಸಾವು – ನಜ್ಜುಗುಜ್ಜಾದ ಕಾರ್……..
ಚಿಕ್ಕಬಳ್ಳಾಪುರ: ಕಾಂಪೌಂಡ್‍ಗೆ ಕಾರು ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನಲ್ಲಿ ನಡೆದಿದೆ. ಸೋಮವಾರ ರಾತ್ರಿ ಗೌರಿಬಿದನೂರು ತಾಲೂಕಿನ ಇಡಗೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ 32 ವರ್ಷದ ವಿನೋದ್ ಮೃತ ವ್ಯಕ್ತಿ. ಮೃತ ವಿನೋದ್ ಬೆಂಗಳೂರಿನಲ್ಲಿ ಪೈಂಟ್ಸ್ ಡಿಸ್ಟ್ರಿಬ್ಯೂಟರ್ ಆಗಿ ಕೆಲಸ ಮಾಡುತ್ತಿದ್ದನು. ಆದರೆ ಕೊರೊನಾ ಲಾಕ್‍ಡೌನ್‍ನಿಂದ ವಿನೋದ್ ಬೆಂಗಳೂರಿನಿಂದ ವಾಪಸ್ ಬಂದು ತನ್ನ ಸ್ವಗ್ರಾಮದಲ್ಲಿದ್ದನು. ಸೋಮವಾರ ರಾತ್ರಿ ಗ್ರಾಮದಲ್ಲೇ ಕಾಂಪೌಂಡ್‍ಗೆ …
Read More »ಮದ್ಯದಂಗಡಿ ಕಳವು ಪ್ರಕರಣದಲ್ಲಿ ಮಾಲೀಕನೇ ಕಳ್ಳ!
ಚಿಕ್ಕಬಳ್ಳಾಪುರ: ನಗರ ಹೊರವಲಯದ ಗೋಲ್ಡನ್ ಬಾರಿನಲ್ಲಿ ನಡೆದಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಾರ್ ಮಾಲೀಕ ಹಾಗೂ ಅತನ ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 30ರ ರಾತ್ರಿ ನಗರ ಹೊರವಲಯದ ಗೋಲ್ಡನ್ ಬಾರಿನ ಸಿಸಿಟಿವಿ ಒಡೆದು ಹಾಕಿ, ಬಾರಿನ ಹಿಂಭಾಗದ ಗೋಡೆಗೆ ಕಿಂಡಿ ಕೊರೆದು ಮದ್ಯ ಕಳವು ಮಾಡಲಾಗಿತ್ತು. ಈ ಸಂಬಂಧ ಮೇ 1ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರಿಗೆ ಬಾರ್ ಮಾಲೀಕ, ನಗರಸಭೆ ಸದಸ್ಯ ದೀಪಕ್ ಹಾಗೂ ಆತನ …
Read More »ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯಿಂದ ಆಶಾ ಕಾರ್ಯಕರ್ತೆ, ಪತಿ ಮೇಲೆ ಹಲ್ಲೆ
ಚಿಕ್ಕಬಳ್ಳಾಪುರ: ವ್ಯಕ್ತಿಯೊಬ್ಬ ಮದ್ಯದ ಅಮಲಿನಲ್ಲಿ ಆಶಾ ಕಾರ್ಯಕರ್ತೆ ಹಾಗೂ ಆಕೆಯ ಪತಿಯ ಮೇಲೆ ಹಲ್ಲೆ ನಡೆಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪೂಲಕುಂಟ್ಲಹಳ್ಳಿಯಲ್ಲಿ ನಡೆದಿದೆ. ಗಂಗಹಳ್ಳಿ ಗ್ರಾಮದ ಆಶಾಕಾರ್ಯಕರ್ತೆ ರವಣಮ್ಮ ಹಾಗೂ ಪತಿ ನರಸಿಂಹಮೂರ್ತಿ ಹಲ್ಲೆಗೊಳಗಾದವರು. ಸರ್ವೆ ಕಾರ್ಯ ಮುಗಿಸಿದ್ದ ಆಶಾಕಾರ್ಯಕರ್ತೆ ತನ್ನ ಸ್ನೇಹಿತೆ ಪೂಲಕುಂಟ್ಲಹಳ್ಳಿ ಗ್ರಾಮದ ಗಿರಿಜಮ್ಮ ಮನೆಗೆ ಬಂದಿದ್ರು. ಇತ್ತ ಪತ್ನಿ ರವಣಮ್ಮರನ್ನು ಕರೆದೊಯ್ಯಲು ಪತಿ ನರಸಿಂಹಮೂರ್ತಿ ಪೂಲಕುಂಟ್ಲಹಳ್ಳಿಗೆ ಬಂದಿದ್ದಾರೆ. ಈ ಸಂದರ್ಭದಲ್ಲಿ ಮದ್ಯ ಸೇವಿಸಿ …
Read More »ಚಿಕ್ಕಬಳ್ಳಾಪುರ: ನಗರದ 17 ನೇ ವಾರ್ಡಿನಲ್ಲಿ ಇಂದು ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ
ಚಿಕ್ಕಬಳ್ಳಾಪುರ: ನಗರದ 17 ನೇ ವಾರ್ಡಿನಲ್ಲಿ ಇಂದು ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. 40 ವರ್ಷದ ಮಹಿಳೆಗೆ ಕೊರೊನಾ ಸೋಂಕು ಧೃಡವಾಗಿದೆ. 17ನೇ ವಾರ್ಡಿನ ಪಿ-250ರ 65 ವರ್ಷದ ವೃದ್ಧ ಕೊರೊನಾ ಸೋಂಕಿಗೆ ಬಲಿಯಾಗಿದ್ದ. ತದನಂತರ ಈತನ ಮಗ ಹಾಗೂ ಮತ್ತಿಬ್ಬರಿಗೆ ಕೊರೊನಾ ಸೋಂಕು ಧೃಡವಾಗಿತ್ತು. ಇದಾದ ನಂತರ ಈ ಮೃತ ವೃದ್ಧ ದಿನಸಿ ಕಿಟ್ ವಿತರಣೆ ಮಾಡಿದ್ದ ಹಿನ್ನೆಲೆ ಇದೇ ಏರಿಯಾ ದಲ್ಲಿ ದಿನಸಿ ಪಡೆದ ಕುಟುಂಬಗಳ …
Read More »:ಚಿಕ್ಕಬಳ್ಳಾಪುರ:ಗೋಲ್ಡನ್ ಬಾರ್ ಅಂಡ್ ರೆಸ್ಟೋರೆಂಟ್‍ಗೆ ಕಿಂಡಿ ಕೊರೆದು ಮದ್ಯ ಕಳವು
ಚಿಕ್ಕಬಳ್ಳಾಪುರ: ನಗರ ಹೊರವಲಯದ ಗೋಲ್ಡನ್ ಬಾರ್ ಅಂಡ್ ರೆಸ್ಟೋರೆಂಟ್‍ಗೆ ಕಿಂಡಿ ಕೊರೆದು ಮದ್ಯ ಕಳವು ಮಾಡಲಾಗಿದೆ. ಬಾರ್ ಅಂಡ್ ರೆಸ್ಟೋರೆಂಟ್‍ನ ಸಿಸಿಟಿವಿ ಕ್ಯಾಮೆರಾ ಧ್ವಂಸಗೊಳಿಸಿರುವ ಖದೀಮರು, ಬಾರ್ ಹಿಂಭಾಗದಲ್ಲಿ ಗೋಡೆಗೆ ಕಿಂಡಿಕೊರೆದು ಮದ್ಯ ಕಳವು ಮಾಡಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ವೃತ್ತ ನಿರೀಕ್ಷಕ ಸುದರ್ಶನ್ ಹಾಗೂ ನಂದಿಗಿರಿಧಾಮ ಪಿಎಸ್‍ಐ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾಕ್‍ಡೌನ್ ಹಿನ್ನಲೆ ಮದ್ಯದಂಗಡಿಗಳಿಗೆ ಬೀಗಮುದ್ರೆ ಹಾಕಲಾಗಿದ್ದು, ಜಿಲ್ಲೆಯಲ್ಲಿ ಮದ್ಯದಂಗಡಿಗಳ ಕಳ್ಳತನ ಮುಂದುವರಿದಿದೆ. ಏಪ್ರಿಲ್ 15ರಂದು …
Read More »ರಾಜ್ಯದಲ್ಲಿ ಪ್ಲಾಸ್ಮಾ ಥೆರಪಿ ಮಾಡಲು ರೋಗಿಗಳೇ ಇಲ್ಲ: ವೈದ್ಯಕೀಯ ಸಚಿವ ಸುಧಾಕರ್……
ಚಿಕ್ಕಬಳ್ಳಾಪುರ: ಕೊರೊನಾದಿಂದ ಗುಣಮುಖರಾದವರು ರಕ್ತದಾನ ಮಾಡಿದ್ದು ಪ್ಲಾಸ್ಮಾ ಸಿದ್ಧವಾಗಿದೆ. ಆದ್ರೆ ಪ್ಲಾಸ್ಮಾ ಟ್ರಾನ್ಸ್ ಫ್ಲಾಂಟ್ ಮಾಡುವಂತಹ ರೋಗಿಗಳೇ ನಮ್ಮ ರಾಜ್ಯದಲ್ಲಿಲ್ಲ ಅಂತ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹೇಳಿದರು. ಚಿಕ್ಕಬಳ್ಳಾಪುರ ನಗರದಲ್ಲಿ ಮೊಬೈಲ್ ಸ್ವಾಬ್ ಕಲೆಕ್ಷನ್ ಯೂನಿಟ್ ಉದ್ಗಾಟನೆ ಮಾಡಿ ಮಾತನಾಡಿದ ಸಚಿವ ಸುಧಾಕರ್, ದೇಶದ ಬೇರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಕೊರೊನಾ ನಿಯಂತ್ರಣದಲ್ಲಿದೆ. ರಾಜ್ಯದಲ್ಲಿನ 523 ಪ್ರಕರಣಗಳಲ್ಲಿ 198 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಉಳಿದ 325 ಮಂದಿಯಲ್ಲಿ 20 …
Read More »
Laxmi News 24×7