Breaking News

ಚಿಕ್ಕ ಬಳ್ಳಾಪುರ

ಮೇ 3ರವರೆಗೆ ಚಿಕ್ಕಬಳ್ಳಾಪುರ, ಗೌರಿಬಿದನೂರಿನಲ್ಲಿ ಸೀಲ್‍ಡೌನ್: ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್

ಚಿಕ್ಕಬಳ್ಳಾಪುರ: ಮೇ 3ರವರೆಗೂ ಚಿಕ್ಕಬಳ್ಳಾಪುರ ನಗರ ಹಾಗೂ ಗೌರಿಬಿದನೂರು ನಗರದಲ್ಲಿ ಸೀಲ್‍ಡೌನ್ ಮುಂದುವರಿಯಲಿದೆ ಅಂತ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ ಕೆ ಸುಧಾಕರ್ ಹೇಳಿದರು. ಚಿಕ್ಕಬಳ್ಳಾಪುರ ನಗರದಲ್ಲಿ ಮೊಬೈಲ್ ಸ್ವಾನ್ ಕಲೆಕ್ಷನ್ ಯೂನಿಟ್ ವಾಹನಕ್ಕೆ ಚಾಲನೆ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದರು, ಈ ವೇಳೆ ಚಿಕ್ಕಬಳ್ಳಾಪುರ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದಿದ್ದೇನೆ. ಚಿಕ್ಕಬಳ್ಳಾಪುರ ಜಿಲ್ಲೆ ನೆರೆಯ ರಾಜ್ಯ ಆಂಧ್ರ ಪ್ರದೇಶಕ್ಕೆ ಹೊಂದಿಕೊಂಡಿದ್ದು, ಆಂಧ್ರದ ಹಿಂದೂಪುರ ರೆಡ್ ಝೋನ್ …

Read More »

ಕೊರೊನಾದಿಂದ ರಾಜ್ಯ ಸರ್ಕಾರಕ್ಕೆ ಹಣಕಾಸಿನ ಸಮಸ್ಯೆ ಸಿಬ್ಬಂದಿಗೆ ಸಂಬಳ ನೀಡಲು ಯೋಚನೆ ಮಾಡಬೇಕಾದ ಪರಿಸ್ಥಿತಿ ಇದೆ

ಚಿಕ್ಕಬಳ್ಳಾಪುರ: ಕೊರೊನಾದಿಂದ ರಾಜ್ಯ ಸರ್ಕಾರಕ್ಕೆ ಹಣಕಾಸಿನ ಸಮಸ್ಯೆ ಎದುರಾಗಿದೆ. ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬಂದಿಗೆ ಸಂಬಳ ನೀಡಲು ಯೋಚನೆ ಮಾಡಬೇಕಾದ ಪರಿಸ್ಥಿತಿ ಇದೆ ಎಂದು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಕುಡಿಯುವ ನೀರಿನ ಬಗ್ಗೆ ಸಭೆ ನಡೆಸಿ ಮಾತನಾಡುತ್ತಿದ್ದ ಸಚಿವವರು, ಸಭೆ ನಡುವೆ ಕೊರೊನಾದಿಂದ ಸರ್ಕಾರಿ ಅಧಿಕಾರಿಗಳಿಗೆ, ಸಿಬ್ಬಂದಿಗೆ ಸಂಬಳ ಕೊಡೋಕೆ ಯೋಚನೆ ಮಾಡಬೇಕಾದ ಪರಿಸ್ಥಿತಿ ಇದೆ. ಒಂದು …

Read More »

ಮೃತನಿಂದ ದಿನಸಿ ಕಿಟ್ ಪಡೆದಿದ್ದ ಮಹಿಳೆಗೂ ಅಂಟಿತು ಸೋಂಕು..!

ಚಿಕ್ಕಬಳ್ಳಾಪುರ, ಏ.25- ಮೃತ ಸೋಂಕಿತನ ಬಳಿ ದಿನಸಿ ಕಿಟ್ ಪಡೆದ ಮಹಿಳೆಗೆ ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ವಿವಿಧ ವಾರ್ಡ್‍ಗಳ ಜನತೆ ತಲ್ಲಣಗೊಂಡಿದ್ದಾರೆ.ಚಿಕ್ಕಬಳ್ಳಾಪುರ ನಗರದಲ್ಲಿ ಇದೀಗ ಮತ್ತೊರ್ವ 39 ವರ್ಷದ ಮಹಿಳೆಗೆ ಕೊರೊನಾ ಪಾಸಿಟಿವ್ ದೃಢಗೊಂಡ ನಂತರ , ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 17ಕ್ಕೆ ಏರಿಕೆಯಾದಂತಾಗಿದೆ ಮಾ.5ರಂದು ಈಕೆ ಕೊರೊನಾ ಸೋಂಕಿಗೆ ಬಲಿಯಾದ ವೃದ್ಧ ರೋಗಿ-250ರ ಮನೆಗೆ ತೆರಳಿ ದಿನಸಿ ಕಿಟ್ ಪಡೆದುಕೊಂಡಿದ್ದರು. ಈಕೆಗೆ ಕೊರೊನಾ ಸೋಂಕು ದೃಢವಾಗಿದ್ದು, …

Read More »

ಕೊರೊನಾದಿಂದ ಮೃತ ವೃದ್ಧನಿಗೆ ಕ್ಷೌರ ಮಾಡಿದ್ದ ಕ್ಷೌರಿಕನಿಗೆ ಕ್ವಾರಂಟೈನ್

ಚಿಕ್ಕಬಳ್ಳಾಪುರ: ನಗರದಲ್ಲಿ ಕೊರೊನಾಗೆ ಬಲಿಯಾದ ವೃದ್ಧನಿಗೆ ಕ್ಷೌರ ಮಾಡಿದ್ದ ಕ್ಷೌರಿಕನನ್ನೂ ಇದೀಗ ಕ್ವಾರಂಟೈನ್‍ನಲ್ಲಿ ಇಡಲಾಗಿದೆ. ಇದರ ಜೊತೆಗೆ ಈ ಕ್ಷೌರಿಕನ ಬಳಿ ಕ್ಷೌರ ಮಾಡಿಸಿಕೊಂಡವರಿಗೆ ಈಗ ಕೊರೊನಾ ಆತಂಕ ಶುರುವಾಗಿದೆ. ಕಳೆದ 4 ದಿನಗಳ ಹಿಂದೆ ಚಿಕ್ಕಬಳ್ಳಾಪುರ ನಗರದ 65 ವರ್ಷದ ವೃದ್ಧ ಕೊರೊನಾಗೆ ಬಲಿಯಾಗಿದ್ದರು. ಈಗಾಗಲೇ ವೃದ್ಧನ ಮಗ ಹಾಗೂ ಮನೆಯ ಎದುರಗಡೆಯ ಇಬ್ಬರು ಯುವಕರಿಗೆ ಕೊರೊನಾ ಸೋಂಕಿರುವುದು ದೃಢವಾಗಿದೆ. ಹೀಗಾಗಿ ಇವರ ಬಳಿ ಕ್ಷೌರ ಮಾಡಿಸಿಕೊಂಡವರಿಗೂ ಕೊರೊನಾ …

Read More »

ಶೋಭಾ ಕರಂದ್ಲಾಜೆ ವಿರುದ್ಧ ಎಚ್‍ಎಂ ರೇವಣ್ಣ ವಾಗ್ದಾಳಿ

ಚಿಕ್ಕಬಳ್ಳಾಪುರ: ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ರಾಜ್ಯ ಸರ್ಕಾರ ವಿರುದ್ಧ ಮಾಜಿ ಸಚಿವ ಎಚ್‍ಎಂ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ನಗರದಲ್ಲಿ ಕಾಂಗ್ರೆಸ್ ಪಕ್ಷದ ಕೋವಿಡ್-19 ಕಾರ್ಯಪಡೆ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಎಚ್‍ಎಂ ರೇವಣ್ಣ, ರಾಜ್ಯ ಸರ್ಕಾರದ ಕೆಲ ಸಚಿವರು ಸುಖಾಸುಮ್ಮನೆ ಬಾಯಿ ಹರಿದುಕೊಳ್ಳುತ್ತಿದ್ದಾರೆ, ಅದರಲ್ಲೂ ಶೋಭಾ ಕರಂದ್ಲಾಜೆ ಕೆಲವರನ್ನು ನೇಣು ಹಾಕಿ ಅಂತಿದ್ದಾರೆ. ಒಬ್ಬ ಜನಪ್ರತಿನಿಧಿಯಾದವರು ಈ ರೀತಿ ಮಾತನಾಡುವುದು ಸರಿಯಾ ಎಂದು ಪ್ರಶ್ನೆ ಮಾಡಿದರು. ಇದೇ …

Read More »

ನಗರದ 65 ವರ್ಷದ ವೃದ್ಧ ಕೊರೊನಾಗೆ ಬಲಿಯಾದ ಬೆನ್ನಲ್ಲೇ ಈಗ ಅವರ ಮಗ ಸೇರಿ ಮೂರು ಮಂದಿಗೆ ಕೊರೊನಾ ಸೋಂಕು

ಚಿಕ್ಕಬಳ್ಳಾಪುರ: ನಗರದ 65 ವರ್ಷದ ವೃದ್ಧ ಕೊರೊನಾಗೆ ಬಲಿಯಾದ ಬೆನ್ನಲ್ಲೇ ಈಗ ಅವರ ಮಗ ಸೇರಿ ಮೂರು ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಚಿಕ್ಕಬಳ್ಳಾಪುರ ನಗರದ 65 ವರ್ಷದ ವೃದ್ಧ ಕಳೆದ ಎರಡು ದಿನಗಳ ಹಿಂದೆ ಮೃತಪಟ್ಟಿದ್ದರು. ಈಗ ಅವರ ಸಂಪರ್ಕದಲ್ಲಿದ್ದ ಅವರ ಕೊನೆಯ ಮಗ(26) ಹಾಗೂ ಮೃತರ ಜೊತೆ ಆತ್ಮೀಯವಾಗಿ ಸಂಪರ್ಕದಲ್ಲಿದ್ದ ಎದುರುಗಡೆ ಮನೆಯ 20 ಮತ್ತು 19 ವರ್ಷದ ಯುವಕರಿಗೆ ಸೋಂಕು ತಗುಲಿದೆ. ವೃದ್ಧ ಮೃತಪಟ್ಟ …

Read More »

ಚಿಕ್ಕಬಳ್ಳಾಪುರ ನಗರಕ್ಕೂ ವ್ಯಾಪಿಸಿದೆಯಾ ಕೊರೊನಾ?

ಚಿಕ್ಕಬಳ್ಳಾಪುರ: ನಗರಕ್ಕೂ ಕೊರೊನಾ ವ್ಯಾಪಿಸಿದೆಯಾ ಅನ್ನೋ ಅನುಮಾನ ಈಗ ಶುರುವಾಗಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಜಿಲ್ಲೆಯಲ್ಲಿ 12 ಕೊರೊನಾ ಸೋಂಕಿತ ಪ್ರಕರಣಗಳು ಗೌರಿಬಿದನೂರಿನಲ್ಲೇ ಪತ್ತೆಯಾಗಿದ್ದವು. ಹೀಗಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದ ಜನ ನೆಮ್ಮದಿಯಿಂದ ಇದ್ದರು. ಆದರೆ ತಡರಾತ್ರಿ ಚಿಕ್ಕಬಳ್ಳಾಪುರ ನಗರದ ಕೆಲ ನಿವಾಸಿಗಳನ್ನ ಹಾಸ್ಪಿಟಲ್ ಕ್ವಾರಂಟೈನ್ ಗೆ ಕರೆತರಲಾಗಿದೆ. ಅಸಲಿಗೆ ಚಿಕ್ಕಬಳ್ಳಾಪುರ ನಗರದ ಸರಿ ಸುಮಾರು 70 ವರ್ಷದ ಮನೆಯ ಯಜಮಾನ ಅಸ್ತಮಾ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲಿದ್ದು, ಮನೆಯವರು …

Read More »

ದೊಡ್ಡಬಳ್ಳಾಪುರಕ್ಕೂ ಕಾಲಿಟ್ಟ ಕೊರೊನಾ- ರೈಲ್ವೇ ಉದ್ಯೋಗಿಗೆ ಸೋಂಕು

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಇಷ್ಟು ದಿನ ನಿರಾಳವಾಗಿದ್ದ ದೊಡ್ಡಬಳ್ಳಾಪುರ ತಾಲೂಕಿಗೂ ಕೊರೊನಾ ಕಾಲಿಟ್ಟಿದ್ದು, 39 ವರ್ಷದ ವ್ಯಕ್ತಿ (ರೋಗಿ ನಂಬರ್-246) ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ ಸೋಂಕಿತ ರೈಲ್ವೆ ಇಲಾಖೆಯಲ್ಲಿ ಟ್ರಾಕ್ ಮಿಷಿನ್ ಮೈಂಟೈನರ್ ಆಗಿದ್ದು, ಮಾರ್ಚ್ 14 ರಿಂದ 18ರ ನಡುವೆ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ದೆಹಲಿಯ ನಿಜಾಮುದ್ದೀನ್ …

Read More »

ಗುಣಮುಖರಾದ ಸೋಂಕಿತರಿಗೆ ಹೂ ಗಿಡ, ಹಣ್ಣು ಕೊಟ್ಟು ಬೀಳ್ಕೊಡುಗೆ

ಇದುವರೆಗೂ 8 ಮಂದಿ ಸೋಂಕಿತರು ಗುಣಮುಖ ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಂದೇ ದಿನ 5 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಅದರಲ್ಲೂ ವಿಶೇಷವಾಗಿ ಚಿಕ್ಕಬಳ್ಳಾಪುರ ಕೋವಿಡ್-19 ಜಿಲ್ಲಾಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದ ಒಂದೇ ಕುಟುಂಬದ ನಾಲ್ವರು ಏಕಕಾಲದಲ್ಲಿ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ಗುಣಮುಖರಾದ ನಾಲ್ವರನ್ನ ಇಂದು ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಒಂದೇ ಕುಟುಂಬದ ನಾಲ್ವರಿಗೆ ಚಿಕಿತ್ಸೆ ನೀಡಿದ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಅವರು ಮನೆಗೆ ಹೋಗುವಾಗ ಸರದಿ ಸಾಲಿನಲ್ಲಿ ನಿಂತು …

Read More »

ದೇಶದಲ್ಲೇ ಮೊದಲು: ಪೊಲೀಸ್ ಠಾಣೆಯಲ್ಲಿ ಕೊರೊನಾ ಸೊಂಕು ನಿವಾರಕ ಸುರಂಗ

ಚಿಕ್ಕಬಳ್ಳಾಪುರ: ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಕೊರೊನಾ ವೈರಸ್ ತಡೆಯುವ ಸಲುವಾಗಿ ಸುರಂಗ ಮಾರ್ಗವನ್ನ ನಿರ್ಮಿಸಲಾಗಿದೆ. ಅದರಲ್ಲೂ ವಿಶೇಷವಾಗಿ ಈ ಸುರಂಗ ಮಾರ್ಗ ಸಾವಯುವ ಸೋಂಕು ನಿವಾರಕವಾಗಿದೆ. ಸುರಂಗ ಮಾರ್ಗದಲ್ಲಿ ಸೋಡಿಯಂ ಹಿಪೋ ಕ್ಲೋರೈಡ್ ಸೊಲ್ಯೂಷನ್ ಬಳಕೆ ಮಾಡಲಾಗ್ತಿದೆ. ಆದರೆ ಈ ಸುರಂಗ ಮಾರ್ಗದಲ್ಲಿ ಯಾವುದೇ ರಾಸಾಯನಿಕಗಳನ್ನ ಬಳಸಲಾಗುತ್ತಿಲ್ಲ. ಬದಲಾಗಿ ಸಾವಯುವ ಅಂದ್ರೆ ಸಿಟ್ರಸ್ ಫ್ರೂಟ್ಸ್ ರಸಗಳನ್ನ ಬಳಸಲಾಗುತ್ತಿದೆ. ಇಡೀ ದೇಶದಲ್ಲಿ ಮೊದಲ ಬಾರಿಗೆ …

Read More »