ಚಿಕ್ಕಬಳ್ಳಾಪುರ: ಕೊರೊನಾ ವೈರಸ್ ಹರಡದಂತೆ ತಡೆಯುವ ಸಲುವಾಗಿ ಹಗಲು ರಾತ್ರಿ ಅನ್ನದೆ ಆರಕ್ಷಕರು ಹಾಗೂ ಸರ್ಕಾರಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಇದೀಗ ತಮ್ಮ ಕೆಲಸದ ಒತ್ತಡದ ನಡುವೆಯೂ ಚಿಕ್ಕಬಳ್ಳಾಪುರ ತಹಶೀಲ್ದಾರ್ ಹಾಗೂ ನಂದಿಗಿರಿಧಾಮ ಪೊಲೀಸ್ ಠಾಣೆಯ ಪಿಎಸ್‍ಐ, ನಿರ್ಗತಿಕರಿಗೆ ಉಚಿತ ತರಕಾರಿ ವಿತರಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ತಾಲೂಕಿನ ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯ ನಂದಿ ಗ್ರಾಮದ ಬಳಿ 40ಕ್ಕೂ ಹೆಚ್ಚು ಮಂದಿ ಟೈಲ್ಸ್ ಕೆಲಸ ಮಾಡುತ್ತಾರೆ. ಇವರು ಮಧ್ಯ …
Read More »ಜಮಾತ್‍ಗೆ ಹೋಗಿಬಂದಿದ್ದ ದಂಪತಿ ಕ್ವಾರಂಟೈನ್ – 17 ಮಂದಿಗೆ ಕೊರೊನಾ ಟೆಸ್ಟ್
ಚಿಕ್ಕಬಳ್ಳಾಪುರ: ಜಿಲ್ಲೆಯಿಂದ ದೆಹಲಿಯ ಜಮಾತ್‍ಗೆ ಹೋಗಿ ಬಂದ 17 ಮಂದಿ ಪತ್ತೆಯಾಗಿದ್ದಾರೆ ಎಂದು ಚಿಕ್ಕಬಳ್ಳಾಪುರ ಎಸ್‍ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ. ಮಾರ್ಚ್ 05ರಿಂದ ಮಾರ್ಚ್ 10ರ ಒಳಗಾಗಿ ಆಗ್ರಾ, ಅಜ್ಮೀರ್ ಹಾಗೂ ದೆಹಲಿ ಪ್ರವಾಸಕ್ಕೆ ತೆರಳಿ ವಾಪಸ್ಸಾಗಿದ್ದ ದಂಪತಿಯನ್ನ ಪತ್ತೆ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಂಪತಿಯನ್ನ ಹಾಸ್ಪಿಟಲ್ ಕ್ವಾರಂಟೈನ್ ಮಾಡಲಾಗಿದೆ. ಇದಲ್ಲದೇ ಫೆಬ್ರವರಿ 08ರಿಂದ ಫೆಬ್ರವರಿ 15ರ ಮಧ್ಯೆ ಜಮಾತ್‍ಗೆ ಹೋಗಿಬಂದಿದ್ದ 15 ಮಂದಿಯನ್ನ ಪತ್ತೆ ಮಾಡಲಾಗಿದೆ.ಈಗಾಗಲೇ ಅವರು …
Read More »ಗೌರಿಬಿದನೂರಿನಲ್ಲಿ 1 ಸಾವಿರ ಮಂದಿಗೆ ಹೋಂ ಕ್ವಾರಂಟೈನ್
ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿನೂರಿನಲ್ಲಿ ಕೊರೊನಾ ಅಬ್ಬರ ಹಿನ್ನೆಲೆ, ತಾಲೂಕಿನಲ್ಲಿ ಹೊಸದಾಗಿ ಸರಿ ಸುಮಾರು 1000 ಮಂದಿಯನ್ನು ಹೋಂ ಕ್ವಾರಂಟೈನ್‍ಗೆ ಒಳಪಡಿಸಲಾಗುತ್ತಿದೆ. ಸೋಂಕಿತರ ಮನೆಗಳಿರುವ ಹಿರೇಬಿದನೂರಿನ 132 ಮನೆಗಳಲ್ಲಿರುವ 872 ಮಂದಿಯನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗುತ್ತಿದೆ. ಮತ್ತೊಂದೆಡೆ ತಾಲೂಕಿನ ತೊಂಡೆಬಾವಿ ಗ್ರಾಮದಲ್ಲೂ ಸಹ 30 ಮನೆಗಳಲ್ಲಿರುವ ಸುಮಾರು 150ಕ್ಕೂ ಹೆಚ್ಚು ಮಂದಿಯನ್ನು ಹೋಂ ಕ್ವಾರಂಟೈನ್ ಮಾಡಲಾಗುತ್ತಿದೆ. ಸೋಂಕಿತರ ಮನೆಗಳಿರುವ ಗ್ರಾಮದ ನಿವಾಸಿಗಳನ್ನು ಸಂಪೂರ್ಣವಾಗಿ ಹೋಂ ಕ್ವಾರಂಟೈನ್ ಗೆ ಗುರಿಪಡಿಸಲಾಗುತ್ತಿದೆ.ಈಗಾಗಲೇ ಗೌರಿಬಿದನೂರು …
Read More »ಗೌರಿಬಿದನೂರಿನಲ್ಲಿ ಮತ್ತೆ ಐವರಿಗೆ ಕೊರೊನಾ – ಇಬ್ಬರ ವರದಿಗೆ ಕಾಯುತ್ತಿರುವ ವೈದ್ಯರು
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿದಿದ್ದು, ಹೊಸದಾಗಿ 5 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಸ್ಪಷ್ಟಪಡಿಸಿದ್ದಾರೆ. ಈ ಮೊದಲು 4 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅದರಲ್ಲಿ ಒಬ್ಬರೂ ಸಾವನ್ನಪ್ಪಿದ್ದರು. ಮೆಕ್ಕಾ ಪ್ರವಾಸ ಕೈಗೊಂಡು ವಾಪಸ್ ಆಗಿದ್ದ ನಂತರ ಮೊದಲು ಕೊರೊನಾ ಪತ್ತೆಯಾಗಿದ್ದ 31 ವರ್ಷದ ವ್ಯಕ್ತಿಯ ತಾಯಿ ಹಾಗೂ ಚಿಕ್ಕಮ್ಮ ಸೇರಿ ಮೂವರಿಗೆ ಸೋಂಕು ಧೃಢವಾಗಿತ್ತು. ಈ ಮೂವರು ಸಹ ಮೆಕ್ಕಾ …
Read More »ಪೊಲೀಸರ ಸೋಗಿನಲ್ಲಿ ಹಾಗೂ ಪತ್ರಕರ್ತರ ಸೋಗಿನಲ್ಲಿ ಡಕಾಯಿತಿಗೆ ಯತ್ನಿಸಿದ 10 ಮಂದಿ ಖದೀಮರು ಅಂದರ್
ಚಿಕ್ಕಬಳ್ಳಾಪುರ: ಪೊಲೀಸರು ಹಾಗೂ ಪತ್ರಕರ್ತರ ಸೋಗಿನಲ್ಲಿ ಡಕಾಯಿತಿಗೆ ಯತ್ನಿಸಿದ 10 ಮಂದಿ ಕಳ್ಳ ಖದೀಮರು ಜೈಲು ಸೇರಿದ್ದಾರೆ. ಬಂಧಿತರನ್ನು ಬೆಂಗಳೂರು ಮೂಲದ ಉಸ್ಮಾನ್ ಘನಿ, ತಮಿಳುನಾಡು ಮೂಲದ ಕಾರ್ತಿಕೇಯನ್, ಬೆಂಗಳೂರು ಮೂಲದ ಕಾರುಚಾಲಕ ಕಿರುಬಾಕರನ್, ರಘುನಂದನ್, ಚಿಂತಾಮಣಿ ಮೂಲದ ಸೈಯದ್ ಅಹಮದ್, ಕೋಲಾರದ ಸುನಿಲ್, ಬೆಂಗಳೂರಿನ ಸಲೀಂ, ನದೀಮ್ ಬಾಷಾ, ಕೋಲಾರದ ಕೆ ಸಿ ಕೃಷ್ಣ, ಹಾಗೂ ರಾಜೇಶ್ ಎಂದು ಗುರುತಿಸಲಾಗಿದೆ. ಮಾರ್ಚ್ 13ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ …
Read More »
Laxmi News 24×7