ಚಿಕ್ಕಮಗಳೂರು: ಹೊಳೆಗೆ ಹಾರಿ ನರ್ಸ್ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಮುಡುಬ ಬಳಿ ನಡೆದಿದೆ. ಮೃತರನ್ನ ರನ್ಯಾ ಬೇಸಿಲ್ (30) ಎಂದು ಗುರುತಿಸಲಾಗಿದೆ. ಎನ್.ಆರ್ ಪುರ ತಾಲೂಕಿನ ಮುತ್ತಿನಕೊಪ್ಪ ಮೂಲಕದ ಮೃತ ರನ್ಯಾ ಬೇಸಿಲ್ ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆ ಕೂಡ ಆಸ್ಪತ್ರೆಗೆ ಹೋಗಿ ತನ್ನ ಕೆಲಸ ಮುಗಿಸಿ ಮನೆಗೆ ಬಂದಿದ್ದರು. ನಿತ್ಯ ಶಿವಮೊಗ್ಗಕ್ಕೆ ಓಡಾಡುತ್ತಿದ್ದ ರನ್ಯಾ ನಿನ್ನೆ ಸಂಜೆ …
Read More »ಸ್ನೇಹಿತನ ಮದುವೆಗೆ ಬಂದಿದ್ದ ಯುವಕ ಭದ್ರಾ ನದಿಯಲ್ಲಿ ಮುಳುಗಿ ಸಾವು
ಚಿಕ್ಕಮಗಳೂರು: ಸ್ನೇಹಿತನ ಮದುವೆಗೆ ಬಂದಿದ್ದ ಯುವಕನೊಬ್ಬ ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಎನ್.ಆರ್.ಪುರ ತಾಲೂಕಿನ ಬನ್ನೂರು ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಗದಗ (Gadag) ಮೂಲದ ಅಭಿಷೇಕ್ (27) ಎಂದು ಗುರುತಿಸಲಾಗಿದೆ. ಬನ್ನೂರು ಸಮೀಪದ ಭದ್ರಾ ರೆಸಾರ್ಟ್‌ನಲ್ಲಿ ಆತ ತಂಗಿದ್ದ. ಏ.5ರ ಸಂಜೆ ಭದ್ರಾ ನದಿಯಲ್ಲಿ ಆತ ನಾಪತ್ತೆಯಾಗಿದ್ದ. ಬಳಿಕ ಬಾಳೆಹೊನ್ನೂರು ಪೊಲೀಸರು ಹಾಗೂ ಸ್ಥಳಿಯರು ಶೋಧ ನಡೆಸಿದ್ದರು. ಭಾನುವಾರ ಕತ್ತಲಾಗಿದ್ದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಇಂದು (ಏ.6) ಶೋಧ …
Read More »ಮೂಡಿಗೆರೆ, ಚಿಕ್ಕಮಗಳೂರಲ್ಲಿ ಭಾರೀ ಗಾಳಿ, ಮಳೆ – ವಾಹನ ಸವಾರರ ಪರದಾಟ
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಬಿಸಿಲಿನ ವಾತಾವರಣದ ನಡುವೆ ದಿಢೀರನೆ ಶುರುವಾದ ಮಳೆಯಿಂದ ವಾಹನ ಸವಾರರು ಪರದಾಡಿದ್ದಾರೆ. ಚಿಕ್ಕಮಗಳೂರು ನಗರದಲ್ಲೂ ಮಳೆ ಅಬ್ಬರಿಸುತ್ತಿದೆ. ಭಾರೀ ಗಾಳಿ ಜೊತೆ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಯಾವುದೇ ಮುನ್ಸೂಚನೆ ಇಲ್ಲದೇ ಆರಂಭವಾದ ಮಳೆಯಿಂದ ಜನ ಪರದಾಡುವಂತಾಗಿದೆ. ವಾಹನ ಸವಾರರು ವಾಹನ ಚಾಲನೆ ಮಾಡಲು ಸಾಧ್ಯವಾಗದೆ ಪರದಾಡಿದ್ದಾರೆ. ಬೈಕ್ ಸವಾರರು ಅಂಗಡಿಗಳು, ಬಸ್ ನಿಲ್ದಾಣಗಳ ಆಶ್ರಯ ಪಡೆದಿದ್ದಾರೆ. ಕೆಲವೆಡೆ ಗಾಳಿಯ ಅಬ್ಬರಕ್ಕೆ ಕಬ್ಬಿಣದ ತಗಡುಗಳು …
Read More »ಮಾನಸಿಕ ಕಿರುಕುಳ ಆರೋಪ – ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಆತ್ಮಹತ್ಯೆ
ಚಿಕ್ಕಮಗಳೂರು: ಹೊಸ ಕಮಿಟಿಯವರು 2020ರ ಲೆಕ್ಕಾಚಾರ ಕೇಳಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಆತ್ಮಹತ್ಯೆಗೆ ಶರಣಾದ ಘಟನೆ ತರೀಕೆರೆ ತಾಲೂಕಿನ ಹೆಚ್.ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಉಷಾ (45) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ 3 ಪುಟಗಳ ಡೆತ್ ನೋಟ್ ಬರೆದಿಟ್ಟು, 25 ನಿಮಿಷದ ವಿಡಿಯೋ ರೆಕಾರ್ಡ್ ಮಾಡಿದ್ದಾರೆ. 2010ರಿಂದ ಉಷಾ ಹಾಲು ಉತ್ಪಾದಕರ ಸಂಘದಲ್ಲಿ ಕಾರ್ಯದರ್ಶಿಯಾಗಿದ್ದರು. ಹಾಲು ಉತ್ಪಾದಕರ …
Read More »ನಾಗಾಲ್ಯಾಂಡ್ ಮೂಲದ ಯುವತಿ ಆತ್ಮಹತ್ಯೆ
ಚಿಕ್ಕಮಗಳೂರು: ನಾಗಾಲ್ಯಾಂಡ್ ಮೂಲದ ಯುವತಿಯೊಬ್ಬಳ ಶವ ಚಿಕ್ಕಮಗಳೂರಿನ ಅರವಿಂದ ನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಲಿನ್ಸುಲಾ (22) ಎಂದು ಗುರುತಿಸಲಾಗಿದೆ. ಯುವತಿ ರೆಸಾರ್ಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಎರಡು ದಿನದ ಹಿಂದೆ ಕಿವಿಶೆ ಕಿನಿಮಿ ಎಂಬವರ ಜೊತೆ ಅರ್ಧ ಗಂಟೆ ಮಾತನಾಡಿದ್ದಳು ಎಂದು ತಿಳಿದು ಬಂದಿದೆ. ಯುವತಿ ಸಾವಿಗೂ ಮುನ್ನ ರಾಜೇಶ್ ಹಾಗೂ ತೇಜಸ್ ಎಂಬವರ ಹೆಸರನ್ನು ಡೈರಿಯಲ್ಲಿ ಬರೆದಿಟ್ಟಿದ್ದಾಳೆ. ಲಿನ್ಸುಲಾಳಿಗೆ ರಾಜೇಶ್ ಹಾಗೂ ತೇಜಸ್ …
Read More »PUC ಹುಡ್ಗ, SSLC ಹುಡ್ಗಿ ಪ್ರೇಮಕ್ಕೆ ಲವ್ ಜಿಹಾದ್ ಆರೋಪ, ಹಲ್ಲೆ – ದೂರಿಗೆ ಪ್ರತಿದೂರು
ಚಿಕ್ಕಮಗಳೂರು: ಪಿಯುಸಿ ಓದುತ್ತಿರುವ ಹುಡುಗನಿಗೆ ಎಸ್‌ಎಸ್‌ಎಲ್‌ಸಿ ಹುಡುಗಿ ಮೇಲೆ ಪ್ರೇಮಾಂಕುರವಾಗಿ (Love), ಇಬ್ಬರು ಒಬ್ಬರನ್ನೊಬ್ನರು ಪ್ರೀತಿಸುತ್ತಿದ್ದು, ಇಬ್ಬರ ಪ್ರೇಮಪ್ರಸಂಗ ಪೊಲೀಸ್ ಠಾಣೆಯಲ್ಲಿ ದೂರಿಗೆ ಪ್ರತಿದೂರು ದಾಖಲಾಗುವ ಮಟ್ಟಕ್ಕೆ ಬಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಬಿಳಗುಳ ಗ್ರಾಮದ ಹುಡುಗ ಹಾಗೂ ಹುಡುಗಿ ಮೂಡಿಗೆರೆ ಪಟ್ಟಣಕ್ಕೆ ಓದಲು ಬರುವಾಗ ಇಬ್ಬರ ಮಧ್ಯೆ ಪ್ರೇಮಾಂಕುರವಾಗಿ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಈ ಬಗ್ಗೆ ಹಿಂದೂ ಸಂಘಟನೆ ಕಾರ್ಯಕರ್ತರು …
Read More »ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ
ಚಿಕ್ಕಮಗಳೂರು: ಯುಗಾದಿ ಹಬ್ಬದ ದಿನವೇ ಕಾಲಭೈರವೇಶ್ವನ ದೇಗುಲದ ಎದುರು ವಾಮಾಚಾರ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕಂಚಿನಕೆರೆ ಗ್ರಾಮದಲ್ಲಿ ನಡೆದಿದೆ. ಅಮಾವಾಸ್ಯೆ ಹಿನ್ನೆಲೆ ಕಳೆದ ರಾತ್ರಿ ದುಷ್ಕರ್ಮಿಗಳು ದೇವರ ಗುಡಿ ಎದುರೇ ವಾಮಾಚಾರ ನಡೆಸಿದ್ದಾರೆ. ದೇವಸ್ಥಾನದ ಮುಂಭಾಗ ದೊಡ್ಡ ಕಲ್ಲುಗಳನ್ನ ವೃತ್ತಾಕಾರದಲ್ಲಿ ಇಟ್ಟು ಅದರ ಮಧ್ಯೆ ವಾಮಾಚಾರ ನಡೆಸಿದ್ದಾರೆ. ಅರಿಶಿನ-ಕುಂಕುಮ, ನಿಂಬೆಹಣ್ಣು, ತೆಂಗಿನಕಾಯಿ, ಕುಂಬಳಕಾಯಿ ಹಾಗೂ ನಾಣ್ಯಗಳನ್ನು ಕೃತ್ಯಕ್ಕೆ ಬಳಸಿದ್ದಾರೆ. ದಕ್ಷಿಣ ಕಾಶಿ ಎಂದೇ ಖ್ಯಾತಿಯಾಗಿರುವ ಕಳಸದ ಕಳಸೇಶ್ವರ …
Read More »ಟ್ರಾಫಿಕ್ ರೂಲ್ಸ್ ಬ್ರೇಕ್ – ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ!
ಚಿಕ್ಕಮಗಳೂರು: ಹೆಲ್ಮೆಟ್ ಧರಿಸದೇ, ಒನ್ ವೇ ರೈಡಿಂಗ್ ಹಾಗೂ ಡ್ರಿಂಕ್ & ಡ್ರೈವ್ ಮಾಡಿದ ಆರೋಪಿಗೆ ಚಿಕ್ಕಮಗಳೂರು ನ್ಯಾಯಾಲಯ ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಕಮ್ಯೂನಿಟಿ ಶಿಕ್ಷೆ ನೀಡಿದೆ. ಕಡೂರು ಪಟ್ಟಣದ ಬಿಸಿಲೇಹಳ್ಳಿ ಗ್ರಾಮದ ರಂಜಿತ್ ಎಂಬವನು ಸಾಕಷ್ಟು ಸಲ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ದ. ಪೊಲೀಸರು ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಕರೆದೊಯ್ದಿದ್ದರು. ಈ ವೇಳೆ ನ್ಯಾಯಾಲಯದಲ್ಲಿ ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಕ್ಕೆ ಕೋರ್ಟ್ ಈ ರೀತಿಯ …
Read More »ಶಾಲೆ ಬಿಸಿಯೂಟಕ್ಕೂ ತಟ್ಟಿದ ಗ್ಯಾಸ್ ಅಭಾವದ ಬಿಸಿ – ಸೌದೆ ಒಲೆಯಲ್ಲೇ ಅಡುಗೆ ಮಾಡಿದ ಸಿಬ್ಬಂದಿ
ಚಿಕ್ಕಮಗಳೂರು: ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷದಿಂದ ಉಂಟಾದ ಗ್ಯಾಸ್ ಅಭಾವ ಶಾಲೆಗಳ ಬಿಸಿಯೂಟ ಯೋಜನೆ ಮೇಲೂ ಪರಿಣಾಮ ಬೀರಿದೆ. ಗ್ಯಾಸ್ ಇಲ್ಲದೇ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ (School) ಸಿಬ್ಬಂದಿ ಅಡುಗೆ ಮಾಡಲು ಪರದಾಡಿದ್ದಾರೆ. ಸಿಲಿಂಡರ್ ಸರಬರಾಜಾಗದೇ ಇದ್ದಿದ್ದರಿಂದ ಶಾಲೆಯ ಸಿಬ್ಬಂದಿ ಸೌದೆ ಬಳಸಿ ಬಯಲಲ್ಲಿ ಬಿಸಿಯೂಟ ಸಿದ್ಧಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಶಾಲೆಯ ಸಿಬ್ಬಂದಿ, ಐದು ದಿನಗಳಿಂದ ಗ್ಯಾಸ್ ಇಲ್ಲದೆ ಸೌದೆಯಲ್ಲೇ ಅಡುಗೆ …
Read More »ತಂದೆಯ ಅಂತ್ಯಸಂಸ್ಕಾರ ಮಾಡಿ, ಲಿಂಗ ಸಮಾನತೆ ಸಾರಿದ ಹೆಣ್ಣುಮಕ್ಕಳು
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ ಸಾರಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಚಪಟ್ಟಣದಲ್ಲಿ ನಡೆದಿದೆ. ಗುರುವಾರ (ಮಾ.12) ಬೀರೂರು ಪಟ್ಟಣದಲ್ಲಿ ಭಾವಸಾರ ಸಮಾಜದ ವಿಶ್ವನಾಥ ಎಂಬುವವರು ನಿಧನರಾಗಿದ್ದರು. ಮೃತ ವಿಶ್ವನಾಥ್ ಅವರಿಗೆ ಮಕ್ಕಳೇ ಇರಲಿಲ್ಲ. ಅವರ ಸಹೋದರರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದರು. ಹೀಗಾಗಿ ಮೃತ ವಿಶ್ವನಾಥ್ ಸಹೋದರನ ಮಗಳು ಐಶ್ವರ್ಯ ಅವರೂ ನನ್ನ …
Read More »
Laxmi News 24×7