Breaking News

ಚಿಕ್ಕ ಮಂಗಳೂರು

ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು

ಚಿಕ್ಕಮಗಳೂರು: ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ  ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಲೇಖನಾ (10) ಮೃತ ದುರ್ದೈವಿ. ಪೋಷಕರು ಮನೆಯಲ್ಲಿ ಇಲ್ಲದ ವೇಳೆ ದುರ್ಘಟನೆ ನಡೆದಿದೆ. ಮನೆಯಲ್ಲಿ ಜೋಕಾಲಿ ಆಡುವಾಗ ಸೀರೆ ಉರುಳಾಗಿ ಬಾಲಕಿ ಸಾವನ್ನಪ್ಪಿದ್ದಾಳೆ. ಚಿಕ್ಕಮಗಳೂರು ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Read More »

ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ

ಚಿಕ್ಕಮಗಳೂರು: ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ  ಪಾಲಕ್ಕಾಡ್ ಮೂಲದ ಬಾಲಕಿ ಶ್ರೀನಂದಾ (15) ಶವ ಪತ್ತೆಯಾಗಿದೆ. ಅರಿಶಿನಗುಪ್ಪಿಯಿಂದ 5 ಕಿ.ಮೀ ದೂರದ, ಸುಮಾರು 1500 ಅಡಿ  ಪ್ರಪಾತದಲ್ಲಿ ಬಾಲಕಿ ಮೃತದೇಹ ಪತ್ತೆಯಾಗಿದೆ. ಮಂಗಳವಾರ (ಏ.7) ಸಂಜೆ ಮಾಣಿಕ್ಯಾಧಾರ ಜಲಪಾತ ವೀಕ್ಷಿಸಲು ಹೋಗುವಾಗ ಬಾಲಕಿ ಕಣ್ಮರೆಯಾಗಿದ್ದಳು. 41 ಕುಟುಂಬದ ಸದಸ್ಯರೊಂದಿಗೆ ಹಂಪಿ ಪ್ರವಾಸ ಮುಗಿಸಿ ಇಲ್ಲಿಗೆ ಬಂದಿದ್ದ ಶ್ರೀನಂದಾ, ನಾಪತ್ತೆಯಾಗುವ ಕೇವಲ ಐದು ನಿಮಿಷಗಳ ಮೊದಲು ತಂದೆಯ ಮೊಬೈಲ್‍ನಲ್ಲಿ ಅತ್ಯಂತ ಖುಷಿಯಿಂದ …

Read More »

ಶಿವಮೊಗ್ಗದಲ್ಲಿ ನರ್ಸ್ ಆಗಿದ್ದ ಕಾಫಿನಾಡ ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ

ಚಿಕ್ಕಮಗಳೂರು: ಹೊಳೆಗೆ ಹಾರಿ ನರ್ಸ್ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಚಿಕ್ಕಮಗಳೂರು  ಜಿಲ್ಲೆ ಎನ್.ಆರ್.ಪುರ ತಾಲೂಕಿನ ಮುಡುಬ ಬಳಿ ನಡೆದಿದೆ. ಮೃತರನ್ನ ರನ್ಯಾ ಬೇಸಿಲ್ (30) ಎಂದು ಗುರುತಿಸಲಾಗಿದೆ. ಎನ್.ಆರ್ ಪುರ  ತಾಲೂಕಿನ ಮುತ್ತಿನಕೊಪ್ಪ ಮೂಲಕದ ಮೃತ ರನ್ಯಾ ಬೇಸಿಲ್ ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆ ಕೂಡ ಆಸ್ಪತ್ರೆಗೆ ಹೋಗಿ ತನ್ನ ಕೆಲಸ ಮುಗಿಸಿ ಮನೆಗೆ ಬಂದಿದ್ದರು. ನಿತ್ಯ ಶಿವಮೊಗ್ಗಕ್ಕೆ ಓಡಾಡುತ್ತಿದ್ದ ರನ್ಯಾ ನಿನ್ನೆ ಸಂಜೆ …

Read More »

ಸ್ನೇಹಿತನ ಮದುವೆಗೆ ಬಂದಿದ್ದ ಯುವಕ ಭದ್ರಾ ನದಿಯಲ್ಲಿ ಮುಳುಗಿ ಸಾವು

ಚಿಕ್ಕಮಗಳೂರು: ಸ್ನೇಹಿತನ ಮದುವೆಗೆ ಬಂದಿದ್ದ ಯುವಕನೊಬ್ಬ ಭದ್ರಾ ನದಿಯಲ್ಲಿ  ಮುಳುಗಿ ಸಾವನ್ನಪ್ಪಿದ ಘಟನೆ ಎನ್.ಆರ್.ಪುರ  ತಾಲೂಕಿನ ಬನ್ನೂರು ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಗದಗ (Gadag) ಮೂಲದ ಅಭಿಷೇಕ್ (27) ಎಂದು ಗುರುತಿಸಲಾಗಿದೆ. ಬನ್ನೂರು ಸಮೀಪದ ಭದ್ರಾ ರೆಸಾರ್ಟ್‌ನಲ್ಲಿ ಆತ ತಂಗಿದ್ದ. ಏ.5ರ ಸಂಜೆ ಭದ್ರಾ ನದಿಯಲ್ಲಿ ಆತ ನಾಪತ್ತೆಯಾಗಿದ್ದ. ಬಳಿಕ ಬಾಳೆಹೊನ್ನೂರು ಪೊಲೀಸರು ಹಾಗೂ ಸ್ಥಳಿಯರು ಶೋಧ ನಡೆಸಿದ್ದರು. ಭಾನುವಾರ ಕತ್ತಲಾಗಿದ್ದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಇಂದು (ಏ.6) ಶೋಧ …

Read More »

ಮೂಡಿಗೆರೆ, ಚಿಕ್ಕಮಗಳೂರಲ್ಲಿ ಭಾರೀ ಗಾಳಿ, ಮಳೆ – ವಾಹನ ಸವಾರರ ಪರದಾಟ

ಚಿಕ್ಕಮಗಳೂರು: ಮೂಡಿಗೆರೆ  ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಬಿಸಿಲಿನ ವಾತಾವರಣದ ನಡುವೆ ದಿಢೀರನೆ ಶುರುವಾದ ಮಳೆಯಿಂದ ವಾಹನ ಸವಾರರು ಪರದಾಡಿದ್ದಾರೆ. ಚಿಕ್ಕಮಗಳೂರು  ನಗರದಲ್ಲೂ ಮಳೆ ಅಬ್ಬರಿಸುತ್ತಿದೆ. ಭಾರೀ ಗಾಳಿ ಜೊತೆ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಯಾವುದೇ ಮುನ್ಸೂಚನೆ ಇಲ್ಲದೇ ಆರಂಭವಾದ ಮಳೆಯಿಂದ ಜನ ಪರದಾಡುವಂತಾಗಿದೆ. ವಾಹನ ಸವಾರರು ವಾಹನ ಚಾಲನೆ ಮಾಡಲು ಸಾಧ್ಯವಾಗದೆ ಪರದಾಡಿದ್ದಾರೆ. ಬೈಕ್‌ ಸವಾರರು ಅಂಗಡಿಗಳು, ಬಸ್ ನಿಲ್ದಾಣಗಳ ಆಶ್ರಯ ಪಡೆದಿದ್ದಾರೆ. ಕೆಲವೆಡೆ ಗಾಳಿಯ ಅಬ್ಬರಕ್ಕೆ ಕಬ್ಬಿಣದ ತಗಡುಗಳು …

Read More »

ಮಾನಸಿಕ ಕಿರುಕುಳ ಆರೋಪ – ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಆತ್ಮಹತ್ಯೆ

ಚಿಕ್ಕಮಗಳೂರು: ಹೊಸ ಕಮಿಟಿಯವರು 2020ರ ಲೆಕ್ಕಾಚಾರ ಕೇಳಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಆತ್ಮಹತ್ಯೆಗೆ ಶರಣಾದ ಘಟನೆ ತರೀಕೆರೆ ತಾಲೂಕಿನ ಹೆಚ್.ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಉಷಾ (45) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ 3 ಪುಟಗಳ ಡೆತ್ ನೋಟ್ ಬರೆದಿಟ್ಟು, 25 ನಿಮಿಷದ ವಿಡಿಯೋ ರೆಕಾರ್ಡ್ ಮಾಡಿದ್ದಾರೆ. 2010ರಿಂದ ಉಷಾ ಹಾಲು ಉತ್ಪಾದಕರ ಸಂಘದಲ್ಲಿ ಕಾರ್ಯದರ್ಶಿಯಾಗಿದ್ದರು. ಹಾಲು ಉತ್ಪಾದಕರ …

Read More »

ನಾಗಾಲ್ಯಾಂಡ್ ಮೂಲದ ಯುವತಿ ಆತ್ಮಹತ್ಯೆ

ಚಿಕ್ಕಮಗಳೂರು: ನಾಗಾಲ್ಯಾಂಡ್  ಮೂಲದ ಯುವತಿಯೊಬ್ಬಳ ಶವ ಚಿಕ್ಕಮಗಳೂರಿನ   ಅರವಿಂದ ನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಲಿನ್ಸುಲಾ (22) ಎಂದು ಗುರುತಿಸಲಾಗಿದೆ. ಯುವತಿ ರೆಸಾರ್ಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಎರಡು ದಿನದ ಹಿಂದೆ ಕಿವಿಶೆ ಕಿನಿಮಿ ಎಂಬವರ ಜೊತೆ ಅರ್ಧ ಗಂಟೆ ಮಾತನಾಡಿದ್ದಳು ಎಂದು ತಿಳಿದು ಬಂದಿದೆ. ಯುವತಿ ಸಾವಿಗೂ ಮುನ್ನ ರಾಜೇಶ್ ಹಾಗೂ ತೇಜಸ್ ಎಂಬವರ ಹೆಸರನ್ನು ಡೈರಿಯಲ್ಲಿ ಬರೆದಿಟ್ಟಿದ್ದಾಳೆ. ಲಿನ್ಸುಲಾಳಿಗೆ ರಾಜೇಶ್ ಹಾಗೂ ತೇಜಸ್ …

Read More »

PUC ಹುಡ್ಗ, SSLC ಹುಡ್ಗಿ ಪ್ರೇಮಕ್ಕೆ ಲವ್ ಜಿಹಾದ್ ಆರೋಪ, ಹಲ್ಲೆ – ದೂರಿಗೆ ಪ್ರತಿದೂರು

ಚಿಕ್ಕಮಗಳೂರು: ಪಿಯುಸಿ ಓದುತ್ತಿರುವ ಹುಡುಗನಿಗೆ ಎಸ್‌ಎಸ್‌ಎಲ್‌ಸಿ ಹುಡುಗಿ  ಮೇಲೆ ಪ್ರೇಮಾಂಕುರವಾಗಿ (Love), ಇಬ್ಬರು ಒಬ್ಬರನ್ನೊಬ್ನರು ಪ್ರೀತಿಸುತ್ತಿದ್ದು, ಇಬ್ಬರ ಪ್ರೇಮಪ್ರಸಂಗ ಪೊಲೀಸ್ ಠಾಣೆಯಲ್ಲಿ ದೂರಿಗೆ ಪ್ರತಿದೂರು ದಾಖಲಾಗುವ ಮಟ್ಟಕ್ಕೆ ಬಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ  ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಬಿಳಗುಳ ಗ್ರಾಮದ ಹುಡುಗ ಹಾಗೂ ಹುಡುಗಿ ಮೂಡಿಗೆರೆ ಪಟ್ಟಣಕ್ಕೆ ಓದಲು ಬರುವಾಗ ಇಬ್ಬರ ಮಧ್ಯೆ ಪ್ರೇಮಾಂಕುರವಾಗಿ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಈ ಬಗ್ಗೆ ಹಿಂದೂ ಸಂಘಟನೆ ಕಾರ್ಯಕರ್ತರು …

Read More »

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

ಚಿಕ್ಕಮಗಳೂರು: ಯುಗಾದಿ ಹಬ್ಬದ ದಿನವೇ ಕಾಲಭೈರವೇಶ್ವನ ದೇಗುಲದ  ಎದುರು ವಾಮಾಚಾರ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ  ತಾಲೂಕಿನ ಕಂಚಿನಕೆರೆ ಗ್ರಾಮದಲ್ಲಿ ನಡೆದಿದೆ. ಅಮಾವಾಸ್ಯೆ ಹಿನ್ನೆಲೆ ಕಳೆದ ರಾತ್ರಿ ದುಷ್ಕರ್ಮಿಗಳು ದೇವರ ಗುಡಿ ಎದುರೇ ವಾಮಾಚಾರ ನಡೆಸಿದ್ದಾರೆ. ದೇವಸ್ಥಾನದ ಮುಂಭಾಗ ದೊಡ್ಡ ಕಲ್ಲುಗಳನ್ನ ವೃತ್ತಾಕಾರದಲ್ಲಿ ಇಟ್ಟು ಅದರ ಮಧ್ಯೆ ವಾಮಾಚಾರ ನಡೆಸಿದ್ದಾರೆ. ಅರಿಶಿನ-ಕುಂಕುಮ, ನಿಂಬೆಹಣ್ಣು, ತೆಂಗಿನಕಾಯಿ, ಕುಂಬಳಕಾಯಿ ಹಾಗೂ ನಾಣ್ಯಗಳನ್ನು ಕೃತ್ಯಕ್ಕೆ ಬಳಸಿದ್ದಾರೆ. ದಕ್ಷಿಣ ಕಾಶಿ ಎಂದೇ ಖ್ಯಾತಿಯಾಗಿರುವ ಕಳಸದ ಕಳಸೇಶ್ವರ …

Read More »

ಟ್ರಾಫಿಕ್ ರೂಲ್ಸ್ ಬ್ರೇಕ್ – ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ!

ಚಿಕ್ಕಮಗಳೂರು: ಹೆಲ್ಮೆಟ್ ಧರಿಸದೇ, ಒನ್ ವೇ ರೈಡಿಂಗ್ ಹಾಗೂ ಡ್ರಿಂಕ್ & ಡ್ರೈವ್ ಮಾಡಿದ  ಆರೋಪಿಗೆ ಚಿಕ್ಕಮಗಳೂರು  ನ್ಯಾಯಾಲಯ ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಕಮ್ಯೂನಿಟಿ ಶಿಕ್ಷೆ ನೀಡಿದೆ. ಕಡೂರು  ಪಟ್ಟಣದ ಬಿಸಿಲೇಹಳ್ಳಿ ಗ್ರಾಮದ ರಂಜಿತ್‌ ಎಂಬವನು ಸಾಕಷ್ಟು ಸಲ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ದ. ಪೊಲೀಸರು ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಕರೆದೊಯ್ದಿದ್ದರು. ಈ ವೇಳೆ ನ್ಯಾಯಾಲಯದಲ್ಲಿ ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಕ್ಕೆ ಕೋರ್ಟ್ ಈ ರೀತಿಯ …

Read More »