Breaking News

ಚಿಕ್ಕ ಮಂಗಳೂರು

ಚಿಕ್ಕಮಗಳೂರಿಗೆ ಬರುತ್ತಿದೆ ಪ್ರವಾಸಿಗರ ದಂಡು- ಜಿಲ್ಲೆಯ ಜನರಲ್ಲಿ ಆತಂಕ………..

ಚಿಕ್ಕಮಗಳೂರು: ಕೊರೊನಾ ಲೆಕ್ಕಿಸದೆ ಜನ ಮೋಜು ಮಸ್ತಿ ಮಾಡಲು ಮುಂದಾಗಿದ್ದು, ಜಿಲ್ಲೆಯ ಪ್ರವಾಸಿ ತಾಣಗಳು ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಅಪಾರ ಪ್ರಮಾಣದಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಇದರಿಂದಾಗಿ ಜಿಲ್ಲೆಯ ಜನರಿಗೆ ಆತಂಕ ಎದುರಾಗಿದೆ. ನೂರಾರು ಕೊರೊನಾ ಪ್ರಕರಣಗಳಿರುವ ಜಿಲ್ಲೆಗಳಿಂದ ಎಗ್ಗಿಲ್ಲದೆ ಪ್ರವಾಸಿಗರು ಕಾಫಿನಾಡಿನತ್ತ ಧಾವಿಸುತ್ತಿದ್ದು, ಜಿಲ್ಲೆಯ ಜನರಲ್ಲಿ ಭಯ ಶುರುವಾಗಿದೆ. ಉಡುಪಿ, ಮಂಗಳೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳ ಜೊತೆ, ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, …

Read More »

ಸರ್ಕಾರ ಅನುಮತಿ ನೀಡಿದ್ರೂ ಸದ್ಯಕ್ಕಿಲ್ಲ ಅನ್ನಪೂರ್ಣೇಶ್ವರಿ ದರ್ಶನ

ಚಿಕ್ಕಮಗಳೂರು: ಸರ್ಕಾರ ಜೂನ್ 8ರಿಂದ ರಾಜ್ಯಾದ್ಯಂತ ಎಲ್ಲಾ ದೇವಾಲಯಗಳಲ್ಲೂ ಭಕ್ತರ ಪ್ರವೇಶಕ್ಕೆ ಅನುವು ಮಾಡಿಕೊಟ್ಟರೂ ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನ ಸದ್ಯಕ್ಕಿಲ್ಲ. ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ ಭಕ್ತರ ದರ್ಶನಕ್ಕೆ ಬ್ರೇಕ್ ಹಾಕಿದೆ. ಭಕ್ತರ ಹಿತದೃಷ್ಟಿ ಹಾಗೂ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಆಡಳಿತ ಮಂಡಳಿ ಈ ಕ್ರಮ ಕೈಗೊಂಡಿದೆ. ಹೊರನಾಡು ಸುಪ್ರಸಿದ್ಧ ಅನ್ನಪೂರ್ಣೇಶ್ವರಿ ದೇವರ ದರ್ಶನಕ್ಕೆ ಸದ್ಯಕ್ಕೆ ಬ್ರೇಕ್ ಹಾಕಿರುವ ಆಡಳಿತ ಮಂಡಳಿ ಭಕ್ತರು ಸಹಕರಿಸುವಂತೆ ಮನವಿ ಮಾಡಿದೆ. …

Read More »

ರಂಭಾಪುರಿ ಮಠಕ್ಕೆ ನಟ ಜಗ್ಗೇಶ್, ಕೋಮಲ್ ಭೇಟಿ…………..

ಚಿಕ್ಕಮಗಳೂರು: ಸ್ಯಾಂಡಲ್‍ವುಡ್ ನಟರು ಹಾಗೂ ಸಹೋದರರು ಅದ ನಟ ಜಗ್ಗೇಶ್ ಹಾಗೂ ಕೋಮಲ್ ರಂಭಾಪುರಿ ಪೀಠಕ್ಕೆ ಭೇಟಿ ನೀಡಿ ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಗೌರಿಗದ್ದೆ ಗ್ರಾಮದ ವಿನಯ್ ಗುರೂಜಿಯ ಭೇಟಿಗೆ ಬಂದು ಸ್ಯಾಂಡಲ್‍ವುಡ್ ಸಹೋದರರು ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ಪಂಚಪೀಠಗಳಲ್ಲೇ ಮೊದಲನೇ ಪೀಠ ರಂಭಾಪುರಿ ಭೇಟಿ ನೀಡಿ ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.ಮಠದ ಆವರಣದಲ್ಲಿ ಸ್ವಲ್ಪ ಹೊತ್ತು ಕಾಲಕಳೆದ ಚಂದನವನದ ಸಹೋದರರು …

Read More »

ಮಹಾಮಾರಿ ಕೊರೊನಾ ಗೆದ್ದ 7 ವರ್ಷದ ಮಕ್ಕಳು………….

ಚಿಕ್ಕಮಗಳೂರು: ದಿನದಿಂದ ದಿನಕ್ಕೆ ಜಗತ್ತಿನ ಮೇಲೆ ಸವಾರಿ ಹೆಚ್ಚು ಮಾಡುತ್ತಿರುವ ಕೊರೊನಾ ವೈರಸ್ ಈಗಾಗಲೇ ಲಕ್ಷಾಂತರ ಜನರನ್ನು ಬಲಿ ಪಡೆದಿದೆ. ಇತ್ತ ಹಲವರು ಮಹಾಮಾರಿಯ ವಿರುದ್ಧ ಹೋರಾಟ ಮಾಡಿ ಗುಣಮುಖರಾಗುತ್ತಿದ್ದು, ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಏಳು ವರ್ಷದ ಇಬ್ಬರು ಮಕ್ಕಳು ಕೊರೊನಾಗೆ ಸೆಡ್ಡು ಹೊಡೆದಿದ್ದಾರೆ. ಮೇ 19 ಹಾಗೂ 22 ರಂದು ಕೊರೊನಾ ಪಾಸಿಟಿವ್ ಬಂದಿದ್ದ ಇಬ್ಬರು ಮಕ್ಕಳು ಸೋಂಕಿನಿಂದ ಗುಣಮುಖರಾಗಿದ್ದಾರೆ. ಬದುಕಿನ ಅನಿವಾರ್ಯತೆಗೆ ಮುಂಬೈ ಸೇರಿದ್ದ ಇವರು ಕೊರೊನಾ …

Read More »

ಶೃಂಗೇರಿ ತಾಲೂಕಿನ ಆರೋಗ್ಯ ಅಧಿಕಾರಿಗಳು ಮಾಡಿರೋ ಎಡವಟ್ಟಿಗೆ ಇಡೀ ಶೃಂಗೇರಿ ತಾಲೂಕಿನಾದ್ಯಂತ ಆತಂಕ

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕಿನ ಆರೋಗ್ಯ ಅಧಿಕಾರಿಗಳು ಮಾಡಿರೋ ಎಡವಟ್ಟಿಗೆ ಇಡೀ ಶೃಂಗೇರಿ ತಾಲೂಕಿನಾದ್ಯಂತ ಆತಂಕ ಹೆಚ್ಚಾಗಿದೆ. ಮೇ 17ರಂದು ದೆಹಲಿಯಿಂದ ಬಂದು ಕ್ವಾರಂಟೈನ್‍ನಲ್ಲಿದ್ದ ವ್ಯಕ್ತಿಯ ಕೊರೊನಾ ಪರೀಕ್ಷೆಯ ವರದಿ ಬರುವ ಮುನ್ನವೇ ಅಧಿಕಾರಿಗಳು ಆತನನ್ನ ಮನೆಗೆ ಕಳಿಸಿ ಮಹಾ ಎಡವಟ್ಟು ಮಾಡಿದ್ದಾರೆ. ಇದರಿಂದ ಇಡೀ ಶೃಂಗೇರಿ ತಾಲೂಕಿನಾದ್ಯಂತ ಆತಂಕ ಹೆಚ್ಚಾಗಿದೆ. ಕ್ವಾರಂಟೈನ್‍ನಲ್ಲಿದ್ದ ವ್ಯಕ್ತಿಗೆ ಕೊರೊನಾ ನೆಗೆಟಿವ್ ಎಂದು ಅಧಿಕಾರಿಗಳು ಆತನನ್ನ ಮನೆಗೆ ಕಳುಹಿಸಿದ್ದರು. ಆದರೆ ಗುರುವಾರದ ಹೆಲ್ತ್ ಬುಲೆಟಿನ್‍ನಲ್ಲಿ …

Read More »

ಸ್ನಾನ ಮಾಡುವ ವಿಡಿಯೋ ಮಾಡಿ, ಅಪ್ಪನಿಂದಲೇ ಲೈಂಗಿಕ ಕಿರುಕುಳ- 18ರ ಮಗಳು ಆತ್ಮಹತ್ಯೆ

ಚಿಕ್ಕಮಗಳೂರು: ಮಗಳು ಸ್ನಾನ ಮಾಡುತ್ತಿರುವ ಫೋಟೋ ತೆಗೆದು, ವಿಡಿಯೋ ಮಾಡಿ, ಹೆತ್ತ ಅಪ್ಪನೇ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದು, ಮನನೊಂದ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೌಟುಂಬಿಕ ಜಗಳದಿಂದ ಯುವತಿಯ ಅಮ್ಮ ಬೇರೆಡೆ ವಾಸವಿದ್ದಳು. ಅಪ್ಪ-ಮಗಳು ಒಂದೇ ಮನೆಯಲ್ಲಿ ವಾಸವಿದ್ದರು. ಈ ವೇಳೆ 40 ವರ್ಷದ ಪಾಪಿ ಅಪ್ಪ ತಾನೇ ಸಾಕಿದ 18 ವರ್ಷದ ಮಗಳು ಸ್ನಾನ ಮಾಡುವ …

Read More »

ಕೊರೊನಾ ವರದಿ ನೆಗೆಟಿವ್ ಬಂದಿದ್ರೂ ಆತ್ಮಹತ್ಯೆ……….

ಚಿಕ್ಕಮಗಳೂರು: ವ್ಯಕ್ತಿಯೋರ್ವ ಆಸ್ಪತ್ರೆಯ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಮೇ 19ರಂದು ಕೊಪ್ಪ ಮೂಲದ 53 ವರ್ಷದ ವ್ಯಕ್ತಿಯ ಗಂಟಲು ಮೂಗಿನ ದ್ರವ ಸಂಗ್ರಹಿಸಿ ಕೋವಿಡ್-19 ಪರೀಕ್ಷೆಗೆ ಕಳುಹಿಸಲಾಗಿತ್ತು. ಹಾಗಾಗಿ ವ್ಯಕ್ತಿಯನ್ನು ಮೇ 20ರಂದು ಚಿಕ್ಕಮಗಳೂರಿನ ಕೆಎಸ್‍ಓಯು ಕಟ್ಟಡದಲ್ಲಿರುವ ಕೋವಿಡ್-19 ಕೇರ್ ಸೆಂಟರ್ ಗೆ ವರ್ಗಾವಣೆ ಮಾಡಲಾಗಿತ್ತು. ಸಾಂದರ್ಭಿಕ ಚಿತ್ರ ನೋವು ಮತ್ತು ರಕ್ತಸ್ರಾವದ ಮೂಲವ್ಯಾಧಿ ಕಾಣಿಸಿಕೊಂಡಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಐಸೋಲೇಶನ್ ವಾರ್ಡಿಗೆ …

Read More »

‘ಬಡವರಿಗೊಂದು, ಶ್ರೀಮಂತರಿಗೊಂದು ಕಾನೂನಾ?’- ಅಧಿಕಾರಿಗಳ ವಿರುದ್ಧ ಹಳ್ಳಿಗರು ಗರಂ

ಚಿಕ್ಕಮಗಳೂರು: ಜಿಲ್ಲೆಯ ವೈದ್ಯರ ಕೊರೊನಾ ವರದಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರೊಂದಿಗೆ ಸಂಪರ್ಕಕ್ಕೆ ಬಂದಿದ್ದ 800ಕ್ಕೂ ಅಧಿಕ ಜನರನ್ನು ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ಮುಂದಾಗಿದ್ದು, ಆದರೆ ಅಧಿಕಾರಿಗಳ ವಿರುದ್ಧ ಹಳ್ಳಿಯ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಬಡವರಿಗೊಂದು, ಶ್ರೀಮಂತರಿಗೊಂದು ಕಾನೂನು ಪಾಲನೆ ಮಾಡುತ್ತಿದ್ದಾರೆ ಎಂದು ಮಲೆನಾಡಿನ ಜನ ಆರೋಪಿಸಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ನಂದೀಪುರ ಗ್ರಾಮದ ಸರ್ಕಾರಿ ವೈದ್ಯರೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಅವರ ಸಂಪರ್ಕದಲ್ಲಿದ್ದ ಸುಮಾರು 800 ಜನರನ್ನು …

Read More »

ಸಾಂಸ್ಥಿಕ ಕ್ವಾರಂಟೈನ್ ಬೇಡ, ಮಲೆನಾಡಲ್ಲಿ ಹೋಂಕ್ವಾರಂಟೈನ್ ಮಾಡಿ: ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ಕರಾವಳಿ ಹಾಗೂ ಮಲೆನಾಡಿನ ಭಾಗದಲ್ಲಿ ಕ್ವಾರಂಟೈನ್‍ಗೆ ಒಳಪಡಿಸುವವರನ್ನು ಹೋಂ ಕ್ವಾರಂಟೈನಲ್ಲಿ ಇರಿಸುವಂತೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಮುಂಬೈ ಸೇರಿದಂತೆ ಬೇರೆ ರಾಜ್ಯ ಹಾಗೂ ವಿದೇಶಗಳಿಂದ ಸಾಕಷ್ಟು ಜನ ಬರುತ್ತಿದ್ದಾರೆ. ಇಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಕೂಡ ಹೆಚ್ಚಾಗುತ್ತಿವೆ. ಉಡುಪಿ-ಚಿಕ್ಕಮಗಳೂರು ಎರಡೂ …

Read More »

ಟ್ರ್ಯಾಕ್ಟರ್ ನೇಗಿಲಿಗೆ ಸಿಲುಕಿ ಹಾವಿನ ಬೆನ್ನು ಮೂಳೆ ಮುರಿತ- ಶಸ್ತ್ರಚಿಕಿತ್ಸೆ ಮಾಡಿಸಿದ ರೈತ

ಚಿಕ್ಕಮಗಳೂರು: ಜಮೀನು ಉಳುಮೆ ಮಾಡುವಾಗ ಟ್ರ್ಯಾಕ್ಟರ್ ನೇಗಿಲಿಗೆ ಸಿಲುಕಿದ ಭಾರೀ ಗಾತ್ರದ ನಾಗರಹಾವಿಗೆ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿಸುವ ಮೂಲಕ ರೈತರೊಬ್ಬರು ಮಾನವೀಯತೆ ಮೆರೆದಿದ್ದಾರೆ. ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಗುಬ್ಬಿಗಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ರೈತ ಗೋಪಾಲಾಚಾರ್ ಅವರು ಜಮೀನಿನಲ್ಲಿ ಉಳುಮೆ ಮಾಡುವಾಗ ಟ್ರ್ಯಾಕ್ಟರ್ ನೇಗಿಲಿಗೆ ಭೂಮಿಯೊಳಗಿದ್ದ ಬೃಹತ್ ಗಾತ್ರದ ನಾಗರಹಾವು ಸಿಲುಕಿಕೊಂಡಿದೆ. ನೇಗಿಲಿಗೆ ಸಿಕ್ಕ ನಾಗರಹಾವು ಬಿಡಿಸಿಕೊಳ್ಳಲಾಗದೆ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸಿದೆ. ಹಾವಿನ ಸ್ಥಿತಿ ಕಂಡ …

Read More »