ಚಿಕ್ಕಮಗಳೂರು: ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸುವವರಿಗೆ ಸಚಿವ ಸಿ.ಟಿ.ರವಿ ಸಾರ್ವಜನಿಕ ಚರ್ಚೆಗೆ ಆಹ್ವಾನ ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ವಿರೋಧಕ್ಕಾಗಿ ವಿರೋಧ ಮಾಡೋದು ಅರ್ಥಹೀನ. 2003ರಲ್ಲಿ ಡ್ರಾಫ್ಟ್ ಆಯ್ತು. ಯುಪಿಎ ಸರ್ಕಾರದ ಅವಧಿಯಲ್ಲಿ ಆ ಡ್ರಾಫ್ಟ್ ನ ಪರಿಷ್ಕರಣೆ ಮಾಡಿ ಮಾಡೆಲ್ ಡ್ರಾಫ್ಟ್ ಆದ ಬಳಿಕ 16 ರಾಜ್ಯಗಳು ಅದನ್ನು ಒಪ್ಪಿಕೊಂಡವು. ಈಗ ಅದನ್ನು ಇನ್ನಷ್ಟು ಸುಧಾರಣೆ ಮಾಡಿ ರೈತ ಸ್ನೇಹಿಯಾಗಿ ಹೊಸ ಕಾಯ್ದೆಯನ್ನು ಜಾರಿಗೆ …
Read More »ಮಾಜಿ ಶಾಸಕ ವೈ.ಎಸ್.ವಿ.ದತ್ತರ ಸೇವೆಗೆ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಫಿದಾ
ಚಿಕ್ಕಮಗಳೂರು: ಫೇಸ್‍ಬುಕ್ ಲೈವ್ ಮೂಲಕ ಎಸ್‍ಎಸ್‍ಎಲ್‍ಸಿ ಮಕ್ಕಳಿಗೆ ಪಾಠ ಮಾಡುತ್ತಿರೋ ಜಿಲ್ಲೆಯ ಕಡೂರಿನ ಮಾಜಿ ಶಾಸಕ ವೈ.ಎಸ್.ವಿ.ದತ್ತರ ಸೇವೆಗೆ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಫಿದಾ ಆಗಿದ್ದಾರೆ. ದತ್ತ ಅವರಿಗೆ ಪತ್ರ ಬರೆಯುವ ಮೂಲಕ ಅವರ ಸೇವೆಗೆ ಧನ್ಯವಾದ ತಿಳಿಸಿದ್ದಾರೆ. ವೃತ್ತಿ ಹಾಗೂ ಮಕ್ಕಳ ಮೇಲಿರುವ ನಿಮ್ಮ ಪ್ರೀತಿಗೆ ನನ್ನದೊಂದು ಸಲಾಂ ಎಂದು ಪತ್ರದಲ್ಲಿ ಬರೆದಿದ್ದಾರೆ. ದತ್ತ ಮೇಷ್ಟ್ರು ಎಸ್‍ಎಸ್‍ಎಲ್‍ಸಿ ಮಕ್ಕಳಿಗೆ ಪ್ರತಿ ದಿನ ಸಂಜೆ 7.30 ರಿಂದ …
Read More »ಪಾಕ್-ಬಾಂಗ್ಲಾ ವಿರುದ್ಧ ಯುದ್ಧ ಮಾಡಿದ್ದ ಯೋಧನಿಗೆ ಅನ್ನ, ನೀರು, ಸೂರಿಲ್ಲ
ಚಿಕ್ಕಮಗಳೂರು: ಆಸ್ತಿಗಾಗಿ ಮಗನೇ ಹೆತ್ತ ಅಪ್ಪನನ್ನು ಮನೆಯಿಂದ ಹೊರ ಹಾಕಿರುವಂತಹ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಬೊಮ್ಮಲಪುರದಲ್ಲಿ ನಡೆದಿದೆ. ಭಾರತೀಯ ಸೇನೆಯಲ್ಲಿ 22 ವರ್ಷ ದೇಶಕ್ಕಾಗಿ ಹೋರಾಡಿದ ಮಾಜಿ ಯೋಧನಿಂದು ತಿನ್ನೋಕೆ ಅನ್ನವಿಲ್ಲದೆ, ಮಲಗಲು ಜಾಗವಿಲ್ಲದೆ ಪಾಳುಬಿದ್ದ ಬಸ್ ನಿಲ್ದಾಣದಲ್ಲಿ ಬದುಕುವಂತಾಗಿದೆ. 77 ವರ್ಷದ ಮಾಜಿ ಸೈನಿಕ ರಾಮಪ್ಪ ಇಂದು ಕೊಪ್ಪದ ಬಸ್ ನಿಲ್ದಾಣದಲ್ಲಿ ನಿರ್ಗತಿಕನಂತೆ ಬದುಕುತ್ತಿದ್ದಾರೆ. ತಾವೇ ಕಟ್ಟಿದ ಮನೆಯಲ್ಲಿ ತನಗೇ ಆಶ್ರಯ ಸಿಗದೇ ಕೊಪ್ಪದ ಮಾಜಿ ಸೈನಿಕರ …
Read More »ಹೋಟೆಲ್‍ನ ಕ್ವಾರಂಟೈನ್ ಘಟಕ ಮಾಡುತ್ತಾರೆಂದು ವಿಷಯ ತಿಳಿದು ಹೋಟೆಲ್ ಸಿಬ್ಬಂದಿಗಳು ಮೊಬೈಲ್ ಸ್ವಿಚ್
ಚಿಕ್ಕಮಗಳೂರು: ಹೋಟೆಲ್‍ನ ಕ್ವಾರಂಟೈನ್ ಘಟಕ ಮಾಡುತ್ತಾರೆಂದು ವಿಷಯ ತಿಳಿದು ಹೋಟೆಲ್ ಸಿಬ್ಬಂದಿಗಳು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಹೋಗಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಕೋಟೆ ಬಡಾವಣೆಯಲ್ಲಿರೋ ವೈಟ್ ಫೆದರ್ ಹೋಟೆಲ್‍ನಲ್ಲಿ ವಿದೇಶ ಹಾಗೂ ಹೊರರಾಜ್ಯ ಬಂದ ಪ್ರಯಾಣಿಕರಿಗೆ ಕ್ವಾರಂಟೈನ್ ಘಟಕಕ್ಕೆ ಜಿಲ್ಲಾಡಳಿತ ಚಿಂತಿಸಿತ್ತು. ಈ ವಿಷಯ ತಿಳಿದ ಕೂಡಲೇ ಹೋಟೆಲ್ ಸಿಬ್ಬಂದಿಗಳು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಇತ್ತ ಈ ಹೋಟೆಲ್‍ನಲ್ಲಿ ಕ್ವಾರಂಟೈನ್ ಘಟಕ ಮಾಡಲು ಸ್ಥಳೀಯರು ಕೂಡ …
Read More »ರೈತರು ಹೇಳಿದ್ದೇ ದರ – ಈರುಳ್ಳಿ, ಟೊಮಾಟೊ, ಕಲ್ಲಂಗಡಿ ಖರೀದಿಸಿದ ವೈ.ಎಸ್.ವಿ.ದತ್ತ
ಚಿಕ್ಕಮಗಳೂರು: ಬದುಕಿಗಾಗಿ ಬೆಳೆ ಬೆಳೆದು ಲಾಕ್‍ಡೌನ್‍ನಿಂದ ಕೊಳ್ಳುವವರಿಲ್ಲದೆ ಕಂಗಾಲಾಗಿದ್ದ ರೈತರ ಹೊಲಗಳಿಗೆ ಹೋಗಿ ಜಿಲ್ಲೆಯ ಕಡೂರಿನ ಮಾಜಿ ಶಾಸಕ ವೈ.ಎಸ್.ವಿ.ದತ್ತ ಸಾಂಕೇತಿಕವಾಗಿ ರೈತರು ಹೇಳಿದ ಬೆಲೆಗೆ ಈರುಳ್ಳಿ, ಟೊಮಾಟೊ ಹಾಗೂ ಕಲ್ಲಂಗಡಿ ಖರೀದಿಸಿದ್ದಾರೆ. ಒಂದೆರಡು ಎಕ್ರೆಯಲ್ಲಿ ರೈತರು ಬದುಕಿಗಾಗಿ ನಾನಾ ಬೆಳೆ ಬೆಳೆದಿರುತ್ತಾರೆ. ಬೆಲೆ ಇದ್ದಾಗ ಬೆಳೆ ಇರಲ್ಲ. ಬೆಳೆ ಇದ್ದಾಗ ಬೆಲೆ ಇರಲ್ಲ. ರಾಜ್ಯದ ರೈತರದ್ದು ಶೋಚನಿಯ ಪರಿಸ್ಥಿತಿ. ರೈತರ ಬಹುಪಾಲು ಜೀವನ ಮಧ್ಯವರ್ತಿಗಳ ಜೇಬು ಸೇರುತ್ತೆ. ಅದರಲ್ಲೂ …
Read More »ಕಾಫಿ ಉದ್ಯಮದ ಮೇಲೆ ಕೊರೊನಾ ಕಾರ್ಮೋಡ…………
ಹಾಸನ: ಕೊರೊನಾ ಮಹಾಮಾರಿ ಹೊಡೆತಕ್ಕೆ ಕಾಫಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾಫಿಗೆ ಒಳ್ಳೆ ಬೆಲೆನೂ ಸಿಗುತ್ತಿಲ್ಲ. ಇತ್ತ ಕಾಫಿಯನ್ನು ಕೊಳ್ಳುವವರು ಇಲ್ಲದಂತಾಗಿದೆ. ಪ್ರತಿ ವರ್ಷ ಒಂದಲ್ಲ ಒಂದು ಸಮಸ್ಯೆ ಎದುರಿಸುತ್ತಿದ್ದ ಕಾಫಿತೋಟದ ಮಾಲೀಕರು ಈ ಬಾರಿ ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದರು. ಇದ್ದಕ್ಕಿದ್ದಂತೆ ವಕ್ಕರಿಸಿದ ಕೊರೊನಾ ಮಹಾಮಾರಿಯಿಂದಾಗಿ ಕಾಫಿ ಬೆಳೆಗೆ ಬೇಡಿಕೆ ಕುಸಿದಿದೆ. ಕಾಫಿ ಕೊಳ್ಳುವವರು ಕೂಡ ಮುಂದೆ ಬರುತ್ತಿಲ್ಲ. ಇದರಿಂದ ಸರಿಯಾದ ಬೆಲೆ ಕೂಡ ಸಿಗದಂತಾಗಿದೆ. ಇದೇ ರೀತಿ ಮುಂದುವರಿದರೆ …
Read More »ಚೌಕಾಬಾರದಲ್ಲಿ ಗೆದ್ದ 500 ರೂ.ಗಾಗಿ ಅಣ್ಣನನ್ನೇ ಕೊಲೆಗೈದ ತಮ್ಮ……..
ಚಿಕ್ಕಮಗಳೂರು: ಮದ್ಯದ ಅಮಲಿನಲ್ಲಿ ತಮ್ಮನೇ ಅಣ್ಣನನ್ನು ಹೊಡೆದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ ಹೋಬಳಿಯ ಉಪ್ಪಾರ ಬೀರನಹಳ್ಳಿ ಪಿಡಬ್ಲ್ಯುಡಿ ಕ್ವಾಟರ್ಸ್‍ನಲ್ಲಿ ನಡೆದಿದೆ. ಸಹೋದರರಿಬ್ಬರು ಮನೆ ಮುಂದೆ ಚೌಕಾಬಾರ ಆಟವಾಡುತ್ತಿದ್ದಾಗ ಕ್ಷುಲಕ್ಕ ಕಾರಣಕ್ಕೆ ಗಲಾಟೆ ಆರಂಭವಾಗಿದೆ. ತಮ್ಮ ಕಿರಣ್ ಬಳಿ ಅಣ್ಣ ಅರುಣ್ ಚೌಕಾಬಾರ ಆಟದಲ್ಲಿ 500 ರೂಪಾಯಿ ಸೋತಿದ್ದ. ಈ ವೇಳೆ ತಮ್ಮ ಕಿರಣ್ ಮೊದಲು ಸೋತ ಹಣ ಕೊಡು, ಆಮೇಲೆ ಆಡೋಣ ಎಂದು ದುಂಬಾಲು …
Read More »ಕೋವಿಡ್-19 ವಾರಿಯರ್ಸ್‌ಗೆ ಆರತಿ ಎತ್ತಿ, ಹೂಮಳೆಗೈದ ಗುರೂಜಿ……
ಚಿಕ್ಕಮಗಳೂರು: ಕೊರೊನಾ ವಾರಿಯರ್ಸ್ ಗಳಿಗೆ ಗೌರಿಗದ್ದೆ ದತ್ತಶ್ರಮದ ಅವಧೂತ ವಿನಯ್ ಗುರೂಜಿ ಆರತಿ ಎತ್ತಿ, ಹೂಮಳೆಗೈದಿದ್ದಾರೆ. ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಗೌರಿಗದ್ದೆ ದತ್ತಾಶ್ರಮದಲ್ಲಿ ಬುದ್ಧ ಪೂರ್ಣಿಮೆಯ ಅಂಗವಾಗಿ ಕೊರೊನಾ ವಾರಿಯರ್ಸ್ ಗಳಿಗೆ ಗೌರವ ಸಮರ್ಪಿಸಿದರು. ಹೆಲ್ತ್ ವಾರಿಯರ್ಸ್‍ಗೆ ವಿನಯ್ ಗುರೂಜಿ ಅವರು ಆರತಿ ಎತ್ತಿದರು. ಬಳಿಕ ಮೇಲ್ಭಾಗದಲ್ಲಿ ಕುಳಿತಿದ್ದ ಅವರ ಬಳಿಗೆ ಹೋಗಿ ಹೂಗಳನ್ನ ಸುರಿದು ಪುಷ್ಪಾರ್ಚನೆಯ ಮೂಲಕ ಗೌರವಿಸಿದ್ದಾರೆ. ಈ ವೇಳೆ ಮಾತನಾಡಿದ ವಿನಯ್ ಗುರೂಜಿ, ವೈದ್ಯರು, …
Read More »ಒಂದೂವರೆ ತಿಂಗಳ ಬಳಿಕ ಎಣ್ಣೆ ಸಿಕ್ಕ ಖುಷಿಗೆ ಮದ್ಯವ್ಯಸನಿಗಳು ಜಗತ್ತನ್ನೇ ಮರೆತು, ಮೈಮರೆತು ಎಣ್ಣೆಯ ನಶೆಯಲ್ಲಿ ತೇಲುತ್ತಿದ್ದಾರೆ.
ಚಿಕ್ಕಮಗಳೂರು: ಒಂದೂವರೆ ತಿಂಗಳ ಬಳಿಕ ಎಣ್ಣೆ ಸಿಕ್ಕ ಖುಷಿಗೆ ಮದ್ಯವ್ಯಸನಿಗಳು ಜಗತ್ತನ್ನೇ ಮರೆತು, ಮೈಮರೆತು ಎಣ್ಣೆಯ ನಶೆಯಲ್ಲಿ ತೇಲುತ್ತಿದ್ದಾರೆ. ಹೊಟ್ಟೆ ತುಂಬಾ ಕುಡಿದು ಎಲ್ಲೆಂದರಲ್ಲಿ ಬಿದ್ದರೂ ಕುಡುಕರಿಗೆ ಇನ್ನೂ ಸಮಾಧಾನ ಆಗಿಲ್ಲ ಅನಿಸುತ್ತಿದೆ. ಯಾಕಂದ್ರೆ ಮದ್ಯ ಪ್ರಿಯರು ಫುಲ್ ಟೈಟಾಗಿ ಮೈಮೇಲೆ ಜ್ಞಾನ ಇಲ್ಲದಂತೆ ಎದ್ದು-ಬಿದ್ದೋ ತೇಲ್ತಿರೋ ಘಟನೆ ಜಿಲ್ಲೆಯ ವಿವಿಧ ಭಾಗದಲ್ಲಿ ಇನ್ನೂ ನಿಂತಿಲ್ಲ. ಫುಲ್ ಟೈಟಾಗಿ ರಸ್ತೆ ಮಧ್ಯೆ ಪ್ರಜ್ಞೆ ತಪ್ಪಿ ಮಲಗುತ್ತಿರುವ ಸನ್ನಿವೇಶಗಳು ಕಡಿಮೆಯಾಗಿಲ್ಲ. ಕೊರೊನಾ …
Read More »ಲಾಕ್‍ಡೌನ್ ಎಫೆಕ್ಟ್ – ಮೇಷ್ಟ್ರಾದ ಮಾಜಿ ಶಾಸಕ ವೈ.ಎಸ್.ವಿ. ದತ್ತ
ಚಿಕ್ಕಮಗಳೂರು: ಜಿಲ್ಲೆಯ ಕಡೂರಿನ ಮಾಜಿ ಶಾಸಕ ವೈ.ಎಸ್.ವಿ. ದತ್ತ ಲಾಕ್‍ಡೌನ್ ಹಿನ್ನೆಲೆ ಮೇಷ್ಟ್ರಾಗಿ ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ. ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಫೇಸ್ ಬುಕ್ ಲೈವ್‍ನಲ್ಲಿ ಪ್ರತಿ ದಿನ ಸಂಜೆ 7.30 ರಿಂದ 8.30ರವೆಗೆ ಪಾಠ ಮಾಡುತ್ತಿದ್ದಾರೆ. ಒಂದು ವಾರ ಗಣಿತ, ಮತ್ತೊಂದು ವಾರ ಭೌತಶಾಸ್ತ್ರ ಪಾಠ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ದಿನಗಣನೆ ಆರಂಭವಾಗಿದೆ. ಜೂನ್ ಮೊದಲ ವಾರದಲ್ಲಿ ಪರೀಕ್ಷೆ ನಡೆಯಬಹುದು ಎಂದು ಹೇಳಲಾಗುತ್ತಿದೆ. ಪರೀಕ್ಷೆ ನಡೆಸಲು ಸರ್ಕಾರ …
Read More »
Laxmi News 24×7