Home / ಜಿಲ್ಲೆ / ಚಿಕ್ಕ ಮಂಗಳೂರು (page 11)

ಚಿಕ್ಕ ಮಂಗಳೂರು

ರ್ಕಾರ ಮನೆಯಲ್ಲೇ ಇರುವ ಬಡವರಿಗೆ ಕೊಡುತ್ತಿರುವ ಉಚಿತ ಅಕ್ಕಿಯಲ್ಲೂ ಸೊಸೈಟಿಯವರು ಗೋಲ್‍ಮಾಲ್ ಮಾಡುತ್ತಿದ್ದಾರೆ: ಸಿ.ಟಿ.ರವಿ

ಚಿಕ್ಕಮಗಳೂರು: ಕೊರೊನಾ ಆತಂಕದಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದ್ದು, ಸರ್ಕಾರ ಮನೆಯಲ್ಲೇ ಇರುವ ಬಡವರಿಗೆ ಕೊಡುತ್ತಿರುವ ಉಚಿತ ಅಕ್ಕಿಯಲ್ಲೂ ಸೊಸೈಟಿಯವರು ಗೋಲ್‍ಮಾಲ್ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಆರೋಪಕ್ಕೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬ್ಗಲ್, ನಿಡುವಾಳೆ, ಕೂವೆ ಗ್ರಾಮಗಳ ಸೊಸೈಟಿಯಲ್ಲಿ ಅಕ್ರಮ ನಡೆಯುತ್ತಿದ್ದು, ನಿಗದಿಗಿಂತ ಕಡಿಮೆ ಪಡಿತರ ನೀಡುತ್ತಿದ್ದಾರೆ. ಜೊತೆಗೆ ಎಲ್ಲರಿಂದಲೂ …

Read More »

ಚಿಕ್ಕಮಗಳೂರು:ಕೂಲಿಗೆ ಹೋಗಿಲ್ಲ, ಆಹಾರ ಕಿಟ್ ಸಿಕ್ಕಿಲ್ಲ- ಹಕ್ಕಿಪಿಕ್ಕಿ ಜನಾಂಗದವರ ಅಳಲು

ಚಿಕ್ಕಮಗಳೂರು: ದೇಶದಲ್ಲಿ ಲಾಕ್‍ಡೌನ್ ಆದಾಗಿನಿಂದ ನಗರದ ಇಂದಿರಾಗಾಂಧಿ ಬಡಾವಣೆಯ ಹಕ್ಕಿಪಿಕ್ಕಿ ಕಾಲೋನಿಯ ಮಹಿಳೆಯರು ಕೂಲಿ ಕೆಲಸಕ್ಕೆ ಹೋಗುತ್ತಿಲ್ಲ. ನಮಗೆ ಆಹಾರ ಸಾಮಾಗ್ರಿಗಳ ಕಿಟ್ ಕೂಡ ಸಿಕ್ಕಿಲ್ಲ, ಆಹಾರ ಧಾನ್ಯಗಳೇ ಇಲ್ಲದಂತಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ತಕ್ಷಣವೇ ಸ್ಪಂದಿಸಿದ ಜಿಲ್ಲಾಧಿಕಾರಿ ಈ ಕುರಿತು ಅಧಿಕಾರಿಗಳಿಗೆ ಸೂಚಿಸಿದ್ದು, ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕರು …

Read More »

ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ- ನಾಪತ್ತೆಯಾಗಿದ್ದ ಆರೋಪಿ ಅರೆಸ್ಟ್”….

ಚಿಕ್ಕಮಗಳೂರು: ಬೆಂಗಳೂರಿನ ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್ ಮೇಲಿನ ಹಲ್ಲೆ ಪ್ರಕರಣ ಹಸಿ ಇರುವಾಗಲೇ ಕಾಫಿನಾಡಲ್ಲೂ ಅಂತಹದ್ದೊಂದು ಪ್ರಕರಣ ನಡೆದಿದೆ. ರಸ್ತೆ ಬದಿಯಲ್ಲಿ ಕಸದ ಆಟೋ ನಿಲ್ಲಿಸಿದ್ದರು ಎಂಬ ಕಾರಣಕ್ಕೆ ಏಕಾಏಕಿ ಮಹಿಳೆ ಹಾಗೂ ಪುರುಷ ಪೌರಕಾರ್ಮಿಕರ ಮೇಲೆ ನಡೆಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಉಪ್ಪಳ್ಳಿಯ ಮಸೀದಿ ಸಮೀಪದ ತಮೀಮ್ ಬಂಧಿತ. ಆಟೋದಲ್ಲಿದ್ದ ಮಂಜುನಾಥ್, ಯೇಸು ಹಾಗೂ ಮಹಿಳಾ ಕಾರ್ಮಿಕರ ಮೇಲೂ ತಮೀಮ್ ಹಲ್ಲೆಗೈದಿದ್ದು, ಯೇಸು ಅವರ ಶರ್ಟ್ ಹರಿದು …

Read More »

ರಜೆ ಬೇಕಂದ್ರೆ ಈ ಸಾಹೇಬ್ರ ಮನೆಗ್ ಎಸಿ ಹಾಕಿಸಿಕೊಡು ಎಂದು ಡಿಮ್ಯಾಂಡ್,,,,,

ಚಿಕ್ಕಬಳ್ಳಾಪುರ: ತಹಶೀಲ್ದಾರ್ ದ್ವಿತೀಯ ದರ್ಜೆಯ ಸಹಾಯಕನಿಗೆ ಕರೆ ಮಾಡಿ ಮನೆಗೆ ಎಸಿ ಹಾಕಿಸಿಕೊಡು ಎಂದು ಡಿಮ್ಯಾಂಡ್ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ಗೌರಿಬಿದನೂರು ತಹಶೀಲ್ದಾರ್ ರಾಜಣ್ಣ, ದ್ವೀತಿಯ ದರ್ಜೆ ಸಹಾಯಕ ಮಹಮದ್ ಹಸನ್ ಮುಲ್ಲಾ ಅವರಿಗೆ ಕರೆ ಮಾಡಿದ್ದು, ಮನೆಗೆ ಎಸಿ ವ್ಯವಸ್ಥೆ ಮಾಡುವಂತೆ ಡಿಮ್ಯಾಂಡ್ ಮಾಡಿದ್ದಾರೆ. ಮಾರ್ಚ್ 23ರಂದು ಕರೆ ಮಾಡಿ, ಏನು ಕೆಲಸ ಮಾಡದೆ ನಿನಗೆ ಸಂಬಳ ಮಾಡಿಕೊಟ್ಟಿದ್ದೇನೆ. ಹಾಗಾಗಿ ನೀನು ನನ್ನ ಮನೆಗೆ …

Read More »

ಗೂಡ್ಸ್ ವಾಹನದಲ್ಲಿ ಬಂದ ಕಾರ್ಮಿಕರು ಕ್ಯಾರಂಟೈನ್‍ಗೆ ಶಿಫ್ಟ್……..

ಚಿಕ್ಕಮಗಳೂರು: ಕಳೆದ ಎರಡು ತಿಂಗಳ ಹಿಂದೆ ಗಾರೆ ಕೆಲಸಕ್ಕೆಂದು ಗದಗ ಜಿಲ್ಲೆಯಿಂದ ಮಡಿಕೇರಿಯ ಕುಶಾಲನಗರಕ್ಕೆ ಬಂದಿದ್ದ ಕಾರ್ಮಿಕರು ಕೆಲಸ ಇಲ್ಲವೆಂದು ಗೂಡ್ಸ್ ವಾಹನದಲ್ಲಿ ಗದಗಕ್ಕೆ ತೆರಳುತ್ತಿದ್ದರು. ಈ ವೇಳೆ ಚಿಕ್ಕಮಗಳೂರು ನಗರ ಪೊಲೀಸರು ರಕ್ಷಿಸಿ ನಗರದ ನರಿಗುಡ್ಡನಹಳ್ಳಿ ಸರ್ಕಲ್‍ನಲ್ಲಿರುವ ಬಿಸಿಎಂ ಹಾಸ್ಟೆಲ್ಲಿನ ಕ್ವಾರಂಟೈನ್‍ಗೆ ದಾಖಲಿಸಿದ್ದಾರೆ. ಹಾಸನ ಮಾರ್ಗದಿಂದ ಬಂದ ವಾಹನವನ್ನು ಹಿರೇಮಗಳೂರು ಚೆಕ್‍ಪೋಸ್ಟ್ ಬಳಿ ಕರ್ತವ್ಯ ನಿರತ ಪೊಲೀಸರು ಚೆಕ್ ಮಾಡಿದ್ದು, ಗಾಡಿಯಲ್ಲಿ ಆರು ಜನ ಇದ್ದರು. ಎಲ್ಲರೂ ಗದಗ …

Read More »

ಸೈಕಲ್‍ಗಾಗಿ ಕೂಡಿಟ್ಟ ಹಣವನ್ನು ಸಿಎಂ ಕೊರೊನಾ ನಿಧಿಗೆ ಕೊಟ್ಟ ಬಾಲಕಿ

ಚಿಕ್ಕಮಗಳೂರು: ಅಪ್ಪ-ಅಮ್ಮ ಕೊಟ್ಟ ಹಣವನ್ನು ಸೈಕಲ್ ತೆಗೆದುಕೊಳ್ಳಲು ಕೂಡಿಟ್ಟಿದ್ದ ಐದನೇ ತರಗತಿ ವಿದ್ಯಾರ್ಥಿನಿಯೋರ್ವಳು ಆ ಹಣವನ್ನ ಸಿಎಂ ಕೊರೊನಾ ನಿಧಿಗೆ ನೀಡಿದ್ದಾರೆ. ನಗರದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ವಾಸವಿರುವ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರದೀಪ್ ಹಾಗೂ ಸುಮಿತ್ರ ಪುತ್ರಿ ಪ್ರಣತಿ ತನ್ನ ಹುಂಡಿಯ ಐದು ಸಾವಿರ ಹಣವನ್ನು ಕೊರೊನಾ ನಿಧಿಗೆ ನೀಡಿದ್ದಾರೆ. ಆರಂಭದಲ್ಲಿ ಈ ಹಣವನ್ನು ಪಿಎಂ ನಿಧಿಗೆ ನೀಡಬೇಕೆಂದು ಬಾಲಕಿಯ ಆಸೆ ಇತ್ತು. ಆದರೆ ಪಿಎಂ …

Read More »

ತರೀಕೆರೆ ರಾಮದ ಜನ ಇಂದಿಗೂ ದಿನಕ್ಕೆ 19 ಗಂಟೆಗಳ ಕಾಲ ಗ್ರಾಮದ ದ್ವಾರಬಾಗಿಲಲ್ಲಿ ಕಾವಲು ಕೂತಿದ್ದಾರೆ.

ಚಿಕ್ಕಮಗಳೂರು: ಕೊರೊನಾ ವೈರಸ್‍ಗೆ ಆತಂಕಗೊಂಡು ಕಳೆದ 26 ದಿನಗಳಿಂದ ಜಿಲ್ಲೆಯ ತರೀಕೆರೆ ತಾಲೂಕಿನ ಹಾದಿಕೆರೆ ಗ್ರಾಮದ ಜನ ಇಂದಿಗೂ ದಿನಕ್ಕೆ 19 ಗಂಟೆಗಳ ಕಾಲ ಗ್ರಾಮದ ದ್ವಾರಬಾಗಿಲಲ್ಲಿ ಕಾವಲು ಕೂತಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಆತಂಕ ಹೆಚ್ಚುತ್ತಲೇ ಇದೆ. ಸಾವಿನ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಇವತ್ತು ನೆಗೆಟಿವ್ ಇದ್ದ ಜಿಲ್ಲೆಯಲ್ಲಿ ಬೆಳಗಾಗುವಷ್ಟರಲ್ಲಿ ಎರಡು-ಮೂರು ಪಾಸಿಟಿವ್ ಪ್ರಕರಣಗಳು ಬರುತ್ತಿವೆ. ಇಷ್ಟು ದಿನ ಜಿಲ್ಲೆ, ತಾಲೂಕು, ಪಟ್ಟಣಗಳಲ್ಲಿದ್ದ ಕೊರೊನಾ ಹಳ್ಳಿಗೂ ಕಾಲಿಟ್ಟಿರುವುದರಿಂದ ಜನ …

Read More »

ಮಂಗಳೂರು ಜೈಲಿನಿಂದ 40 ಕೈದಿಗಳು ಚಿಕ್ಕಮಗಳೂರಿನ ಕಾರಾಗೃಹಕ್ಕೆ ಶಿಫ್ಟ್…

ಚಿಕ್ಕಮಗಳೂರು : ಮಂಗಳೂರು ಕಾರಾಗೃಹದಲ್ಲಿ ಸ್ಥಳಾವಕಾಶದ ಕೊರತೆಯಿಂದ ಚಿಕ್ಕಮಗಳೂರಿನ ಕಾರಾಗೃಹಕ್ಕೆ 40 ಕೈದಿಗಳನ್ನು ಸ್ಥಳಾಂತರಿಸಲಾಗಿದೆ. ಮಂಗಳೂರಿನ ಕೈದಿಗಳನ್ನು ಚಿಕ್ಕಮಗಳೂರು ಕಾರಾಗೃಹಕ್ಕೆ ಕರೆ ತಂದಿರುವುದಕ್ಕೆ ಇಲ್ಲಿನ ಕಾರಾಗೃಹದಲ್ಲಿರುವ ಕೈದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಕೊರೊನಾ ಸೋಂಕಿನ ಕಾರಣದಿಂದ ಸಾಮಾಜಿಕ ಅಂತರ ಕಾಪಾಡಲು ಸಮಸ್ಯೆಯಾಗುವ ಹಿನ್ನೆಲೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದ್ದು. ಎರಡು ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ 40 ಕೈದಿಗಳು ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಕಾರಾಗೃಹ ಸೇರಿದ್ದಾರೆ.

Read More »

ಕುರಿ ಮಾಂಸಕ್ಕೆ ದನದ ಮಾಂಸ ಮಿಕ್ಸ್ – ನಾಲ್ವರ ಬಂಧನ

ಚಿಕ್ಕಮಗಳೂರು: ಲಾಕ್‍ಡೌನ್ ವೇಳೆ ಮಾಂಸಕ್ಕೆ ಭಾರೀ ಬೇಡಿಕೆ ಇರುವ ಹಿನ್ನೆಲೆ ಕುರಿ ಮಾಂಸಕ್ಕೆ ದನದ ಮಾಂಸವನ್ನು ಮಿಕ್ಸ್ ಮಾಡಿ ನಾಲ್ವರು ಸಿಕ್ಕಿಬಿದ್ದಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಸಿರಾಜ್, ಅನಿಲ್ ಡಿಮೆಲ್ಲೊ, ಡೆಂನ್ಜಿಲ್, ಡೆಮಿಸ್ ಡಿಸೋಜ ಎಂಬವರನ್ನು ಬಂಧಿಸಲಾಗಿದೆ. ಕೊರೊನಾ ಆತಂಕದಿಂದ ಪ್ರತಿದಿನ ಜನಸಾಮಾನ್ಯರು ಆತಂಕದಿಂದ ಬದುಕುತ್ತಿದ್ದಾರೆ. ಜನರಿಗೆ ಊಟ-ತಿಂಡಿಗೆ ಸಮಸ್ಯೆ ಆಗಬಾರದೆಂದು ಸರ್ಕಾರ ಮಾಂಸವನ್ನು ಅತ್ಯಾವಶ್ಯಕ ಎಂದು ಪರಿಗಣಿಸಿ ಮಾಂಸ ಮಾರಾಟಕ್ಕೆ …

Read More »

ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮಹಿಳಾ ಕಾರ್ಮಿಕರು ಸಾವು

ಚಿಕ್ಕಮಗಳೂರು: ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮಹಿಳಾ ಕಾರ್ಮಿಕರು ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ಕಳಸದ ಬಾಳೆಹೊಳೆ ಸಮೀಪದ ಹಿತ್ಲುಮಕ್ಕಿ ಗ್ರಾಮದಲ್ಲಿ ಶನಿವಾರ ನಡೆದಿದೆ. ತಮಿಳುನಾಡು ಮೂಲದ ಜ್ಯೋತಿ (28), ಮಾದಮ್ಮ(65), ಮಾರಿ (27) ಮೃತ ತೋಟದ ಕಾರ್ಮಿಕರು. ಮಾದಮ್ಮ ಹಾಗೂ ಜ್ಯೋತಿ ತಾಯಿ ಮಗಳಾಗಿದ್ದು, ಮಾರಿ ಸಂಬಂಧಿ ಎಂದು ತಿಳಿದು ಬಂದಿದೆ. ತಮಿಳುನಾಡಿನ ಸೇಲಂ ಧರ್ಮಪುರಿ ಜಿಲ್ಲೆಯ ಪಾಪರೆಟ್ಟಿ ತಾಲೂಕಿನ 14 ಕಾರ್ಮಿಕರು ಕಳೆದ ಕೆಲ ತಿಂಗಳ …

Read More »