Breaking News

ಚಿಕ್ಕ ಮಂಗಳೂರು

ಹಣ ಕೊಡ್ಲಿಲ್ಲ ಅಂತ ಮಾಲೀಕನ ಟಿಪ್ಪರ್ ಎಗರಿಸಿದ ಭೂಪ………

ಚಿಕ್ಕಮಗಳೂರು: ಹೆಂಡತಿ-ಮಕ್ಕಳಿಗೆ ಹಣ ಬೇಕು. ನಿಮ್ಮ ಕಾಲಿಗೆ ಬೀಳ್ತೀನಿ ಅಂದ್ರು ಮಾಲೀಕ ಹಣ ಕೊಡಲಿಲ್ಲ ಅಂತ ಹೇಳದೆ-ಕೇಳದೆ ಎಣ್ಣೆ ಏಟಲ್ಲಿ 14 ಚಕ್ರದ ಟಿಪ್ಪರ್ ಲಾರಿಯನ್ನ ತೆಗೆದುಕೊಂಡು ಊರಿಗೆ ಹೋಗಲು ಯತ್ನಿಸಿದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ. ಮಂಗಳೂರು ಮೂಲದ ರಂಗಪ್ಪ ಎಂಬವನು ಕಡೂರು ತಾಲೂಕಿನಲ್ಲಿ ಪ್ರಭಾಕರ್ ಅವರ ಬಳಿ ಕೆಲಸ ಮಾಡುತ್ತಿದ್ದ. ಕೊರೊನಾ ವೈರಸ್ ಆತಂಕದಿಂದ ಇಡೀ ದೇಶವೇ ಲಾಕ್‍ಡೌನ್ ಆದಮೇಲೆ ಡ್ರೈವರ್ ರಂಗಪ್ಪ ಒಂದೂವರೆ ತಿಂಗಳು …

Read More »

ಮಲೆನಾಡಲ್ಲಿ ಭಾರೀ ಮಳೆ, ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ…

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಭರಣಿ ಮಳೆ ಅಬ್ಬರಕ್ಕೆ ಮಲೆನಾಡಿಗರು ತತ್ತರಿಸಿದೆ. ಮೂಡಿಗೆರೆಯಲ್ಲಿ ಸಂಜೆಯಿಂದ ಧಾರಾಕಾರ ಮಳೆ ಸುರಿದಿದ್ದು, ಜನ ಆತಂಕಕ್ಕೀಡಾಗಿ, ಕಳೆದ ವರ್ಷದ ಮಳೆಯನ್ನು ನೆನಪಿಸಿಕೊಂಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ತೋರಣಮಾವು ಗ್ರಾಮದಲ್ಲಿ ಮಳೆ ಆರಂಭಕ್ಕೂ ಮುನ್ನ ಸಿಡಿಲು ಬಡಿದು ತೆಂಗಿನ ಮರವೊಂದು ಹೊತ್ತಿ ಉರಿದಿದೆ. ನೋಡನೋಡ್ತಿದ್ದಂತೆ ತೆಂಗಿನ ಸಂಪೂರ್ಣ ಸುಟ್ಟು ಕರಕಲಾಗಿದೆ. ಚಿಕ್ಕಮಗಳೂರು ತಾಲೂಕಿನ ಬಯಲುಸೀಮೆ ಭಾಗ ಕಳಸಾಪುರ, ಬೆಳವಾಡಿ ಹಾಗೂ …

Read More »

ಬಿರುಗಾಳಿ ಸಹಿತ ಮಳೆ,ಎಷ್ಟೇ ಮಳೆ ಸುರಿದರೂ ಕ್ಯೂನಿಂದ ಮಾತ್ರ ಕದಲಿಲ್ಲ. ಎಣ್ಣೆಯನ್ನು ಪಡೆಯುವ ವರೆಗೂ

ಚಿಕ್ಕಮಗಳೂರು: ಜಿಲ್ಲೆಯ ವಿವಿಧ ಭಾಗಗಳಲ್ಲಿ ಸೋಮವಾರ ಸಂಜೆ ಭಾರೀ ಮಳೆಯಾಗಿದ್ದು, ಬಿರುಗಾಳಿ ಸಹಿತ ಮಳೆಗೆ ಬೃಹತ್ ಮರ ಬಿದ್ದಿ ಪರಿಣಾಮ ಕಾರ್ ಜಖಂ ಆಗಿದೆ. ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದ್ದು, ತರೀಕೆರೆಯಲ್ಲಿ ಕಾರಿನ ಮೇಲೆ ಬೃಹತ್ ಮರ ಬಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ನಿರಂತರ ಮಳೆಯಿಂದಾಗಿ ಹೆಚ್ಚಿದ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದ್ದು, ಕೊರೊನಾ, ಲಾಕ್‍ಡೌನ್ ಮಧ್ಯೆ ಮಳೆಯೂ ಸುರಿಯುತ್ತಿದೆ ಎಂದು ಭಯಭೀತರಾಗಿದ್ದಾರೆ. ತರೀಕೆರೆ, ಮೂಡಿಗೆರೆ, ಕಡೂರು ತಾಲೂಕಿನ ಹಲವೆಡೆ …

Read More »

ಮಲೆನಾಡಲ್ಲಿ ಮಳೆಯ ಅಬ್ಬರ – 20 ಕಂಬ, 50 ಮರ ಧರೆಗೆ…………

ಚಿಕ್ಕಮಗಳೂರು: ಕಳೆದ ದಿನ ಅನೇಕ ಕಡೆ ಬಿರುಗಾಳಿ ಸಹಿತ ಜೋರಾಗಿ ಮಳೆಯಾಗಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಕೂಡ ಮಳೆಯ ಅಬ್ಬರ ಮುಂದುವರಿದಿದ್ದು, ಕೊಪ್ಪ, ಎನ್‍ಆರ್ ಪುರ, ಶೃಂಗೇರಿಯಲ್ಲಿ ಭಾರೀ ಗಾಳಿಯೊಂದಿಗೆ ವರುಣ ದೇವ ಅಬ್ಬರಿಸಿದ್ದಾನೆ. ಭಾನುವಾರ ರಾತ್ರಿ ಮೂಡಿಗೆರೆ ತಾಲೂಕಿನಲ್ಲಿ ಸಾಧಾರಣ ಮಳೆಯಾಗಿದೆ. ಆದರೆ ಕೊಪ್ಪದಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ಸುರಿದ ಭಾರೀ ಮಳೆಗೆ ಕೊಪ್ಪ ಅಕ್ಷರಶಃ ನಲುಗಿ ಹೋಗಿದೆ. ಕೊಪ್ಪದಲ್ಲಿ ಮಳೆ ಜೊತೆ ಬೀಸಿದ ರಣಗಾಳಿಗೆ ಸುಮಾರು …

Read More »

ಬಾರ್ ಓಪನ್ ಆಗಿದೆ ಅಂತ ಓಡೋಡಿ ಬಂದು ಏನೂ ಸಿಗದೆ ವಾಪಸ್ಸಾದ್ರು!

ಚಿಕ್ಕಮಗಳೂರು: ಬಾರ್ ಓಪನ್ ಆಗಿದೆ ಎಂದು ಓಡೋಡಿ ಬಂದ ಮದ್ಯ ಪ್ರಿಯರು ಬಳಿಕ ನಿರಾಸೆಗೊಂಡ ಘಟನೆ ಕಡೂರು ತಾಲೂಕಿನ ಯಗಟಿ ಬಳಿಯ ಯಳ್ಳಂಬಳಸೆ ಗ್ರಾಮದಲ್ಲಿ ನಡೆದಿದೆ. ಜನ ಎಷ್ಟರ ಮಟ್ಟಿಗೆ ಎಣ್ಣೆ-ಎಣ್ಣೆ ಅಂತಿದ್ದಾರೆ ಅಂದ್ರೆ ಬೆಳಗೆದ್ದು ದೇವರ ಮುಖ ನೋಡ್ತಾರೋ ಇಲ್ವೋ ಗೊತ್ತಿಲ್ಲ. ಆದರೆ ಎಣ್ಣೆ ಅಂಗಡಿ ಓಪನ್ ಆಗುತ್ತಾ, ಸಿಎಂ ಏನಾದರೂ ಹೇಳ್ತಾರಾ ಅಂತ ಟಿವಿ ಹಾಕುವಂತಹ ಸ್ಥಿತಿ ನಿರ್ಮಾಣವಾಗಿದೆ. ಹೀಗಿರುವಾಗ ಯಗಟಿ ಬಳಿ ಓರ್ವ ಎಣ್ಣೆ ಅಂಗಡಿ …

Read More »

ಕೊರೊನಾ ಭೀತಿ ನಡುವೆ ಆಸ್ತಿಗಾಗಿ ಕಿತ್ತಾಟ ನಡೆದಿದ್ದು, ಕೊಲೆ………….

ಚಿಕ್ಕಮಗಳೂರು: ಕೊರೊನಾ ಭೀತಿ ನಡುವೆ ಆಸ್ತಿಗಾಗಿ ಕಿತ್ತಾಟ ನಡೆದಿದ್ದು, ಕೊಲೆಯಲ್ಲಿ ಅಂತ್ಯವಾದ ಘಟನೆ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಚೇಗು ಗ್ರಾಮದ ನಿವಾಸಿ ಮಂಜಯ್ಯ (58) ಮೃತ ದುರ್ದೈವಿ. ಲಕ್ಷ್ಮಣ ಕೊಲೆಗೈದ ಆರೋಪಿ. ಸೋಮವಾರ ರಾತ್ರಿ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತೋಟದ ವಿಚಾರವಾಗಿ ಮಂಜಯ್ಯ ಹಾಗೂ ಲಕ್ಷ್ಮಣ ಸಹೋದರರ ನಡುವೆ ಕಳೆದ ಕೆಲವು ದಿನಗಳಿಂದ ಜಗಳ ನಡೆದಿತ್ತು. ಈ ವಿಚಾರವಾಗಿ ಸೋಮವಾರವೂ ಸಹೋದರರು ಪರಸ್ಪರ ಗಲಾಟೆ …

Read More »

10 ಮಂದಿಯ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ……..

ಚಿಕ್ಕಮಗಳೂರು: ಕೊರೊನಾ ಆತಂಕ ಹಾಗೂ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಕೇವಲ 10 ಮಂದಿಯ ಸಮ್ಮುಖದಲ್ಲಿ ಸರಳವಾದ ಮದುವೆಯೊಂದು ನಡೆದಿದೆ. ಮೂಡಿಗೆರೆ ತಾಲೂಕಿನ ಬೈದುವಳ್ಳಿ ಗ್ರಾಮದ ರಂಜಿತ್ ಹಾಗೂ ಮೇಘ ಮದುವೆ ಇಂದು ಮೂಡಿಗೆರೆ ನಗರದ ರೈತ ಭವನದಲ್ಲಿ ನಿಶ್ಚಯವಾಗಿತ್ತು. ಆದರೆ ಕೊರೊನಾ ಆತಂಕದಿಂದ ದೇಶವೇ ಲಾಕ್‍ಡೌನ್ ಆಗಿದೆ. ಅಲ್ಲದೇ ಮದುವೆ, ಸಭೆ, ಸಮಾರಂಭಗಳಿಗೆ ಸರ್ಕಾರ ಅವಕಾಶ ನೀಡದ ಹಿನ್ನೆಲೆಯಲ್ಲಿ ಈ ಜೋಡಿ ಬೈದುವಳ್ಳಿ ಗ್ರಾಮದಲ್ಲಿನ ಈಶ್ವರ …

Read More »

ರ್ಕಾರ ಮನೆಯಲ್ಲೇ ಇರುವ ಬಡವರಿಗೆ ಕೊಡುತ್ತಿರುವ ಉಚಿತ ಅಕ್ಕಿಯಲ್ಲೂ ಸೊಸೈಟಿಯವರು ಗೋಲ್‍ಮಾಲ್ ಮಾಡುತ್ತಿದ್ದಾರೆ: ಸಿ.ಟಿ.ರವಿ

ಚಿಕ್ಕಮಗಳೂರು: ಕೊರೊನಾ ಆತಂಕದಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದ್ದು, ಸರ್ಕಾರ ಮನೆಯಲ್ಲೇ ಇರುವ ಬಡವರಿಗೆ ಕೊಡುತ್ತಿರುವ ಉಚಿತ ಅಕ್ಕಿಯಲ್ಲೂ ಸೊಸೈಟಿಯವರು ಗೋಲ್‍ಮಾಲ್ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಆರೋಪಕ್ಕೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬ್ಗಲ್, ನಿಡುವಾಳೆ, ಕೂವೆ ಗ್ರಾಮಗಳ ಸೊಸೈಟಿಯಲ್ಲಿ ಅಕ್ರಮ ನಡೆಯುತ್ತಿದ್ದು, ನಿಗದಿಗಿಂತ ಕಡಿಮೆ ಪಡಿತರ ನೀಡುತ್ತಿದ್ದಾರೆ. ಜೊತೆಗೆ ಎಲ್ಲರಿಂದಲೂ …

Read More »

ಚಿಕ್ಕಮಗಳೂರು:ಕೂಲಿಗೆ ಹೋಗಿಲ್ಲ, ಆಹಾರ ಕಿಟ್ ಸಿಕ್ಕಿಲ್ಲ- ಹಕ್ಕಿಪಿಕ್ಕಿ ಜನಾಂಗದವರ ಅಳಲು

ಚಿಕ್ಕಮಗಳೂರು: ದೇಶದಲ್ಲಿ ಲಾಕ್‍ಡೌನ್ ಆದಾಗಿನಿಂದ ನಗರದ ಇಂದಿರಾಗಾಂಧಿ ಬಡಾವಣೆಯ ಹಕ್ಕಿಪಿಕ್ಕಿ ಕಾಲೋನಿಯ ಮಹಿಳೆಯರು ಕೂಲಿ ಕೆಲಸಕ್ಕೆ ಹೋಗುತ್ತಿಲ್ಲ. ನಮಗೆ ಆಹಾರ ಸಾಮಾಗ್ರಿಗಳ ಕಿಟ್ ಕೂಡ ಸಿಕ್ಕಿಲ್ಲ, ಆಹಾರ ಧಾನ್ಯಗಳೇ ಇಲ್ಲದಂತಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ತಕ್ಷಣವೇ ಸ್ಪಂದಿಸಿದ ಜಿಲ್ಲಾಧಿಕಾರಿ ಈ ಕುರಿತು ಅಧಿಕಾರಿಗಳಿಗೆ ಸೂಚಿಸಿದ್ದು, ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕರು …

Read More »

ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ- ನಾಪತ್ತೆಯಾಗಿದ್ದ ಆರೋಪಿ ಅರೆಸ್ಟ್”….

ಚಿಕ್ಕಮಗಳೂರು: ಬೆಂಗಳೂರಿನ ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್ ಮೇಲಿನ ಹಲ್ಲೆ ಪ್ರಕರಣ ಹಸಿ ಇರುವಾಗಲೇ ಕಾಫಿನಾಡಲ್ಲೂ ಅಂತಹದ್ದೊಂದು ಪ್ರಕರಣ ನಡೆದಿದೆ. ರಸ್ತೆ ಬದಿಯಲ್ಲಿ ಕಸದ ಆಟೋ ನಿಲ್ಲಿಸಿದ್ದರು ಎಂಬ ಕಾರಣಕ್ಕೆ ಏಕಾಏಕಿ ಮಹಿಳೆ ಹಾಗೂ ಪುರುಷ ಪೌರಕಾರ್ಮಿಕರ ಮೇಲೆ ನಡೆಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಉಪ್ಪಳ್ಳಿಯ ಮಸೀದಿ ಸಮೀಪದ ತಮೀಮ್ ಬಂಧಿತ. ಆಟೋದಲ್ಲಿದ್ದ ಮಂಜುನಾಥ್, ಯೇಸು ಹಾಗೂ ಮಹಿಳಾ ಕಾರ್ಮಿಕರ ಮೇಲೂ ತಮೀಮ್ ಹಲ್ಲೆಗೈದಿದ್ದು, ಯೇಸು ಅವರ ಶರ್ಟ್ ಹರಿದು …

Read More »