Breaking News

ಚಿತ್ರದುರ್ಗ

ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾಯುಕ್ತ ದಾಳಿ

ಚಿತ್ರದುರ್ಗ: ಚಿತ್ರದುರ್ಗದಲ್ಲಿ  ಭ್ರಷ್ಟ ಅಧಿಕಾರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ  ಅಧಿಕಾರಿಗಳು ಬಿಸಿಮುಟ್ಟಿಸಿದ್ದಾರೆ. ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಮಾಜಿ ಅಕೌಂಟೆಂಟ್ ಸುಶೀಲಮ್ಮ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಶೀಲಮ್ಮ ವರ್ಷದ ಹಿಂದೆ ವಿಆರ್‌ಎಸ್ ಪಡೆದಿದ್ದರು. ಅಕೌಂಟೆಂಟ್ ಆಗಿದ್ದ ವೇಳೆ ಸುಶೀಲಮ್ಮ ಭ್ರಷ್ಟಾಚಾರ ಮಾಡಿದ್ದು, ಆದಾಯ ಮೀರಿ ಹಣ, ಆಸ್ತಿ ಗಳಿಕೆ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಚಿತ್ರದುರ್ಗದ ಮೆದೇಹಳ್ಳಿ …

Read More »

ಅಧ್ಯಾಪಕನೊಂದಿಗೆ ಸಂಬಂಧ ಕಲ್ಪಿಸಿ ಅಪಪ್ರಚಾರ – ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

ಚಿತ್ರದುರ್ಗ: ಅಧ್ಯಾಪಕನ ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ ಹಿನ್ನೆಲೆ ಮನನೊಂದು ಬಿಎಎಂಎಸ್ ವಿದ್ಯಾರ್ಥಿನಿ  ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ  ಜಿಲ್ಲೆ ಹೊಳಲ್ಕೆರೆ  ನಗರದ ಬಸವ ಲೇಔಟ್‌ನಲ್ಲಿ ನಡೆದಿದೆ. ನಿಖಿತಾ (23) ನೇಣಿಗೆ ಶರಣಾಗಿರುವ ವಿದ್ಯಾರ್ಥಿನಿ. ಡೆತ್ ನೋಟ್ ಬರೆದಿಟ್ಟು ನಿಖಿತಾ ನೇಣಿಗೆ ಶರಣಾಗಿದ್ದಾಳೆ. ಅಧ್ಯಾಪಕ ಡಾ.ರಾಜು ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ ಮಾಡುತ್ತಿದ್ದ ಹಿನ್ನೆಲೆ ಡೆತ್‌ನೋಟ್‌ನಲ್ಲಿ ಡಾ.ರಾಜು, ಪತ್ನಿ ನಿಶಾ ಹಾಗೂ ಕೆಲ ವಿದ್ಯಾರ್ಥಿನಿಯರ ಹೆಸರು ಬರೆದಿಟ್ಟು ನಿಖಿತಾ ಆತ್ಮಹತ್ಯೆಗೆ …

Read More »

ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ – ಬಳಿಕ ಮಚ್ಚಿನಿಂದ ಹಲ್ಲೆ ನಡೆಸಿ ಪತಿ ಎಸ್ಕೇಪ್‌

ಚಿತ್ರದುರ್ಗ: ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ಬಳಿಕ ಮಚ್ಚಿನಿಂದ ಹಲ್ಲೆ ನಡೆಸಿ ಪತಿ ಪರಾರಿಯಾಗಿರುವ ಘಟನೆ ಚಿತ್ರದುರ್ಗದ  ಮಾಳಪ್ಪನಹಟ್ಟಿಯಲ್ಲಿ ನಡೆದಿದೆ. ಚಿತ್ರದುರ್ಗದ ನೆಹರು ನಗರದವನಾಗಿರುವ ಆರೋಪಿ ಪತಿ ಸುಹೇಲ್, ಪತ್ನಿ ತಾಸಿನಾ ಬಾನು ಹಾಗೂ ಪುತ್ರಿ ರೋಷನಿ, ಸಹೋದರಿ ನೇಹಾ, ನೇಹಾ ಪುತ್ರಿ ಇಕ್ರಾ, ಹಿರಿಯ ಸಹೋದರಿ ನಗ್ಮಾ ನಾಯ್ಕ್ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಸುಹೇಲ್ ಹಾಗೂ ಪತ್ನಿ ತಾಸಿನಾ ಬಾನು ಪ್ರೀತಿಸಿ …

Read More »

ಡಿಸಿ, ಎಡಿಸಿ ಸಹಿ ದುರುಪಯೋಗ ಮಾಡಿ 15 ಲಕ್ಷದ ನಕಲಿ ಬಿಲ್ ಸೃಷ್ಟಿ – ಐವರು ಅರೆಸ್ಟ್

ಚಿತ್ರದುರ್ಗ: ಜಿಲ್ಲಾಧಿಕಾರಿ ಹಾಗೂ ಎಡಿಸಿಯವರ ಡಿಜಿಟಲ್ ಸಹಿ ದುರುಪಯೋಗಪಡಿಸಿಕೊಂಡು 15 ಲಕ್ಷ ರೂ. ಮೌಲ್ಯದ ನಕಲಿ ಬಿಲ್ ಸೃಷ್ಟಿಸಿದ್ದ ಐವರು ನೌಕರರನ್ನು ಬಂಧಿಸಿರುವ ಘಟನೆ ಚಿತ್ರದುರ್ಗದಲ್ಲಿ  ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ವಿಭಾಗದಲ್ಲಿ ಹೊರಗುತ್ತಿಗೆ ನೌಕರ ಸೈಯದ್ ಸಾದಿಕ್, ವಿನಯ್ ಶರ್ಮಾ, ವಿಜಯ್ ಕುಮಾರ್, ಬಸವರಾಜ, ಮಹೆಬೂಬ್ ಭಾಷಾ ಹಾಗೂ ವೆಂಕಟೇಶ್ ಎಂಬ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಎ1 ಆರೋಪಿ ಸೈಯದ್ ಪರಾರಿಯಾಗಿದ್ದು, ಇನ್ನುಳಿದ ಐವರನ್ನು ಬಂಧಿಸಿದ್ದಾರೆ. …

Read More »

ಬಾರದ ಅನುದಾನ; ಸಂಸದರ ರಾಜೀನಾಮೆಗೆ ಒತ್ತಾಯ

ಚಿತ್ರದುರ್ಗ: ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ₹ 5,300 ಕೋಟಿ ಅನುದಾನ ನೀಡಲು ಕೇಂದ್ರ ಸರ್ಕಾರ ವಿಫಲವಾಗಿದೆ. ಜಿಲ್ಲೆಯ ಸಂಸದ ಗೋವಿಂದ ಕಾರಜೋಳ ಅವರು ಕೂಡ ಅನುದಾನ ತರುವಲ್ಲಿ ಸೋತಿದ್ದಾರೆ. ಹೀಗಾಗಿ ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ಸದಸ್ಯರು ಸೋಮವಾರ ಸಂಸದರ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಜಿಲ್ಲೆಯ ಆರೂ ತಾಲ್ಲೂಕುಗಳಿಂದ ಬಂದಿದ್ದ …

Read More »

ಏಕಕಾಲಕ್ಕೆ ಪಿಡಿಒಗಳಿಗೆ ಗ್ರೂಪ್‌ ‘ಬಿ’ಗೆ ಬಡ್ತಿ ನೀಡಲು ಆಗ್ರಹ

ಚಿತ್ರದುರ್ಗ: ’16 ವರ್ಷಗಳಿಂದಲೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಬಡ್ತಿಯಿಲ್ಲದೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದ್ದರಿಂದ ಏಕಕಾಲಕ್ಕೆ ಗ್ರೂಪ್‌ ‘ಬಿ’ಗೆ ಉನ್ನತೀಕರಿಸಲು ರಾಜ್ಯಮಟ್ಟದಲ್ಲಿ ಬೃಹತ್‌ ಹೋರಾಟ ರೂಪಿಸಲಾಗುತ್ತಿದೆ’ ಎಂದು ಕರ್ನಾಟಕ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ‘ಬಿ’ ಗ್ರೇಡ್‌ ಉನ್ನತೀಕರಣ ಸಂಘದ ರಾಜ್ಯ ಘಟಕದ ಅಧ್ಯಕ್ಷ ರಮೇಶ್‌ ನಡಿಗೇರಿ ತಿಳಿಸಿದರು. ರಾಜ್ಯದಲ್ಲಿ ಒಟ್ಟು 5,964 ಗ್ರಾಮ ಪಂಚಾಯಿತಿಗಳಿದ್ದು, 1500 ಪಿಡಿಒಗಳನ್ನು ಮಾತ್ರ ಸರ್ಕಾರ ‘ಬಿ’ ಗ್ರೇಡ್‌ ಹುದ್ದೆಗೇರಿಸಿದೆ. ಅದರಂತೆ ಉಳಿದ ಎಲ್ಲಾ ಪಂಚಾಯಿತಿಯ ಅಭಿವೃದ್ಧಿ …

Read More »

ಚಿತ್ರದುರ್ಗ ರೈತರಿಗೆ 12.40 ಕೋಟಿ ರೂ. ಬೆಳೆ ವಿಮಾ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ

ನವದೆಹಲಿ: ಚಿತ್ರದುರ್ಗ  ಜಿಲ್ಲೆಯ ರೈತರು 2025ರ ಖರೀಫ್ ಹಂಗಾಮಿನಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ಹಾನಿಗೊಳಗಾಗಿದ್ದರು. ಈ ಸಂಕಷ್ಟದ ಸಮಯದಲ್ಲಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ  ಅಡಿಯಲ್ಲಿ ಸುಮಾರು 7,880 ರೈತರಿಗೆ ಒಟ್ಟು 12.40 ಕೋಟಿ ರೂ. ಮೊತ್ತದ ಬೆಳೆ ವಿಮಾ ಪರಿಹಾರವನ್ನು  ಬಿಡುಗಡೆ ಮಾಡಲಾಗಿದೆ. ಸಂಸದ ಗೋವಿಂದ ಕಾರಜೋಳ (ಅವರು ಲೋಕಸಭೆಯಲ್ಲಿ ಕೇಳಿದ ಚುಕ್ಕೆರಹಿತ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವ …

Read More »

ಎಸೆಸೆಲ್ಸಿ ಪರೀಕ್ಷೆ ನಕಲಿಗೆ ಸಹಕಾರ: ನಾಲ್ವರು ಸಹ ಶಿಕ್ಷಕರ ಅಮಾನತು

ಚಿತ್ರದುರ್ಗ: ಎಸೆಸೆಲ್ಸಿ ವಿಜ್ಞಾನ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿದ ಆರೋಪದಲ್ಲಿ ನಾಲ್ವರು ಸಹ ಶಿಕ್ಷಕರನ್ನು ಅಮಾನತು ಮಾಡಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರವಿಶಂಕರ್‌ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಚಳ್ಳಕೆರೆ ತಾಲೂಕು ಪರಶುರಾಂಪುರ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಕೊಠಡಿ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಳ್ಳಕೆರೆ ತಾಲೂಕು ಪಿ.ಈಬನಹಳ್ಳಿ ಶಾಲೆಯ ಚಂದ್ರಶೇಖರ್‌, ಕೊರ್ಲಕುಂಟೆ ಶಾಲೆಯ ಪ್ರಕಾಶ್‌, ಗೋಸಿಕೆರೆ ರಾಧಾಕೃಷ್ಣ ಶಾಲೆಯ ರಾಘವೇಂದ್ರ ಹಾಗೂ ಮಂಜರಿ ಹಿರಿಯ ಪ್ರಾಥಮಿಕ ಶಾಲೆಯ ರೇವಣ್ಣ ಅಮಾನತುಗೊಂಡ …

Read More »

ರಾಜ್ಯದ ರೈತರಿಗೆ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ : ಸಿಎಂ ಬೊಮ್ಮಾಯಿ

ಚಿತ್ರದುರ್ಗ : ರೈತ ಸಮುದಾಯಕ್ಕೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರದಿಂದ 10 ಹೆಚ್ ಪಿ ವರೆಗೆ ರೈತರಿಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹೊಳಲ್ಕೆರೆ ಪಟ್ಟಣದಲ್ಲಿ ಭಾನುವಾರ ಹೊಳೆಲ್ಕೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಫಲಾನುಭವಿಗಳ ಸೌಲಭ್ಯ ಮತ್ತು ಸಲಕರಣೆಗಳ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. …

Read More »

ರಾಜ್ಯದಲ್ಲಿ ಮತ್ತೆ ಐಟಿ ಸದ್ದು; ಮಾಜಿ ಸಚಿವರ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ

ಚಿತ್ರದುರ್ಗ: ರಾಜ್ಯದಲ್ಲಿ ಆಗಾಗ ಕೇಳಿ ಬರುತ್ತಿರುವ ಐಟಿ ಸದ್ದು ಮತ್ತೊಮ್ಮೆ ಮೊಳಗಿದೆ. ಅರ್ಥಾತ್, ರಾಜ್ಯದ ಮಾಜಿ ಸಚಿವರೊಬ್ಬರ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಐಟಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.   ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಪಾಡಿಗಟ್ಟೆ ಗ್ರಾಮದಲ್ಲಿನ ಜಿಲ್ಲಾ ಕಾಂಗ್ರೆಸ್​ ಕಾರ್ಯದರ್ಶಿ ಪಾಡಿಗಟ್ಟೆ ಸುರೇಶ್ ಮತ್ತು ಆತನ ಸಹೋದರ, ಗುತ್ತಿಗೆದಾರನೂ ಆಗಿರುವ ತಿಪ್ಪೇಸ್ವಾಮಿ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು …

Read More »