Breaking News

ಚಿತ್ರದುರ್ಗ

ವರದಿ ನಂತರ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕದ ನಿರ್ಧಾರ: ಸಿಎಂ

ಚಿತ್ರದುರ್ಗ, ನವೆಂಬರ್ 08: ”ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸಿ ಎಂದು ಅರ್ಜಿ ಸಲ್ಲಿಕೆಯಾಗಿವೆ. ಕಂದಾಯ ಇಲಾಖೆಯಿಂದ ಸ್ಥಿತಿಗತಿಗಳ ಬಗ್ಗೆ ವರದಿ ಕೇಳಿದ್ದು, ವರದಿ ಬಂದ ನಂತರ ನಿರ್ಧರಿಸಲಾಗುವುದು” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.   ಮಂಗಳವಾರ ಜಿಲ್ಲೆಯ ಸಾಣೇಹಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ”ಆಡಳಿತಾಧಿಕಾರಿ ನೇಮಿಸುವ ಪೂರ್ವ ಏನು ನಡೆದಿದೆ ಎನ್ನುವುದರ ಬಗ್ಗೆ ನ್ಯಾಯ ಸಮ್ಮತ ಪ್ರಕ್ರಿಯೆ ನಡೆಯಬೇಕಿದೆ. ಈ ಸಂಬಂಧ ಕಂದಾಯ ಇಲಾಖೆಯಿಂದ ವರದಿ ಸಲ್ಲಿಕೆಯಾದ …

Read More »

ನ್ಯಾಯಾಲಯಕ್ಕೆ ಮುರುಘಾಶ್ರೀ ವಿರುದ್ಧ 694 ಪುಟಗಳ ಆರೋಪ ಪಟ್ಟಿ

ಚಿತ್ರದುರ್ಗ: ‍ಪೋಕ್ಸೊ ಹಾಗೂ ಪರಿಶಿಷ್ಟ ಜಾತಿ, ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ನ್ಯಾಯಾಲಯಕ್ಕೆ ಗುರುವಾರ 694 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.   ತನಿಖೆಯನ್ನು ಭಾಗಶಃ ಪೂರ್ಣಗೊಳಿಸಿರುವ ಪೊಲೀಸರು, ದೋಷಾರೋಪ ಪಟ್ಟಿಯ ತಲಾ 347 ಪುಟಗಳ ಎರಡು ಪ್ರತಿಗಳನ್ನು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಸಲ್ಲಿಸಿದರು. ಒಂದರಲ್ಲಿ ಮುರುಘಾ ಶರಣರು …

Read More »

ಈಶ್ವರಪ್ಪ, ರಮೇಶ್ ಜಾರಕಿಹೊಳಿಗೆ ಮಂತ್ರಿಗಿರಿ ವಿಚಾರ; ಸಿಎಂ ಬೊಮ್ಮಾಯಿ ಹೇಳಿದ್ದೇನು ?

ಚಿತ್ರದುರ್ಗ: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಶೀಘ್ರದಲ್ಲಿಯೇ ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಚರ್ಚೆ ನಡೆಸುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಚಿತ್ರದುರ್ಗ ಜಿಲ್ಲೆಗೂ ಪ್ರಾತಿನಿಧ್ಯ ನೀಡಲು ಪ್ರಯತ್ನಿಸಲಾಗುವುದು. ಜಿಲ್ಲೆಗೆ ಸಚಿವ ಸ್ಥಾನ ನಿಡದೇ ಮಲತಾಯಿ ಧೋರಣೆ ಅನುಸರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಯಾವುದೇ ತಾರತಮ್ಯ ಮಾಡಿಲ್ಲ ಎಂದರು. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿಗೆ ಈ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ …

Read More »

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸಿ: ಫೋನ್‌ ಸಂಭಾಷಣೆಯ ಆಡಿಯೊ ವೈರಲ್‌

ಚಿತ್ರದುರ್ಗ: ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಮುರುಘಾ ಮಠದ ಶಿವಮೂರ್ತಿ ಮುರುಘಾಶ್ರೀ ಬಂಧನಕ್ಕೆ ಒಳಗಾಗಿರುವುದಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವೆ ರಾಣಿ ಸತೀಶ್‌ ಹಾಗೂ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಮಹಡಿ ಶಿವಮೂರ್ತಿ ನಡುವೆ ನಡೆದ ಫೋನ್‌ ಸಂಭಾಷಣೆಯ ಆಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.   ಸುಮಾರು 12 ನಿಮಿಷದ ಮಾತುಕತೆಯಲ್ಲಿ ಹಲವು ವಿಚಾರಗಳು ಚರ್ಚೆಗೆ ಬಂದಿವೆ. ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಆಕ್ರೋಶ, ಯಡಿಯೂರಪ್ಪ …

Read More »

ಪೋಕ್ಸೋ ಪ್ರಕರಣ : ‘ಮುರುಘಾಶ್ರೀ’ ಜಾಮೀನು ಅರ್ಜಿ ವಿಚಾರಣೆ ಸೆ.23 ಕ್ಕೆ ಮುಂದೂಡಿಕೆ

ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ (POCSO) ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ (murugha shri) ಜಾಮೀನು ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ನ್ಯಾಯಾಲಯ ಆದೇಶ ಹೊರಡಿಸಿದೆ.   ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಮೇಲೆ ಜೈಲು ಪಾಲಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಚಿತ್ರದುರ್ಗ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು, ಇದೀಗ ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಅಪ್ರಾಪ್ತ …

Read More »

ಇಂದು ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ: ಜೈಲಾ ಅಥವಾ ಆಸ್ಪತ್ರೆ ಇಂದು ನಿರ್ಧಾರ!

ಚಿತ್ರದುರ್ಗ: ಪೋಕ್ಸೋ ಕೇಸ್​ನಲ್ಲಿ ಮುರುಘಾಶ್ರೀಗಳು ಜೈಲು ಸೇರಿದ್ದು, ಜಿಲ್ಲೆಯ 2ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​​ನಲ್ಲಿ ಇಂದು ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಆ ಬಳಿಕ ಮುರುಘಾಶ್ರೀಗೆ ಬೇಲಾ, ಜೈಲಾ, ಆಸ್ಪತ್ರೆನಾ? ಇಂದು ನಿರ್ಧಾರವಾಗಲಿದೆ. ಸೆ.14ರವರೆಗೆ ಮುರುಘಾಶ್ರೀ ನ್ಯಾಯಾಂಗ ಬಂಧನದಲ್ಲಿದ್ದಾರೆ. ಕರೊನರಿ ಎಂಜೋಗ್ರಾಮ ಪರೀಕ್ಷೆ, ಚಿಕಿತ್ಸೆ ಬಗ್ಗೆಯೂ ವಿಚಾರಣೆ ನಡೆಯಲಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಶಿಫ್ಟ್ ಮಾಡಲು ಮುರುಘಾಶ್ರೀ ಪರ ವಕೀಲರು ಮನವಿ ಮಾಡಿದ್ದು, ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು …

Read More »

ಮುರುಘಾಶ್ರೀಗಳಿಗೆ ಸೆಪ್ಟೆಂಬರ್ 14 ರವರೆಗೆ ನ್ಯಾಯಾಂಗ ಬಂಧನ

ಚಿತ್ರದುರ್ಗ : ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮರುಘಾಮಠದ ಶ್ರೀಗಳಿಗೆ 9 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಚಿತ್ರದುರ್ಗದ 2 ನೇ ಹೆಚ್ಚುವರಿ ನ್ಯಾಯಾಲಯ ಆದೇಶ ನೀಡಿದೆ. ಪೋಕ್ಸೋ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ಮುರುಘಾಮಠದ ಶ್ರೀಗಳ ಪೊಲೀಸ್ ಕಸ್ಟಡಿ ಇಂದು ಮುಕ್ತಾಯವಾಗಿದ್ದು, ಪೊಲೀಸರು ಇಂದು ಶ್ರೀಗಳನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಚಿತ್ರದುರ್ಗದ 2 ನೇ ಹೆಚ್ಚುವರಿ ನ್ಯಾಯಾಲಯ ಮುರುಘಾಶ್ರೀಗಳಿಗೆ ಸೆಪ್ಟೆಂಬರ್ 14 ರವರೆಗೆ ನ್ಯಾಯಾಂಗ …

Read More »

ಮುರುಘಾ ಶ್ರೀಗಳಿಗೆ ಮತ್ತೊಂದು ಕಂಟಕ : ಲೈಂಗಿಕ ದೌರ್ಜನ್ಯ‌ ಮೆಡಿಕಲ್‌ ಟೆಸ್ಟ್‌ ರಿಪೋರ್ಟ್‌ ಬಹಿರಂಗ

ಚಿತ್ರದುರ್ಗ : ಫೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳಿಗೆ ಮತ್ತೊಂದು ಕಂಟಕ ಎದುರಾಗಿದ್ದು, ಲೈಂಗಿಕ ದೌರ್ಜನ್ಯ‌ ಮೆಡಿಕಲ್‌ ಟೆಸ್ಟ್‌ ರಿಪೋರ್ಟ್ ಬಹಿರಂಗವಾಗಿದೆ. ಅಪ್ರಾಪ್ತರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರನ್ನು 2 ನೇ ಅಪರ ಜಿಲ್ಲಾ ಕೋರ್ಟ್ ಎದುರು ಶುಕ್ರವಾರ ಹಾಜರುಪಡಿಸಲಾಗಿದ್ದು, ಸೆ. 5 ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ನಿನ್ನೆ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದ ಬೆನ್ನಲ್ಲೇ ಪೊಲೀಸರು ಜಿಲ್ಲಾಸ್ಪತ್ರೆಯಲ್ಲಿ ಶ್ರೀಗಳನ್ನು ವೈದ್ಯಕೀಯ ಟೆಸ್ಟ್‌ …

Read More »

ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸ್ವಾಮೀಜಿ ವಿರುದ್ಧ ಸುಮೋಟೋ ಕೇಸ್ ದಾಖಲ

ಚಿತ್ರದುರ್ಗ : ಮುರುಘಾಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸ್ವಾಮೀಜಿ ವಿರುದ್ಧ ಸುಮೋಟೋ ಕೇಸ್ ದಾಖಲಿಸಲಾಗಿದೆ. ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಚಿತ್ರದುರ್ಗದ ಎಸ್ ಪಿ ಅವರಿಗೆ ನೋಟಿಸ್ ನೀಡಲಾಗಿದ್ದು, ಮುರುಘಾಮಠದ ಶ್ರೀಗಳ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದೆ. ಪ್ರಕರಣದ ಬಗ್ಗೆ ವರದಿ ನೀಡುವಂತೆ ಎಸ್ ಪಿ ಸೂಚನೆ ನೀಡಲಾಗಿದೆ. ಸ್ವಾಮೀಜಿ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡ ರಾಷ್ಟ್ರೀಯ …

Read More »

ಮುರುಘಾ ಶ್ರೀಗೆ ಮತ್ತೊಂದು ‘ಬಿಗ್‌ ಶಾಕ್‌’: ‘ಅಟ್ರಾಸಿಟಿ’ ಪ್ರಕರಣ ದಾಖಲು

ಚಿತ್ರದುರ್ಗ: ಮುರುಘಾ ಶ್ರೀಗೆ ಮತ್ತೊಂದು ತೊಂದರೆ ಎದುರಾಗಿದೆ. ಹೌದು, ಲೈಂಗಿಕ ಕಿರುಕುಳದ ಬಗ್ಗೆ ಆರೋಪ ಮಾಡಿರುವ ಒಬ್ಬರಲ್ಲಿ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು, ಈ ಹಿನ್ನಲೆಯಲ್ಲಿ ಶ್ರೀಗಳ ವಿರುದ್ದ , ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಮುರುಘಾ ಶ್ರೀಗಳ ವಿರುದ್ಧ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.   ಆಗಸ್ಟ್‌ 28ರ (ಭಾನುವಾರ)ದಂದು ಪ್ರಕರಣದ ವಿಚಾರಣೆ ವೇಳೆಯಲ್ಲಿ ಬಾಲಕಿಯ ಹೇಳಿಕೆ ಮೇರೆಗೆಶ್ರೀಗಳ ವಿರುದ್ದ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ. …

Read More »