Breaking News

ಚಿತ್ರದುರ್ಗ

ಪೂರ್ಣಿಕಾ (2) ಮಂತ್ರವಾದಿಯಿಂದ ಹತ್ಯೆಯಾದ ಕಂದಮ್ಮ.

ಚಿತ್ರದುರ್ಗ, – ದೆವ್ವ ಬಿಡಿಸುವ ನೆಪದಲ್ಲಿ ಎರಡು ವರ್ಷದ ಹೆಣ್ಣು ಮಗುವನ್ನು ಮಾಂತ್ರಿಕನೊಬ್ಬ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹೊಳಲ್ಕೆರೆ ತಾಲ್ಲೂಕಿನ ಅಜ್ಜಿ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪೂರ್ಣಿಕಾ (2) ಮಂತ್ರವಾದಿಯಿಂದ ಹತ್ಯೆಯಾದ ಕಂದಮ್ಮ. ಪ್ರವೀಣ್ ಹಾಗೂ ಬೇಬಿ ದಂಪತಿಯ ಪುತ್ರಿ ಪೂರ್ಣಿಕಾ ನಿದ್ದೆಯಲ್ಲಿ ಬೆಚ್ಚಿ ಬೀಳುತ್ತಿದ್ದಳು. ಈ ಕಾಯಿಲೆಯ ಬಗ್ಗೆ ಆಸ್ಪತ್ರೆಗೆ ತೋರಿಸಿದ್ದರೂ ಪ್ರಯೋಜನವಾಗಿರಲಿಲ್ಲ. ಕೊನೆಗೆ ಮೌಢ್ಯದ ಮೊರೆ ಹೋಗಿದ್ದು , ರಾಕೇಶ್ ಎಂಬ ಮಾಂತ್ರಿಕನ ಬಳಿ ಹೋಗಿದ್ದಾರೆ. ಮಗುವನ್ನು …

Read More »

ದೆವ್ವ ಬಿಡಿಸುವ ನೆಪದಲ್ಲಿ ಬಾಲಕಿ ಹತ್ಯೆ

ಚಿತ್ರದುರ್ಗ: ದೆವ್ವ ಬಿಡಿಸುವುದಾಗಿ ನಂಬಿಸಿ ಮೂರು ವರ್ಷದ ಬಾಲಕಿಯನ್ನು ಪೂಜಾರಿ ಕೋಲಿನಿಂದ ಹೊಡೆದು ಸಾಯಿಸಿದ ಘಟನೆ ಹೊಳಲ್ಕೆರೆ ತಾಲ್ಲೂಕಿನ ಅಜ್ಜಿ ಕ್ಯಾತನಹಳ್ಳಿಯಲ್ಲಿ ಭಾನುವಾರ ನಡೆದಿದೆ. ಪ್ರವೀಣ್‌ ಹಾಗೂ ಶಾಮಲಾ ದಂಪತಿಯ ಪುತ್ರಿ ಪೂರ್ವಿಕಾ ಮೃತ ಬಾಲಕಿ. ಚೌಡಮ್ಮನ ದೇಗುಲದ ಪೂಜಾರಿ ರಾಕೇಶ್‌ (19) ಎಂಬಾತನನ್ನು ಚಿಕ್ಕಜಾಜೂರು ಪೊಲೀಸರು ಬಂಧಿಸಿದ್ದಾರೆ. ಮೌಢ್ಯ ನಿಷೇದ ಕಾಯ್ದೆ-2017ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ‘ಪೂರ್ವಿಕಾ ಮೂರು ದಿನಗಳಿಂದ ಸರಿಯಾಗಿ ಊಟ ಮಾಡುತ್ತಿರಲಿಲ್ಲ. ಬಾಲಕಿಗೆ ದೆವ್ವ ಹಿಡಿದಿದೆ ಎಂದಿದ್ದ …

Read More »

ರಾಜ್ಯದ ಇತಿಹಾಸದಲ್ಲೇ ಫಸ್ಟ್- 4 ಕೋಟಿ ಮೌಲ್ಯದ ಹಸಿ ಗಾಂಜಾ ಬೇಟೆ

ಚಿತ್ರದುರ್ಗ: ರಾಜ್ಯದಾದ್ಯಂತ ಪೊಲೀಸರು ಡ್ರಗ್ಸ್ ಮಾಫಿಯಾ ವಿರುದ್ಧ ಸಮರ ಸಾರಿದ್ದು, ಪ್ರತಿದಿನ ಗಾಂಜಾವನ್ನು ವಶಕ್ಕೆ ಪಡೆದ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಸದ್ಯ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರ ಠಾಣೆ ಪೊಲೀಸರು ಬರೋಬ್ಬರಿ ನಾಲ್ಕು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡು, ನಾಲ್ವರನ್ನು ಬಂಧಿಸಿದ್ದಾರೆ. ಡಿ.ಬಿ.ಮಂಜುನಾಥ್, ವೈ.ಜಂಬುನಾಥ್, ಡಿ.ವೈ.ಮಂಜುನಾಥ್, ಸುಮಂತ್ ಗೌಡ ಬಂಧಿತ ಆರೋಪಿಗಳಿದ್ದಾರೆ. ಸೆ.3ರ ನಸುಕಿನ ಜಾವ ಬೀಟ್ ಹೊರಟ ಕೋಟೆನಾಡಿನ ಪೊಲೀಸ್ ಪೇದೆಗೆ …

Read More »

ಕೋವಿಡ್ ದಿಂದ ಗುಣಮುಖರಾದವರ ಸಂಖ್ಯೆ ಅಧಿಕ

ಚಿತ್ರದುರ್ಗ: ಜಿಲ್ಲೆಯಲ್ಲಿ 5034 ಕೋವಿಡ್ ಸೋಂಕಿತರಿದ್ದು, ರಾಜ್ಯಕ್ಕೆ ಹೋಲಿಸಿದಾಗ ಜಿಲ್ಲೆಯಲ್ಲಿ ಕೋವಿಡ್‌ ಪಾಸಿಟಿವ್‌ ರೇಟ್‌ ಶೇ. 9.70 ಇದೆ. ಮರಣ ಪ್ರಮಾಣ ಶೇ. 0.65 ಹಾಗೂ ಗುಣಮುಖರಾದವರ ಪ್ರಮಾಣ ಶೇ. 75.66 ಇದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ತಿಳಿಸಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ತಾಲೂಕುಗಳ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೋವಿಡ್‌-19ಗೆ ಚಿಕಿತ್ಸೆ ನೀಡುತ್ತಿದ್ದು, ಸಾರ್ವಜನಿಕರು ಚಿಕಿತ್ಸೆ ಪಡೆದುಕೊಳ್ಳಬಹುದು ಎಂದರು. ಎಲ್ಲರಿಗೂ ಜಿಲ್ಲಾ …

Read More »

ಕೊರೊನಾ ವರದಿ ವಿಳಂಬ, ಚಿಕಿತ್ಸೆ ನಿರ್ಲಕ್ಷದ ಬಗ್ಗೆ ಕಿಡಿ:ವಿಡಿಯೋ ಮಾಡಿ ಅಳಲು

ಚಿತ್ರದುರ್ಗ: ಇಷ್ಟು ದಿನ ಜನ ಸಾಮಾನ್ಯರು ಕೋವಿಡ್ ಕೇಂದ್ರಗಳಲ್ಲಿ ಹಾಗೂ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ, ವ್ಯವಸ್ಥೆ ಸರಿ ಎಲ್ಲ ಎಂದು ವಿಡಿಯೋ ಹರಿಬಿಟ್ಟು ಅಳಲು ತೋಡಿಕೊಂಡಿರುವುದನ್ನು ನೋಡಿದ್ದೇವೆ. ಆದರೆ ಇದೀಗ ಕೊರೊನಾ ವಾರಿಯರ್ಸ್‍ಗೂ ಇದೇ ರೀತಿ ಸಮಸ್ಯೆಯಾಗುತ್ತಿದ್ದು, ಇದೀಗ ಜೀವ ಉಳಿಸುವ ಕೆಲಸ ಮಾಡುವರಿಗೇ ಜೀವ ಭಯ ಶುರುವಾಗಿದೆ. ಚಿತ್ರದುರ್ಗ ತಾಲೂಕಿನ ಹಿರೇಗುಂಟನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಹಿರೇಗುಂಟನೂರು ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕ ವಿಡಿಯೋ ಮಾಡಿ ಅವ್ಯವಸ್ಥೆ ಕುರಿತು …

Read More »

ಆರೋಗ್ಯ ಸಚಿವ ಶ್ರೀರಾಮುಲು ತವರು ಜಿಲ್ಲೆಯ ಜಿಲ್ಲಾಸ್ಪತ್ರೆಯಲ್ಲಿ ಮೋಜು-ಮಸ್ತಿ

ಚಿತ್ರದುರ್ಗ: ಸರ್ಕಾರಿ ಆಸ್ಪತ್ರೆ ಬಡ ರೋಗಿಗಳ ಪಾಲಿಗೆ ಸಂಜೀವಿನಿ ಅಂತ ಎಲ್ಲರು ಭಾವಿಸಿದ್ದಾರೆ. ಆದರೆ ಆರೋಗ್ಯ ಸಚಿವ ಶ್ರೀರಾಮುಲು ತವರು ಜಿಲ್ಲೆಯ ಈ ಆಸ್ಪತ್ರೆ ದುಸ್ಥಿತಿ ನೋಡಿದ್ರೆ ಎಂಥವರೂ ಒಮ್ಮೆ ಬೆಚ್ಚಿ ಬೀಳ್ತಾರೆ. ಹೌದು. ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಘಟಕದ ಮುಂಭಾಗದಲ್ಲೇ ನೋವು ನೋವು ಅಂತ ರೋಗಿಯೊಬ್ಬರು ನರಳಾಡಿದ್ದಾರೆ. ಬೆಡ್ ಖಾಲಿ ಇಲ್ಲ ಅಂತ ನೆಪ ಹೇಳಿ, ಅಪಘಾತಕ್ಕೊಳಗಾದ ವ್ಯಕ್ತಿಯನ್ನು ಆಸ್ಪತ್ರೆಯ ಮುಂಭಾಗದಲ್ಲಿಯೇ ಸ್ಟ್ರಚರ್‍ನಲ್ಲೇ ಬಿಟ್ಟು ಹೋಗಿ ಆಸ್ಪತ್ರೆ …

Read More »

ಅಮಾಯಕ ದಲಿತ ಯುವಕರನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಚಿತ್ರದುರ್ಗ: ದಲಿತ ಯುವಕರನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ ಅಮಾನವೀಯ ಘಟನೆ ಚಿತ್ರದುರ್ಗದಲ್ಲಿ  ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಚೋಳಗುಡ್ಡ ನಿವಾಸಿ ಜಯಸೂರ್ಯ, ಹೊಳಲ್ಕೆರೆ ತಾಲ್ಲೂಕಿನ ಎಚ್.ಡಿ ಪುರ ನಿವಾಸಿ ಮಾರುತಿ, ಶರತ್ ಹಲ್ಲೆಗೊಳಗಾದವರು ಎಂದು ಗುರುತಿಸಲಾಗಿದೆ.  ಚಿತ್ರದುರ್ಗ ತಾಲೂಕಿನ ಅಡವಿ ಗೊಲ್ಲರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬೇರೊಂದು ಪ್ರಕರಣಕ್ಕೆ ತಳುಕು ಹಾಕಿ ದಲಿತ ಯುವಕರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಹಲ್ಲೆಗೊಳಗಾದವರ ವಿರುದ್ಧವೇ ಹಲ್ಲೆಕೋರರು …

Read More »

ಖಾಸಗಿ ಬಸ್ ಬೆಂಕಿಗಾಹುತಿ ಬ್ಬರು ಮಕ್ಕಳು ಸೇರಿ ಒಟ್ಟು 5 ಮಂದಿ ಸಜೀವ ದಹನ

ಚಿತ್ರದುರ್ಗ: ಖಾಸಗಿ ಬಸ್ ಬೆಂಕಿಗಾಹುತಿಯಾದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ನಡೆದಿದೆರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದ ಈ ಅವಘಡದಲ್ಲಿ ಮಹಿಳೆ ಹಾಗೂ ಇಬ್ಬರು ಮಕ್ಕಳು ಸೇರಿ ಒಟ್ಟು 5 ಮಂದಿ ಸಜೀವ ದಹನವಾಗಿದ್ದಾರೆ. ಖಾಸಗಿ ಬಸ್ ವಿಜಯಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದು, ಅಗ್ನಿ ಅವಘಡಕ್ಕೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ. ಹಿರಿಯೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದ್ದು, ಎಸ್‍ಪಿ ರಾಧಿಕಾ ಸ್ಥಳಕ್ಕೆ ಭೇಟಿ …

Read More »

ಭಗವಂತ ಒಬ್ಬನೇ ನಮ್ಮನ್ನ ಕೊರೊನಾದಿಂದ ಕಾಪಾಡಬೇಕು’: ಸಚಿವ ಶ್ರೀರಾಮುಲು

ಚಿತ್ರದುರ್ಗ: ಇಂದು ಭಗವಂತ ಒಬ್ಬನೇ ಕೊರೊನಾ ಸೋಂಕಿನಿಂದ ನಮ್ಮನ್ನು ಕಾಪಾಡಬೇಕು. ಇಲ್ಲವಾದಲ್ಲಿ ಜನರಲ್ಲಿ ಕೊರೊನಾ ಬಗ್ಗೆ ಜಾಗೃತಿ ಬರಬೇಕು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದರು. ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಶ್ರೀರಾಮುಲು, ಇಡೀ ವಿಶ್ವದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಕೊರೊನಾ ಬಡವ, ಶ್ರೀಮಂತ, ಶಾಸಕರು, ಪೊಲೀಸರು, ವೈದ್ಯರು ಮತ್ತು ರಾಜಕಾರಣಿಗಳು ಎಂದು ಬರುತ್ತಿಲ್ಲ. ಇನ್ನೂ 2 ತಿಂಗಳಲ್ಲಿ ಇನ್ನಷ್ಟು ಸೋಂಕು ಹೆಚ್ಚುವ ಸಾಧ್ಯತೆ ಶೇ.100 ರಷ್ಟಿದೆ. …

Read More »

ಚಿತ್ರದುರ್ಗದಲ್ಲಿ ನ್ಯಾಯಾಲಯದ ಟೈಪಿಸ್ಟ್​​ಗೆ ಕೊರೋನಾ; 23 ಜನರೊಂದಿಗೆ ಪ್ರಾಥಮಿಕ ಸಂಪರ್ಕ; ಜಿಲ್ಲೆಯ ಜನರಲ್ಲಿ ಆತಂಕ

ಚಿತ್ರದುರ್ಗ(ಜು.06): ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿ ಸೋಂಕು ದಿನೇ ದಿನೇ ಹೆಚ್ಚುತ್ತಲೇ ಇದೆ. ಜಿಲ್ಲೆಯ ಆರೂ ತಾಲ್ಲೂಕುಗಳಲ್ಲಿ ಒಬ್ಬೊಬ್ಬರಿಗೆ ಹರಡಿದ ಕೊರೋನಾ ಸೋಂಕು ಈಗ ಚಿತ್ರದುರ್ಗ ಜಿಲ್ಲಾ ಸೀನಿಯರ್ ಡಿವಿಷನ್ ನ್ಯಾಯಾಲಯಕ್ಕೆ ಕಾಲಿಟ್ಟಿದೆ. ನಿನ್ನೆ ಚಿತ್ರದುರ್ಗದ ಸಿಜೆಎಂ ನ್ಯಾಯಾಲಯದ ಟೈಪಿಸ್ಟ್ ಗೆ ಕೊರೋನಾ ಪಾಸಿಟಿವ್ ಬಂದಿದು ಜಿಲ್ಲೆಯ ಜನರನ್ನ ಬೆಚ್ಚಿ ಬೀಳುವಂತೆ ಮಾಡಿದೆ. ಚಿತ್ರದುರ್ಗ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯೂರು ಮೂಲದ 33 ವರ್ಷದ ವ್ಯಕ್ತಿಗೆ ಕೊರೋ‌ನಾ ಪಾಸಿಟಿವ್ …

Read More »