ಚಿತ್ರದುರ್ಗ: ಕೆಎಸ್‍ಆರ್‍ಟಿಸಿ ಬಸ್ ಸಂಚಾರ ಆರಂಭಿಸಿದ ಮೂರನೇ ದಿನವೂ ಸಮಸ್ಯೆಯಾಗುತ್ತಿದ್ದು, ಕೆಲವೆಡೆ ಪ್ರಯಾಣಿಕರಿಲ್ಲದೆ ಬಸ್‍ಗಳು ನಿಂತಲ್ಲೇ ನಿಂತಿದ್ದರೆ, ಇನ್ನೂ ಹಲವೆಡೆ ತಮ್ಮ ಊರಿಗೆ ತೆರಳಲು ಬಸ್‍ಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಪ್ರತಿ ದಿನ ಪ್ರಯಾಣಿಕರು ವಿವಿಧೆಡೆಗೆ ತೆರಳಲು ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಮುಗಿಬೀಳುತ್ತಿದ್ದಾರೆ. ಗುರುವಾರ ಬೆಳಗ್ಗೆ ಸಹ ರಸ್ತೆಯುದ್ದಕ್ಕೂ ಜನ ಸಾಲುಗಟ್ಟಿ ನಿಂತಿದ್ದರು. ಮಕ್ಕಳು, ಮಹಿಳೆಯರು ಸೇರಿದಂತೆ ಪ್ರಯಾಣಿಕರೆಲ್ಲರೂ ಥಮರ್ಲ್ ಟೆಸ್ಟಿಂಗ್‍ಗಾಗಿ ಬಸ್ ನಿಲ್ದಾಣದ ಮುಂಭಾಗ ಸಾಲುಗಟ್ಟಿ …
Read More »ಜನಸಾಮಾನ್ಯರಿಗೆ ಕೊರೊನಾ ಭೀತಿ- ‘ಕೈ’ ನಾಯಕರಿಗೆ ಚುನಾವಣೆ ಧ್ಯಾನ……..
ಚಿತ್ರದುರ್ಗ: ಇಡೀ ದೇಶವೇ ಕೊರೊನಾ ಸಂಕಷ್ಟದಿಂದಾಗಿ ತಲ್ಲಣಗೊಂಡಿದೆ. ಆದರೆ ಚಿತ್ರದುರ್ಗ ಜಿಲ್ಲಾಪಂಚಾಯತಿ ಅಧ್ಯಕ್ಷಗಾದಿಯ ಅಧಿಕಾರದ ಗದ್ದುಗೆಗಾಗಿ ಲಾಕ್‍ಡೌನ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಚಿತ್ರದುರ್ಗದಲ್ಲಿ ಬೃಹತ್ ಸಭೆ ನಡೆಸಿದ್ದಾರೆ. ಎಂಎಲ್‍ಸಿ ಹೆಚ್.ಎಂ.ರೇವಣ್ಣ ನೇತೃತ್ವದಲ್ಲಿ ಕಾಂಗ್ರೆಸ್ ಜಿ.ಪಂ.ಸದಸ್ಯರ ಸಭೆ ನಡೆದಿದ್ದೂ, ಮೇ 22ಕ್ಕೆ ಜಿ.ಪಂ ಅಧ್ಯಕ್ಷರ ಆಯ್ಕೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಇಂದು ಚಿತ್ರದುರ್ಗದ ಹೊರವಲಯದ ದೊಡ್ಡಸಿದ್ದವನಹಳ್ಳಿ ಬಳಿ ಇರುವ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರದ ರವಿಕುಮಾರ್ ತೋಟದಲ್ಲಿ 200ಕ್ಕೂ …
Read More »ಗ್ರೀನ್ ಝೋನ್ ಚಿತ್ರದುರ್ಗಕ್ಕೆ ಬಂದ ತಬ್ಲಿಘಿಗಳು…………..
ಚಿತ್ರದುರ್ಗ: ಕೊರೊನಾ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಳ್ಳದೆ ಗ್ರೀನ್ ಝೋನ್‍ನಲ್ಲಿರು ಚಿತ್ರದುರ್ಗಕ್ಕೆ ತಬ್ಲಿಘಿಗಳು ವಾಪಸ್ ಆಗಿದ್ದಾರೆ. ಭಾರತದಲ್ಲಿ ಕೊರೊನಾ ಶುರುವಾದಾಗ ವಿದೇಶಕ್ಕೆ ತೆರಳಿದ್ದ ಚಿತ್ರದುರ್ಗ ಮೂಲದ ಓರ್ವ ಮಹಿಳೆಗೆ ಕೊರೊನಾ ಪಾಸಿಟಿವ್ ಬಂದಿದ್ದದಿಂದ ಜಿಲ್ಲೆಯ ಜನರು ಆತಂಕಕ್ಕೆ ಒಳಗಾಗಿದ್ದರು. ಮಹಿಳೆ ಗುಣಮುಖರಾಗಿ ಮನೆ ಸೇರಿದ ಬಳಿಕ ನಿಟ್ಟುಸಿರು ಬಿಟ್ಟಿದ್ದರು. ಅಲ್ಲಿಂದ ಇಲ್ಲಿಯವರೆಗೂ ಜಿಲ್ಲೆಯಲ್ಲಿ ಯಾರಿಗೂ ಸೋಂಕು ಕಾಣಿಸಿಕೊಳ್ಳದೆ ಗ್ರೀನ್ ಝೋನ್‍ನಲ್ಲಿದೆ. ಆದರೆ ಮಂಗಳವಾರ ಗುಜರಾತ್‍ನಿಂದ ಬಂದಿರುವ 33ಜನ ತಬ್ಲಿಘಿಗಳು ಬಂದಿದ್ದಾರೆ. …
Read More »“ಗುಡುಗು, ಸಿಡಿಲು ಸಹಿತ ಭಾರೀ ಮಳೆಗೆ ಇಬ್ಬರ ದುರ್ಮರಣ”
ಚಿತ್ರದುರ್ಗ: ಕೊರೊನ ವೈರಸ್‍ನಿಂದ ರಾಜ್ಯದ ಎಲ್ಲೆಡೆ ಲಾಕ್‍ಡೌನ್ ಜಾರಿ ಇದ್ದು, ಈ ಲಾಕ್‍ಡೌನ್‍ನಿಂದ ಕಳೆದ ಒಂದು ತಿಂಗಳಿಂದ ಮನೆಯಲ್ಲೇ ಉಳಿದಿದ್ದ ಇಬ್ಬರು ರೈತರ ಜೀವವನ್ನು ವರುಣ ಬಲಿ ಪಡೆದಿದ್ದಾನೆ. ಜಿಲ್ಲೆಯ ಹೊಸದುರ್ಗ ತಾಲೂಕಿನಲ್ಲಿನಾದ್ಯಂತ ಇಂದು ಭಾರೀ ಗಾಳಿ ಸಹಿತ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ಅಬ್ಬರಿಸಿದ ವರುಣನ ಆರ್ಭಟಕ್ಕೆ ಶ್ರೀರಾಂಪುರ ಹೋಬಳಿಯ ಆಲ್ಗಟ್ಟ ಗ್ರಾಮದ ರೇಣುಖಾರಾಧ್ಯ (35) ಎಂಬ ರೈತನ ಮೇಲೆ ತೆಂಗಿನ ಮರವೊಂದು ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. …
Read More »ಮದ್ಯ ಮಾರಾಟದ ಬಗ್ಗೆ ಸಚಿವ ಶ್ರೀರಾಮುಲು ಪ್ರತಿಕ್ರಿಯೆ
ಚಿತ್ರದುರ್ಗ: ರಾಜ್ಯದಲ್ಲಿ ಸರ್ಕಾರದ ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟಾಗಿದ್ದರೂ ಜನರ ಜೀವ ಉಳಿಸುವ ಉದ್ದೇಶದಿಂದ ಮದ್ಯ ಮಾರಾಟ ಆರಂಭಿಸಿಲ್ಲ. ಈ ವಿಚಾರದಲ್ಲಿ ಇಲ್ಲಿ ರಾಜಕಾರಣ ಸಲ್ಲದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ. ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಗೌರಸಮುದ್ರ ಗ್ರಾಮದಲ್ಲಿ ಆಹಾರದ ಕಿಟ್ ವಿತರಿಸಿ ಮಾತನಾಡಿದ ಅವರು, ದೇಶದಲ್ಲಿ ಅಂತಾರಾಷ್ಟ್ರೀಯ ವಿಮಾನಯಾನ ಬಂದ್ ಬಳಿಕ ಸ್ವಲ್ಪ ನಿಟ್ಟುಸಿರು ಬಿಟ್ಟಿದ್ದೆವು. ಆದರೆ ದೆಹಲಿ ನಿಜಾಮುದ್ದೀನ್ ಸಭೆ ಬಳಿಕ ಮತ್ತೆ ಆತಂಕ ಸೃಷ್ಠಿ ಆಯಿತು. …
Read More »ಈರುಳ್ಳಿಗೆ ಬೆಲೆ ಸಿಗ್ತಿಲ್ಲವೆಂದು ವಿಡಿಯೋ ಮಾಡಿದ್ದ ರೈತ ಮಹಿಳೆ – ಫೋನ್ ಮಾಡಿ ಧೈರ್ಯಹೇಳಿದ:B.S.Y. ಹೇಳಿದ ಸಿಎಂ
ಚಿತ್ರದುರ್ಗ: ಕೊರೊನಾ ಹರಡದಂತೆ ಭಾರತ ಲಾಕ್‍ಡೌನ್ ಆಗಿದೆ. ಇದರಿಂದ ಅನೇಕರು ರೈತರು ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೆ ನಷ್ಟ ಅನುಭವಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಈರುಳ್ಳಿ ಬೆಳೆದ ರೈತ ಮಹಿಳೆ ಸರಿಯಾಗಿ ಬೆಲೆ ಸಿಗುತ್ತಿಲ್ಲ ಎಂದು ವಿಡಿಯೋ ಮಾಡಿ ತಮ್ಮ ನೋವನ್ನು ಹೇಳಿಕೊಂಡಿದ್ದರು. ಇದೀಗ ರೈತ ಮಹಿಳೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಫೋನ್ ಮಾಡಿ ಧೈರ್ಯ ಹೇಳಿದ್ದಾರೆ. ಜಿಲ್ಲೆಯ ಹಿರಿಯೂರು ತಾಲೂಕಿನ ಕಾಟನಾಯನಕನಹಳ್ಳಿ ರೈತ ಮಹಿಳೆ ವಸಂತಕುಮಾರಿ ವಿಡಿಯೋ ಮಾಡುವ ಮೂಲಕ ಸಿಎಂ …
Read More »ಅಂಬುಲೆನ್ಸ್‌ನಲ್ಲಿ ಮದ್ಯ ಸಾಗಣೆ- ನಾಲ್ವರು ಅಂದರ್……..
ಚಿತ್ರದುರ್ಗ: ಅಂಬುಲೆನ್ಸ್‌ನಲ್ಲಿ ಮದ್ಯ ಸಾಗಿಸುತ್ತಿದ್ದ ನಾಲ್ವರನ್ನು ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಆರೋಗ್ಯ ಸಚಿವ ಶ್ರೀರಾಮುಲು ಅವರ ತವರು ಜಿಲ್ಲೆಯಲ್ಲೇ ಇಂತಹ ಕೃತ್ಯ ನಡೆದಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಂಬುಲೆನ್ಸ್ ಚಾಲಕ ಸುಬಾನ್, ಲ್ಯಾಬ್ ಟೆಕ್ನಿಶಿಯನ್ ಸಂತೋಷ್, ಶಿವಗಂಗಾ ಗ್ರಾಮದ ಜೀವನ್ ಹಾಗೂ ಗಿರೀಶ್ ಬಂಧಿತರು. ಆರೋಪಿಗಳು ಮದ್ಯವನ್ನುಅಂಬುಲೆನ್ಸ್‌ನಿಂದ ಓಮಿನಿ ವ್ಯಾನ್‍ಗೆ ಶಿಫ್ಟ್ ಮಾಡುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಪಿಎಸ್‍ಐ …
Read More »ತ್ರದುರ್ಗ ಪೊಲೀಸರಿಗೆ ಕೊರೊನಾ ಸೊಂಕು ಹರಡದಂತೆ ಎಸ್‍ಪಿ ರಾಧಿಕಾ ಮುಂಜಾಗ್ರತಾ ಕ್ರಮ
ಚಿತ್ರದುರ್ಗ: ರಾಜ್ಯದ ವಿವಿಧೆಡೆ ಪೊಲೀಸರಿಗೆ ಕೊರೊನಾ ಸೊಂಕು ತಗುಲಿದ ಹಿನ್ನಲೆಯಲ್ಲಿ ಚಿತ್ರದುರ್ಗ ಪೊಲೀಸರಿಗೆ ಕೊರೊನಾ ಸೊಂಕು ಹರಡದಂತೆ ಎಸ್‍ಪಿ ರಾಧಿಕಾ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಎಸ್‍ಪಿಯವರ ಕಾಳಜಿಗೆ ಚಿತ್ರದುರ್ಗದ ಪೊಲೀಸರು ಫಿದಾ ಆಗಿದ್ದಾರೆ. ಹೌದು. ಪೊಲೀಸರ ಆರೋಗ್ಯ ರಕ್ಷಣೆಗಾಗಿ ತೀವ್ರ ಕಾಳಜಿ ವಹಿಸಿರುವ ಲೇಡಿ ಸಿಂಗಂ, ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ ಸ್ವತಃ ಎಸ್‍ಪಿಯವರೇ ಕೀಟನಾಶಕ ಸಿಂಪಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. ಪೊಲೀಸ್ ಠಾಣೆಗಳ ಆವರಣ ಹಾಗೂ …
Read More »ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ, ಬಡವರನ್ನು ಬದುಕಿಸಿಕೊಳ್ಳಲು ಸ್ಥಿತಿವಂತರು ಸಹಾಯ ಮಾಡಿ: ಡಿಸಿಎಂ ಕಾರಜೋಳ
ಚಿತ್ರದುರ್ಗ: ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ. ಸ್ಥಿತಿವಂತರು ಬಡವರನ್ನು ಬದುಕಿಸಿಕೊಳ್ಳಲು ಆರ್ಥಿಕ ಸಹಾಯ ಮಾಡಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಕೇಳಿಕೊಂಡಿದ್ದಾರೆ. ಚಿತ್ರದುರ್ಗದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ನೆರೆ ಹಾವಳಿ, ಬರಗಾಲ ಸೇರಿದಂತೆ ಒಂದಲ್ಲಾ ಒಂದು ಸಮಸ್ಯೆಗಳನ್ನು ಎದುರಿಸುತ್ತಾ ಬಂದಿದ್ದೇವೆ. ಇದೆಲ್ಲವನ್ನೂ ಮುಗಿಸಿಕೊಂಡು 2020ರಲ್ಲಿ ಹೊಸ ಹೊಸ ಯೋಜನೆಗಳನ್ನು ರೂಪಿಸೋಣ ಎಂದಾಗ ಈ ಮಹಾಮಾರಿ ಕೊರೊನಾ ವೈರಸ್ ಅಂಟಿಕೊಂಡಿದೆ. ಈ ಕೊರೊನಾ ನಿರ್ಮೂಲನೆ …
Read More »ಚಿತ್ರದುರ್ಗ ಜಿಲ್ಲೆಯಲ್ಲಿ ಓರ್ವರಿಗೆ ಕೋವಿಡ್-19 ಸೊಂಕು , ಭೀಮಸಮುದ್ರ ಸುತ್ತ 5 ಕಿ.ಮೀ. ವ್ಯಾಪ್ತಿಯಲ್ಲಿ ಕಟ್ಟೆಚ್ಚರ : ವಿನೋತ್ ಪ್ರಿಯಾ
ಚಿತ್ರದುರ್ಗ, (ಮಾ. 24) : ಚಿತ್ರದುರ್ಗ ಜಿಲ್ಲೆಯ ಭೀಮಸಮುದ್ರದಲ್ಲಿ ಓರ್ವ ಮಹಿಳೆಗೆ ಕೋವಿಡ್-19 ಸೋಂಕು ತಾತ್ಕಾಲಿಕ ಪಾಸಿಟಿವ್ ಆಗಿದೆ ಎಂಬುದಾಗಿ ವರದಿ ಬಂದಿದ್ದು, ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಭೀಮಸಮುದ್ರದ 5 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ಬಫರ್ ಜೋನ್ ಎಂದು ಗುರುತಿಸಿ, ಈ ವ್ಯಾಪ್ತಿಯಲ್ಲಿ ಸೋಂಕು ಹರಡದಂತೆ ಸಂಪೂರ್ಣ ಕಟ್ಟೆಚ್ಚರ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ಸ್ಥಿತಿಗತಿ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ …
Read More »
Laxmi News 24×7