ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ತಗುಲಿದ್ದ 67 ವರ್ಷದ ವೃದ್ಧೆ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದದ ಕಸಬಾ ನಿವಾಸಿ ಸಾವನ್ನಪ್ಪಿದ ಮಹಿಳೆ. ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಇದು ಮೂರನೇ ಸಾವು ಆಗಿದ್ದು, ಮಂಗಳೂರಿನ ಜನತೆ ಆತಂಕಕ್ಕೊಳಗಾಗಿದ್ದಾರೆ. ವೃದ್ಧೆಯ ಸಾವನ್ನು ವೆನ್‍ಲಾಕ್ ಆಸ್ಪತ್ರೆ ದೃಢಪಡಿಸಿದೆ. ವೃದ್ಧೆ (ರೋಗಿ ಸಂಖ್ಯೆ-409) ನಾಲ್ಕು ದಿನಗಳಿಂದ ಕೆಮ್ಮು, ಜ್ವರ ಮತ್ತು ಉಸಿರಾಟದ ತೊಂದರೆಯಿಂದ ಬಳಲುತತಿದ್ದರು. ಮೊದಲು ಬಂಟ್ವಾಳ …
Read More »ಮಂಗಳೂರಿನ ಮಹಿಳೆಗೆ ಕೊರೊನಾ ಸೋಂಕು ತಗುಲಿರೋದು ಇಂದು ದೃಢಪಟ್ಟಿದೆ…..
ಸೇವಾಂಜಲಿ ಚ್ಯಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಸೆನಿಟೈಜ್ಹರ್ ಉಪಕರಣ ವಿತರಣೆ
ಮಂಗಳೂರು ನಗರ ದಕ್ಷಿಣದ ಶಾಸಕರೂ ಸೇವಾಂಜಲಿ ಚ್ಯಾರಿಟೇಬಲ್ ಟ್ರಸ್ಟ್ ಅಧ್ಯಕ್ಷರೂ ಆಗಿರುವ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನಗರದ ಆಸ್ಪತ್ರೆಗಳು, ಸರಕಾರಿ ಕಚೇರಿಗಳು, ಪೋಲಿಸ್ ಠಾಣೆಗಳಿಗೆ ಸೆನಿಟೈಜ್ಹರ್ ಉಪಕರಣ ನೀಡಲಾಗುತ್ತಿದೆ.ಪ್ರಾರಂಭಿಕ ಹಂತದಲ್ಲಿ ಜಿಲ್ಲಾಧಿಕಾರಿ ಕಚೇರಿ, ಅಪರ ಜಿಲ್ಲಾಧಿಕಾರಿ ಕಚೇರಿ, ವೆನ್ಲಾಕ್ ಆಸ್ಪತ್ರೆ, ಇ ಎಸ್ ಐ ಆಸ್ಪತ್ರೆ, ನಗರ ವ್ಯಾಪ್ತಿಗೆ ಬರುವ ಪೋಲಿಸ್ ಠಾಣೆಗಳು, ಬ್ಯಾಂಕ್ ಹಾಗೂ ಇತರ ಕೆಲ ಸಾರ್ವಜನಿಕ ಕ್ಷೇತ್ರದ ಕಂಪೆನಿ ಹಾಗೂ ಕಚೇರಿಗಳಿಗೆ ವಿತರಿಸಲಾಗುವುದು.ಸಾಮಾನ್ಯವಾಗಿ ಕಚೇರಿ …
Read More »ದಕ್ಷಿಣ ಕನ್ನಡ ಜಿಲ್ಲಾಡಳಿತವು ಮಂಗಳೂರಿನಲ್ಲಿದ್ದ ವಲಸೆ ಕಾರ್ಮಿಕರನ್ನು ಕೊನೆಗೂ ಇಂದು ಬೆಳಗ್ಗಿನ ಜಾವ ಅವರ ಊರಿಗೆ ಕಳುಹಿಸಿಕೊಟ್ಟಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತವು ಮಂಗಳೂರಿನಲ್ಲಿದ್ದ ವಲಸೆ ಕಾರ್ಮಿಕರನ್ನು ಕೊನೆಗೂ ಇಂದು ಬೆಳಗ್ಗಿನ ಜಾವ ಅವರ ಊರಿಗೆ ಕಳುಹಿಸಿಕೊಟ್ಟಿದೆ. ಮಂಗಳೂರಿನ ಟೌನ್ ಹಾಲ್ ಬಳಿಯಿಂದ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಬಸ್ ವ್ಯವಸ್ಥೆ ಮಾಡಲಾಗಿತ್ತು. ಈ ಮೂಲಕ 37 ಬಸ್‍ಗಳಲ್ಲಿ 1,100 ಜನ ಕಾರ್ಮಿಕರನ್ನು ಅವರ ಗ್ರಾಮಗಳಿಗೆ ಕಳುಸಿಕೊಡಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಯಿಂದ ನೂರಾರು ಕಾರ್ಮಿಕರು ಏಕಾಏಕಿ ಮಂಗಳೂರಿಗೆ ಆಗಮಿಸಿದ್ದರು. ಟೌನ್ ಹಾಲ್‍ನಲ್ಲಿ ಜಮಾಯಿಸಿದ್ದ ಅವರನ್ನು ಅವರ …
Read More »ವದಂತಿ ನಂಬಿ ಮಂಗ್ಳೂರು ಟೌನ್‍ಹಾಲ್ ಎದುರು ಜಮಾಯಿಸಿದ ವಲಸೆ ಕಾರ್ಮಿಕರು
ಮಂಗಳೂರು: ಎರಡು ವಾರಗಳ ಹಿಂದೆ ವದಂತಿ ನಂಬಿ ಮುಂಬೈನಲ್ಲಿ ಸಾವಿರಾರು ವಲಸೆ ಕಾರ್ಮಿಕರು ರೈಲ್ವೇ ಸ್ಟೇಷನ್‍ಗೆ ಬಂದಿದ್ದರು. ಆ ವೇಳೆ ಪರಿಸ್ಥಿತಿ ನಿಭಾಯಿಸಲು ಪೊಲೀಸರು ಹೆಣಗಾಡಿದರು. ಇಂತದ್ದೆ ಸನ್ನಿವೇಶ ಇಂದು ಮಂಗಳೂರಿನಲ್ಲಿ ಕಂಡು ಬಂತು. ಜಿಲ್ಲಾಡಳಿತ ತಮ್ಮನ್ನು ಸ್ವಗ್ರಾಮಗಳಿಗೆ ಕಳಿಸಲಿದೆ ಎಂಬ ವದಂತಿ ನಂಬಿದ ಸಾವಿರಕ್ಕೂ ಹೆಚ್ಚು ವಲಸೆ ಕಾರ್ಮಿಕರು ಮಂಗಳೂರಿನ ಟೌನ್‍ಹಾಲ್‍ನಲ್ಲಿ ಕಾಣಿಸಿಕೊಂಡರು. ಸಾಮಾಜಿಕ ಅಂತರಪಾಲಿಸದೆ ಗುಂಪು ಸೇರಿದ್ದರು. ಇದು ವದಂತಿ ಹೋಗಿ ಎಂದರೂ ಯಾರೂ ಕೇಳಲಿಲ್ಲ. ಕಾರ್ಮಿಕರು …
Read More »ನರ ರೋಗದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆಗೆ ಕೊರೊನಾ ಪಾಸಿಟಿವ್……..
ಮಂಗಳೂರು: ಕೊರೊನಾ ಸೋಂಕಿತ ವೃದ್ಧೆಯ ಸಾವಿನ ಬಳಿಕ ಕೊರೊನಾ ಹಾಟ್‍ಸ್ಪಾಟ್ ಆಗಿ ಬದಲಾಗಿರುವ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಮತ್ತೆ ಇಬ್ಬರಿಗೆ ಕೊರೊನಾ ಸೋಂಕು ತಗಲಿದೆ. ವೃದ್ಧೆಯ ಪಕ್ಕದ ಬೆಡ್ ನಲ್ಲಿದ್ದ 80 ವರ್ಷದ ತಾಯಿ ಮತ್ತು ಆಕೆಯ ಆರೈಕೆಗೆ ಬಂದಿದ್ದ 45 ವರ್ಷದ ಮಗನಿಗೆ ಸೋಂಕು ಕಾಣಿಸಿಕೊಂಡಿದೆ. ಇವರು ಮಂಗಳೂರಿನ ಶಕ್ತಿನಗರದ ನಿವಾಸಿಗಳಾಗಿದ್ದು, ಆ ಏರಿಯಾವನ್ನು ಕಂಪ್ಲೀಟ್ ಸೀಲ್‍ಡೌನ್ ಮಾಡಲಾಗಿದೆ. ನರ ರೋಗದ ಸಮಸ್ಯೆಯಿಂದ ಬಳಲುತ್ತಿದ್ದ ತಾಯಿಯನ್ನು ಫಸ್ಟ್ …
Read More »ಲಾಕ್‍ಡೌನ್ ಸಂಕಷ್ಟದಲ್ಲಿರುವ ಜನರಿಗೆ ಕುದ್ರೋಳಿ ಕ್ಷೇತ್ರದಿಂದ ಸಹಾಯ……….
ಮಂಗಳೂರು: ಕೊರೊನಾ ಲಾಕ್‍ಡೌನ್‍ನಿಂದಾಗಿ ಸಂಕಷ್ಟದಲ್ಲಿರುವ ಬಡವರು, ನಿರ್ಗತಿಕರಿಗೆ ರಾಜ್ಯದ ಪ್ರಮುಖ ಪುಣ್ಯ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ನಿತ್ಯವೂ ಹಸಿವು ನೀಗಿಸುವ ಮಹತ್ವ ಕಾರ್ಯ ನಡೆಯುತ್ತಿದೆ. ಕುದ್ರೋಳಿ ಕ್ಷೇತ್ರದ ಹರಿಕಾರ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರ ಸಲಹೆ ಹಾಗೂ ಮಾರ್ಗದರ್ಶನದಂತೆ ಅಕ್ಕಿ ವಿತರಣೆ ಕಾರ್ಯ ಆರಂಭಗೊಂಡಿದೆ. ಆರಂಭದಲ್ಲಿ 100 ಕ್ವಿಂಟಾಲ್ ಅಕ್ಕಿ ವಿತರಣೆ ಮಾಡುವ ಉದ್ದೇಶ ಹೊಂದಿತ್ತಾದರೂ ನಂತರ ಅದು ವಿಸ್ತರಣೆಗೊಂಡು ಇದುವರೆಗೆ ಒಟ್ಟ …
Read More »ಲಾಕ್‍ಡೌನ್ ಎಫೆಕ್ಟ್ – 100 ಎಕ್ರೆಯಲ್ಲಿ ಕೊಳೆಯುತ್ತಿದೆ 300 ಟನ್ ಅನಾನಸ್
ಮಂಗಳೂರು: ಕೊರೊನಾ ಭೀತಿಯಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದ್ದು, ಎಲ್ಲ ವರ್ಗದ ಜನ ಆತಂಕದಲ್ಲಿದ್ದಾರೆ. ದೇಶದ ಬೆನ್ನೆಲುಬು ರೈತನು ಕೂಡ ತಾನು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೇ ಕಷ್ಟ ನಷ್ಟ ಅನುಭವಿಸುವಂತಾಗಿದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಎಂಬಲ್ಲಿ ಕೇರಳದ ಎರ್ನಾಕುಲಂ ಮೂಲದ ಶೈಜು 100 ಎಕರೆ ಜಮೀನನ್ನು ಲೀಸ್‍ಗೆ ಪಡೆದು ಅನಾನಸ್ ಕೃಷಿ ಮಾಡಿದ್ದರು. ಶ್ರಮಕ್ಕೆ ತಕ್ಕ ಪ್ರತಿಫಲ ಭರ್ಜರಿ ಫಸಲು ಕೂಡ ಬಂದಿತ್ತು. …
Read More »ಮಂಗಳೂರು:ನನ್ನ ಕ್ಷೇತ್ರದಲ್ಲಿ ಶವ ಸುಡಲು ಬಿಡಲ್ಲ ಶಾಸಕ ಡಾ.ವೈ.ಭರತ್ ಶೆಟ್ಟಿ ಪೊಲೀಸರಿಗೆ ಆವಾಜ್
ಮಂಗಳೂರು: ನನ್ನ ಕ್ಷೇತ್ರದಲ್ಲಿ ಶವ ಸುಡಲು ಬಿಡಲ್ಲ ಎಂದು ಮಂಗಳೂರಿನ ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ಪೊಲೀಸರಿಗೆ ಆವಾಜ್ ಹಾಕಿದ ಘಟನೆ ನಡೆದಿದ್ದು, ಸಾರ್ವಜನಿಕರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕೊರೊನಾದಿಂದ ಸಾವಿಗೀಡಾದ ವೃದ್ಧೆಯ ಶವ ಸುಡಲು ಜನರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿನ್ನೆ ತಡರಾತ್ರಿ ಪೇಚಾಟಕ್ಕೆ ಸಿಲುಕಿತ್ತು. ಆರಂಭದಲ್ಲಿ ಮಂಗಳೂರು ನಗರದ ಬೋಳೂರಿನ ವಿದ್ಯುತ್ ಚಿತಾಗಾರದಲ್ಲಿ ಶವ ಸಂಸ್ಕಾರಕ್ಕೆ ನಿಶ್ಚಯಿಸಲಾಗಿತ್ತು. ಆದರೆ ಸ್ಥಳೀಯ ಶಾಸಕ ವೇದವ್ಯಾಸ್ …
Read More »ದ.ಕನ್ನಡದಲ್ಲಿ ಕೊರೊನಾಗೆ ಎರಡನೇ ಬಲಿ- ರಾಜ್ಯದಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ
ಮಂಗಳೂರು: ಹೆಮ್ಮಾರಿ ಕೊರೊನಾ ವೈರಸ್‍ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 18ಕ್ಕೆ ಏರಿಕೆ ಕಂಡಿದೆ. ಬಂಟ್ವಾಳದ ಕೊರೊನಾ ಸೋಂಕಿತ ಮಹಿಳೆ ಏಪ್ರಿಲ್ 19ರಂದು ಮೃತರಾಗಿದ್ದರು. ಈ ಬೆನ್ನಲ್ಲೇ ಕೊರೊನಾ ಸೋಂಕು ದೃಢಪಟ್ಟು ಚಿಕಿತ್ಸೆ ಪಡೆಯುತ್ತಿದ್ದ ಮೃತ ಮಹಿಳೆಯ ಅತ್ತೆ ಕೂಡ ಇಂದು ಮೃತಪಟ್ಟಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಎರಡನೇ ಸಾವು ಇದಾಗಿದೆ. 75 ವರ್ಷದ ವೃದ್ಧೆ …
Read More »