Breaking News
Home / ಜಿಲ್ಲೆ / ದಕ್ಷಿಣ ಕನ್ನಡ (page 8)

ದಕ್ಷಿಣ ಕನ್ನಡ

ಮನಕಲುಕುತ್ತೆ ಮಂಗಳೂರಿನ ಹಸುಗೂಸಿನ ಕಥೆ”……10 ತಿಂಗಳ ಮಗುವಿಗೆ ಕೊರೊನಾ ಚಿಕಿತ್ಸೆ

ಮಂಗಳೂರು: 10 ತಿಂಗಳ ಮಗುವಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಂದನಿಗಾಗಿ ಅಮ್ಮನ ತ್ಯಾಗದ ಕಥೆ ಮನಕಲಕುತ್ತದೆ. ಮಗುವಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದ್ದರೂ, ಕಂದಮ್ಮನಿಗೆ ಎದೆ ಹಾಲು ನೀಡುವುದನ್ನ ತಾಯಿ ನಿಲ್ಲಿಸಿಲ್ಲ. ಕೇರಳಕ್ಕೆ ಹೋದಾಗ ಮಗುವಿಗೆ ಕೊರೊನಾ ಸೋಂಕು ತಗುಲಿತ್ತು. ಐಸೋಲೇಷನ್ ವಾರ್ಡ್ ನಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಮ್ಮನ ಎದೆ ಹಾಲು ಕುಡಿದ್ರೆ ಮಾತ್ರ ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಮಗುವಿಗೆ ಕೊರೊನಾ ಸೋಂಕು ತಗುಲಿದ್ದರೂ ತಾಯಿ …

Read More »

28 ಲಕ್ಷ ರೂ. ಮೌಲ್ಯದ ವೈದ್ಯಕೀಯ ಸಾಮಗ್ರಿ ತಲುಪಿವೆ: ಸುಧಾ ಮೂರ್ತಿಗೆ ಹರ್ಷ ಧನ್ಯವಾದ

ಮಂಗಳೂರು: ಇನ್ಫೋಸಿಸ್ ಫೌಂಡೇಶನ್‍ನ ಸುಧಾ ಮೂರ್ತಿ ಅವರು ಕಳುಹಿಸಿಕೊಟ್ಟ ವೈದ್ಯಕೀಯ ಸಾಮಗ್ರಿಗಳು ಮಂಗಳೂರಿಗೆ ತಲುಪಿವೆ. ನಿಮಗೆ ಧನ್ಯವಾದ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಪಿ.ಎಸ್.ಹರ್ಷ ಹೇಳಿದ್ದಾರೆ. ಟ್ವೀಟ್ ಮಾಡಿರುವ ಹರ್ಷ ಅವರು, ದಕ್ಷಿಣ ಕನ್ನಡ ಜಿಲ್ಲಾಡಳಿತದ ಪರವಾಗಿ ಮಂಗಳೂರು ಪೊಲೀಸರ ಕರೆಗೆ ಸುಧಾ ಮೂರ್ತಿ ಅವರು ಸ್ಪಂದಿಸಿದ್ದಾರೆ. ನಾವು ಮನವಿ ಸಲ್ಲಿಸಿದ 36 ಗಂಟೆಗಳಲ್ಲಿ 28 ಲಕ್ಷ ರೂ.ಗಳ ಮೌಲ್ಯದ ವೈದ್ಯಕೀಯ ಸಾಮಗ್ರಿಗಳನ್ನು ಕಳುಹಿಸಿಕೊಟ್ಟಿದ್ದಾರೆ. ಅವರು ಕಳುಹಿಸಿದ …

Read More »

ದಕ್ಷಿಣ ಕನ್ನಡದಲ್ಲಿ ಒಂದೇ ದಿನ ಎರಡು ಪ್ರಕರಣ

ದಕ್ಷಿಣ ಕನ್ನಡದಲ್ಲಿ ಒಂದೇ ದಿನ ಎರಡು ಪ್ರಕರಣ ಮಂಗಳೂರು: 21 ವರ್ಷದ ಯುವಕನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಂದೇ ದಿನ ರಾಜ್ಯದಲ್ಲಿ 9 ಜನರಿಗೆ ಸೋಂಕು ತಗುಲಿದ್ದು ಜನ ಆತಂಕಕ್ಕೊಳಗಾಗಿದ್ದಾರೆ. ಕೊರೊನಾ ಸೋಂಕಿತ ಪ್ರಕರಣ 64: 21 ವರ್ಷದ ಯುವಕ, ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿಯಾಗಿದ್ದು, ದುಬೈ ದೇಶಕ್ಕೆ ಪ್ರಯಾಣ ಬೆಳೆಸಿರುವ ಹಿನ್ನೆಲೆಯಿದ್ದು, ದಿನಾಂಕ 22.03.2020 ರಂದು ಭಾರತಕ್ಕೆ ವಾಪಸ್ಸಾಗಿರುತ್ತಾರೆ. ಯುವಕನನ್ನು ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ …

Read More »

ಮಂಗಳೂರು;:ಭಟ್ಕಳ ಮೂಲದ ಯುವಕನಲ್ಲಿ ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ.

ಮಂಗಳೂರು; ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಈ ನಡುವೆ ಭಟ್ಕಳ ಮೂಲದ ಯುವಕನಲ್ಲಿ ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ. ಭಟ್ಕಳದ 22 ವರ್ಷದ ಯುವಕ ಮಾರ್ಚ್ 19ರಂದು ದುಬೈನಿಂದ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿದ್ದ. ಏರ್ ಪೋರ್ಟ್ ನಲ್ಲಿ ತಪಾಸಣೆ ನಡೆಸಿದಾಗ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದಿದ್ದವು ಈ ಹಿನ್ನಲೆಯಲ್ಲಿ ಆತನನ್ನು ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಇದೀಗ ಯುವಕನಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು …

Read More »

ಕೊಲ್ಲೂರು ಮೂಕಾಂಬಿಕಾ ದೇವಿಯ ರಥೋತ್ಸವಕ್ಕೆ ಕೊರೊನಾ ವೈರಸ್ ಅಡ್ಡಿ……:

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಿಯ ರಥೋತ್ಸವಕ್ಕೆ ಕೊರೊನಾ ವೈರಸ್ ಅಡ್ಡಿಯಾಗಿದೆ. ಕರ್ನಾಟಕದಲ್ಲಿ ಕೊರೊನಾ ಹೈ ಅಲರ್ಟ್ ಇರುವುದರಿಂದ ಅದ್ಧೂರಿ ರಥೋತ್ಸವ ನಡೆಸದೇ ಇರಲು ದೇವಸ್ಥಾನ ತೀರ್ಮಾನಿಸಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಮೂಕಾಂಬಿಕೆಯ ಕ್ಷೇತ್ರ ದಕ್ಷಿಣ ಭಾರತದ ದೇವಿ ದೇವಸ್ಥಾನಗಳಲ್ಲಿ ಬಹಳ ಪ್ರಸಿದ್ಧಿ ಕ್ಷೇತ್ರ. ಮೂಕಾಂಬಿಕೆಯ ವಾರ್ಷಿಕ ರಥೋತ್ಸವಕ್ಕೆ ಸಾವಿರಾರು ಮಂದಿ ಸ್ಥಳೀಯ, ರಾಜ್ಯದ ಬೇರೆ ಬೇರೆ ಭಾಗದ ಮತ್ತು ಹೊರ ರಾಜ್ಯದ ಭಕ್ತರು ಸೇರುತ್ತಾರೆ. ರಾಜ್ಯದಲ್ಲಿ ಕೊರೊನಾ ಎಮರ್ಜೆನ್ಸಿ …

Read More »

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ

; ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿದ್ದು, ಏರ್ ಪೋರ್ಟ್ ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಮಾನ ನಿಲ್ದಾಣದ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಲ್ಯಾಪ್ ಟಾಪ್ ಬ್ಯಾಗ್ ಒಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಪತ್ತೆಯಾಗಿತ್ತು. ಈ ಬ್ಯಾಗ್ ನ್ನು ಪರಿಶೀಲನೆ ನಡೆಸಿದ ಪೊಲೀಸರಿಗೆ ಅದರಲ್ಲಿ ಸಜೀವ ಬಾಂಬ್ ಇರುವುದು ಗೊತ್ತಾಗಿದೆ. ತಕ್ಷಣ ಬ್ಯಾಗ್ ನ್ನು ವಿಮಾನ ನಿಲ್ದಾಣದ ಹೊರಗೆ ತಂದು ಸುರಕ್ಷಿತ ಸ್ಥಳದಲ್ಲಿ ಇರಿಸಿದ್ದಾರೆ. …

Read More »

ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ವಾರ್ಷಿಕ ಅಂದಾಜು 100 ಕೋಟಿ ರೂ.ಆದಾಯದೊಂದಿಗೆ ಮೊದಲನೇ ಸ್ಥಾನವನ್ನು ಪಡೆದುಕೊಂಡಿದೆ.

ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವಂತಹ ರಾಜ್ಯದಲ್ಲಿ ಅತಿ ಹೆಚ್ಚು ಆದಾಯ ಹೊಂದಿರುವ ದೇವಾಲಯಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಪ್ರಮುಖ 10 ದೇವಾಲಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಬಾರಿಯು ಕೂಡ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ವಾರ್ಷಿಕ ಅಂದಾಜು 100 ಕೋಟಿ ರೂ. ಆದಾಯದೊಂದಿಗೆ ಮೊದಲನೇ ಸ್ಥಾನವನ್ನು ಪಡೆದುಕೊಂಡಿದೆ. ಉಳಿದಂತೆ 90 ರಿಂದ 92 ಕೋಟಿ ರೂ. ಆದಾಯದೊಂದಿಗೆ ಉಡುಪಿಯ ಕೊಲ್ಲೂರು ಮೂಕಾಂಬಿಕೆ …

Read More »

ಹುಟ್ಟು ಹಬ್ಬದ ಹಿನ್ನಲ್ಲೆಯಲ್ಲಿಗಾನ ಗಂಧರ್ವ ಕೆ.ಜೆ ಯೇಸುದಾಸ್ ಮೂಕಾಂಬಿಕಾ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ

ಗಾನ ಗಂಧರ್ವ ಕೆ.ಜೆ ಯೇಸುದಾಸ್ ಅವರು ತಮ್ಮ ಹುಟ್ಟು ಹಬ್ಬದ ಹಿನ್ನಲ್ಲೆಯಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ತಮ್ಮ 80ನೇ ವರ್ಷದ ಹುಟ್ಟುಹಬ್ಬವನ್ನು ಯೇಸುದಾಸ್ ಅವರು ಧಾರ್ಮಿಕವಾಗಿ ಆಚರಿಸಿಕೊಂಡಿದ್ದಾರೆ. ಪ್ರತಿ ವರ್ಷ ಯೇಸುದಾಸ್ ಅವರು ತನ್ನ ಹುಟ್ಟುಹಬ್ಬದ ದಿನದಂದು ಉಡುಪಿ ಜಿಲ್ಲೆಯ ಕೊಲ್ಲೂರಿಗೆ ಆಗಮಿಸುತ್ತಾರೆ. ಅಂತಯೇ ಈ ವರ್ಷ ಕೂಡ ತಾಯಿ ಮೂಕಾಂಬಿಕೆಯ ದರ್ಶನ ಮಾಡಿದ ಅವರು, ಕುಟುಂಬ ಸಮೇತರಾಗಿ ಚಂಡಿಕಾ ಹೋಮ ಹಾಗೂ ವಿಶೇಷ …

Read More »