Breaking News

ದಾವಣಗೆರೆ

ಕಗ್ಗಂಟಾಗಿದ್ದ ದಾವಣಗೆರೆ, ಬಾಗಲಕೋಟೆಗೆ ಕಾಂಗ್ರೆಸ್ ಅಭ್ಯರ್ಥಿಗಳು ಫೈನಲ್! ಇವರಿಗೆ ಟಿಕೆಟ್ ಕೊಡೋದು ಕನ್ಫರ್ಮ್

ಪಚುನಾವಣೆ ದಿನಾಂಕ  ಘೋಷಣೆಯಾದಾಗಿನಿಂದಲೂ ದಾವಣಗೆರೆ ದಕ್ಷಿಣ ಮತ್ತು ಬಾಲಕೋಟೆಯಲ್ಲಿ ಚುನಾವಣಾ ರಂಗು ಹೆಚ್ಚಾಗಿದೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ  ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ರಾಜಕೀಯವಾಗಿ ಬಹಳ ಆಸಕ್ತಿಕರವಾಗಿ ಮುಂದುವರೆಯುತ್ತಿದೆ. ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಆದರೆ ಕಾಂಗ್ರೆಸ್​​ನಲ್ಲಿ ಮಾತ್ರ ಟಿಕೆಟ್​ಗಾಗಿ ಭಾರೀ ಪೈಪೋಟಿ ನಡೆಯುತ್ತಿತ್ತು. ಇದೀಗ ಕೊನೆಗೂ ಟಿಕೆಟ್​​ ಹಂಚಿಕೆ ಮುಕ್ತಾಯ ಹಂತಕ್ಕೆ ಬಂದಿದೆ. ಸದ್ಯ ಬಿಜೆಪಿ ಟಿಕೆಟ್​ ಅಧಿಕೃತವಾಗಿ ಘೋಷಣೆಯಾಗಿದ್ದು, ಈಗ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ …

Read More »

ಕೈ ಟಿಕೆಟ್ ಘೋಷಣೆ ಮುನ್ನವೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ

ದಾವಣಗೆರೆ : ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ ಒಂಬತ್ತರಂದು ಉಪಚುನಾವಣೆ ನಡೆಯಲಿದೆ. ಆಪೈಕಿ, ದಾವಣಗೆರೆ ದಕ್ಷಿಣ ಕ್ಷೇತ್ರವೂ ಒಂದು. ಟಿಕೆಟ್’ಗಾಗಿ ಭಾರೀ ಆಂತರಿಕ ಜಟಾಪಟಿಯ ನಡುವೆ, ಸಮರ್ಥ್ ಶಾಮನೂರು ನಾಮಪತ್ರವನ್ನು ಇಂದು (ಮಾರ್ಚ್. 20) ಸಲ್ಲಿಸಿದ್ದಾರೆ. ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸೇರಿ ಒಟ್ಟು 2 ಸೆಟ್ ನಾಮಪತ್ರ ಸಲ್ಲಿಸಿದ್ದಾರೆ. ಗಮನಿಸಬೇಕಾದ ವಿಚಾರ ಏನಂದರೆ, ಕಾಂಗ್ರೆಸ್ ಹೈಕಮಾಂಡ್, ಅಧಿಕೃತವಾಗಿ ಟಿಕೆಟ್ ಘೋಷಣೆ ಮಾಡುವ …

Read More »

ದಾವಣಗೆರೆ: ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಾದಿಕ್‌ ಪೈಲ್ವಾನ್‌ ನಾಮಪತ್ರ ಸಲ್ಲಿಕೆ

ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್‌ ಮುಖಂಡ ಸಾದಿಕ್‌ ಪೈಲ್ವಾನ್‌ ಅವರು ಶುಕ್ರವಾರ ಉಮೇದುವಾರಿಕೆ ಸಲ್ಲಿಸಿದರು. ಪಕ್ಷದ ‘ಬಿ’ ಫಾರಂ ಇಲ್ಲದೇ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರವನ್ನು ಚುನಾವಣಾಧಿಕಾರಿಗೆ ನೀಡಿದರು. ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಸ್ಲಿಂ ಸಮುದಾಯದ ನಾಯಕರಿಗೆ ಅವಕಾಶ ನೀಡಬೇಕು ಎಂಬುದು ಬಹುದಿನಗಳ ಬೇಡಿಕೆ. 2013ರ ವಿಧಾನಸಭಾ ಚುನಾವಣೆಯಿಂದಲೂ ಪಕ್ಷದ ಎದುರು ಟಿಕೆಟ್‌ಗೆ ಬೇಡಿಕೆ ಸಲ್ಲಿಸಿದ್ದೇನೆ. ಉಪಚುನಾವಣೆಯಲ್ಲಿ ಪಕ್ಷದ ‘ಬಿ’ ಫಾರಂ ಸಿಗುವ ಸಂಪೂರ್ಣ …

Read More »

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ. ಕರ್ನಾಟಕ, ಗೋವಾ, ನಾಗಾಲ್ಯಾಂಡ್ ಮತ್ತು ತ್ರಿಪುರಾ ರಾಜ್ಯಗಳಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ಪಕ್ಷದ ಪ್ರಕಟಣೆಯ ಪ್ರಕಾರ, ಗೋವಾದ ಪೊಂಡಾ ಕ್ಷೇತ್ರದಿಂದ ರಿತೇಶ್ ರವಿ ನಾಯ್ಕ್ ಅವರನ್ನು ಕಣಕ್ಕಿಳಿಸಲಾಗಿದೆ. ನಾಗಾಲ್ಯಾಂಡ್‌ನ 28-ಕೊರಿಡಾಂಗ್ ಕ್ಷೇತ್ರದಿಂದ ದಾವೋಚಿಯರ್ ಐ. ಇಮ್ಚೆನ್ ಅಭ್ಯರ್ಥಿಯಾಗಿದ್ದು, ತ್ರಿಪುರಾದ 56-ಧರ್ಮನಗರ ಕ್ಷೇತ್ರದಿಂದ ಜಹರ್ …

Read More »

ಶಾಮನೂರು ಕುಟುಂಬಕ್ಕೆ ಟಿಕೆಟ್‌ ನೀಡಿದ್ರೆ 50 ಸಾವಿರ ಮತಗಳಿಂದ ಸೋಲಿಸುತ್ತೇವೆ: ಕಾಂಗ್ರೆಸ್‌ಗೆ ಮುಸ್ಲಿಮ್‌ ನಾಯಕರಿಂದ ಚಾಲೆಂಜ್‌

ದಾವಣಗೆರೆ: ಶಾಮನೂರು ಕುಟುಂಬಕ್ಕೆ ಟಿಕೆಟ್ ಕೊಟ್ಟರೆ 50 ಸಾವಿರ ಮತಗಳ ಅಂತರದಿಂದ ಸೋಲಿಸುವುದಾಗಿ ಮುಸ್ಲಿಮ್‌ ಕಾಂಗ್ರೆಸ್‌ ನಾಯಕರು   ಮೀಸೆ ತಿರುವಿ, ತೊಡೆ ತಟ್ಟಿ ಎಚ್ಚರಿಕೆ ನೀಡಿದ್ದಾರೆ. ಇಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಟಿಕೆಟ್‌ ಹಂಚಿಕೆ ಸಂಬಂಧ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಉಸ್ತುವಾರಿ ಸಮಿತಿ ಅಭಿಪ್ರಾಯ ಸಂಗ್ರಹಣೆಗೆ ಮುಂದಾದಾಗ ಭಾರೀ ಹೈಡ್ರಾಮಾ ನಡೆದಿದೆ. ಒಂದು ಕಡೆ ಮುಸ್ಲಿಮ್‌ ಮುಖಂಡರು ಹಾಗೂ ಯುವಕರು ಅಹಿಂದ ವರ್ಗಕ್ಕೆ ಟಿಕೆಟ್‌ ನೀಡುವಂತೆ …

Read More »

ಜಗಳೂರು | ಹೋಟೆಲ್‍ಗಳ ಮೇಲೆ ತಹಶೀಲ್ದಾರ್ ದಾಳಿ – 20 ಗೃಹ ಬಳಕೆ ಸಿಲಿಂಡರ್ ವಶಕ್ಕೆ

ದಾವಣಗೆರೆ: ಜಗಳೂರಲ್ಲಿ  ಗೃಹ ಬಳಕೆ ಸಿಲಿಂಡರ್ ಬಳಸಿ ಅಡುಗೆ ತಯಾರಿಸುತ್ತಿದ್ದ ಹೋಟೆಲ್‍ಗಳ ಮೇಲೆ ತಹಶೀಲ್ದಾರ್ ದಾಳಿ ನಡೆಸಿದ್ದಾರೆ. ಈ ವೇಳೆ 20 ಗೃಹ ಬಳಕೆ ಸಿಲಿಂಡರ್ ಪತ್ತೆಯಾಗಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ. ನಗರದ ಹಲವು ಹೋಟೆಲ್ ಹಾಗೂ ಟೀ ಅಂಗಡಿಗಳಲ್ಲಿ ಗೃಹ ಬಳಕೆ ಸಿಲಿಂಡರ್ ಬಳಕೆ ಮಾಡಲಾಗುತ್ತಿತ್ತು. ಈ ಮಾಹಿತಿ ಮೇರೆಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿಯವರು ದಾಳಿ ನಡೆಸುವಂತೆ ತಹಶೀಲ್ದಾರ್ ಕಲೀಂ ಉಲ್ಲಾ ಅವರಿಗೆ ಸೂಚಿಸಿದ್ದರು. ಡಿಸಿ ಸೂಚನೆ ಮೇರೆಗೆ ದಾಳಿ …

Read More »

ದಾವಣಗೆರೆ ದಕ್ಷಿಣ ಉಪಚುನಾವಣೆ – ಕ್ಷೇತ್ರದಲ್ಲಿ 2,31,683 ಮತದಾರರಿದ್ದಾರೆ: ಡಿಸಿ ಮಾಹಿತಿ

ದಾವಣಗೆರೆ: ಕಾಂಗ್ರೆಸ್‌ನ  ಹಿರಿಯ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರುವಾದ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಏ.9 ರಂದು ಉಪಚುನಾವಣೆ  ನಡೆಯಲಿದೆ. ಉಪಚುನಾವಣೆ ಬಗ್ಗೆ ಜಿಲ್ಲಾಧಿಕಾರಿ ಜಿ.ಎಂ ಗಂಗಾಧರಸ್ವಾಮಿಯವರು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 2,31,683 ಮತದಾರರಿದ್ದು ಇದರಲ್ಲಿ 1,13,654 ಪುರುಷರು, 1,17,986 ಮಹಿಳೆಯರು ,43 ತೃತೀಯ ಲಿಂಗಿಗಳು ಇದ್ದಾರೆ. ಕ್ಷೇತ್ರವೂ 284 ಮತಗಟ್ಟೆಗಳನ್ನು ಹೊಂದಿದೆ. ನೀತಿ ಸಂಹಿತೆ ಕೇವಲ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಮಾತ್ರ ಜಾರಿಯಾಗಲಿದೆ. …

Read More »

ಇಷ್ಟು ವರ್ಷ ಶಾಮನೂರರನ್ನು ಗೆಲ್ಲಿಸಿದ್ವಿ, ಈಗ ನಮಗೆ ಟಿಕೆಟ್ ಕೊಡಿ – ಮುಸ್ಲಿಂ ಮುಖಂಡರ ಒತ್ತಾಯ

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರನ್ನು ಇಷ್ಟು ವರ್ಷ ಗೆಲ್ಲಿಸಿಕೊಂಡು ಬಂದಿದ್ದೇವೆ. ಈ ಉಪಚುನಾವಣೆಯಲ್ಲಿ  ದಾವಣಗೆರೆ ದಕ್ಷಿಣ  ಕ್ಷೇತ್ರಕ್ಕೆ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ನಿಂದ ಟಿಕೆಟ್ ನೀಡಬೇಕು ಎಂದು ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ. ಇದರ ನಡುವೆ ಕೆಲವು ಮುಸ್ಲಿಂ ಮುಖಂಡರು ಸಮರ್ಥ್ ಶಾಮನೂರು ಅವರಿಗೆ ಟಿಕೇಟ್ ನೀಡುವಂತೆ ಸಿಎಂ ಹಾಗೂ ಡಿಸಿಎಂಗೆ ಒತ್ತಾಯಿಸಿದ್ದಾರೆ. ಸಮರ್ಥ್ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದ ಮುಸ್ಲಿಂ ಮುಖಂಡರ ವಿರುದ್ಧ ಅದೇ ಸಮುದಾಯದ ಯುವಕರು ಆಕ್ರೋಶ ಹೊರಹಾಕಿದ್ದಾರೆ. ಸಚಿವ ಎಸ್.ಎಸ್ …

Read More »

ದಾವಣಗೆರೆ | ಯಾರಿಗೆ ಟಿಕೆಟ್‌ ಕೊಟ್ಟರೂ ಬಿಜೆಪಿ ಗೆಲ್ಲಿಸ್ತೇವೆ – ಐವರು ಟಿಕೆಟ್ ಆಕಾಂಕ್ಷಿಗಳಿಂದ ಒಗ್ಗಟ್ಟು ಪ್ರದರ್ಶನ

ದಾವಣಗೆರೆ: ಶಾಮನೂರು ಶಿವಶಂಕರಪ್ಪ  ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ  ಬಿಜೆಪಿಯಿಂದ ಯಾರೇ ಸ್ಪರ್ಧಿಸಿದರೂ ಗೆಲ್ಲಿಸುತ್ತೇವೆ ಎಂದು ಐವರು ಟಿಕೆಟ್ ಆಕಾಂಕ್ಷಿಗಳು ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಬಿಜೆಪಿಯ  ಎರಡು ಬಣದ ನಾಯಕರು ಒಂದಾಗಿದ್ದಾರೆ. ಐವರು ಆಕಾಂಕ್ಷಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿ, ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಅಜಯ್ ಕುಮಾರ್, ಯಶವಂತರಾವ್ ಜಾದವ್, ರಾಜನಹಳ್ಳಿ ಶಿವಕುಮಾರ್, ಶ್ರೀನಿವಾಸ್ ದಾಸಕರಿಯಪ್ಪ ಮತ್ತು ದೇವರಮನೆ ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಭಾಗಿಯಯಾಗಿದ್ದರು. ಈ ವೇಳೆ ಯಾರಿಗೆ ಟಿಕೆಟ್ ಕೊಟ್ಟರು …

Read More »

ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಏ.9 ರಂದು ಉಪಚುನಾವಣೆ -ಮೇ 4ಕ್ಕೆ ಫಲಿತಾಂಶ

ನವದೆಹಲಿ: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ) ವಿಧಾನಸಭೆಯ ಉಪಚುನಾವಣೆ ದಿನಾಂಕ ಪ್ರಕಟವಾಗಿದೆ. ಎರಡೂ ಕ್ಷೇತ್ರಗಳಿಗೆ ಏಪ್ರಿಲ್‌ 9 ರಂದು ಚುನಾವಣೆ ನಡೆದರೆ ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರು ಇಂದು ದೆಹಲಿಯಲ್ಲಿ ತಮಿಳುನಾಡು, ಕೇರಳ, ಅಸ್ಸಾಂ, ಪಶ್ಚಿಮ ಬಂಗಾಳ, ಪುದುಚ್ಚೇರಿ ವಿಧಾನಸಭಾ ಚುನಾವಣಾ ದಿನಾಂಕದ ಜೊತೆ  ಗೋವಾ, ಗುಜರಾತ್‌, ಮಹಾರಾಷ್ಟ್ರ, ನಾಗಾಲ್ಯಾಂಡ್‌, ತ್ರಿಪುರ ಉಪಚುನಾವಣಾ ದಿನಾಂಕವನ್ನು ಪ್ರಕಟಿಸಿದರು. ಕಾಂಗ್ರೆಸ್‌ ಶಾಸಕ …

Read More »