Breaking News

ದಾವಣಗೆರೆ

ಜಮೀನಲ್ಲಿ‌ ಕೆಲಸ ಮಾಡ್ತಿದ್ದಾಗ PUC ವಿದ್ಯಾರ್ಥಿನಿಗೆ ಅನಾರೋಗ್ಯ: ಆಸ್ಪತ್ರೆಯಲ್ಲಿ‌ ಸಾವು

ದಾವಣಗೆರೆ: ಜಮೀನಿನಲ್ಲಿ‌ ಕೆಲಸ ಮಾಡುತ್ತಿದ್ದ ವೇಳೆ ಯುವತಿಗೆ ಅನಾರೋಗ್ಯವಾಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ. 18 ವರ್ಷದ ಪಿಯುಸಿ ವಿದ್ಯಾರ್ಥಿನಿ ಟಿ.ಶ್ವೇತಾ ಮೃತ ದುರ್ದೈವಿ. ಜಿಲ್ಲೆಯ ಜಗಳೂರು ತಾಲೂಕಿನ ಗೌರಿಪುರದಲ್ಲಿ ಈ ದುರ್ಘಟನೆ ಸಂಭವಿಸಿದೆ. ತನ್ನ ಮಗಳ ಸಾವು ಅನುಮಾನಾಸ್ಪದವಾಗಿದೆ ಎಂದು ಶ್ವೇತಾ ಪೋಷಕರು ತನಿಖೆಗೆ ಮನವಿ ಮಾಡಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಶವಪರೀಕ್ಷೆ ವರದಿಗಾಗಿ ಕಾಯುತ್ತಿದ್ದಾರೆ.

Read More »

ಹಿರಿಯ ರಂಗಕರ್ಮಿ ಕೊಡಗನೂರು ಜಯಕುಮಾರ್ (70) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ

ದಾವಣಗೆರೆ : ಹಿರಿಯ ರಂಗಕರ್ಮಿ ಕೊಡಗನೂರು ಜಯಕುಮಾರ್ (70) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಹಿರಿಯ ರಂಗಕರ್ಮಿ, ಹೆಸರಾಂತ ರಂಗ ಕಲಾವಿಧ ಎಂದೇ ಗುರ್ತಿಸಿಕೊಂಡಿದ್ದಂತ ಕೊಡಗನೂರು ಜಯಕುಮಾರ್ (70) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ದಾವಣಗೆರೆಯ ಬಾಪೂಜಿ ಆಸ್ಪತ್ರೆಯಲ್ಲಿ ಹೃದಯಾಘಾತವಾದ ತಕ್ಷಣ ಆಸ್ಪತ್ರೆಗೆ ದಾಖಲಾದ್ರೂ.. ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಅವರು ಜೂನಿಯರ್ ರಾಜಕುಮಾರ್ ಅಂತಲೇ ಪ್ರಸಿದ್ಧಿಯಾಗಿದ್ದರು. ಕಿರುತೆರೆಯಲ್ಲಿ ಪಾಪ ಪಾಂಡು ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದರು. ವೃತ್ತಿ ರಂಗಭೂಮಿಯಲ್ಲಿ ಅನೇಕ ಪೌರಾಣಿಕ ಪಾತ್ರಗಳಿಗೆ …

Read More »

ವಿಷ್ಣು ಅಭಿಮಾನಿ ಮೃತದೇಹ ಸಾಗಿಸುವುದಕ್ಕೂ ಲಂಚ ಕೇಳಿದ ಆಸ್ಪತ್ರೆಯ ಸಿಬ್ಬಂದಿ’

ದಾವಣಗೆರೆ: ಕೋವಿಡ್ ಹಾಗೂ ನಾನ್ ಕೋವಿಡ್ ವ್ಯಕ್ತಿಗಳು ಆಸ್ಪತ್ರೆಯಲ್ಲಿ ಮೃತರಾದರೆ, ಅವರ ಮೃತದೇಹವನ್ನು ನೀಡಲು ಸಂಬಂಧಿಕರಿಂದ ಹಣದ ಬೇಡಿಕೆ ಇಟ್ಟಿರುವ ಘಟನೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಮೃತದೇಹವನ್ನು ನೀಡಲು ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳು ಹಾಗೂ ಕೆಲವು ಖಾಸಗಿ ವ್ಯಕ್ತಿಗಳು, ಕುಟುಂಬಸ್ಥರಿಗೆ ಹಣದ ಬೇಡಿಕೆ ಇಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜೊತೆಗೆ ನಾನ್ ಕೋವಿಡ್ ರೋಗಿಗಳು ಆಸ್ಪತ್ರೆಯಲ್ಲಿ ಮೃತರಾದರೆ ಅಥವಾ ಮನೆಯಲ್ಲಿ ಮೃತರಾದರೆ ಅವರ ಮೃತದೇಹವನ್ನು ಮನೆಯಿಂದ ಆಸ್ಪತ್ರೆಯ ಶವಾಗಾರಕ್ಕೆ ಹಾಗೂ ಶವಗಾರದಿಂದ …

Read More »

ಹುಲ್ಲು ತರಲು ಅಡವಿಗೆ ಕರೆದೊಯ್ದು ಅಪ್ರಾಪ್ತೆ ಮೇಲೆ ಅತ್ಯಾಚಾರ?

ದಾವಣಗೆರೆ: ಅಪ್ರಾಪ್ತೆಯೊಬ್ಬಳ ಮೇಲೆ ಆಕೆಯ ಸಂಬಂಧಿಕನೇ ಅತ್ಯಾಚಾರ ಎಸಗಿರುವ ಆರೋಪ ಜಿಲ್ಲೆಯ ಜಗಳೂರು ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ. ಹುಲ್ಲು ತರಲು ಅಪ್ರಾಪ್ತೆಯನ್ನು ಅಡವಿಗೆ ಕರೆದುಕೊಂಡು ಹೋದ ಆಕೆಯ ಸಂಬಂಧಿಕ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಈ ವಿಷಯ ಮನೆಯಲ್ಲಿ ಹೇಳದಂತೆ ಆರೋಪಿ ಅಪ್ರಾಪ್ತೆಗೆ ಬೆದರಿಕೆ ಸಹ ಒಡ್ಡಿದ್ದಾನೆ ಎಂದು ಹೇಳಲಾಗಿದೆ. ಈ ನಡುವೆ, ಬಾಲಕಿ ಅನಾರೋಗ್ಯದಿಂದ ಬಳಲಿದ್ದ ಹಿನ್ನೆಲೆಯಲ್ಲಿ ಆಕೆಯ ಪೋಷಕರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. …

Read More »

ಉದ್ಘಾಟನೆ ನೆಪದಲ್ಲಿ ಮತ್ತೆ ಐದಾರು ಕಿ.ಮೀ. ಬಸ್ ಚಲಾಯಿಸಿದ ರೇಣುಕಾಚಾರ್ಯ

ದಾವಣಗೆರೆ, : ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುವ ಹೊನ್ನಾಳಿ ಬಿಜೆಪಿ ಶಾಸಕ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಮತ್ತೆ ಸುದ್ದಿಯಾಗಿದ್ದಾರೆ. ಹೌದು.. ಹೊನ್ನಾಳಿ ಡಿಪೋದ 6 ಬಸ್‌ಗಳನ್ನ ಉದ್ಘಾಟನೆ ಮಾಡಿದರು. ಬಳಿಕ ಸಿಕ್ಕಿದ್ದೇ ಚಾನ್ಸ್ ಅಂತ ಬಸ್‌ ಚಲಾಯಿಸಿಕೊಂಡು ನಗರ ಪ್ರದಕ್ಷಿಣೆ ಹಾಕಿದರು. ಸರಾಗವಾಗಿ ಪಟ್ಟಣದಲ್ಲಿ ಐದಾರು ಕಿ.ಮೀ. ಬಸ್ ಓಡಿಸಿದ ರೆಣುಕಾಚಾರ್ಯ ಅವರಿಗೆ ಕಾರ್ಯಕರ್ತರು ಜೈಕಾರ ಹಾಕಿದರು. ಲೈಸನ್ಸ್ ಇಲ್ಲದೇ ಸರ್ಕಾರಿ ಬಸ್ ಓಡಿಸಿದ ಶಾಸಕ: …

Read More »

ಸಾವಿರಾರು ರೋಗಿಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯ ಈಗ ಆಟೋ ಚಾಲಕ

ದಾವಣಗೆರೆ: ಸಾವಿರಾರು ರೋಗಿಗಳಿಗೆ ಚಿಕಿತ್ಸೆ ನೀಡಿದ್ದ, ಲಕ್ಷಾಂತರ ಮಕ್ಕಳ ಭವಿಷ್ಯಕ್ಕಾಗಿ ನಿರಂತರ ದುಡಿದ ವೈದ್ಯ, ಮೇಲಾಗಿ ಈಗ ಕೋವಿಡ್ ಕಾಲದ ಪರಿಸ್ಥಿತಿಯಲ್ಲಿ ದಿನದ ಕನಿಷ್ಟ 18 ಗಂಟೆಗಳ ಕಾಲ ಸೇವೆ ಸಲ್ಲಿಸುವ ಉತ್ಸಾಹದಲ್ಲಿ ಇರುವ ವೈದ್ಯ ಆಟೋ ಓಡಿಸಿ ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ. ಬಳ್ಳಾರಿ ಜಿಲ್ಲಾ ಲಸಿಕಾಧಿಕಾರಿ ಆಗಿದ್ದ ವ್ಯಕ್ತಿ ಆಟೋ ಚಾಲಕರಾಗಿದ್ದಾರೆ. ಆ ಆಟೋದ ಹೆಸರೇ “ಐಎಎಸ್ ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ’ ಎಂದು. ಇಷ್ಟಕ್ಕೂ ವೈದ್ಯ ಡಾ.ರವೀಂದ್ರನಾಥ್ …

Read More »

ಪ್ರೀತಿಸಿದ ಹುಡುಗಿಗೆ ಯುವಕನ್ನು ನಡು ರಸ್ತೆಯಲ್ಲೇ ತಾಳಿ ಕಟ್ಟಿರುವ ಘಟನೆ:ಗ್ರಾಮಸ್ಥರಿಗೆ ಸಂಕಟ

ದಾವಣಗೆರೆ: ಪ್ರೀತಿಸಿದ ಹುಡುಗಿಗೆ ಯುವಕನೊಬ್ಬ ನಡು ರಸ್ತೆಯಲ್ಲೇ ತಾಳಿ ಕಟ್ಟಿರುವ ಸ್ವಾರಸ್ಯಕರ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಿಮ್ಲಾಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಹೇಮಂತ್ ಎಂಬ ಯುವಕ ತಾನು ಪ್ರೀತಿಸಿದ ಯುವತಿಗೆ ನಡು ರಸ್ತೆಯಲ್ಲೇ ತಾಳಿಕಟ್ಟಿದ್ದಾನೆ. ಹೇಮಂತ್​ ಕಳೆದ 4 ವರ್ಷದಿಂದ ಯುವತಿಯನ್ನು ಪ್ರೀತಿಸುತ್ತಿದ್ದ ಎಂದು ತಿಳಿದುಬಂದಿದೆ. ಆದರೆ, ಇವರ ಪ್ರೀತಿಗೆ ಜಾತಿ ಅಡ್ಡಬಂದ ಹಿನ್ನೆಲೆಯಲ್ಲಿ ಆತನ ಕುಟುಂಬಸ್ಥರು ಇದಕ್ಕೆ ಒಪ್ಪದೆ ಹೇಮಂತ್​ನಿಗೆ ತಮ್ಮ ಜಾತಿಯ ಯುವತಿಯೊಂದಿಗೆ ಮದುವೆ ಮಾಡಿಸಿದ್ದಾರೆ. …

Read More »

ಹೆಚ್.ಡಿ ಕುಮಾರಸ್ವಾಮಿಯವರು ಡ್ರಗ್ಸ್ ನ ಹಣದಿಂದಲೇ ನಮ್ಮ ಸರ್ಕಾರ ಕೆಡವಿದ್ದಾರೆ……?: ಪ್ರಮೋದ್ ಮುತಾಲಿಕ್

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಡ್ರಗ್ಸ್ ನ ಹಣದಿಂದಲೇ ನಮ್ಮ ಸರ್ಕಾರ ಕೆಡವಿದ್ದಾರೆ ಎಂದು ಹೇಳುತ್ತಾರೆ. ಹಾಗಾದರೆ ಇಂದ್ರಜಿತ್ ಲಂಕೇಶ್ ರೀತಿ ಕುಮಾರಸ್ವಾಮಿಯವರನ್ನು ಕೂಡ ವಿಚಾರಣೆ ನಡೆಸಿ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಮಗ ರಾಕೇಶ್ ಸಿದ್ದರಾಮಯ್ಯ ಕೂಡ ಸತ್ತಿದ್ದು ಡ್ರಗ್ಸ್ ನಿಂದಲೇ ಎನ್ನುವುದು ಗೊತ್ತಿದೆ. ಸಿದ್ದರಾಮಯ್ಯನವರಿಗೆ ಯುವ ಜನತೆಯೆ ಬಗ್ಗೆ ಕಾಳಜಿ …

Read More »

ಡ್ರಗ್ಸ್ ವಿಚಾರದಲ್ಲಿ ಚಿರು ಹೆಸರು ಕೇಳಿ ತುಂಬಾ ಬೇಸರವಾಯ್ತು: ದರ್ಶನ್

ದಾವಣಗೆರೆ: ಡ್ರಗ್ಸ್ ವಿಚಾರದಲ್ಲಿ ಚಿರು ಹೆಸರು ಕೇಳಿ ನನಗೆ ತುಂಬಾ ಬೇಸರವಾಯಿತು ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನಗರದ ಬಾಪೂಜಿ ಗೆಸ್ಟ್ ಹೌಸ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕ್ಲಾಸ್ ಎಂದ ಮೇಲೆ ಫಸ್ಟ್ ರ‍್ಯಾಂಕ್ ವಿದ್ಯಾರ್ಥಿ ಇರುತ್ತಾರೆ. ಲಾಸ್ಟ್ ಬೆಂಚ್ ಸ್ಟೂಡೆಂಟ್ ಕೂಡ ಇರುತ್ತಾರೆ. ಅದಕ್ಕೆ ಇಡೀ ಕ್ಲಾಸ್ ಝೀರೋ ಅಂತೀರಾ. ಹಾಗೇ ಸ್ಯಾಂಡಲ್‍ವುಡ್ ಕೂಡ ಎಂದರು. ಡ್ರಗ್ಸ್ ವಿಚಾರದಲ್ಲಿ ಚಿರು …

Read More »

ರ‍್ಯಾಪಿಡ್ ಆಂಟಿಜನ್ ಟೆಸ್ಟ್ ವರದಿಪಾಸಿಟಿವ್ ಆರ್ಟಿಪಿಸಿಆರ್ ನಲ್ಲಿ ನೆಗೆಟಿವ್ : ಶಾಸಕ ಎಸ್.ಎ ರವೀಂದ್ರನಾಥ್ ಅವರ ರ‍್ಯಾಪಿಡ್ ಆಂಟಿಜನ್ ಟೆಸ್ಟ್

ದಾವಣಗೆರೆ: ಬಿಜೆಪಿ ಶಾಸಕರ ಕೊರೊನಾ ವೈರಸ್ ಟೆಸ್ಟ್ ವರದಿಯಲ್ಲಿ ಗೊಂದಲ ಉಂಟಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಉತ್ತರ ಕ್ಷೇತ್ರದ ಶಾಸಕ ಎಸ್.ಎ ರವೀಂದ್ರನಾಥ್ ಅವರ ರ‍್ಯಾಪಿಡ್ ಆಂಟಿಜನ್ ಟೆಸ್ಟ್ ನಲ್ಲಿ ಪಾಸಿಟಿವ್ ಎಂದು ಬಂದಿತ್ತು. ಆದರೆ ಮರುದಿನವೇ ಆರ್ಟಿಪಿಸಿಆರ್ ಟೆಸ್ಟ್ ನಲ್ಲಿ ನೆಗೆಟಿವ್ ಎಂದು ವರದಿ ಬಂದಿದೆ. ಈ ಮೂಲಕ ಶಾಸಕರ ಕೋವಿಡ್ ಟೆಸ್ಟ್ ವರದಿಯಲ್ಲಿಯೇ ಗೊಂದಲ ಮೂಡಿದೆ. ರಾಜ್ಯ ಬುಲೆಟಿನ್ ನಲ್ಲಿ ಕೂಡ ಶಾಸಕರ ಪೇಷಂಟ್ ನಂಬರ್ …

Read More »