ದಾವಣಗೆರೆ: ಮುಸ್ಲಿಮರನ್ನು ಯಾವ ಪಕ್ಷದಲ್ಲೂ ರಾಜ್ಯಾಧ್ಯಕ್ಷರನ್ನಾಗಿ ಮಾಡಿಲ್ಲ. ಕಾಂಗ್ರೆಸ್ (Congress) ಪಕ್ಷದಲ್ಲಿ ಮುಸ್ಲಿಮರಿಗೆ ಊಟದ ಕೊನೆಯಲ್ಲಿ ಅಳಿದುಳಿದ ಎಂಜಲು ರೀತಿಯಲ್ಲಿ ಸ್ಥಾನಮಾನ ನೀಡ್ತಿದ್ರು. ಆದರೆ ಜೆಡಿಎಸ್ (JDS) ರಾಜ್ಯಾಧ್ಯಕ್ಷರ ಸ್ಥಾನ ನೀಡಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ (C.M.Ibrahim) ಹೇಳಿದ್ದಾರೆ. ದಾವಣಗೆರೆ (Davanagere) ಜಿಲ್ಲೆಯ ಹರಿಹರ ತಾಲೂಕಿನ ಮಲೆಬೇನ್ನೂರು ಗ್ರಾಮದಲ್ಲಿ ಸಾರ್ವಜನಿಕ ಸಭೆ ಮಾಡಿ ಹಬೀವುಲ್ಲಾ ಷಾ ಖಾದ್ರಿ ದರ್ಗಾಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ನಾವು ಗುರುವಾರದ …
Read More »ಸಿದ್ಧು ಜನ್ಮದಿನ ಆಚರಣೆಗೆ ದೇವನಗರಿ ಸಜ್ಜು
ದಾವಣಗೆರೆ: ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮ ದಿನದ ಪ್ರಯುಕ್ತ ಆ.3ರಂದು ಹಮ್ಮಿಕೊಂಡಿರುವ ಅಮೃತ ಮಹೋತ್ಸವಕ್ಕಾಗಿ ನಗರದ ಹೊರವಲಯದ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ 50 ಎಕರೆ ಪ್ರದೇಶದಲ್ಲಿರುವ ಶಾಮನೂರು ಅರಮನೆ ಮೈದಾನ ಸಕಲ ರೀತಿಯಲ್ಲಿ ಸಜ್ಜಾಗುತ್ತಿದೆ. ಅದ್ಧೂರಿ ಮತ್ತು ವಿಜೃಂಭಣೆಯಿಂದ ಆಚರಿ ಸುವ ಉದ್ದೇಶದಿಂದ ವೇದಿಕೆ, ಸಭಾಂಗಣ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಬಹುತೇಕ ಮುಕ್ತಾಯ ಹಂತದಲ್ಲಿದೆ. ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ನೀಡಿರುವ ಯೋಜನೆ, ಕಾರ್ಯಕ್ರಮಗಳನ್ನು …
Read More »ಖಾಸಗಿ ಆಸ್ಪತ್ರೆಯಲ್ಲಿ ಶವವಿಟ್ಟು ವೈದ್ಯರ ವಿರುದ್ಧ ಪ್ರತಿಭಟನೆ
ದಾವಣಗೆರೆ: ತಪ್ಪು ಚಿಕಿತ್ಸೆ ನೀಡಿ ಸಾವಿಗೆ ಕಾರಣವಾಗಿರುವ ವೈದ್ಯರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಮೃತರ ಸಂಬಂಧಿಕರು, ಸಾರ್ವಜನಿಕರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಗುರುವಾರ ಕೆ.ಆರ್. ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಶವವಿಟ್ಟು ಪ್ರತಿಭಟನೆ ನಡೆಸಿದರು. ದಾವಣಗೆರೆಯ ಜಯನಗರ ನಿವಾಸಿ ಅನ್ನಪೂರ್ಣಮ್ಮ(65) ಎಂಬುವರ ಸಾವಿಗೆ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ವೃದ್ಧೆಯ ಸಂಬಂಧಿಕರು ಶವವಿಟ್ಟು ಪ್ರತಿಭಟನೆ ನಡೆಸಿದರು. ವೈದ್ಯರ ಬಂಧನ, ಆಸ್ಪತ್ರೆ ಬಂದ್ ಮಾಡುವಂತೆ ಒತ್ತಾಯಿಸಿದರು. ಜೂ. 8 …
Read More »ಮೃತಪಟ್ಟ ಮಹಿಳೆಯೊಬ್ಬರ ಅಂಗಾಂಗಳನ್ನು ದಾನ ಮಾಡಿ ಜೀವನದ ಸಾರ್ಥಕತೆ
ಮಣಿಪಾಲ: ದಾವಣಗೆರೆ ಬಳಿ ಸಂಭವಿಸಿದ ರಸ್ತೆ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಮಹಿಳೆಯೊಬ್ಬರ ಅಂಗಾಂಗಳನ್ನು ದಾನ ಮಾಡಿ ಜೀವನದ ಸಾರ್ಥಕತೆ ಮೆರೆದಿದ್ದಾರೆ. ದಾವಣಗೆರೆ ಬಳಿ ಗುಡಾಲು ಗ್ರಾಮದ ಗುಮ್ಮನೂರು ರಸ್ತೆಯಲ್ಲಿ ಜ.22ರ ಸಂಜೆ ಅಪಘಾತ ಸಂಭವಿಸಿತ್ತು. ನಂಜುಂಡಪ್ಪ ಎಚ್.ಎನ್. ಅವರ ಪತ್ನಿ ಇಂದ್ರಮ್ಮ ಬಿ.ಎಂ. (57) ಗಂಭೀರ ಗಾಯಗೊಂಡಿದ್ದು, ಜ. 23ರಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಗಂಭೀರ ಪ್ರಯತ್ನದ ಹೊರತಾಗಿಯೂ ಚೇತರಿಸಿಕೊಳ್ಳದ …
Read More »ಫೋಟೋಶೂಟ್ ಹುಚ್ಚಿನಿಂದಾಗಿ ರೈಲ್ವೆ ಹಳಿ ಮೇಲೆ ನಿಂತು ಪ್ರಾಣ ಕಳೆದುಕೊಂಡ ಯುವಕ
ದಾವಣಗೆರೆ: ಫೋಟೋಶೂಟ್ ಹುಚ್ಚಿನಿಂದಾಗಿ ರೈಲ್ವೆ ಹಳಿ ಮೇಲೆ ನಿಂತು ಫೋಟೋ ತೆಗೆದುಕೊಳ್ಳಲು ಮುಂದಾದ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ.ದಾವಣಗೆರೆಯ ಡಿಸಿಎಂ ಟೌನ್‌ಶಿಪ್‌ನ ಬಳಿ ಈ ದುರಂತ ಸಂಭವಿಸಿದೆ.ಸಚಿನ್ (16) ಎಂಬಾತ ಸಾವಿಗೀ ಡಾದ ಯುವಕ ಫೋಟೋಶೂಟ್ಗೆಂದು ಈ ಯುವಕ ಗೆಳೆಯರೊಂದಿಗೆ ಇಲ್ಲಿಗೆ ಬಂದಿದ್ದಾನೆ.ಒಳ್ಳೆಯ ಬ್ಯಾಕ್ಗ್ರೌಂಡ್ ಸಿಗುತ್ತದೆ ಎಂದು ಹಳಿ ಮೇಲೆ ನಿಂತವ ಈಗ ಮರಳಿ ಬಾರದ ಲೋಕಕ್ಕೆ ತೆರಳಿದ್ದಾನೆ. ರೈಲು ಬರುವಾಗ ಹಳಿ ಮೇಲೆ ನಿಂತು ಫೋಟೋ ತೆಗೆದುಕೊಂಡರೆ ಚೆನ್ನಾಗಿ ಕಾಣಿಸುತ್ತದೆ ಎಂದು …
Read More »ದಾವಣಗೆರೆ : ಕಬ್ಬಿನ ಗದ್ದೆಯಲ್ಲಿ ಅಡಗಿ ಕುಳಿತಿದ್ದವರಿಗೆ ಲಸಿಕೆ ಹಾಕಿಸಿದ ತಹಶೀಲ್ದಾರ್
ದಾವಣಗೆರೆ : ಜನ ಲಸಿಕೆ ಹಾಕಿಸಿಕೊಳ್ಳಲು ದಿನಕ್ಕೊಂದು ಹೈಡ್ರಾಮಾ ಮಾಡುತ್ತಿದ್ದರಿಂದ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ತಲೆನೋವು ಆಗಿ ಪರಿಣಮಿಸಿದೆ. ದಾವಣಗೆರೆ ಜಿಲ್ಲೆಯ ಕೈದಾಳೆ ಗ್ರಾಮದಲ್ಲಿ ಲಸಿಕೆ ನೀಡುತ್ತಾರೆ ಎಂಬ ಒಂದೇ ಕಾರಣಕ್ಕೆ ಕೆಲವರು ಕಬ್ಬಿನ ಗದ್ದೆಗಳಲ್ಲಿ ಅವಿತುಕೊಂಡಿದ್ದರು. ಅಂತಹವರನ್ನು ಹೊರಕರೆಸಿದ ದಾವಣಗೆರೆ ತಹಶೀಲ್ದರ್ ಲಸಿಕೆ ಹಾಕಿಸಿದ್ದಾರೆ. ದಾವಣಗೆರೆ ತಹಶೀಲ್ದಾರ್ ಗಿರೀಶ್ ನೇತೃತ್ವದಲ್ಲಿ ಮನೆ ಮನೆಗೂ ಹೋಗಿ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆರೋಗ್ಯ ಇಲಾಖೆ ಸಿಬ್ಬಂದಿ ಲಸಿಕೆ ನೀಡಲು ಬರುತ್ತಿದ್ದಾರೆಂದು …
Read More »ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಕೊಚ್ಚಿ ಹೋದ ಯುವಕ, 24 ಗಂಟೆ ಕಳೆದರೂ ಪತ್ತೆಯಾಗದ ಶವ
ದಾವಣಗೆರೆ: ಜಿಲ್ಲೆಯಲ್ಲಾದ ಭಾರಿ ಮಳೆಗೆ ಚಿರಡೋಣಿ ಹಾಗೂ ದೊಡ್ಡಘಟ್ಟ ಗ್ರಾಮಗಳ ನಡುವಿನ ಹಳ್ಳ ತುಂಬಿ ಹರಿಯುತ್ತಿದೆ. ಈ ಹಳ್ಳದಾಟಲು ಹೋಗಿ ಯುವಕ ಕೊಚ್ಚಿ ಹೋದ ಘಟನೆ ದಾವಣಗೆರೆಯಲ್ಲಿ ಸಂಭವಿಸಿದೆ. ಶಿವರಾಜ್ (23) ನೀರು ಪಾಲದ ಯುವಕ. ಘಟನೆ ಸಂಭವಿಸಿ 24 ಗಂಟೆ ಕಳೆದರೂ ಯುವಕನ ಶವ ಪತ್ತೆಯಾಗಿಲ್ಲ. ಭಾರಿ ಮಳೆಗೆ ತುಂಬಿ ಹರಿಯುತ್ತಿರುವ ಹಳ್ಳವನ್ನು ದಾಟಲು ಮುಂದಾಗಿದ್ದ ಯುವಕ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾನೆ. ಕಳೆದ 24 ಗಂಟೆಗಳಿಂದ ಹಳ್ಳಕ್ಕೆ …
Read More »ದಾವಣಗೆರೆ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೊಂದು ಹೊತ್ತಿ ಉರಿದ ಮನೆ
ದಾವಣಗೆರೆ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಾವಿನಹೊಳೆ ಗ್ರಾಮದಲ್ಲಿ ನಡೆದಿದೆ. ಮನೆಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ನಿವಾಸಿಗಳು ಮನೆಯಿಂದ ಆಚೆ ಓಡಿ ಬಂದು ಜೀವ ಉಳಿಸಿಕೊಂಡಿದ್ದಾರೆ. ಮನೆಯಲ್ಲಿ ವೀಣಾ ಹಾಗೂ ಆಕೆಯ ಇಬ್ಬರು ಮಕ್ಕಳು ಇದ್ದರು. ಆದರೆ ಮನೆ ಸಂಪೂರ್ಣ ಭಸ್ಮವಾಗಿದೆ. ತುಂಬಿದ ಸಿಲೀಂಡರ್ಗೆ ಕನೆಕ್ಷನ್ ಕೊಡುವಾಗ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.
Read More »ಸೀಮಂತ ಕಾರ್ಯಕ್ರಮದಲ್ಲಿ ವಿಷ ಆಹಾರ ಸೇವಿಸಿ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ದಾವಣಗೆರೆ: ವಿಷ ಆಹಾರ ಸೇವಿಸಿ 100ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ದುರ್ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಬೆಣ್ಣೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಷಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಣ್ಣೆಹಳ್ಳಿ ಗ್ರಾಮದ ಮನೆ ಒಂದರಲ್ಲಿ ಸೀಮಂತ ಕಾರ್ಯ ನಡೆದಿತ್ತು. ಈ ವೇಳೆ ನೂರಾರು ಜನರಿಗೆ ಸಿಹಿಯೂಟ ಹಾಕಲಾಗಿತ್ತು. ಊಟ ಸೇವಿಸಿದ 100ಕ್ಕೂ ಹೆಚ್ಚು ಮಂದಿಯಲ್ಲಿ ವಾಂತಿ-ಭೇದಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅಸ್ವಸ್ಥರೆಲ್ಲರನ್ನೂ ಬೆಣ್ಣೆಹಳ್ಳಿ ಪಿಎಚ್‌ಸಿ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಲವರು …
Read More »ಆಟೊ ಚಾಲಕರಿಗೆ ಮಹತ್ವದ ಮಾಹಿತಿ : ಸೆ. 1 ರಿಂದ ಆಟೊಗಳಿಗೆ ಮೀಟರ್ ಕಡ್ಡಾಯ
ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಸೆಪ್ಟೆಂಬರ್ 1 ರಿಂದ ಆಟೊ ಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶ ಹೊರಡಿಸಿದ್ದಾರೆ. ಕರಾವಳಿ ಸೇರಿ ರಾಜ್ಯದ ಹಲವೆಡೆ ಇನ್ನೂ 4 ದಿನ ಭಾರೀ ಮಳೆ : ಹೈ ಅಲರ್ಟ್ ಸೆಪ್ಟೆಂಬರ್ 1 ರಿಂದ ಜಿಲ್ಲೆಯಲ್ಲಿ ಆಟೊ ಗಳಿಗೆ ಮೀಟರ್ ಕಡ್ಡಾಯಗೊಳಿಸಲಾಗಿದ್ದು, ಎಲ್ಲಾ ಆಟೋ ಚಾಲಕ, ಮಾಲೀಕರು ತಮ್ಮ ಆಟೊಗಳಿಗೆ ಅನುಮತಿ ಇರುವ ಫ್ಲಾಗ್ ಮೀಟರ್ ಗಳನ್ನು ಅಳವಡಿಸಿಕೊಂಡು ದರಕ್ಕೆ …
Read More »
Laxmi News 24×7