Breaking News

ದಾವಣಗೆರೆ

ಪಡಿತರ ಅಕ್ಕಿ ದಂಧೆಕೋರರ ಬೆನ್ನಿಗೆ ಅಧಿಕಾರಿಗಳು ನಿಂತ್ರಾ ಅನ್ನೋ ಪ್ರಶ್ನೆ…..?

ದಾವಣಗೆರೆ: ಪಡಿತರ ಅಕ್ಕಿ ದಂಧೆಕೋರರ ಬೆನ್ನಿಗೆ ಅಧಿಕಾರಿಗಳು ನಿಂತ್ರಾ ಅನ್ನೋ ಪ್ರಶ್ನೆಯೊಂದು ಮೂಡಿದೆ. ಪಡಿತರ ಅಕ್ಕಿ ಅಕ್ರಮ ದಾಸ್ತಾನು ಮೇಲೆ ದಾಳಿ ಮಾಡಿ ನಕಲಿ ಎಫ್‍ಐಆರ್ ಹಾಕಿದ್ದಾರೆಂಬ ಆರೋಪವೊಂದು ಅಧಿಕಾರಿಗಳ ವಿರುದ್ಧ ಕೇಳಿಬರುತ್ತಿದೆ.   ದಾವಣಗೆರೆ ನಗರದ ಕೆ.ಆರ್ ರಸ್ತೆ ಬಳಿಯ ಗೋದಾಮಿನಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಲಾಗಿದೆ. ಈ ವಿಚಾರ ತಿಳಿದ ಆಹಾರ ನಿರೀಕ್ಷಕ ರವಿ ಶಿವಮೂರ್ತಿ ಹಿಪ್ಪರಗಿ ಹಾಗೂ ತಹಶೀಲ್ದಾರ್ ಗಿರೀಶ್ ನೇತೃತ್ವದಲ್ಲಿ ದಾಳಿ ನಡೆದು ಸುಮಾರು …

Read More »

ಕಪ್ಪುಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾದ ಕೊರೊನಾ ವಾರಿಯರ್ಸ್……….

ದಾವಣಗೆರೆ: ಹೆಮ್ಮಾರಿ ಕೊರೊನಾ ವೈರಸ್ ತಡೆಗಟ್ಟಲು ವೈದ್ಯರು ಹಗಲು ರಾತ್ರಿ ಎನ್ನದೆ ಕೆಲಸ ಮಾಡುತ್ತಿದ್ದು, ಅವರ ಜೊತೆ ವೈದ್ಯಕೀಯ ವಿದ್ಯಾರ್ಥಿಗಳು ಕೂಡ ತಮ್ಮ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಅಂತಹ ಕೊರೊನಾ ವಾರಿಯರ್ಸ್ ಗಳ ಸರ್ಕಾರ ನಿರ್ಲಕ್ಷ್ಯವಹಿಸಿದೆ. 15 ತಿಂಗಳ ಶಿಷ್ಯವೇತನಕ್ಕೆ ಒತ್ತಾಯಿಸಿ ದಾವಣಗೆರೆಯ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಕಪ್ಪುಪಟ್ಟಿ ಧರಿಸಿ ಕೋವಿಡ್ ವಾರ್ಡ್‍ಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕಳೆದೆರಡು ದಿನದ ಹಿಂದಷ್ಟೇ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾಸ್ಪತ್ರೆಯ ಮುಂಭಾಗ …

Read More »

ಗ್ರೀನ್‍ಝೋನ್ ದಾವಣಗೆರೆ ನಗರದಲ್ಲಿ 14 ದಿನ ಮದ್ಯ ನಿಷೇಧ!………

ದಾವಣಗೆರೆ: ರಾಜ್ಯಾದ್ಯಂತ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು, ನಿನ್ನೆಯಿಂದ ಮದ್ಯದಂಗಡಿಗಳು ಓಪನ್ ಆಗಿವೆ. ಆದರೆ ಗ್ರೀನ್ ಝೋನ್ ದಾವಣಗೆರೆಯಲ್ಲಿ ಮಾತ್ರ ಇನ್ನೂ 14 ದಿನ ಎಣ್ಣೆಗೆ ನಿಷೇಧ ಹೇರಲಾಗಿದೆ. ಹೌದು. ಎಲ್ಲಾ ಅಂದುಕೊಂಡಂತೆ ಆಗಿದ್ದರೆ ದಾವಣಗೆರೆ ಮುಕ್ಕಾಲು ಪ್ರಮಾಣದಷ್ಟು ಓಪನ್ ಆಗಬೇಕಿತ್ತು. ಮೊದಲು 2 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಅಷ್ಟೇ ಬೇಗ ಗುಣಮುಖರಾಗಿದ್ರು. ಅತ್ಯಂತ ಯಶಸ್ವಿಯಾಗಿ ಕೊರೊನಾ ನಿಭಾಯಿಸಿದ ಕೀರ್ತಿ ದಾವಣಗೆರೆ ಪಡೆದಿತ್ತು. ಆದರೆ ಆ ಎಲ್ಲಾ ಹೆಗ್ಗಳಿಕೆಯನ್ನು ಈಗಿನ …

Read More »

ದಾವಣಗೆರೆ ಸಂಪೂರ್ಣ ಲಾಕ್‍ಡೌನ್- 21 ಕೊರೊನಾ ಸೋಂಕಿತರ ಮಾಹಿತಿ ಇಲ್ಲಿದೆ…….

ದಾವಣಗೆರೆ: ಆರೆಂಜ್ ಝೋನ್‍ನಲ್ಲಿದ್ದ ದಾವಣಗೆರೆಯಲ್ಲಿ ಒಮ್ಮಿಂದೊಮ್ಮಲೆ ಕೊರಾನಾ ಪ್ರಕರಣಗಳು ಪತ್ತೆಯಾಗುತ್ತಿದ್ದು, ಜಿಲ್ಲೆಯ ಜನರನ್ನು ತೀವ್ರ ಆತಂಕಕ್ಕೀಡು ಮಾಡಿದೆ. ಇಂದು ಒಂದೇ ದಿನ 21 ಪ್ರಕರಣಗಳು ಹೆಚ್ಚಾಗುವ ಮೂಲಕ ರೆಡ್ ಝೋನ್‍ಗೆ ತಿರುಗುವ ಸಾಧ್ಯತೆ ಹೆಚ್ಚಾಗಿದೆ. ಒಟ್ಟು 330 ಸ್ಯಾಂಪಲ್ ಗಳ ಪೈಕಿ 37ರ ವರದಿ ಬಂದಿದ್ದು, ಇದರಲ್ಲಿ ಬರೋಬ್ಬರಿ 21 ಮಂದಿಗೆ ಕೊರೊನಾ ತಗುಲಿರೋದು ದೃಢಪಟ್ಟಿದೆ. ಇನ್ನೂ 293 ಜನರ ವರದಿ ಬರುವುದು ಬಾಕಿ ಇದೆ. ಇವರ ವರದಿ ಏನಾಗುತ್ತದೋ …

Read More »

ದಾವಣಗೆರೆಯಲ್ಲಿ ಕೊರೊನಾಗೆ ಮೊದಲ ಬಲಿ………….

ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾಗೆ ಮೊದಲ ಬಲಿಯಾಗಿದ್ದು 69 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧ(ರೋಗಿ ಸಂಖ್ಯೆ 556) ರಾತ್ರಿ ಸಾವನ್ನಪ್ಪಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಜಾಲಿನಗರದ ನಿವಾಸಿಯಾಗಿದ್ದ ವ್ಯಕ್ತಿ ಮೂರು ದಿನಗಳ ಹಿಂದೆ ಉಸಿರಾಟದ ಸಮಸ್ಯೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ಈ ವ್ಯಕ್ತಿಗೆ ಕೊರೊನಾ ಹೇಗೆ ಬಂದಿದೆ ಎನ್ನುವುದು ತಿಳಿದಿಲ್ಲ. ವೃದ್ಧನ ಟ್ರಾವೆಲ್ ಹಿಸ್ಟರಿಯನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ. ಈ ವ್ಯಕ್ತಿಯಿಂದ …

Read More »

ಆಹಾರ ಪದಾರ್ಥಕಿಟ್ ಕೊಡಲು ಕರೆಸಿ, ಜನರಿಗೆ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವಮಾನ

ಆಹಾರ ಪದಾರ್ಥಗಳ ಕಿಟ್​ಗಳನ್ನು ಪಡೆಯುವ ಸಲುವಾಗಿ ನೂರಾರು ಜನರು ಒಂದೆಡೆ ಸೇರಿದ್ದರು. ಎಲ್ಲರೂ ಬಿಸಿಲಿನಲ್ಲಿ ಗಂಟೆಗೂ ಹೆಚ್ಚು ಕಾದರೂ ಶಾಸಕ ರೇಣುಕಾಚಾರ್ಯ ಅವರು ಸ್ಥಳಕ್ಕೆ ಬರಲಿಲ್ಲ. ಇದರಿಂದ ಅಸಮಾಧಾಗೊಂಡ ಜನರು ತಾವು ಮನೆಗೆ ಹೋಗುವುದಾಗಿ ಹೇಳಿದ್ದಾರೆ. ದಾವಣಗೆರೆ: ಆಹಾರ ಪದಾರ್ಥಕಿಟ್ ಕೊಡಲು ಕರೆಸಿ, ಜನರಿಗೆ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವಮಾನ ಮಾಡಿದ ಘಟನೆ ಹೊನ್ನಾಳಿ ತಾಲೂಕಿನ ಹನಮಸಾಗರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಡೆದಿದೆ. ಕಿಟ್ ಬೇಡ ಅಂದ್ರೆ ಎದ್ದು ಹೋಗು ಎಂದು ಶಾಸಕರು …

Read More »

ಗ್ರೀನ್ ಝೋನ್‍ನಲ್ಲಿ ಇದ್ದ ದಾವಣಗೆರೆಗೂ ಕೊರೊನಾ ಮಹಾಮಾರಿ ಎಂಟ್ರಿ,,,,,,,,,,

ದಾವಣಗೆರೆ: ಗ್ರೀನ್ ಝೋನ್‍ನಲ್ಲಿ ಇದ್ದ ದಾವಣಗೆರೆಗೂ ಕೊರೊನಾ ಮಹಾಮಾರಿ ಎಂಟ್ರಿಕೊಟ್ಟಿದೆ. ಜಿಲ್ಲೆಯ ಮಹಿಳೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ನಾವು ಗ್ರೀನ್ ಝೋನ್‍ನಲ್ಲಿ ಇದ್ದೇವೆ ಎಂದು ನೆಮ್ಮದಿಯಯಲ್ಲಿದ್ದ ದಾವಣಗೆರೆ ಜಿಲ್ಲೆಯ ಜನತೆ ಭಯದ ವಾತಾವರಣ ನಿರ್ಮಾಣವಾಗಿದೆ. ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ 38 ವರ್ಷದ ಮಹಿಳೆಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಮೊದಲ ಕೊರೊನಾ ಪ್ರಕರಣ ದಾಖಲಾಗಿದೆ. ದಾವಣಗೆರೆ ನಗರದ ಭಾಷಾ ನಗರದ ಸರ್ಕಾರಿ ಪ್ರಾಥಮಿಕ ಆರೋಗ್ಯ …

Read More »

ತೂಕದಲ್ಲಿ ಮೋಸ ಮಾಡಿದ 146 ಪಡಿತರ ಅಂಗಡಿ ಲೈಸೆನ್ಸ್ ಅಮಾನತು : ಸಚಿವ ಗೋಪಾಲಯ್ಯ

ದಾವಣಗೆರೆ : ಚಿತ್ರದುರ್ಗದ ಬಳಿಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಗೋಪಾಲಯ್ಯ ಅವರು ದಾವಣಗೆರೆ ಬೇಟಿ ನೀಡದರು. ನಂತರ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನ ಸಭೆ ನಡೆಸಿ ಇಲಾಖೆಗೆ ಸಂಭಂದಪಟ್ಟ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವ ಕೆ. ಗೋಪಾಲಯ್ಯ ಅವರು, ದೇಶದಾದ್ಯಂತ ಕೋವಿಡ್- 19 ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರ ಲಾಕ್ ಡೌನ್ ಮಾಡ್ತಿದೆ. ಹಾಗಾಗಿ …

Read More »

ಸರ್ಜಿಕಲ್ ಸ್ಪಿರಿಟ್‍ಗೆ ನೀರು ಬೆರೆಸಿ ಕಳ್ಳಬಟ್ಟಿ ಸಾರಾಯಿ ಎಂದು ಮಾರಾಟ

ದಾವಣಗೆರೆ: ಮದ್ಯ ಸಿಗದ್ದಕ್ಕೆ ಹಲವರು ಕಳ್ಳಬಟ್ಟಿ ಸಾರಾಯಿ ಮೊರೆ ಹೋಗುತ್ತಿದ್ದು, ಇದನ್ನೇ ಬಂಡವಾಳವನ್ನಾಗಿಸಿಕೊಂಡಿರುವ ಕೆಲವರು ಸರ್ಜಿಕಲ್ ಸ್ಪಿರಿಟ್‍ನ್ನು ಕಳ್ಳಬಟ್ಟಿ ಸರಾಯಿ ಎಂದು ನಂಬಿಸಿ ಮಾರಾಟ ಮಾಟುತ್ತಿದ್ದಾರೆ. ದಾವಣಗೆರೆಯಲ್ಲಿ ಸರ್ಜಿಕಲ್ ಸ್ಪಿರಿಟ್ ದಂಧೆ ಜೋರಾಗಿದ್ದು, ಸರ್ಜಿಕಲ್ ಸ್ಪೀರಿಟ್‍ನ್ನು ನೀರಿಗೆ ಬೆರೆಸಿ ಕಳ್ಳಬಟ್ಟಿ ಎಂದು ನಂಬಿಸಿ ಮಾರಾಟ ಮಾಡಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದ್ದು, ಯಾರೇ ಕೇಳಿದರೂ ಸರ್ಜಿಕಲ್ ಸ್ಪಿರಿಟ್ ನೀಡದಂತೆ ಡ್ರಗ್ ಕಂಟ್ರೋಲ್ ರೂಮ್‍ಗೆ ಪತ್ರ ಬರೆಯಲಾಗಿದೆ. ಸರ್ಜಿಕಲ್ ಸ್ಪಿರಿಟ್ ಬೇಕು …

Read More »

ದಾವಣಗೆರೆ:ಲಾಕ್‍ಡೌನ್ ಉಲ್ಲಂಘಿಸಿದವರ ಕೈಗೆ ಸ್ಲೇಟ್ ಕೊಟ್ಟು ಜಾಗೃತಿ

ದಾವಣಗೆರೆ: ಲಾಕ್‍ಡೌನ್ ಉಲ್ಲಂಘಿಸಿ ಅನಗತ್ಯವಾಗಿ ಹೊರಗಡೆ ತಿರುಗುತ್ತಿದ್ದವರನ್ನು ಎಳೆತಂದ ದಾವಣಗೆರೆ ಪೊಲೀಸರು ಅವರ ಕೈಗೆ ಸ್ಲೇಟ್ ಕೊಟ್ಟು ಕೊರೊನಾ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಕೊರೊನಾ ಭಯದಿಂದ ದೇಶವೇ ಲಾಕ್‍ಡೌನ್ ಆಗಿದೆ. ಅನಗತ್ಯವಾಗಿ ಹೊರಗೆ ಬರಬೇಡಿ ಎಂದು ಆಯಾ ಜಿಲ್ಲೆಗಳಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸರು ಮನವಿ ಮಾಡುತ್ತಿದ್ದಾರೆ. ಹೀಗಾದರೂ ದಾವಣಗೆರೆಯಲ್ಲಿ ನೂರಕ್ಕೂ ಅಧಿಕ ಮಂದಿ ಹೊರಗೆ ಬಂದು ಕಾನೂನು ಉಲ್ಲಂಘಿಸಿದವರನ್ನು ವಶಕ್ಕೆ ಪಡೆದಿದ್ದಾರೆ ಹೊರಗಡೆ ಬಂದು ಸುಖಾಸುಮ್ಮನೆ ತಿರುಗುತ್ತಿದ್ದ …

Read More »