Breaking News

ಧಾರವಾಡ

ನಮಗೆ ಬಹಳ ತ್ರಾಸ ಆಗುತ್ತಿದೆ. ಒಂದೆರಡು ದಿನ ವೈನ್ ಶಾಪ್ ಚಾಲೂ ಮಾಡಿಸಿ:ಸಚಿವ ಜಗದೀಶ್ ಶೆಟ್ಟರಗೆ ಕರೆ ಮಾಡ್ತಿದಾರಂತೆ ಜನ

ಬೆಳಗಾವಿ: ‘ನಮಗೆ ಬಹಳ ತ್ರಾಸ ಆಗುತ್ತಿದೆ. ಒಂದೆರಡು ದಿನ ವೈನ್ ಶಾಪ್ ಚಾಲೂ ಮಾಡಿಸಿ ಎಂದು ಕೆಲವರು ನನಗೆ ಕರೆ ಮಾಡಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು. ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೊರೊನಾ ವೈರಸ್ ಹತ್ತಿಕ್ಕಲು ದೇಶದಾದ್ಯಂತ ಏ.14ರವರೆಗ ಲಾಕ್ ಡೌನ್ ಘೋಷಿಸಿದೆ. ಈ ದಿನಗಳಲ್ಲಿ ಮಧ್ಯ ಕುಡಿಯದೆ ಇದ್ರೆ ಏನು ಆಗುವುದಿಲ್ಲ. ಆದರೆ ನನಗೆ ಕೆಲವರು ವೈನ್ ಶಾಪ್ ಗಳನ್ನು ಎರಡು ದಿನಗಳ …

Read More »

100ಕ್ಕೂ ಹೆಚ್ಚು ಜನರಿಗೆ ಊಟ ಹಾಕಿದ ಧಾರವಾಡ ಎಸ್‍ಪಿ – ಸ್ವತಃ ನಿಂತು ಊಟ ಬಡಿಸಿದ್ರು

ಧಾರವಾಡ: ಕೊರೊನಾ ಭೀತಿಯಿಂದ ರಸ್ತೆ ಮೂಲಕ ನಡೆದುಕೊಂಡು ಹೋಗುತ್ತಿದ್ದ ಕಾರ್ಮಿಕರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಸೇರಿದಂತೆ ಕರ್ತವ್ಯದ ಮಧ್ಯೆಯೂ ಅನೇಕ ಪೊಲೀಸರು ಊಟ ಹಾಕಿ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗದಿಂದ ರಾಜಸ್ಥಾನಕ್ಕೆ ನಡೆದುಕೊಂಡೇ ಹೊರಟಿದ್ದ ಅನೇಕ ಕಾರ್ಮಿಕರು ಹಾಗೂ ಕಾರಿನಲ್ಲಿ ಹೊರಟಿದ್ದ ರಾಜಸ್ಥಾನ ಮೂಲದ ಕುಟುಂಬಗಳಿಗೆ ತೆಗೂರ ಬಳಿ ಖುದ್ದು ಎಸ್‍ಪಿಯೇ ಊಟ ಬಡಿಸಿ ಎಲ್ಲರ ಉಪಚಾರ ಮಾಡಿದರು. ಬೆಳಗಾವಿ ರಸ್ತೆಗೆ ಸಂಪರ್ಕ ಕಲ್ಪಿಸುವ ಟೋಲ್ ಗೇಟ್‍ನಲ್ಲಿ ಕೂಲಿ …

Read More »

ಕಿಮ್ಸ್ ಸಿಬ್ಬಂದಿಯಿಂದ್ಲೇ ಮಾಸ್ಕ್ ಕಳ್ಳತನ

ಹುಬ್ಬಳ್ಳಿ: ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸಿಬ್ಬಂದಿಯೇ ಮಾಸ್ಕ್ ಬಾಕ್ಸ್ ಅನಧಿಕೃತವಾಗಿ ಕಳ್ಳತನ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕಿಮ್ಸ್ ಸಿಬ್ಬಂದಿ ಫಾತಿಮಾ ಸೈಯದ್ ಎಂಬವರೇ ಕಿಮ್ಸ್ ಆಸ್ಪತ್ರೆಯಿಂದ ಮಾಸ್ಕ್ ಬಾಕ್ಸ್ ಕಳ್ಳತನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಿಮ್ಸ್ ಆಡಳಿತ ಮಂಡಳಿ ನೋಟಿಸ್ ನೀಡಿದೆ. ಮೇಲಾಧಿಕಾರಿ ಅನುಮತಿಯಿಲ್ಲದೇ ಮುಖ್ಯ ಔಷಾಧಾಲಯದಿಂದ 100 ಮಾಸ್ಕ್ ಇದ್ದ ಬಾಕ್ಸ್ ತೆಗೆದುಕೊಂಡು ಹೊಗಿದ್ದ ಫಾತಿಮಾ. ಕಿಮ್ಸ್ ಅಧಿಕಾರಿಗಳು ಕೇಳಿದ್ರೆ …

Read More »

ಧಾರವಾಡಕ್ಕೆ ನೆರವು ಘೋಷಿಸಿದ ಸುಧಾಮೂರ್ತಿ

ಧಾರವಾಡ: ಕೊರೊನಾದಿಂದ ಉಂಟಾಗಿರುವ ಸಂಕಷ್ಟ ಪರಿಹಾರೋಪಾಯ ಕಾರ್ಯಕ್ಕಾಗಿ ಈಗಾಗಲೇ ಸಾಕಷ್ಟು ನೆರವು ನೀಡಿರುವ ಇನ್ಫೋಸಿಸ್ ಪ್ರತಿಷ್ಠಾನವು ಈಗ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ 20 ಲಕ್ಷ ರೂ.ಗಳ ಪ್ರತ್ಯೇಕ ನೆರವು ಘೋಷಿಸಿದೆ. ಧಾರವಾಡ ಜಿಲ್ಲೆ ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕು ಒಳಗೊಂಡು ಪರಿಹಾರ ಕಾರ್ಯ ಕೈಗೊಳ್ಳುವುದಕ್ಕಾಗಿ ಸುಧಾಮೂರ್ತಿಯವರು ಈ ನೆರವು ನೀಡಿದ್ದು, ಸಾಫಲ್ಯ ಪ್ರತಿಷ್ಠಾನ ಮತ್ತು ಗ್ರಾಮ ವಿಕಾಸ ಸಂಸ್ಥೆಗಳ ಮೂಲಕ ಈ ಪರಿಹಾರ ಕಾರ್ಯಗಳು ನಡೆಯಲಿವೆ. ಈ ಹಣದಲ್ಲಿ …

Read More »

ಜ್ಮಾ ಎಂ.ಪೀರಜಾದೆ ಅವರಿಗೆ 2019-20ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ…

ಬೆಳಗಾವಿ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿ ಪ್ರಸ್ತುತ ಧಾರವಾಡದಲ್ಲಿ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂದಾಖಲೆಗಳ ಉಪ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ನಜ್ಮಾ ಎಂ.ಪೀರಜಾದೆ ಅವರಿಗೆ 2019-20ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ದೊರಕಿದೆ. ಈ ಮುಂಚೆ ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಜ್ಮಾ ಪೀರಜಾದೆ, ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಲಂಬಾಣಿ ತಾಂಡಾ ಹಾಗೂ ಗೊಲ್ಲರಹಟ್ಟಿ ಜನವಸತಿಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಿ, ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅದೇ ರೀತಿ …

Read More »

ಕರ್ಫ್ಯೂ ಪಾಲಿಸಿದರೆ ಮಾತ್ರ ವೈರಾಣು ಹರಡುವುದನ್ನು ನಿಯಂತ್ರಿಸಬಹುದು: ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿರುವ 21 ದಿನಗಳ ಕರ್ಫ್ಯೂಗೆ ಸಾರ್ವಜನಿಕರು ಬೆಂಬಲಿಸಬೇಕು. ಸ್ವಯಂ ನಿಯಂತ್ರಣವನ್ನು ಹೇರಿಕೊಂಡು ಅನಗತ್ಯವಾಗಿ ಮನೆಯಿಂದ ಹೊರಬರದೆ ವೈರಾಣು ಹರಡುವುದನ್ನು ನಿಯಂತ್ರಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಮನವಿ ಮಾಡಿಕೊಂಡಿದ್ದಾರೆ. ಹುಬ್ಬಳ್ಳಿಯ ಹಳೆ ಬಸ್ ನಿಲ್ದಾಣದಲ್ಲಿ ಅಗ್ನಿಶಾಮಕದಳದಿಂದ ನಡೆಸಲಾದ ಡಿಸ್‍ಇನ್ಫೆಕ್ಷನ್ ಸ್ವಚ್ಛತಾ ಕಾರ್ಯ ವೀಕ್ಷಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಅಕ್ಷರಶಃ ಕರ್ಫ್ಯೂವನ್ನು ಪಾಲಿಸಿದಾಗ ಮಾತ್ರ …

Read More »

ಧಾರವಾಡದಲ್ಲಿ ಕೂಡಾ ಓರ್ವ ವ್ಯಕ್ತಿಗೆ ಕೋರೋನಾ ಪಾಸಿಟಿವ್.

… ಧಾರವಾಡದಲ್ಲಿ ಕೂಡಾ ಓರ್ವ ವ್ಯಕ್ತಿಗೆ ಕೋರೋನಾ ಪಾಸಿಟಿವ್… ಆಸ್ಟ್ರೇಲಿಯಾ, ದುಬೈ,ಮಸ್ಕತ್,ಹಾಗೂ ಗೋವಾ ಮೂಲಕ ಧಾರವಾಡ ನಗರಕ್ಕೆ ಆಗಮಿಸಿದ ವ್ಯಕ್ತಿಯಲ್ಲಿ ಕೋವಿಡ್ 19 ಪಾಸಿಟಿವ್ ಇರುವುದು ಪ್ರಯೋಗಾಲಯದಿಂದ ಖಚಿತ… ಧಾರವಾಡದಲ್ಲಿ ಓರ್ವ ವ್ಯಕ್ತಿಗೆ ಕೋರೋನಾ ಇದೆ ಎಂದು ದ್ರಡಪಡಿಸಿದ ಜಿಲ್ಲಾಧಿಕಾರಿ ದೀಪಾ ಚೋಳನ್ ಧಾರವಾಡದ ಹೊಸ ಯೆಲ್ಲಾಪುರದಲ್ಲಿ ಹೈ ಅಲರ್ಟ್ ಘೋಷಣೆ..

Read More »

ಹುಬ್ಬಳ್ಳಿಯಿಂದ ಮಹಾರಾಷ್ಟಕ್ಕೆ ತೆರಳುವ 7 ಬಸ್ಸುಗಳ ಸಂಚಾರ ಸ್ಥಗಿತ

ಹುಬ್ಬಳ್ಳಿ: ವಿಜಯಪುರ ಜಿಲ್ಲೆಯ ಗಡಿಭಾಗಕ್ಕೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಕೊರೊನಾ ವೈರಾಣು ಹರಡಿರುವುದರಿಂದ, ಹುಬ್ಬಳ್ಳಿಯಿಂದ ಈ ಭಾಗಕ್ಕೆ ತೆರಳುವ ಏಳು ಬಸ್ಸುಗಳು ಹಾಗೂ ರಾಜ್ಯದ ಕಲಬುರಗಿಗೆ ತೆರಳುವ ಸ್ಲೀಪರ್ ಕೋಚ್ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಈ ಕುರಿತು ವಾಕರಸಾಸಂ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ವಿಭಾಗೀಯ ನಿಯಂತ್ರಕ ಹೆಚ್.ರಾಮನಗೌಡರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ವಿಜಯಪುರ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಹೀಗಾಗಿ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವ ಪ್ರವಾಸಿಗರನ್ನು ನಿಯಂತ್ರಿಸಲು …

Read More »

ಕೊರೊನಾ ಭೀತಿ, ರಾತ್ರಿ ವೇಳೆಯಲ್ಲಿ ಔಷಧ ಸಿಂಪಡಿಸುತ್ತಿಲ್ಲ- ಧಾರವಾಡ ಡಿ.ಸಿ ಸ್ಪಷ್ಟನೆ

ಸಾಮಾಜಿಕ ಜಾಲತಾಣಗಳಲ್ಲಿನ ಸುಳ್ಳು ಸುದ್ದಿಗೆ ಸ್ಪಷ್ಟನೆ ಹುಬ್ಬಳ್ಳಿ: ಕೊರೊನಾ ವೈರಸ್ ಹರಡದಂತೆ ಅರೋಗ್ಯ ಇಲಾಖೆಯಿಂದ ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಗಾಳಿಯಲ್ಲಿ ಔಷಧ ಸಿಂಪಡಿಸುತ್ತಿಲ್ಲ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಇಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆ ವರೆಗೆ ಗಾಳಿಯಲ್ಲಿ ಔಷಧ ಸಿಂಪಡಿಸಲಾಗುತ್ತಿದೆ. ಹೀಗಾಗಿ ಸಾರ್ವಜನಿಕರು ಹೊರಗಡೆ ಬರಬಾರದು ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇಂತಹ ಊಹಾಪೋಹದ …

Read More »

ಹಾವೇರಿ ಜಿಲ್ಲೆಯ ಹಲಗೇರಿಯಲ್ಲಿ ಪಾಪು ಅಂತ್ಯಕ್ರಿಯೆ

ಹುಬ್ಬಳ್ಳಿ/ಧಾರವಾಡ: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ನಾಡೋಜ ಪಾಟೀಲ ಪುಟ್ಟಪ್ಪ ಅವರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮಾರ್ಚ್ 16 ರಾತ್ರಿ 10 ಗಂಟೆ 10 ನಿಮಿಷಕ್ಕೆ ನಿಧನರಾಗಿದ್ದಾರೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹಲಗೇರಿಯಲ್ಲಿ ಇಂದು ಅಂತ್ಯಕ್ರಿಯೆ ಜರುಗಲಿದೆ. ಕಡಿಮೆ ರಕ್ತದೊತ್ತಡ , ರಕ್ತಹೀನತೆ, ಬ್ರೇನ್ ಹೆಮರೈಜ್, ಶ್ವಾಸಕೋಶದ ಸೋಂಕು ಸೇರಿದಂತೆ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಪಾಟೀಲ ಪುಟ್ಟಪ್ಪ ಅವರಿಗೆ ಕಿಮ್ಸ್ ನಲ್ಲಿ ಒಂದು ತಿಂಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. …

Read More »