Breaking News

ಧಾರವಾಡ

ಧಾರವಾಡ ಜಿಲ್ಲೆ: ವರುಣ ನರ್ತನ 8 ವರ್ಷದ ಬಾಲಕಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ

ಧಾರವಾಡ: ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದ್ದು, ಶೀತ ಗಾಳಿಯೊಂದಿಗೆ ಎಡೆಬಿಡದೆ ಮಳೆ ಸುರಿಯುತ್ತಿದೆ. ‌ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿನ ಕೆರೆ ತುಂಬಿ ಹರಿದು 3ನೇ ತರಗತಿಯ ಬಾಲಕಿಯೊಬ್ಬಳು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ ಕೋಡಿ ಬಿದ್ದಿದ್ದ ಗಂಜಿಗಟ್ಟಿ ಕೆರೆ ನೀರಿನಲ್ಲಿ ಕೊಚ್ಚಿ ಹೋಗಿರುವ ಬಾಲಕಿಯ ಮೃತದೇಹದ ಪತ್ತೆಗೆ ಎನ್‌ಡಿ‌ಆರ್‌ಎಫ್ ತಂಡ ತೀವ್ರ ಹುಡುಕಾಟ ನಡೆಸುತ್ತಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿ ನ ಗಂಜಿಗಟ್ಟಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಎಂಟು …

Read More »

ತನ್ನ ಮಗುವಿನೊಂದಿಗೆ ಕರ್ತವ್ಯಕ್ಕೆ ಹಾಜರಾದ ನರ್ಸ

ಧಾರವಾಡ(ಆ.03): ರಾಜ್ಯದಲ್ಲಿ ಕೊರೋನಾ ವೈರಸ್​ನ ಅಟ್ಟಹಾಸ ಮುಂದುವರೆದಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದಕ್ಕೆ ಧಾರವಾಡ ಜಿಲ್ಲೆ ಸಹ ಹೊರತಾಗಿಲ್ಲ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ನಾಲ್ಕು ಸಾವಿರ ಗಡಿ ದಾಟಿದೆ. ಇದರಿಂದ ಜಿಲ್ಲೆಯ ನಗರ ಪ್ರದೇಶದಲ್ಲಿ  ಆ್ಯಂಟಿಜನ್ ಟೆಸ್ಟ್  ವಾಹನದ ಮೂಲಕ ಕೊರೋನಾ ಟೆಸ್ಟ್​​ ಮಾಡಲಾಗುತ್ತಿದೆ. ಆದರೆ ಈ ಆ್ಯಂಟಿಜನ್ ಟೆಸ್ಟ್ ಮಾಡಲು ನರ್ಸ್ ತನ್ನ ಪುಟ್ಟ ಮಗಳೊಂದಿಗೆ ಕರ್ತವ್ಯಕ್ಕೆ ಹಾಜರಾಗಿದ್ದಾಳೆ. ಧಾರವಾಡ ನಗರದ ವಿವಿಧ …

Read More »

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅವ್ಯವಹಾರ: ಜಿಪಂ ಸಿಇಒಗೆ ಕೇಂದ್ರ ಸಚಿವ ಪ್ರಹ್ಲಾದ್​​​ ಜೋಶಿ ತರಾಟೆ

ಧಾರವಾಡ(ಜು.28): ಧಾರವಾಡ ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಹಣವನ್ನು ಬೇರೆಯವರ ಹೆಸರಲ್ಲಿ ಜಮಾ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿಯವರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ತೀವ್ರ ತರಾಟೆ ತೆಗೆದುಕೊಂಡಿದ್ದಾರೆ.ಕೇಂದ್ರ ಸಚಿವ ಪ್ರಹ್ಲಾದ್​ ದೆಹಲಿಯಿಂದ ಆನ್​​ಲೈನ್​​ಲ್ಲೇ ವಿಡಿಯೋ ಸಂವಾದ ಮೂಲಕ ಧಾರವಾಡ ಲೋಕಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ದಿಶಾ ಸಭೆ ನಡೆಸಿದರು. ಈ ವೇಳೆ ಜಿಲ್ಲಾ ಪಂಚಾಯತ್​​ ಸಿಇಒ ವಿರುದ್ಧ ಜೋಶಿ ಗರಂ ಆಗಿದ್ದರು. …

Read More »

ಪಿ.ಪಿ.ಇ. ಕಿಟ್‍ಗಳನ್ನು ಎಲ್ಲೆಂದರಲ್ಲಿ ಎಸೆದು ಹೋಗಿದ್ದರಿಂದ ಆಕ್ರೋಶ…….

ಧಾರವಾಡ: ಕೊರೊನಾದಿಂದ ಮೃತಪಟ್ಟವರ ಅಂತ್ಯಯಸಂಸ್ಕಾರವನ್ನು ಜನವಸತಿ ಪ್ರದೇಶದ ಬದಿಯ ಸ್ಮಶಾನದಲ್ಲಿ ಮಾಡುವುದರ ಜೊತೆಗೆ, ಅಂತ್ಯಸಂಸ್ಕಾರದ ಬಳಿಕ ಪಿಪಿಇ ಕಿಟ್‍ಗಳನ್ನು ಎಲ್ಲೆಂದರಲ್ಲಿ ಎಸೆದು ಹೋಗಿದ್ದರಿಂದ ಆಕ್ರೋಶಗೊಂಡ ಸ್ಥಳೀಯರು, ದಿಢೀರ್ ಪ್ರತಿಭಟನೆಗೆ ಇಳಿದ ಘಟನೆ ನಡೆದಿದೆ. ನಗರದ ದಾನೇಶ್ವರಿ ನಗರ 3ನೇ ಅಡ್ಡರಸ್ತೆಯಲ್ಲಿರುವ ಸ್ಮಶಾನದಲ್ಲಿ ಇತ್ತೀಚೆಗೆ ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತಿದೆ. ಧಾರವಾಡ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಹೆಚ್ಚುತ್ತಿದ್ದು, ಈ ಹಿನ್ನೆಲೆ ಬೇರೆ ಕಡೆಯ ಸ್ಮಶಾನಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. …

Read More »

ನವಲಗುಂದ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಗುಂಡಿನ ಸದ್ದು……..

ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಗುಂಡಿನ ಸದ್ದು ಮೊಳಗಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಮಲ್ಲಪ್ಪ ಕರಿ ಎಂಬಾತ ಅದೇ ಗ್ರಾಮದ ಶರಣಪ್ಪ ಕಾಳೆ ಎಂಬಾತನ ಮೇಲೆ ಗುಂಡು ಹಾರಿಸಿದ್ದಾನೆ. ಇಬ್ಬರ ಮಧ್ಯೆ ಹಣದ ವಿಚಾರವಾಗಿ ಜಗಳ ನಡೆದಿತ್ತು. ಈ ಹಿನ್ನೆಲೆಯಲ್ಲಿ ಕೋಪಗೊಂಡ ಮಲ್ಲಪ್ಪ ಗುಂಡು ಹಾರಿಸಿದ್ದಾನೆ. ಶರಣಪ್ಪನ ಹೊಟ್ಟೆ ಮತ್ತು ಕೈಗೆ ಗುಂಡು ತಗುಲಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ …

Read More »

ಜುಬ್ಲಿಯಂಟ್, ಜಿಂದಾಲ್ ಆಯ್ತು ಈಗ ಟಾಟಾ ಮಾರ್ಕೋಪೊಲೊ ಕಂಪನಿಗೂ ಕೊರೊನಾ ಕಂಟಕ

ಧಾರವಾಡ: ಮೈಸೂರಿನ ಜುಬ್ಲಿಯಂಟ್, ಬಳ್ಳಾರಿಯ ಜಿಂದಾಲ್ ಆಯ್ತು. ಈಗ ಧಾರವಾಡದ  ಟಾಟಾ ಮಾರ್ಕೋಪೊಲೊ ಕಂಪನಿಗೂ ಕೊರೊನಾ ಕಂಟಕ ಆರಂಭವಾಗಿದೆ. ಜಿಲ್ಲೆಯ ಬೇಲೂರು ಕೈಗಾರಿಕಾ ಪ್ರದೇಶದ 3500 ಕಾರ್ಮಿಕರು ಕೆಲಸ ಮಾಡುವ ಮಾರ್ಕೋಪೊಲೊ ಕಂಪನಿಯ 8 ಕಾರ್ಮಿಕರಿಗೆ ಕೊರೊನಾ ಸೋಂಕು ತಗುಲಿದೆ. ಇದರಿಂದ ಈಗ ಉಳಿದ ಕಾರ್ಮಿಕರಿಗೂ ಕೊರೊನಾ ಆತಂಕ ಎದುರಾಗಿದೆ. ಇಗಾಗಲೇ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹಬ್ಬಿದ್ದರಿಂದ ಜಿಲ್ಲಾಡಳಿತ 10 ದಿನಗಳ ಕಾಲ ಜಿಲ್ಲೆಯಲ್ಲಿ ಲಾಕಡೌನ್ ಮಾಡಿ …

Read More »

S.D.M.&K.I.M.S. ಫುಲ್ ಖಾಸಗಿ ಆಸ್ಪತ್ರೆಗಳಿಗೆ ಶೆಟ್ಟರ್ ಮನವಿ

ಧಾರವಾಡ: ಜಿಲ್ಲೆಯಲ್ಲಿ ಲಾಕ್‍ಡೌನ್ ಮುಂದುವರಿಸುವ ಬಗ್ಗೆ ಗಮನಿಸಬೇಕಿದೆ. ಜಿಲ್ಲೆಯಲ್ಲಿ ಇನ್ನೂ 24ರ ವರೆಗೆ ಲಾಕ್‍ಡೌನ್ ಇದೆ. ಗುರುವಾರ ಕ್ಯಾಬಿನೆಟ್ ಸಭೆ ಇದೆ ಅಲ್ಲಿಯೂ ಚರ್ಚಿಸುತ್ತೇವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು. ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅಧಿಕಾರಿಗಳ ಹಾಗೂ ಶಾಸಕರ ಸಭೆ ನಡೆಸಿದರು. ಸಭೆಯ ನಂತರ ಮಾತನಾಡಿದ ಅವರು, …

Read More »

ವಿರೋಧ ಪಕ್ಷಗಳು ಆರೋಪಿಸುತ್ತಿವೆ. ಸರ್ಕಾರ ಇದಕ್ಕೆ ಉತ್ತರ ಕೊಡಬೇಕು:ಪ್ರಮೋದ ಮುತಾಲಿಕ್

ಧಾರವಾಡ: ಕೊರೊನಾ ನಿಯಂತ್ರಣ ವಿಚಾರದಲ್ಲಿ ಸರ್ಕಾರ ಸರಿಯಾಗಿ ಕೆಲಸವಾಗುತ್ತಿಲ್ಲ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿವೆ. ಸರ್ಕಾರ ಇದಕ್ಕೆ ಉತ್ತರ ಕೊಡಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರ ನೋಟದಲ್ಲಿ ಕೊರೊನಾ ಪ್ರಕ್ರಿಯೆಯಲ್ಲಿ ಗೊಂದಲ ಕಾಣುತ್ತಿದೆ. ರಾಜ್ಯ ಸರ್ಕಾರ ಡಾ.ಕಜೆಯವರ 70 ಲಕ್ಷ ಆಯುರ್ವೇದಿಕ್ ಮಾತ್ರೆ ಖರೀದಿಸಿದೆ ಅದನ್ನು ಎಲ್ಲಿಯೂ ವಿತರಿಸುತ್ತಿಲ್ಲ. ಇದರಿಂದ ಸರ್ಕಾರದ ಮೇಲೆ ಸಂಶಯ ಬರುತ್ತದೆ. ವಿರೋಧ ಪಕ್ಷದವರ …

Read More »

ಕೋವಿಡ್ ನಿಯಂತ್ರಣಕ್ಕೆ ಅರಣ್ಯ ಇಲಾಖೆಯಿಂದ ಜನಜಾಗೃತಿ

ಧಾರವಾಡ: ಕೋವಿಡ್ ಸರಪಳಿ ತುಂಡರಿಸಲು ಜನಜಾಗೃತಿಯೇ ಮುಖ್ಯವಾಗಿರುವದರಿಂದ ಜಿಲ್ಲಾಡಳಿತ ಹಾಗೂ ಅರಣ್ಯ ,ಅಬಕಾರಿ ಇಲಾಖೆಯ ಸಹಯೋಗದಲ್ಲಿ ಧಾರವಾಡ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ಜನಜಾಗೃತಿ ಚಟುವಟಿಕೆಗಳು ಜರುಗುತ್ತಿವೆ. ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗವು ಕಲಕೇರಿ, ದೇವಗಿರಿ ಹಾಗೂ ಬೆಣಚಿ ಗ್ರಾಮಗಳ ಅರಣ್ಯ ವಲಯ ಪ್ರದೇಶಗಳಲ್ಲಿ ಕೋವಿಡ್ ಜಾಗೃತಿ ಚಟುವಟಿಕೆಗಳನ್ನು ನಡೆಸಿದರು. ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್, ಬಳಸುವುದು, ಪರಸ್ಪರ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಮಹತ್ವವನ್ನು ಗ್ರಾಮಸ್ಥರಿಗೆ …

Read More »

ಧಾರವಾಡ ಜಿಲ್ಲೆಯನ್ನು 10 ದಿನಗಳ ಕಾಲ ಲಾಕ್‍ಡೌನ್: ಜಗದೀಶ್ ಶೆಟ್ಟರ್

ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯನ್ನು 10 ದಿನಗಳ ಕಾಲ ಲಾಕ್‍ಡೌನ್ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಮಾಹಿತಿ ನೀಡಿದರು. ಸಿಎಂ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಬಗ್ಗೆ ಮಾತನಾಡಿದ ಸಚಿವರು, ಜುಲೈ 15ರ ಬೆಳಗ್ಗೆ 10 ಗಂಟೆಯಿಂದ ಜುಲೈ 24ರ ರಾತ್ರಿ 8ವರೆಗೆ ಜಿಲ್ಲೆಯಲ್ಲಿ ಲಾಕ್‍ಡೌನ್ ಘೋಷಣೆ ಮಾಡುವುದಾಗಿ ತಿಳಿಸಿದರು. 11 ಜಿಲ್ಲೆಗಳ ಬಗ್ಗೆ ಚರ್ಚೆ …

Read More »