ಧಾರವಾಡ: ತುಂಬಿ ಹರಿಯುತ್ತಿರುವ ಸೇತುವೆ ಮೇಲೆಯೇ ಬಸ್ ಚಲಾಯಿಸಿ ಚಾಲಕ ಉದ್ಧಟತನ ಪ್ರದರ್ಶಿಸಿರುವ ಘಟನೆ ಇನಾಮಹೊಂಗಲ ಮತ್ತು ಹಾರೊಬೆಳವಡಿ ಗ್ರಾಮದ ಮಧ್ಯ ಇರುವ ತಾತ್ಕಾಲಿಕ ಸೇತುವೆ ಬಳಿ ನಡೆದಿದೆ. ನಿನ್ನೆ ರಾತ್ರಿ ಜಿಲ್ಲೆಯ ಅನೇಕ ಭಾಗಗಳಲ್ಲಿ ಮಳೆಯಾದ ಹಿನ್ನೆಲೆ ನದಿ- ಹಳ್ಳಕೊಳ್ಳಗಳು ತುಂಬಿ ಸೇತುವೆ ಮೇಲೆ ನೀರು ಹರಿಯುತ್ತಿದೆ. ಇಂದು ಬೆಳಗ್ಗೆ ಸವದತ್ತಿಯಿಂದ ಧಾರವಾಡಕ್ಕೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕ ನೀರು ಹರಿಯುತ್ತಿರುವ ಸೇತುವೆ ಮೇಲೆಯೇ ಬಸ್ ಚಲಾಯಿಸಿದ್ದಾನೆ. ಸೇತುವೆಯ …
Read More »ಧಾರವಾಡದ ಹೆಸರು-ಉದ್ದು ಖರೀದಿಗೆ ಕೇಂದ್ರ ಗ್ರೀನ್ ಸಿಗ್ನಲ್
ನವದೆಹಲಿ, – ಧಾರವಾಡ ಜಿಲ್ಲಾಯ ರೈತರ ಬೇಡಿಕೆಗೆ ಅನುಗುಣವಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಧಾರವಾಡ ಜಿಲ್ಲಾಯಲ್ಲಿ ಖರೀದಿ ಕೇಂದ್ರಗಳ ಮೂಲಕ ಹೆಸರುಕಾಳು ಹಾಗೂ ಉದ್ದು ಖರೀದಿಯನ್ನು ಕೂಡಲೇ ಆರಂಭಿಸಲು ಅನುಮೋದನೆ ನೀಡಿ ಆದೇಶ ಹೊರಡಿಸಿದೆ. ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಈ ಬಗ್ಗೆ ಆದೇಶ ಪ್ರತಿ ಹೊರಡಿಸಿದ್ದು , ರೈತರಿಗೆ ಸಂತಸ ತಂದಿದೆ. ಈ ವಿಷಯವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದು ಜಿಲ್ಲಾಯ ರೈತರು …
Read More »ಬಿಜೆಪಿ ಮುಖಂಡನ ಕೊಲೆ ಪ್ರಕರಣ: ಪತ್ನಿ ಸೇರಿ ಹಲವರ ವಿಚಾರಣೆ
ಧಾರವಾಡ : ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಸಿಬಿಐ ಅಧಿಕಾರಿಗಳ ತಂಡವು ಎರಡು ದಿನಗಳಿಂದ ಧಾರವಾಡದಲ್ಲಿಯೇ ಠಿಕಾಣಿ ಹೂಡಿದ್ದು ಗುರುವಾರರಂದು ಯೋಗೀಶ್ ಗೌಡರ ಪತ್ನಿ ಮಲ್ಲಮ್ಮ ಸೇರಿ ಹಲವು ಕಾಂಗ್ರೆಸ್ ಮುಖಂಡರ ವಿಚಾರಣೆ ನಡೆಸಿತು. ಕೊಲೆಯಾದ ಯೋಗೀಶಗೌಡ ಅವರ ಪತ್ನಿ ಮಲ್ಲಮ್ಮ ಹಾಗೂ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಲು ಪ್ರಮುಖ ಪಾತ್ರ ವಹಿಸಿದ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಶಿವಾನಂದ ಕರಿಗಾರ, …
Read More »ಜಮೀರ್ ಪರ ಮಾತಾಡಿ ಸಿದ್ದರಾಮಯ್ಯನವರು ತಮ್ಮ ವ್ಯಕ್ತಿತ್ವ ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ : ಸಚಿವ ಜಗದೀಶ್ ಶೆಟ್ಟರ್
ಧಾರವಾಡ : ಮಾಜಿ ಸಚಿವ ಜಮೀರ್ ಅಹಮ್ಮದ್ ಅವರು ಕ್ಯಾಸಿನೋಗೆ ಹೋಗಿದ್ದು ತಪ್ಪಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಈ ಮೂಲಕ ತಮ್ಮ ವ್ಯಕ್ತಿತ್ವವನ್ನು ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು ಕ್ಯಾಸಿನೋಗೂ ಹೋಗ ಬಾರದು, ಜೂಜು ಆಡಬಾರದು ಎಂದು ಸಿದ್ದರಾಮಯ್ಯ ಹೇಳಬೇಕಿತ್ತು. ಆದರೆ, ಜಮೀರ್ ಕ್ಯಾಸಿನೋಗೆ ಹೋಗಿದ್ದು ತಪ್ಪಲ್ಲ ಅಂತಾ ಹೇಳಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದರು. …
Read More »ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಶನಿವಾರ ಭೇಟಿ ಮಾಡಿ ಪ್ರತಿಭಟನೆಗೆ ಬೆಂಬಲ
ಧಾರವಾಡ: ಲ್ಯಾಪ್ ಟಾಪ್ ವಿತರಿಸುವಂತೆ ವಿವಿಧ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಪರಿಶಿಷ್ಟ ಜಾತಿ, ಪಂಗಡ ವಿದ್ಯಾರ್ಥಿಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಶನಿವಾರ ಭೇಟಿ ಮಾಡಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು. ಕೊರೊನಾ ಸಂಕಷ್ಟದಿಂದಾಗಿ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲು ವಿಳಂಬವಾಗಿದೆ. ಈ ಮೊದಲು ಲ್ಯಾಪ್ ಟ್ಯಾಪ್ ವಿತರಿಸುವುದಾಗಿ ಹೇಳಿದ ವಿವಿ, ಇದೀಗ …
Read More »ಹೋರಿ ಎಲ್ಲಿ ಎಷ್ಟು ಮೇಯ್ದರೇನು, ನಮ್ಮ ಮನೆಗೆ ಬರಬೇಕು:ಕಿಡಿಕಾರಿದ ಹೊರಟ್ಟಿ
ಧಾರವಾಡ: ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ ಹೋರಿಗೆ ಹೋಲಿಸಿ ಮಾತನಾಡಿದ್ದಾರೆ. ಧಾರವಾಡದಲ್ಲಿ ರಾಜ್ಯ ಸರ್ಕಾರದ ಭೂಸುಧಾರಣೆ ಕಾಯ್ದೆ ಹಾಗೂ ಹಲವು ವಿಷಯಗಳ ವಿರುದ್ಧ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ತಾಳ ಇಲ್ಲ, ತಂತಿಯೂ ಇಲ್ಲ. ವಲಸಿಗರು ಮತ್ತು ಮೂಲರ ಮಧ್ಯೆ ಇದ್ದಾರೆ ಎಂದು ಹೇಳಿದರು. ಈ ಹಿಂದೆ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಇತ್ತು. ಬಿಜೆಪಿ-ಜೆಡಿಎಸ್ ಸರ್ಕಾರವೂ ರಚನೆ ಆಗಿತ್ತು. ಆದರೆ ಈಗ …
Read More »ಸಿಂಡಿಕೇಟ್ ಬ್ಯಾಂಕ್ ಲಾಕರಿನಲ್ಲಿ ಈ ರಾಷ್ಟ್ರಧ್ವಜವನ್ನು ಇಡುತ್ತಾರೆ. ಇದನ್ನು ಆಗಸ್ಟ್ 15 ಬಂದಾಗ ಮಾತ್ರ ಅಲ್ಲಿಂದ ತಂದು ಧ್ವಜಾರೋಹಣ ಮಾಡುತ್ತಾರೆ.
ಧಾರವಾಡ: ಬ್ಯಾಂಕ್ ಲಾಕರಿನಲ್ಲಿ ಸಹಜವಾಗಿ ಚಿನ್ನದ ಒಡವೆ, ಹಣ ಅಥವಾ ಆಸ್ತಿ ದಾಖಲೆಗಳನ್ನು ಇಟ್ಟಿರುವುದನ್ನ ನೋಡಿದ್ದೆವೆ. ಆದರೆ ಧಾರವಾಡ ನಗರದ ಗಾಂಧಿನಗರ ನಿವಾಸಿಯೊರ್ವರು ರಾಷ್ಟ್ರಧ್ವಜವನ್ನು ತಮ್ಮ ಬ್ಯಾಂಕ್ ಲಾಕರಿನಲ್ಲಿ ಇಟ್ಟಿರುತ್ತಾರೆ. ಗಂಗಾಧರ ಕುಲಕರ್ಣಿ(86) ಅವರು ತಮ್ಮ ಸಿಂಡಿಕೇಟ್ ಬ್ಯಾಂಕ್ ಲಾಕರಿನಲ್ಲಿ ಈ ರಾಷ್ಟ್ರಧ್ವಜವನ್ನು ಇಡುತ್ತಾರೆ. ಇದನ್ನು ಆಗಸ್ಟ್ 15 ಬಂದಾಗ ಮಾತ್ರ ಅಲ್ಲಿಂದ ತಂದು ಧ್ವಜಾರೋಹಣ ಮಾಡುತ್ತಾರೆ. ಕಳೆದ 7 ವರ್ಷಗಳಿಂದ ಬ್ಯಾಂಕ್ ನಲ್ಲಿ ಇಟ್ಟಿದ್ದಾರೆ. ಒಟ್ಟು 73 ವರ್ಷಗಳ …
Read More »ಚಾಲೆಜಿಂಗ್ ಸ್ಟಾರ್ ದರ್ಶನ ಇಂದು ಧಾರವಾಡದಲ್ಲಿ
ಧಾರವಾಡ: ಚಾಲೆಜಿಂಗ್ ಸ್ಟಾರ್ ದರ್ಶನ ಇಂದು ಧಾರವಾಡದಲ್ಲಿದ್ದಾರೆ. ಕೊರೊನಾ ವೈರಸ್ ಹಬ್ಬುತ್ತಿರುವ ಹಿನ್ನೆಲೆ ಬೆಂಗಳೂರಿನಲ್ಲಿನ ಸಿನಿಮಾ ಇಂಡಸ್ಟ್ರಿಯಲ್ಲಿ ಯಾವುದೇ ಚಿತ್ರಿಕರಣ ಇಲ್ಲದ ಕಾರಣ ದರ್ಶನ್ ಧಾರವಾಡ ಟೂರ್ ಹಮ್ಮಿಕೊಂಡಿದ್ದಾರೆ.ಮಾಜಿ ಸಚಿವ ವಿನಯ ಕುಲಕರ್ಣಿ ಜೊತೆ ಹಲವು ವರ್ಷಗಳಿಂದ ದರ್ಶನ್ ಸ್ನೇಹ ಇದೆ. ಈ ಹಿನ್ನೆಲೆಯಲ್ಲಿ ಆಗಾಗ ದರ್ಶನ್ ಇಲ್ಲಿಗೆ ಭೇಟಿ ನೀಡುತ್ತಾ ಇರುತ್ತಾರೆ. ಧಾರವಾಡ ನಗರದ ಹೊರ ವಲಯದಲ್ಲಿರುವ ವಿನಯ ಕುಲಕರ್ಣಿ ಹಾಲಿನ ಡೈರಿಯಲ್ಲಿ ಇಳಿದುಕೊಂಡಿರುವ ದರ್ಶನ್, ಅಲ್ಲಿ ಚಕ್ಕಡಿ …
Read More »ಸಿಬ್ಬಂದಿ ಆಸ್ಪತ್ರೆಗೆ ಅಂಬುಲೆನ್ಸ್‌ನಲ್ಲಿ ಕರ್ಕೊಂಡು ಬಂದ್ರೆ ವ್ಯಕ್ತಿ ಮರುದಿನವೇ ಬಸ್ ಹತ್ತಿ ಹೋದ!
ಧಾರವಾಡ: ಕೊರೊನಾ ಸೋಂಕಿತ ಎಂದು ವ್ಯಕ್ತಿಯೋರ್ವನನ್ನು ಅಂಬುಲೆನ್ಸ್ ನಲ್ಲಿ ಕರೆದುಕೊಂಡು ಬಂದು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ ಮರುದಿನವೇ ಆತ ಏಕಾಂಗಿಯಾಗಿ ಬಸ್ ಏರಿ ತನ್ನೂರು ಸೇರಿಕೊಂಡಿರುವ ಘಟನೆಯೊಂದು ಧಾರವಾಡದಲ್ಲಿ ನಡೆದಿದೆ.ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ನಿಯಮಿತವಾಗಿ ಡಯಾಲಿಸಿಸ್ ಒಳಗಾಗುತ್ತಿದ್ದ ಅಳ್ನಾವರ ತಾಲೂಕಿನ ಡೋರಿ ಗ್ರಾಮದ ವ್ಯಕ್ತಿಯೋರ್ವನಿಗೆ ಆಂಟಿಜನ್ ಟೆಸ್ಟಿನಲ್ಲಿ ನೆಗಟಿವ್ ರಿಪೋರ್ಟ್ ಬಂದಿದೆ. ಆದರೂ ಮುಂದೆ ಸ್ವ್ಯಾಬ್ ಟೆಸ್ಟಿನಲ್ಲಿ ಆತನಿಗೆ ಪಾಸಿಟಿವ್ ಬರುತ್ತೆ ಎಂದು ಅಂದಾಜಿಸಿಕೊಂಡ ಸ್ಥಳಿಯ ಆರೋಗ್ಯ ಇಲಾಖೆ ಸಿಬ್ಬಂದಿ, …
Read More »ಹುಬ್ಬಳ್ಳಿಯಿಂದ ಧಾರವಾಡದ ಕಡೆ ಬರುತ್ತಿದ್ದ ಅಪರಿಚಿತ ಬೈಕ್ ಸವಾರ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ
ಧಾರವಾಡ: ಲಾರಿ ಚಕ್ರದಡಿ ಸಿಲುಕಿ ಅಪರಿಚಿತ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಾಯಗಳಾಗಿರುವ ಘಟನೆ ಧಾರವಾಡದ ನವಲೂರು ಬಡಾವಣೆ ಬಳಿ ನಡೆದಿದೆ. ಹುಬ್ಬಳ್ಳಿಯಿಂದ ಧಾರವಾಡದ ಕಡೆ ಬರುತ್ತಿದ್ದ ಅಪರಿಚಿತ ಬೈಕ್ ಸವಾರ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಸವಾರ ಲಾರಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿ ಮೃತಪಟ್ಟಿದ್ದು, ಬೈಕ್ ಸವಾರನ ಜೊತೆಯಲ್ಲಿದ್ದ ಇನ್ನೋರ್ವ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಗೊಂಡ ವ್ಯಕ್ತಿಯನ್ನುಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸದ್ಯ ಧಾರವಾಡ ಟ್ರಾಫಿಕ್ …
Read More »
Laxmi News 24×7