Breaking News

ಧಾರವಾಡ

ಧಾರವಾಡ:ಪಾಸಿಟಿವ್ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ತಯಾರಿಯಲ್ಲೇ ಅಧಿಕಾರಿಗಳು ಎಡವಟ್ಟು?……..

ಧಾರವಾಡ: ನಗರದಲ್ಲಿ ಇಂದು ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಪಾಸಿಟಿವ್ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ತಯಾರಿಯಲ್ಲೇ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಧಾರವಾಡ ಗಾಂಧಿನಗರದ ವ್ಯಕ್ತಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಇವರ ಟ್ರಾವೆಲ್ ಹಿಸ್ಟರಿಯನ್ನು ಅಧಿಕಾರಿಗಳು ಯದ್ವಾತದ್ವಾ ತಯಾರಿಸಿದ್ದಾರೆ. ಅಧಿಕಾರಿಗಳ ತಪ್ಪು ನೊಡದೆಯೇ ಜಿಲ್ಲಾಧಿಕಾರಿ ಕೂಡ ಸಹಿ ಮಾಡಿ ಮುಂದಿನ ಕ್ರಮಕ್ಕೆ ರವಾನಿಸಿದ್ದಾರೆ. ಅಲ್ಲದೆ ಯಾವ ತಿಂಗಳಲ್ಲಿ ಎಷ್ಟು ದಿನಾಂಕ ಎನ್ನುವ ಪರಿಜ್ಞಾನವೂ ಇಲ್ಲದಂತೆ ಅಧಿಕಾರಿಗಳು …

Read More »

ಪೊಲೀಸರು ಮಾಡಿದ ಒಂದು ತಪ್ಪಿನಿಂದ ಧಾರವಾಡದಲ್ಲಿ ಓರ್ವ ಅಂಗವಿಕಲ ಇಂದು ಕೊಲೆಯಾಗಿದ್ದಾರೆ ಎಂಬ ಆರೋಪ?

ಧಾರವಾಡ: ಪೊಲೀಸರು ಮಾಡಿದ ಒಂದು ತಪ್ಪಿನಿಂದ ಧಾರವಾಡದಲ್ಲಿ ಓರ್ವ ಅಂಗವಿಕಲ ಇಂದು ಕೊಲೆಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹೌದು. ಧಾರವಾಡದ ಪತ್ರೇಶ್ವರ ನಗರದಲ್ಲಿ ಈ ಕೊಲೆ ನಡೆದಿದ್ದು, ಉಮೇಶ್ ಬಾಳಗಿ (37) ಕೊಲೆಯಾದ ಅಂಗವಿಕಲ. ಕಳೆದ ಹಲವು ವರ್ಷಗಳಿಂದ ಉಮೇಶ್ ಬಾಳಗಿ ಹಾಗೂ ಸಂಬಂಧಿಕರ ನಡುವೆ ಆಸ್ತಿ ವಿವಾದ ನಡೆದಿತ್ತು. ಈ ಮೊದಲು ಉಮೇಶ್‍ನ ಮೇಲೆ ಸಂಬಂಧಿಕರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಆಗ ಉಮೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. …

Read More »

ಹೊರರಾಜ್ಯದಿಂದ ಧಾರವಾಡಕ್ಕೆ ಆಗಮಿಸಿದ 665 ಮಂದಿಗೆ ಕ್ವಾರಂಟೈನ್- 103 ಮಂದಿಗೆ ಗಂಟಲು ದ್ರವ ಪರೀಕ್ಷೆ

ಧಾರವಾಡ: ಕಳೆದ 6 ದಿನಗಳಿಂದ ಜಿಲ್ಲೆಗೆ ಹೊರ ರಾಜ್ಯದಿಂದ ಒಟ್ಟು 665 ಜನ ವಲಸೆ ಕಾರ್ಮಿಕರು ಹಾಗೂ ಜಿಲ್ಲೆಯಿಂದ ಹೋಗಿದ್ದ ಯಾತ್ರಿಕರು ಆಗಮಿಸಿದ್ದಾರೆ. ಅವರೆಲ್ಲರನ್ನು ಧಾರವಾಡ ನಗರದಿಂದ ಹೊರಗೆ ಇರುವ ಕೃಷಿ ವಿವಿ ಆವರಣದಲ್ಲಿ ತಡೆದು ತಪಾಸಣೆ ಮಾಡಿ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ. ನಿನ್ನೆಯಷ್ಟೇ ಗುಜರಾತಿನ ಅಹ್ಮದಾಬಾದ್‍ನಿಂದ ಆಗಮಿಸಿದ್ದ 9 ಜನರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆ ಹೊರ ರಾಜ್ಯದಿಂದ ಬರುವವರ ಮೇಲೆ ಕಟ್ಟೆಚ್ಚರ ವಹಿಲಾಗಿದೆ. ಸದ್ಯ ಆಂಧ್ರಪ್ರದೇಶ್‍ನಿಂದ 38, …

Read More »

ಕಾಲ್ನಡಿಗೆಯಲ್ಲಿ ಮಧ್ಯಪ್ರದೇಶ, ಬಿಹಾರಕ್ಕೆ ಹೊರಟಿದ್ದ ಕಾರ್ಮಿಕರಿಗೆ ಆಶ್ರಯ

ಧಾರವಾಡ/ಹುಬ್ಬಳ್ಳಿ: ಕಾಲ್ನಡಿಗೆ ಮೂಲಕ ಮಧ್ಯಪ್ರದೇಶ ಹಾಗೂ ಬಿಹಾರಕ್ಕೆ ಹೊರಟಿದ್ದ 70 ಜನ ವಲಸೆ ಕಾರ್ಮಿಕರಿಗೆ ಇಂದು ಹುಬ್ಬಳ್ಳಿ ತಾಲೂಕಿನ ತಿರುಮಲಕೊಪ್ಪದ ಬಳಿಯ ವಿದ್ಯಾರ್ಥಿ ನಿಲಯದಲ್ಲಿ ಆಶ್ರಯ ಕಲ್ಪಿಸಲಾಗಿದೆ. ಕಾರ್ಮಿಕರು ಕಾಲ್ನಡಿಗೆ ಮೂಲಕ ತಮ್ಮ ರಾಜ್ಯಗಳಿಗೆ ಹೊರಟಿರುವ ವಿಷಯ ತಿಳಿದ ಜಿಲ್ಲಾಧಿಕಾರಿ ದೀಪಾ ಚೋಳನ್ ಎಲ್ಲರಿಗೂ ಆಶ್ರಯ ಕಲ್ಪಿಸುವಂತೆ ಸೂಚಿಸಿದ್ದರು. ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಡಿವೈಎಸ್ ಪಿ ರವಿ ನಾಯಕ್ ಮತ್ತು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎನ್. ಆರ್. …

Read More »

ಜಿಲ್ಲಾ ಪಂಚಾಯಿತಿ ಸದಸ್ಯನ ಕೊಲೆ ಪ್ರಕರಣ- ಸಿಬಿಐನಿಂದ ವಿನಯ್ ಕುಲಕರ್ಣಿ ಪಿಎ ತೀವ್ರ ವಿಚಾರಣೆ

ಧಾರವಾಡ: ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‍ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯಲ್ಲಿ ಭಾರೀ ಮಹತ್ವದ ಬೆಳವಣಿಗೆಯಾಗಿದ್ದು, ಸಿಬಿಐ ಅಧಿಕಾರಿಗಳು ಇಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತ ಸಹಾಯಕನಿಗೆ ಡ್ರಿಲ್ ನಡೆಸಿದ್ದಾರೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತ ಸಹಾಯಕ ಪ್ರಶಾಂತ್ ಕೇಕರೆಯನ್ನು ಧಾರವಾಡ ಉಪನಗರ ಠಾಣೆಗೆ ಕರೆ ತಂದಿದ್ದ ಸಿಬಿಐ ಅಧಿಕಾರಿಗಳು, ಮಧ್ಯಾಹ್ನದವರೆಗೂ ಭಾರೀ ಡ್ರಿಲ್ ನಡೆಸಿದ ಬಳಿಕ ಆತನನ್ನು ಬಿಟ್ಟಿದ್ದಾರೆ. ಶನಿವಾರದಿಂದ ಸಿಬಿಐ ತನಿಖೆ …

Read More »

ಮದ್ಯ ನಿಷೇಧಿಸಿ ಎಂದವರ ವಿರುದ್ಧ ಕಿಡಿಕಾರಿದ ಶೆಟ್ಟರ್……………….

ಧಾರವಾಡ: ಲಾಕ್‍ಡೌನ್ ಮುಂಚೆಯೇ ಮದ್ಯ ಮಾರಾಟ ಇತ್ತಲ್ಲ, ಆಗ ಯಾಕೆ ಮದ್ಯ ನಿಷೇಧದ ಬಗ್ಗೆ ಚರ್ಚೆ ಆಗಲಿಲ್ಲ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಮದ್ಯ ನಿಷೇಧ ಮಾಡುವುದರ ವಿರುದ್ಧ ಕಿಡಿಕಾಡಿದ್ದಾರೆ. ಮದ್ಯ ಮಾರಾಟ ನಿಷೇಧಕ್ಕೆ ಬಿಜೆಪಿ ಶಾಸಕ ಬೆಲ್ಲದ ಆಗ್ರಹ ವಿಚಾರವಾಗಿ ಧಾರವಾಡದಲ್ಲಿ ಮಾತನಾಡಿದ ಅವರು, ವೈಯಕ್ತಿಕ ಅಭಿಪ್ರಾಯಗಳಿಗೆ ನಾನು ಪ್ರತಿಕ್ರಿಯೆ ಕೊಡಲ್ಲ ಎಂದು ಹೇಳಿದರು. ಸರ್ಕಾರ ನಡೆಸುವುದು ಬೇರೆ, ಅಭಿಪ್ರಾಯ ಹೇಳುವುದು ಬೇರೆ. ಎಲ್ಲೆಲ್ಲಿ ಅಭಿಪ್ರಾಯ ಹೇಳಬೇಕು …

Read More »

ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಸೆಂಟ್ರಲೈಜೆಷನ್ ಆಕ್ಸಿಜನ್ ವ್ಯವಸ್ಥೆ: ಸಚಿವ ಶ್ರೀರಾಮುಲು

ಧಾರವಾಡ: ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಸೆಂಟ್ರಲೈಜೆಷನ್ ಆಕ್ಸಿಜನ್ ವ್ಯವಸ್ಥೆ ಮಾಡಲಿದ್ದೇವೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ. ಧಾರವಾಡದಲ್ಲಿ ಅಧಿಕಾರಿಗಳ ಸಭೆ ನಡೆಸಿ ನಂತರ ಮಾತನಾಡಿದ ಅವರು, ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಸೆಂಟ್ರಲೈಜೆಷನ್ ಅಕ್ಸಿಜನ್ ವ್ಯವಸ್ಥೆ ಮಾಡಲಿದ್ದೇವೆ. ಈ ಕುರಿತು ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿ 32 ಕೋವಿಡ್ ಲ್ಯಾಬ್ ಕೆಲಸ ಮಾಡುತ್ತಿವೆ. ಇನ್ನು ಹೆಚ್ಚು ಲ್ಯಾಬ್‍ಗಳಿಗೆ ಬೇಡಿಕೆ ಇದೆ, ಪ್ರಸ್ತುತ ದಿನಕ್ಕೆ 7ರಿಂದ 8 ಸಾವಿರ …

Read More »

ಮದ್ಯ ನಿಷೇಧಕ್ಕೆ ಆಗ್ರಹಿಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಮುತಾಲಿಕ್

ಧಾರವಾಡ: ಮದ್ಯ ಮಾರಾಟದಿಂದ ಆದಾಯದ ವಿಚಾರ ಹೇಳುತ್ತಿರುವುದು ನಾಚಿಕೆತನ, ಮದ್ಯ ನಿಷೇಧಿಸಬೇಕೆಂದು ಅಭಿಯಾನ ನಡೆಸುವುದಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಧಾರವಾಡದಲ್ಲಿ ಹಲವು ಸಂಘಟನೆಗಳು ಸೇರಿ ರಾಜ್ಯ ಸರ್ಕಾರ ಮದ್ಯ ನಿಷೇಧ ಮಾಡಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಮನವಿ ಮಾಡಿವೆ. ಈ ವೇಳೆ ಮಾತನಾಡಿದ ಮುತಾಲಿಕ್, ಲಾಕ್‍ಡೌನ್ ಸಡಿಲಗೊಳಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾದ ಮದ್ಯಪಾನ ಮಾರಾಟಕ್ಕೆ ಅನುಮತಿ ಕೊಟ್ಟಿದ್ದು ನಿರ್ಲಜ್ಜತನದ ಸಂಗತಿ, ಇದು …

Read More »

ಮೆಣಸಿನಕಾಯಿ ವ್ಯಾಪಾರಿಗೆ ಕೊರೊನಾ – ಕಂಟೈನ್ಮೆಂಟ್ ಮುಕ್ತವಾಗಿದ್ದ ಪ್ರದೇಶದಲ್ಲಿ ಮತ್ತೆ ಆತಂಕ

ಧಾರವಾಡ: ಜಿಲ್ಲೆಯ ಹೊಸಯಲ್ಲಾಪುರ ಪ್ರದೇಶ ಅದೇನು ಪಾಪಾ ಮಾಡಿದೇಯೋ ಗೊತ್ತಿಲ್ಲ. ಧಾರವಾಡ ಜಿಲ್ಲೆಯ ಮೊದಲ ಪಾಸಿಟಿವ್ ಪ್ರಕರಣ ಇದೇ ಏರಿಯಾದಲ್ಲಿ ಪತ್ತೆಯಾಗಿತ್ತು. ಈ ಕಾರಣಕ್ಕೆ ಒಂದು ತಿಂಗಳ ಕಾಲ ಸಂಪೂರ್ಣ ಬಂದ್ ಆಗಿ ಹೋಗಿದ್ದ ಈ ಪ್ರದೇಶವನ್ನು ವಾರದ ಹಿಂದಷ್ಟೇ ಕಂಟೋನ್ಮೆಂಟ್ ಝೋನಿನಿಂದ ಮುಕ್ತಗೊಳಿಸಿ, ಸಾಮಾನ್ಯ ವಲಯವನ್ನಾಗಿ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಆದರೆ ಗುರುವಾರ ಇದೇ ಏರಿಯಾದ ಕೋಳಿಕೆರೆಯ 35 ವರ್ಷದ ಮೆಣಸಿನಕಾಯಿ ವ್ಯಾಪಾರಿಯಲ್ಲಿ ಕೊರೊನಾ ಸೋಂಕು ದೃಢಪಟ್ಟ …

Read More »

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ…………..

ಧಾರವಾಡ: ಚಲಿಸುತ್ತಿದ್ದ ಲಾರಿಯಲ್ಲಿದ್ದ ಮಶಿನ್‍ಗೆ ಏಕಾಏಕಿ ಬೆಂಕಿ ತಗುಲಿದ ಘಟನೆ ಧಾರವಾಡ ಜಿಲ್ಲೆಯ ತೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಪುಣೆಯಿಂದ ಬೆಂಗಳೂರಿನ ಕೈಗಾರಿಕಾ ಪ್ರದೇಶಕ್ಕೆ ಈ ಮಶಿನ್‍ನ್ನು ಲಾರಿ ಹೊತ್ತೊಯ್ಯುತ್ತಿತ್ತು. ತೇಗೂರು ಬಳಿ ಮಿನಿ ಲಾರಿ ಬರುತ್ತಿದ್ದಂತೆ ಲಾರಿಯಲ್ಲಿದ್ದ ಮಶಿನ್‍ಗೆ ಬೆಂಕಿ ಹೊತ್ತಿಕೊಂಡಿರುವುದು ಕಂಡು ಬಂದಿದೆ. ಬೆಂಕಿ ಕಾಣಿಸಿಕೊಂಡಿದ್ದರಿಂದ ಆತಂಕಗೊಂಡ ಲಾರಿ ಚಾಲಕ, ಪಕ್ಕದಲ್ಲೇ ನೀರು ಇರುವುದನ್ನು ಕಂಡು ರಸ್ತೆ ಬದಿ ಲಾರಿ ನಿಲ್ಲಿಸಿ ಕೆಳಗಿಳಿದಿದ್ದಾನೆ. ಪಕ್ಕದಲ್ಲೇ …

Read More »