Breaking News
Home / ಜಿಲ್ಲೆ / ಬಳ್ಳಾರಿ (page 2)

ಬಳ್ಳಾರಿ

ಶೀಘ್ರವೇ 150 ಕ್ಷೇತ್ರಗಳ ಟಿಕೆಟ್‌ ಘೋಷಣೆ: ಡಿ.ಕೆ.ಶಿವಕುಮಾರ್‌

ಬಳ್ಳಾರಿ: ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ 150 ಜನರಿಗೆ ಮೊದಲೇ ಟಿಕೆಟ್‌ ಘೋಷಣೆ ಮಾಡುವ ಕಾರ್ಯ ಅಂತಿಮಘಟ್ಟ ತಲುಪಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು. ತಾಲೂಕಿನ ಮೋಕಾ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್‌ ಗಾಂಧಿ ಪಾದಯಾತ್ರೆಯಲ್ಲಿ ಕೈಗೊಂಡ ಸೇವೆ, ಕ್ಷೇತ್ರದ ಜನರೊಂದಿಗೆ ಇರುವ ಸಂಪರ್ಕ, ಪಕ್ಷದ ನಿಷ್ಠೆ ಸೇರಿ ಹಲವು ಮಾನದಂಡಗಳನ್ನು ಪರಿಗಣಿಸುವುದರ ಜತೆಗೆ ಹೊಸ ಮುಖಗಳಿಗೂ ಈ ಬಾರಿ ಟಿಕೆಟ್‌ ನೀಡಲಾಗುವುದು. ಈ ಕುರಿತ ಸರ್ವೇ ವರದಿಗಳು …

Read More »

BJP ಸರ್ಕಾರವನ್ನು ಯಾರೂ ಪ್ರಶ್ನೆ ಮಾಡೋ ಹಾಗಿಲ್ಲ: ಸಿದ್ದರಾಮಯ್ಯ

ಬಳ್ಳಾರಿ: ಸರ್ಕಾರ ತಪ್ಪು ಮಾಡಿದಾಗ ಅದನ್ನು ಪ್ರಶ್ನೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಹಕ್ಕು. ಆದರೆ ಈ ಬಿಜೆಪಿ ಸರ್ಕಾರವನ್ನು (BJP Government) ನಾವು ಯಾರೂ ಪ್ರಶ್ನೆ ಮಾಡುವಹಾಗಿಲ್ಲ. ಪ್ರಶ್ನೆ ಮಾಡಿದರೆ ನಮ್ಮ ಮೇಲೆ ಕೇಸ್ ಹಾಕ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅಸಮಾಧಾನ ವ್ಯಕ್ತಪಡಿಸಿದರು. ಭಾರತ್ ಜೋಡೋ ಯಾತ್ರೆ (Bharath Jodo Yatra) ಹಿನ್ನೆಲೆ ಬಳ್ಳಾರಿಯಲ್ಲಿಂದು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇದೇ 15 ರಂದು ನಡೆಯುವ ಸಾರ್ವಜನಿಕ …

Read More »

ಬಳ್ಳಾರಿಯಲ್ಲಿ ಭಾರತ್ ಜೋಡೋ ಯಾತ್ರೆ ‌ಬ್ಯಾನರ್‌ ತೆರವು; ಪಾಲಿಕೆ ವಿರುದ್ಧ ಕಾಂಗ್ರೆಸ್‌ ಮುಖಂಡರ ಆಕ್ರೋಶ

ಬಳ್ಳಾರಿ: ಜಿಲ್ಲೆಯಲ್ಲಿ ಪಾಲಿಕೆ ವತಿಯಿಂದ ರಾತ್ರೋರಾತ್ರಿ ಜೆಸಿಬಿ ಮೂಲಕ ಬ್ಯಾನರ್‌ ತೆರವುಗೊಳಿಸಿದಕ್ಕೆ ಮಹಾನಗರ ಪಾಲಿಕೆ ವಿರುದ್ಧ ಕಾಂಗ್ರೆಸ್‌ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.   ನಗರದಲ್ಲಿ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಹಿನ್ನೆಲೆ ಪರವಾನಗಿ ಇಲ್ಲದೆ ಫ್ಲೆಕ್ಸ್ ಮತ್ತು ಬ್ಯಾನರ್ ಅಳವಡಿಸಲಾಗಿತ್ತು. ಪಾಲಿಕೆ ಆಯುಕ್ತ ರುದ್ರೇಶ್ ನೇತೃತ್ವದಲ್ಲಿ ಸಂಗಮ್ಮ ಸರ್ಕಲ್​​, ರಾಯಲ್ ಸರ್ಕಲ್ ಸೇರಿದಂತೆ ಹಲವೆಡೆ ಬ್ಯಾನರ್ ತೆರವುಗೊಳಿಸಲಾಯಿತು. ಸಮಾವೇಶ ಹಿನ್ನೆಲೆ ಅತಿ ಹೆಚ್ಚು ಫ್ಲೆಕ್ಸ್ ಹಾಗೂ ಬ್ಯಾನರ್‌ಗಳನ್ನು ಅಳವಡಿಸಲಾಗುತ್ತಿದೆ. ಬ್ಯಾನರ್ …

Read More »

ಬಿಜೆಪಿ ಶಾಸಕರು ನಾಳೆ ಸಂಜೆಯೊಳಗೆ ಕಾಂಗ್ರೆಸ್‌ಗೆ ಸೇರುತ್ತಾರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬಳ್ಳಾರಿ, ಸೆ.27 : ಮುಹೂರ್ತ ಫಿಕ್ಸ್ ಮಾಡಿಕೊಳ್ಳಿ, ಇಂದು ಅಥವಾ ನಾಳೆ ಸಂಜೆಯೊಳಗೆ ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಭಾರತ್ ಜೋಡೋ ಯಾತ್ರೆ ಅಂಗವಾಗಿ ಬಳ್ಳಾರಿಯಲ್ಲಿ ಸಮಾವೇಶ ಆಯೋಜಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಮುನಿಸಿಪಲ್ ಮೈದಾನವನ್ನು ವೀಕ್ಷಿಸಿದ ನಂತರ ಮಾಧ್ಯಮದವರೊಂದಿಗೆ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ. ಕಾಂಗ್ರೆಸ್‌ನ ಮೂರ್ನಾಲ್ಕು ಶಾಸಕರು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬರಲಿದ್ದಾರೆ ಎಂಬ ಶಾಸಕ ಸೋಮಶೇಖರ ರೆಡ್ಡಿ …

Read More »

ಹಂಪಿ ಎಕ್ಸ್‌ಪ್ರೆಸ್‌ ರೈಲಿನ ಗಾಲಿಗಳಲ್ಲಿ ಬೆಂಕಿ

ಬಳ್ಳಾರಿ: ನಿನ್ನೆ ರಾತ್ರಿ ಹಂಪಿ ಎಕ್ಸ್ ಪ್ರೆಸ್ ರೈಲಿನ ಗಾಲಿಗಳಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ತೋರಣಗಲ್ ಬಳಿ ನಡೆದಿದೆ. ಹೌದು, ತಾಂತ್ರಿಕ ದೋಷದಿಂದ ಹಂಪಿ ಎಕ್ಸ್‌ಪ್ರೆಸ್‌ ರೈಲಿನ ಗಾಲಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಿನ್ನೆ ರಾತ್ರಿ ರೈಲಿನ ಎಂಜಿನ್ ಸ್ಟಾರ್ಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ಹಿಂದಿನ ಗಾಲಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆ ಬಳಿಕ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ರೈಲ್ವೆ ಸಿಬ್ಬಂದಿ, ಆ ದೋಷವನ್ನು ಸರಿಪಡಿಸಿದ್ದಾರೆ. ನಂತರ ರೈಲು ಸಂಚಾರ ಆರಂಭಿಸಲಾಗಿದೆ. …

Read More »

ನಾನು ಮನಸ್ಸು ಮಾಡಿದ್ರೆ ಮುಂದೊಂದು ದಿನ ಸಿಎಂ ಆಗುತ್ತೇನೆ : ಮಾಜಿ ಸಚಿವ ಜನಾರ್ದನ ರೆಡ್ಡಿ

ಬಳ್ಳಾರಿ : ನಾನು ಮನಸ್ಸು ಮಾಡಿದರೆ ಮುಂದೊಂದು ದಿನ ಸಿಎಂ ಆಗ್ತಾನೆ. ಮನಸ್ಸು ಮಾಡಿದ್ರೆ ಯಾವಗ ಬೇಕಾದ್ರೂ ಮುಖ್ಯಮಂತ್ರಿ ಆಗುತ್ತೇನೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ರೆಡ್ಡಿ, ರಾಮುಲು ಸೋದರರಿಗೆ ಹಣದ ಅವಶ್ಯಕತೆ ಇಲ್ಲ. ನನಗೆ ಶಾಸಕ, ಮಂತ್ರಿ ಆಗಬೇಕು ಎಂಬ ಆಸೆ ಇಲ್ಲ. ನನಗಂತೂ ಯಾರಿಗೂ ಕೊಡಲಾರದ ಕಷ್ಟ ಕೊಟ್ಟಿದ್ದಾರೆ.ಆದರೂ ನಾನಿಂದು ನಿಮ್ಮ ಮುಂದೆ ಬಂದು ನಿಂತಿದ್ದೇನೆ. ಇಂತಹ …

Read More »

ಸಾರಿಗೆ ಸಚಿವರ ತವರೂರಲ್ಲಿಯೇ ಬಸ್​ಗಾಗಿ ವಿದ್ಯಾರ್ಥಿಗಳ ಪರದಾಟ

ಬಳ್ಳಾರಿ: ಸಾರಿಗೆ ಸಚಿವ ಶ್ರೀರಾಮುಲು ತವರೂರಲ್ಲಿಯೇ ವಿದ್ಯಾರ್ಥಿಗಳು ಬಸ್​ಗಳಿಗಾಗಿ ಪರದಾಟ ನಡೆಸಿದ ಘಟನೆ ನಡೆದಿದೆ. ಸಮಯಕ್ಕೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ, ಒಂದೇ ಬಸ್‌ನಲ್ಲಿ ನೂರಾರು ವಿದ್ಯಾರ್ಥಿಗಳು ಪ್ರಯಾಣ ಮಾಡಲು ಹರಸಾಹಸ ಪಡುತ್ತಿದ್ದಾರೆ. ಬಸ್​ ಅವ್ಯವಸ್ಥೆಯಿಂದ ವಿದ್ಯಾರ್ಥಿಗಳು ನರಕ ದರ್ಶನ ಅನುಭವಿಸುತ್ತಿದ್ದು ಜೀವ ಕೈಯಲ್ಲಿ ಹಿಡಿದು ಬಸ್ ಹತ್ತುತ್ತಿದ್ದಾರೆ. ಬಳ್ಳಾರಿಯಿಂದ ಹಡ್ಲಿಗಿ ಮಾರ್ಗವಾಗಿ ಸಂಚಾರ ಮಾಡುವ ಬಸ್​ನಲ್ಲಿ ಸಾಮಾಜಿಕ ಅಂತರವಿಲ್ಲದೆ ಪ್ರಯಾಣ ಮಾಡುತ್ತಿರುವ ವಿದ್ಯಾರ್ಥಿಗಳು ಬಸ್​ ಬಾಗಿಲಲ್ಲಿ ನೇತಾಡುತ್ತ ಸಂಚಾರ …

Read More »

ಕಾಣೆಯಾದ ಅಪ್ಪನ ಹುಡುಕಲು ಹೋದ ಮಗನೂ ವಾಪಸ್‌ ಬರಲಿಲ್ಲ!; ಪವಾಡಸದೃಶವಾಗಿ ಬದುಕುಳಿದರೂ ಆಕೆಯ ಬಾಳೀಗ ಗೋಳು..

ಬಳ್ಳಾರಿ: ತಂದೆ ಕಾಣೆಯಾಗಿದ್ದಾರೆ ಎಂದು ಹುಡುಕುವ ಸಲುವಾಗಿ ಮನೆಯಿಂದ ಹೋಗಿದ್ದ ಮಗ, ವಾಪಸ್‌ ಹೆಣವಾಗಿ ಮರಳುವಂತೆ ಆಗಿದೆ. ಜೊತೆಗಿದ್ದ ಪತ್ನಿ ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾದರೂ ಆಕೆಯ ಬಾಳೀಗ ಗೋಳು ಎಂಬಂತಾಗಿದೆ. ಬಳ್ಳಾರಿಯ 35ನೇ ವಾರ್ಡ್ ನಿವಾಸಿ ತಿಪ್ಪೇಸ್ವಾಮಿ ( 40) ಮೃತ ಪಟ್ಟ ದುರ್ದೈವಿ. ಬಳ್ಳಾರಿ ತಾಲೂಕಿನ ಕೊಳಗಲ್ ಗ್ರಾಮದ ಬಳಿ ಗುರುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಈತ ಮೃತ ಪಟ್ಟಿದ್ದಾನೆ. ತಂದೆ ದೊರೆಸ್ವಾಮಿ ಏಕಾಏಕಿ ಮನೆಯಿಂದ ಕಾಣೆಯಾಗಿದ್ದರಿಂದ ವಿಚಲಿತಗೊಂಡಿದ್ದ ಪುತ್ರ, …

Read More »

ರಾಜ್ಯ ಸರ್ಕಾರದಿಂದ ಮಹಿಳಾ ಮಣಿಗಳಿಗೆ ಭರ್ಜರಿ ಸಿಹಿ ಸುದ್ದಿ : ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2021-22ನೇ ಸಾಲಿನ ಉದ್ಯೋಗಿನಿ,ಕಿರುಸಾಲ,ಸಮೃದ್ಧಿ ಯೋಜನೆಗಳಿಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ಅರ್ಜಿ ಹಾಗೂ ಹೆಚ್ಚಿನ ಮಾಹಿತಿ ಪಡೆಯಲು ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಭೇಟಿ ನೀಡಬಹುದು ಅಥವಾ ದೂ.ಸಂ:08392-2294127 ಮೊ.ಸಂ:9110653738 ಗೆ ಸಂಪರ್ಕಿಸಬಹುದು. ಸೆ.6ರೊಳಗಾಗಿ ಅರ್ಜಿ ಸಲ್ಲಿಸಬೇಕು.   ಉದ್ಯೋಗಿನಿ …

Read More »

ಮನೆ ದರೋಡೆ ; ಸರ್ಕಾರಿ ಶಿಕ್ಷಕ, ಗ್ರಾಪಂ ಸದಸ್ಯ ಸೇರಿ ಐವರ ಬಂಧನ

ಬಳ್ಳಾರಿ: ಕೊಟ್ಟೂರು ತಾಲೂಕಿನ ಬಸವೇಶ್ವರ ಬಡಾವಣೆಯ ಉದ್ಯಮಿ ಮಲ್ಲೇಶಪ್ಪ ಅವರ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಸರ್ಕಾರಿ ಶಾಲಾ ಶಿಕ್ಷಕ ಹಾಗೂ ಗ್ರಾಮ ಪಂಚಾಯತಿ ಸದಸ್ಯ ಸೇರಿದಂತೆ ಒಟ್ಟು ಐದು ಜನರನ್ನು ಪೊಲೀಸರು ಬಂಧನಮಾಡಿದ್ದಾರೆ. ಉದ್ಯಮಿ ಮಲ್ಲೇಶ್ ಅವರ ಮನೆಯಲ್ಲಿ ಏ.11ರಂದು ಹತ್ತು ಜನರ ತಂಡ ರಾತ್ರಿ ಏಕಾಏಕಿ ನುಗ್ಗಿ ಮನೆಯಲ್ಲಿ ಇದ್ದ ಗಂಡ ಹೆಂಡತಿಯನ್ನು ಹೆದರಿಸಿ ಮನೆಯಲ್ಲಿದ್ದ 30 ಲಕ್ಷ ರೂ. ನಗದು …

Read More »