Breaking News
Home / ಜಿಲ್ಲೆ / ಬಳ್ಳಾರಿ (page 8)

ಬಳ್ಳಾರಿ

ಬಳ್ಳಾರಿ: ಪ್ರತಿ ಮನೆಗೆ ಬರಲಿದೆ ತರಕಾರಿ ಸಂಚಾರಿ ವಾಹನ

ಬಳ್ಳಾರಿ: ಕೊರೊನಾ ಮಾಹಾಮಾರಿಗೆ ಈಡಿ ವಿಶ್ವವೇ ತಲ್ಲಣಗೊಂಡಿದೆ. ಈ ಸಂದರ್ಭದಲ್ಲಿ ಅನೇಕ ದಾನಿಗಳು ಬಡವರಿಗೆ ನೆರವಾಗುತ್ತಿದ್ದಾರೆ. ಬಳ್ಳಾರಿಯ ಆರ್ಯವೈಶ್ಯ ಅಸೋಸಿಯೇಶನ್ ಮತ್ತು ಬಳ್ಳಾರಿ ಜಿಲ್ಲಾ ಛೇಂಬರ್ ಆಫ್ ಕಾಮರ್ಸ್ ಜಿಲ್ಲಾಡಳಿತ ಸಹಾಯಕ್ಕೆ ದಾವಿಸಿದ್ದು, ಈ ಎರಡು ಸಂಸ್ಥೆಗಳು ಜೊತೆಗೂಡಿ ತಲಾ 400 ರೇಷನ್ ಕಿಟ್‍ಗಳಂತೆ ಒಟ್ಟು 800 ರೇಷನ್ ಕಿಟ್‍ಗಳನ್ನು ಬಳ್ಳಾರಿ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದ್ದಾರೆ. ಪ್ರತಿ ಒಂದು ಕಿಟ್‍ನಲ್ಲಿ ದಿನ ನಿತ್ಯ ಬೇಕಾಗುವ ವಿವಿಧ ಬಗೆಯ ಧಾನ್ಯಗಳ ಇದ್ದು, ಜಿಲ್ಲಾಧಿಕಾರಿ …

Read More »

ಬಳ್ಳಾರಿ:ಕುಡುಕರು ಅಬಕಾರಿ ಇಲಾಖೆ ಕಚೇರಿಯಲ್ಲಿ ಇಟ್ಟಿದ್ದ ಮದ್ಯವನ್ನು ಕದ್ದು ಪರಾರಿ

  ಬಳ್ಳಾರಿ: ದೇಶಾದ್ಯಂತ ಸಂಪೂರ್ಣ ಲಾಕ್‍ಡೌನ್ ಆದ ಹಿನ್ನೆಲೆಯಲ್ಲಿ ಎಲ್ಲಿಯೂ ಮದ್ಯ ಸಿಗುತ್ತಿಲ್ಲ. ಹೀಗಾಗಿ ಕೆಲ ಕುಡುಕರು ಅಬಕಾರಿ ಇಲಾಖೆ ಕಚೇರಿಯಲ್ಲಿ ಇಟ್ಟಿದ್ದ ಮದ್ಯವನ್ನು ಕದ್ದು ಪರಾರಿಯಾದ ಘಟನೆ ಜಿಲ್ಲೆಯ ಸಿರಗುಪ್ಪ ನಗರದಲ್ಲಿ ನಡೆದಿದೆ. ಸಿರುಗುಪ್ಪ ನಗರದ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯವನ್ನು ಅಬಕಾರಿ ಇಲಾಖೆ ವಶಕ್ಕೆ ಪಡೆದು ಕಚೇರಿಯಲ್ಲಿ ಇಟ್ಟಿದ್ದರು. ಇತ್ತ ಕಳೆದೊಂದು ವಾರದಿಂದ ರಾಜ್ಯದಲ್ಲಿ ಎಲ್ಲಿಯೂ ಮದ್ಯದ ಸಿಗುತ್ತಿಲ್ಲ. ಹೀಗಾಗಿ ಕಳ್ಳರು ಅಬಕಾರಿ ಕಚೇರಿಯಲ್ಲಿದ್ದ ಮದ್ಯದ …

Read More »

ಹೊಸಪೇಟೆಯ ಒಂದೇ ಕುಟುಂಬದ ಮೂವರಿಗೆ ಕೊರೊನಾ ಸೋಂಕು

ಬಳ್ಳಾರಿ: ಜಿಲ್ಲೆಯ ಹೊಸಪೇಟೆಯ ಎಸ್.ಆರ್ ನಗರದ ಒಂದೇ ಕುಟುಂಬದ ಮೂವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಕೊರೊನಾ ಗುಣಲಕ್ಷಣಗಳು ಕಂಡ ಬಂದ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆಯಷ್ಟೇ ಮೂವರನ್ನು ಬಳ್ಳಾರಿಯ ವಿಮ್ಸ್ ಗೆ ಪರೀಕ್ಷೆಗೆ ಕರೆದೊಯ್ಯಲಾಗಿತ್ತು. ಇಂದು ಮೂವರ ವರದಿ ಬಂದಿದ್ದು, ಮೂವರಲ್ಲೂ ಸೋಂಕು ಇರುವುದು ದೃಢವಾಗಿದೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸ್ಪಷ್ಟಪಡಿಸಿದ್ದಾರೆ. ಸೋಂಕಿತರು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತಿದ್ದು, ಈ ಮೂವರು ಇತ್ತೀಚೆಗೆ ಬೆಂಗಳೂರಿನಿಂದ ವಾಪಸ್ಸಾಗಿದ್ದರು. …

Read More »

ಬಳ್ಳಾರಿ:ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿ……..

ಬಳ್ಳಾರಿ: ಕೊರೊನಾ ವೈರಸ್ ರಾಜ್ಯದಲ್ಲಿ ಅಟ್ಟಹಾಸ ಮುಂದುವರೆಸಿದ್ದು, ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ. ಈ ಕುರಿತು ಬಳ್ಳಾರಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ಚಿಕ್ಕಬಳ್ಳಾಪುರ ಜಿಲ್ಲೆ ಗೌರಿ ಬಿದನೂರಿನಲ್ಲಿ ನಿನ್ನೆ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಈಗ ಅವರ ಕುರಿತ ಲ್ಯಾಬ್ ವರದಿ ಬಂದಿದ್ದು, ಕೊರೂನಾ ಸೋಂಕಿನಿಂದಲೇ ಮಹಿಳೆ ಮೃತಪಟ್ಟಿರುವುದು ದೃಢಪಟ್ಟಿದೆ ಎಂದಿದ್ದಾರೆ. ಈ ಹಿಂದೆ ಕಲಬುರಗಿಯಲ್ಲಿ …

Read More »

ಕೂಡ್ಲಿಗಿ ತಾಂಡಾಗಳಲ್ಲಿ ಜಾಗೃತಿ:ಕೊರೋನಾ ಭಯ ಬಿಡಿ,ಮುಂಜಾಗೃತ ಕ್ರಮಗಳನ್ನು ಪಾಲಿಸಿ-ಸ್ವರೂಪಾನಂದ

ಕೂಡ್ಲಿಗಿ ತಾಂಡಾಗಳಲ್ಲಿ ಜಾಗೃತಿ:ಕೊರೋನಾ ಭಯ ಬಿಡಿ,ಮುಂಜಾಗೃತ ಕ್ರಮಗಳನ್ನು ಪಾಲಿಸಿ-ಸ್ವರೂಪಾನಂದ ಎಮ್.<->ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಬಿ.ಬಿ.ತಾಂಡಾ ಹಾಗು ದೂಪದಳ್ಳಿ ತಾಂಡಾಗಳಲ್ಲಿ ಜನತೆಗೆ ಆರೋಗ್ಯ ಇಲಾಖೆ.ಪೊಲೀಸ್ ಇಲಾಖೆ ಸಹಯೋಗದೊಂದಿಗೆ ತಾಲೂಕು ಆಡಳಿತ ಕೊರೋನಾ ವೈರಸ್ ಕುರಿತು ಜಾಗೃತಿ ಮೂಡಿಸಲಾಯಿತು. ಕೊರೋನಾ ಕುರಿತು ಬರಹಗಾರ ಹಾಗು ಪೊಲೀಸ್ ಪೇದೆ ಸ್ವರೂಪನಂದ ಎಮ್.ಕೊಟ್ಟೂರು ಮಾತನಾಡಿದರು.ರೋಗದ ಬಗ್ಗೆ ಅನಗತ್ಯ ಆತಂಕ ಭಯ ಪಡಬಾರದು.ಅಗತ್ಯ ಮುಂಜಾಗೃತ ಕ್ರಮಗಳನ್ನು ಎಲ್ಲರೂ ಪಾಲಿಸಲೇಬೇಕು ಅಂದಾಗ ರೋಗದ ವಿರುದ್ಧ ಜಯ ಸಾಧಿಸಲು …

Read More »

ಕೊರೊನಾ ರೆಡ್ ಅಲರ್ಟ್, 1000 ವೆಂಟಿಲೆಟರ್ ಖರೀದಿಗೆ ಮುಂದಾದ ಸರ್ಕಾರ..!

ಬೆಂಗಳೂರು, ಮಾ.23- ಕರ್ನಾಟಕದಲ್ಲಿ ಮತ್ತೊಬ್ಬರಿಗೆ ಕೊರೊನಾ ಸೋಂಕು ಹರಡಿದ್ದು, ಇಂದು ಬೆಳಗ್ಗೆ ಒಟ್ಟು ಸೋಂಕಿತರ ಸಂಖ್ಯೆ 27ಕ್ಕೆ ಹೆಚ್ಚಾಗಿದೆ. ಇದೇ ಸಂದರ್ಭದಲ್ಲಿ ಕೊರೊನಾ ರೋಗದ ಭೀತಿಯಲ್ಲಿ ಮುನ್ನೆಚ್ಚರಿಕಾ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ಏಕಕಾಲಕ್ಕೆ ಒಂದು ಸಾವಿರ ವೆಂಟಿಲೆಟರ್‍ಗಳನ್ನು ಖರೀದಿಸಲು ಮುಂದಾಗಿದೆ. ಇಂದು ಬೆಳಗ್ಗೆ ವಿಕಾಸಸೌಧದಲ್ಲಿ ಅಧಿಕಾರಿಗಳು ಹಾಗೂ ಖಾಸಗಿ ಕಂಪೆನಿಗಳ ಜೊತೆ ಚರ್ಚೆ ಮಾಡಿ, ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ …

Read More »

ಇಟಲಿಯಲ್ಲಿ ಸಿಲುಕಿಕೊಂಡಿದ್ದ ಸಚಿವ ಆನಂದ್ ಸಿಂಗ್ ಪುತ್ರಿ ಆಗಮನ

ಬಳ್ಳಾರಿ, ಮಾರ್ಚ್ 18: ಇಟಲಿಯ ರೋಮ್ ನಗರದಲ್ಲಿ ಸಿಲುಕಿಕೊಂಡಿದ್ದ ಅರಣ್ಯ ಸಚಿವ ಆನಂದ್ ಸಿಂಗ್ ಪುತ್ರಿ ಇಂದು ಬೆಳಗಿನ ಜಾವ ಬೆಂಗಳೂರಿಗೆ ಆಗಮಿಸಿದ್ದಾಳೆ. ಕರ್ನಾಟಕದ 150 ವಿದ್ಯಾರ್ಥಿಗಳು ಸೇರಿದಂತೆ 445 ಜನರು ಇಟಲಿಯಲ್ಲಿ ಸಿಲುಕಿಕೊಂಡಿದ್ದರು. ಕೊರೊನಾ ಪರೀಕ್ಷೆಯ ನೆಗಟಿವ್ ಸರ್ಟಿಫಿಕೇಟ್ ಕೊಡದೇ ಏರ್ ಇಂಡಿಯಾದವರು ವಿಮಾನ ಹತ್ತಿಸಿಕೊಳ್ಳಲು ಬಿಟ್ಟಿರಲಿಲ್ಲ. ಇಂದು ಅಗಮಿಸಿದ ಆನಂದ್ ಸಿಂಗ್ ಪುತ್ರಿಗೆ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಆನಂದ್ ಸಿಂಗ್ ಪುತ್ರಿಯ ಜೊತೆಯಲ್ಲಿ …

Read More »