ಬಾಗಲಕೋಟೆ : ಕಲೆ ಇದ್ದಲ್ಲಿ ವಿಕಾಸ ಇರುತ್ತದೆ. ಸರ್ವವ್ಯಾಪಿಯಾದ ಕಲಾ ಕೌಶಲ್ಯದ ಜೊತೆಗೆ ಸೃಜನಶೀಲತೆ, ಜ್ಞಾನ ಮತ್ತು ಆತ್ಮಸ್ಥೈರ್ಯ ಬೆಳಸಿಕೊಂಡರೆ ಬಯಸಿದಂತಹ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ ಎಂದು ಬಿವಿವಿ ಸಂಘದ ಆಡಳಿತ ಅಧಿಕಾರಿಗಳಾದ ಡಾ. ವಿಜಯಕುಮಾರ ಎಸ್. ಕಟಗಿಹಳ್ಳಿಮಠ ಹೇಳಿದರು. ನಗರದ ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದ ಸಭಾಭವನದಲ್ಲಿ ಆಂತರಿಕ ಗುಣಮಟ್ಟ ಭರವಸೆ ಘಟಕ ಹಾಗೂ ಸಾಂಸ್ಕೃತಿಕ ಚಟುವಟಿಕೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಲಾ ಸಿರಿ ಕಾರ್ಯಕ್ರಮವನ್ನು ಭುವನೇಶ್ವರಿ ದೇವಿ ಭಾವಚಿತ್ರಕ್ಕೆ …
Read More »ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ
ಬಾಗಲಕೋಟೆ: ಬಿವಿವಿ ಸಂಘದ ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಆಚರಿಸಲಾಯಿತು. ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿ ಪುಷ್ಪಾರ್ಪಣೆ ಮಾಡಿ ಮಾತನಾಡಿದ ಪ್ರಾಧ್ಯಾಪಕ ಮಂಜುನಾಥ್ ಹಳ್ಳೂರ್ ಡಾ. ಬಿ. ಆರ್. ಅಂಬೇಡ್ಕರ್ ಅವರ ದೂರ ದೃಷ್ಟಿಯಿಂದ ಮೂಡಿಬಂದ ಸಂವಿಧಾನದ ಆಶಯಗಳಾದ ಸಮಾನತೆ, ಭ್ರಾತೃತ್ವ, ಜಾತ್ಯತೀತತೆಯನ್ನು ಪಾಲಿಸುವ ಮೂಲಕ ಸುಭದ್ರ ರಾಷ್ಟ್ರ ನಿರ್ಮಾಣ ಸಾಧ್ಯ, ಜಾತಿ ಮತ್ತು ಧರ್ಮದ ಆಚೆಗೆ ಕಾಣುವ ವ್ಯಕ್ತಿಗಳಲ್ಲಿ ಅಗ್ರಗಣ್ಯ ನಾಯಕರಾಗಿ ಮಹಾನ್ …
Read More »ಜಯಮೃತ್ಯುಂಜಯ ಶ್ರೀ ವಿರುದ್ಧದ ಕೇಸ್‌ಗೆ ಬಿಗ್ ಟ್ವಿಸ್ಟ್ – ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದ ಸಂತ್ರಸ್ತೆ
ಬಾಗಲಕೋಟೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧದ ಕೇಸ್‌ಗೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಂತ್ರಸ್ತ ಮಹಿಳೆ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ವಿಡಿಯೋ ಹೇಳಿಕೆಯೊಂದನ್ನು ರಿಲೀಸ್ ಮಾಡಿದ್ದಾರೆ. ಇತ್ತೀಚಿಗಷ್ಟೇ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿತ್ತು. ಇದೀಗ ಈ ಸಂಬಂಧ ಸಂತ್ರಸ್ತ ಮಹಿಳೆ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ನಾನು ಶ್ರೀಗಳ ವಿರುದ್ಧ ದೂರು ನೀಡಿಲ್ಲ. ನನ್ನ ಮತ್ತು ಸ್ವಾಮೀಜಿ ಮೇಲಿರುವ ಆರೋಪಗಳೆಲ್ಲವೂ ಸುಳ್ಳು. ನನ್ನ ಹೆಸರಿನಲ್ಲಿ ಯಾರೋ …
Read More »ಬಸವೇಶ್ವರ ಪ.ಪೂ ವಾಣಿಜ್ಯ ಮಹಾವಿದ್ಯಾಲಯದ ಫಲಿತಾಂಶ : ಶೇ.88.10%
ಬಾಗಲಕೋಟೆ: 2025-26ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿಯ ಫಲಿತಾಂಶ ಪ್ರಕಟವಾಗಿದ್ದು, ಮಹಾವಿದ್ಯಾಲಯದ ಕುಮಾರ ಮಂಥನ ಮಹಾವೀರ ಪೋರವಾಲ 580 (ಶೇಕಡಾ 96.67%) ಅಂಕಗಳನ್ನು ಪಡೆದು ಮಹಾವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, ಮಹಾವಿದ್ಯಾಲಯದ ಶೇಕಡಾವಾರು ಫಲಿತಾಂಶ 88.10% ಆಗಿದ್ದು, ಒಟ್ಟು 168 ವಿದ್ಯಾರ್ಥಿಗಳಲ್ಲಿ 148 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, 34 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 69 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 39 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಮತ್ತು 6 ವಿದ್ಯಾರ್ಥಿಗಳು ತೃತೀಯ …
Read More »ಬಿವಿವಿಎಸ್ ಸಂಯುಕ್ತ ಪಿಯು ಕಾಲೇಜು ಪಲಿತಾಂಶ 87.22%
ಬಾಗಲಕೋಟೆ: 2025-26ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿಯ ಫಲಿತಾಂಶ ಪ್ರಕಟವಾಗಿದ್ದು, ಬಸವೇಶ್ವರ ಸಂಯುಕ್ತ ಪ.ಪೂ ಮಹಾವಿದ್ಯಾಲಯದ ಕಲಾ ವಿಭಾಗ್ ಐಶ್ವರ್ಯ ಛಲವಾದಿ 573, ವಾಣಿಜ್ಯ ವಿಭಾಗದ ಸೌಮ್ಯ ಸೊನ್ನದ 573 ಅಂಕ, ವಿಜ್ಞಾನ ವಿಭಾಗದ ಸಂಜಯ ಓಘಿ 568 ಅಂಕ ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ. ಸಾಧನೆಗೈದ ವಿದ್ಯಾರ್ಥಿಗಳನ್ನು ಸಂಘದ ಕಾರ್ಯಾಧ್ಯಕ್ಷರಾದ ಡಾ. ವೀರಣ್ಣ ಸಿ ಚರಂತಿಮಠ, ಕಾಲೇಜುಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷರಾದ ಗುರುಬಸವ ಎಸ್. ಸೂಳಿಭಾವಿ, ಸಂಘದ …
Read More »ಪಿಯುಸಿ ಫಲಿತಾಂಶ: ರಾಜ್ಯ ಮಟ್ಟದಲ್ಲಿ ಬಿವಿವಿ ಸಂಘಕ್ಕೆ ಮೂರು ರ್ಯಾಂಕ್
ಬಾಗಲಕೋಟೆ: ಪಿಯುಸಿ ಫಲಿತಾಂಶದಲ್ಲಿ ರಾಜ್ಯ ಮಟ್ಟದಲ್ಲಿ ಮೂರು ರ್ಯಾಂಕ್ ಪಡೆಯುವುದರ ಮೂಲಕ ಬಿವಿವಿ ಸಂಘದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಕಲಾ ವಿಜ್ಞಾನ ಮತ್ತು ವಾಣಿಜ್ಯ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಸಾಕ್ಷಿ ಮಠಪತಿ 600 ಅಂಕಕ್ಕೆ 593 ಅಂಕಗಳನ್ನು ಪಡೆದು ರಾಜ್ಯಕ್ಕೆ ಏಳನೇ ಸ್ಥಾನ, ವೀಣಾ ಹಿರೇಮಠ 589 ಅಂಕಗಳಿಂದ ರಾಜ್ಯಕ್ಕೆ 11ನೇ ಸ್ಥಾನ ಮತ್ತು ಬಸವೇಶ್ವರ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ಅನುಷಾ ಅಕ್ಕೇರಿ 589 …
Read More »KPCCಗೆ ಸಚಿವ ತಿಮ್ಮಾಪುರ ‘ದೋಖಾ’: ಬಾಗಲಕೋಟೆಯಲ್ಲಿ ‘ಬಾರ್ ಮಾಲೀಕ’ ಕಂ ಪತ್ರಕರ್ತನ ಹಗಲು ದರೋಡೆ!
ಬಾಗಲಕೋಟೆ ಉಪಚುನಾವಣೆ ಗೆಲ್ಲಲು ಕೆಪಿಸಿಸಿ ಕಳುಹಿಸಿದ 41 ಲಕ್ಷ ರೂಪಾಯಿ ಮಾಧ್ಯಮ ನಿರ್ವಹಣೆಯ ಹಣ ಈಗ ಅಬಕಾರಿ ಸಚಿವರ ಆಪ್ತ ‘ಡೀಲ್ ಮಾಸ್ಟರ್’ ಪತ್ರಕರ್ತನ ಪಾಲಾಗಿದೆಯೇ? ರಾತ್ರೋರಾತ್ರಿ ಬ್ಯಾಂಕ್‌ನಿಂದ ಹಣ ಡ್ರಾ ಮಾಡಿ, ಕಾಂಗ್ರೆಸ್ ಸಿದ್ಧಾಂತಕ್ಕೆ ವಿರುದ್ಧವಾದ ಬಲಪಂಥೀಯ ಪತ್ರಕರ್ತರಿಗೆ ಮಾತ್ರ ಲಕ್ಷಾಂತರ ರೂಪಾಯಿ ಹಂಚಿದ ಈ ‘ಬಾರ್ ಮಾಲೀಕ’ ಪತ್ರಕರ್ತನ ಅಸಲಿ ಮುಖವಾಡ ಈಗ ಕಳಚಿದೆ! ಸಂಜೆಯಾಗುತ್ತಿದ್ದಂತೆ ಮಿನಿಸ್ಟರ್ ಜೊತೆ ಪೆಗ್ ಏರಿಸುವ ಈ ಆಪ್ತ ಪತ್ರಕರ್ತ, ಅಲ್ಪಸಂಖ್ಯಾತ, …
Read More »ಉಪ ಚುನಾವಣೆ ನಡೆಯುತ್ತಿರುವ ಜಿಲ್ಲೆಗಳ ಗ್ಯಾರಂಟಿ ಯೋಜನೆಗಳ ಅನುದಾನದ ವಿವರ ಕೇಳಿದ ಆಯೋಗ
ಬೆಂಗಳೂರು: ಕಳೆದ ಮೂರ್ನಾಲ್ಕು ತಿಂಗಳ ಗ್ಯಾರಂಟಿ ಯೋಜನೆಗಳ ನಗದು ಹಣ ಬಿಡುಗಡೆ ಮಾಡದೇ ತಡೆ ಹಿಡಿಯಲಾಗಿದ್ದು, ಇದೀಗ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ, ಏಕಕಾಲಕ್ಕೆ ಗ್ಯಾರಂಟಿ ಯೋಜನೆ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ದಾವಣಗೆರೆ ದಕ್ಷಿಣ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಆದ್ರೆ, ಇದಕ್ಕೆ ರಾಜ್ಯ ಸರ್ಕಾರ ಅಲ್ಲಗಳೆದಿದೆ. ಈ …
Read More »ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ
ದಾವಣಗೆರೆ, ಬಾಗಲಕೋಟೆ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು ಗುರುವಾರ ಎರಡೂ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಎರಡೂ ಕ್ಷೇತ್ರದಲ್ಲಿ ಘಟಾನುಘಟಿ ನಾಯಕರು ಇಂದು ಬಹಿರಂಗ ಪ್ರಚಾರ ಅಂತ್ಯಕ್ಕೂ ಮುನ್ನ ಕೊನೆಯ ದಿನದ ಕಸರತ್ತು ನಡೆಸಿದ್ರು. ನಾಳೆ ಸಂಜೆಯವರೆಗೂ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರ ಮಾಡಲು ಅವಕಾಶವಿದೆ. ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ಎರಡೂ ಕ್ಷೇತ್ರದಲ್ಲಿ ಸಮಾವೇಶ ನಡೆಸಿ, ಭರ್ಜರಿ ಮತಯಾಚನೆ …
Read More »ರಾಂಪೂರದಲ್ಲಿ ಚರಂತಿಮಠ ಪರ ಬಿಜೆಪಿ-ಜೆಡಿಎಸ್ ಶಕ್ತಿ ಪ್ರದರ್ಶನ; ಕಾಂಗ್ರೆಸ್ ವಿರುದ್ಧ ವಾಗ್ದಾಳಿ
ಬಾಗಲಕೋಟೆ: ಉಪಚುನಾವಣೆ ಹಿನ್ನೆಲೆಯಲ್ಲಿ ರಾಂಪೂರ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠರ ಪರವಾಗಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಾರ್ವಜನಿಕ ಸಭೆಯಲ್ಲಿ ಮತಯಾಚನೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಚರಂತಿಮಠರು ಭಾರೀ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಹಣ, ಹೆಂಡ ಮತ್ತು ಜಾತಿ ಆಧಾರಿತ ರಾಜಕಾರಣಕ್ಕೆ ಜನರು ತಲೆಬಾಗುವುದಿಲ್ಲ; ಬದಲಾವಣೆಯ ಪರ ಜನರು ತೀರ್ಮಾನಿಸಿದ್ದಾರೆ ಎಂದರು. ಕಾಂಗ್ರೆಸ್ ಸರ್ಕಾರ ಹಲವು ಜನಪರ …
Read More »
Laxmi News 24×7