Breaking News

ಬಾಗಲಕೋಟೆ

ಕೃಷ್ಣಾ ಹಾಗೂ ಘಟಪ್ರಭಾ ನದಿಯಲ್ಲಿ ತಗ್ಗಿದ ಪ್ರವಾಹ : ಮುಕ್ತವಾದ ಸೇತುವೆ ಹಾಗೂ ರಸ್ತೆಗಳು

ಬನಹಟ್ಟಿ : ಮಹಾರಾಷ್ಟ್ರ ರಾಜ್ಯದಲ್ಲಿನ ಹಾಗೂ ಪಶ್ಚಿಮ ಘಟ್ಟಗಳಲ್ಲಿನ ಮಹಾಮಳೆಯ ಪರಿಣಾಮ ಉಂಟಾದ ಪ್ರವಾಹದಿಂದಾಗಿ ಕಳೆದ 13 ದಿನಗಳಿಂದ ಕೃಷ್ಣಾನದಿ ಹಾಗೂ ಘಟಪ್ರಭಾ ನದಿಯು ಉಕ್ಕಿ ಹರಿದ ಪರಿಣಾಮ ರಬಕವಿ-ಬನಹಟ್ಟಿ ತಾಲೂಕಿನ ನದಿಪಾತ್ರದ ಗ್ರಾಮಗಳು ಜಲಾವೃತವಾಗಿ ಸಾಕಷ್ಟು ಆವಾಂತರಗಳನ್ನು ಸೃಷ್ಠಿಸಿತ್ತು. ಕಳೆದ 3-4 ದಿನಗಳಿಂದ ಕೃಷ್ಣಾ ಹಾಗೂ ಘಟಪ್ರಭಾ ಎರಡು ನದಿಗಳ ನೀರಿನ ಪ್ರಮಾಣ ನದಿಯ ನೀರಿನ ಹರಿವು ಕಡಿಮೆಯಾಗುತ್ತಿದೆ. ಮುಚ್ಚಿಕೊಂಡ ಬಹುತೇಕ ಸೇತುವೆ ಹಾಗೂ ರಸ್ತೆಗಳು ಸಂಚಾರಕ್ಕೆ ಮುಕ್ತವಾಗಿವೆ. …

Read More »

ಗರ್ಭಿಣಿ ನಿಧನದ ನೋವಲ್ಲೇ ಅಂತ್ಯ ಸಂಸ್ಕಾರ ಮುಗಿಸಿ ಬಂದವರಿಗೆ ಪ್ರವಾಹಕ್ಕೆ ಬಲಿಯಾಗಿತ್ತು ಮನೆ..!

ಬಾಗಲಕೋಟೆ: ಇಷ್ಟು ದಿನ ಕೊರೊನಾ ತನ್ನ ಅಟ್ಟಹಾಸ ಮೆರೆದಿತ್ತು. ಸಾಕಷ್ಟು ಸಾವು ಸಂಭವಿಸಿ ಅದೆಷ್ಟೋ ಜನರ ಬದುಕಲ್ಲಿ ನೋವನ್ನೇ ಉಳಿಸಿ ಹೋಗಿದೆ. ಇದೀಗ ಆರಂಭದ ಮಳೆಯೇ ಪ್ರವಾಹ ಸೃಷ್ಟಿಸಿ ಮತ್ತೆ ಸಾವನ್ನ ಹೆಚ್ಚು ಮಾಡಿದೆ. ಹೌದು ಜಿಲ್ಲೆಯ ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮಿರ್ಜಿ ಗ್ರಾಮದ ಲಕ್ಷ್ಮೀ ಎಂಬಾಕೆ ಹೆರಿಗೆ ಸಮಯದಲ್ಲಿ ಸಾವನ್ನಪ್ಪಿದ್ದಾರೆ. ಜೋರು ಮಳೆಯ ನಡುವೆಯೇ ಹೇಗೋ ಕಷ್ಟಪಟ್ಟು ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. ಆ ಬಳಿಕ …

Read More »

ಬಾಗಲಕೋಟೆ: ಶಾಲೆಯಲ್ಲಿ ಕಳ್ಳತನ; ಕಂಪ್ಯೂಟರ್ ಕದ್ದೋಯ್ದ ಖದೀಮರು

ಬಾಗಲಕೋಟೆ: ತಾಲೂಕಿನ ತುಳಸಿಗೇರಿ ಗ್ರಾಮದ ಸರ್ಕಾರಿ ಮಾದರಿ ಕುವೆಂಪು ಪ್ರಾಥಮಿಕ ಶಾಲೆಯಲ್ಲಿ ಕಳ್ಳತನವಾಗಿದೆ. ಶಾಲೆಯಲ್ಲಿನ ಒಟ್ಟು ನಾಲ್ಕು ಕಂಪ್ಯೂಟರ್ ಮತ್ತು ಒಂದು ಪ್ರಿಂಟರ್​ನ ಕದ್ದೊಯ್ದಿದ್ದಾರೆ. ಕಂಪ್ಯೂಟರ್ ಎಜ್ಯುಕೇಶನ್ ಕೊಠಡಿಯಲ್ಲಿದ್ದ ಒಟ್ಟು 11 ಕಂಪ್ಯೂಟರ್​ಗಳ ಪೈಕಿ ಮೂರು ಕಂಪ್ಯೂಟರ್, ಶಾಲೆ ಕಾರ್ಯಾಲಯದಲ್ಲಿದ್ದ ಒಂದು ಕಂಪ್ಯೂಟರ್, ಒಂದು ಪ್ರಿಂಟರ್​ನ ಕಳ್ಳತನ ಮಾಡಿದ್ದಾರೆ. ಶಾಲೆಯಲ್ಲಿ ಇಂದು (ಜುಲೈ 19) ಬೆಳಿಗ್ಗೆ ಎಸ್‌ಎಸ್‌ಎಲ್​ಸಿ ಪರೀಕ್ಷೆ ನಡೆದಿದೆ. ಎಲ್ಲ ಪರೀಕ್ಷಾ ಕೊಠಡಿಗಳನ್ನು ಓಪನ್ ಮಾಡಿದ್ದಾರೆ. ಕಚೇರಿ ಕೊಠಡಿಯಲ್ಲಿದ್ದ …

Read More »

ಕೋವಿಡ್: ಬಾಗಲಕೋಟೆಯಲ್ಲಿ ಶೂನ್ಯ ಪ್ರಕರಣ; ರಾಜ್ಯದಲ್ಲಿಂದು 3045 ಸೋಂಕಿತರು ಗುಣಮುಖ

ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿ ( ದಿನಾಂಕ:08.07.2021,00:00 ರಿಂದ 23:59 ರವರೆಗೆ) ಯಲ್ಲಿ 2290 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿವೆ ಹಾಗೂ 68 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು (ಜುಲೈ 09) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ. ವರದಿಗಳ ಪ್ರಕಾರ 3045 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಇದುವರೆಗೆ ರಾಜ್ಯದಲ್ಲಿ ಸೋಂಕಿನಿಂದ ಗುಣಮುಖರಾದವರ …

Read More »

ಪ್ರಿಯಕರನ ಮನೆಯಲ್ಲೇ ವಿವಾಹಿತ ಯುವತಿ ಸಾವು : ಯುವತಿ ಪೋಷಕರಿಂದ ಪ್ರಿಯಕರನ ಮನೆಗೆ ಬೆಂಕಿ

ಬಾಗಲಕೋಟೆ: ವಿವಾಹಿತ ಯುವತಿಯ ಸಾವಿಗೆ ಆಕೆಯ ಪ್ರಿಯಕರನೇ ಕಾರಣ ಎಂದು ಆರೋಪಿಸಿದ ಯುವತಿಯ ಪೋಷಕರು ಪ್ರಿಯಕರನ ಮನೆಗೆ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಇಳಕಲ್ ತಾಲೂಕಿನ ಕೆಲೂರ ಗ್ರಾಮದಲ್ಲಿ ನಡೆದಿದೆ. ಕೆಲೂರ ಗ್ರಾಮದ ವಿವಾಹಿತ ಯುವತಿ ಬಸಮ್ಮ ಪ್ರಿಯಕರನ ಮನೆಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಇದನ್ನು ಕಂಡು ಆಕ್ರೋಷಗೊಂಡ ಯುವತಿಯ ಪೋಷಕರು ಯುವತಿಯ ಸಾವಿಗೆ ಪ್ರೀಯಕರ ರಂಜೀತ್ ಕಾರಣ ಎಂದು ಪ್ರಿಯಕರನ ಮನೆಗೆ ಬೆಂಕಿಹಚ್ಚಿ ಆಕ್ರೋಷ ವ್ಯಕ್ತಪಡಿಸಿದ್ದಾರೆ. ರಂಜೀತ್ …

Read More »

ಮಹಾಲಿಂಗಪೂರ ಪುರಸಭೆ ಪ್ರಕರಣ:ಶಾಸಕ ಸಿದ್ದು ಸವದಿ- ತಹಶೀಲ್ದಾರ ಸಿಐಡಿಯಿಂದ ಪ್ರತ್ಯೇಕ ವಿಚಾರಣೆ

ಬನಹಟ್ಟಿ: ಕಳೆದ ವರ್ಷ ನ.9 ರಂದು ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪೂರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಆಯ್ಕೆ ಚುನಾವಣೆ ವೇಳೆ ಮಹಿಳಾ ಸದಸ್ಯೆಯರ ಎಳೆದಾಟದ ಗಲಾಟೆಗೆ ಸಂಬಂಧಿಸಿದಂತೆ ಡಿವೈಎಸ್ಪಿ ಎಸ್. ಸತ್ಯವತಿ ನೇತೃತ್ವದ ಸಿಐಡಿ ಅಧಿಕಾರಿಗಳ ತಂಡ ಬನಹಟ್ಟಿಯ ಲೋಕೋಪಯೋಗಿ ಇಲಾಖೆಯ ನಿರೀಕ್ಷಣಾ ಮಂದಿರದಲ್ಲಿ ಸೋಮವಾರ ರಾತ್ರಿವರೆಗೂ ತೇರದಾಳ ಶಾಸಕ ಸಿದ್ದು ಸವದಿ ಹಾಗು ಅಂದಿನ ರಬಕವಿ-ಬನಹಟ್ಟಿ ತಹಶೀಲ್ದಾರರಾಗಿದ್ದ ಪ್ರಶಾಂತ ಚನಗೊಂಡ ಅವರನ್ನು ಪ್ರತ್ಯೇಕವಾಗಿ ತೀವ್ರ ವಿಚಾರಣೆ …

Read More »

ವಿದ್ಯುತ್ ಮಗ್ಗ ನೇಕಾರರಿಗೆ 3 ಸಾವಿರ ಲಾಕ್ ಡೌನ್ ವಿಶೇಷ ದನ ಸಹಾಯಕ್ಕಾಗಿ ಅರ್ಜಿ ಅಹ್ವಾನ

ಬಾಗಲಕೋಟೆ : ಕೋವಿಡ್-19 ರ 2ನೇ ಅಲೆಯಿಂದ ಲಾಕ್‍ಡೌನ್ ಘೋಷಣೆ ಮಾಡಿದ್ದು, ಇದರಿಂದ ಬಾದಿತವಾದ ವಿದ್ಯುತ್ ಮಗ್ಗ ಘಟಕಗಳಲ್ಲಿನ ನೇಕಾರರು ಹಾಗೂ ಮಗ್ಗಪೂರ್ವ ಚಟುವಟಿಕೆಗಳಾದ ಟ್ವಿಸ್ಟಿಂಗ್, ವೈಂಡಿಂಗ್, ಯಾರ್ನಡೈಯಿಂಗ್, ವಾರ್ಪಿಂಗ್, ಝರಿ ವೈಂಡಿಂಗ್ & ವಾರ್ಪಿಂಗ್, ವಾರ್ಪ ನಾಟಿಂಗ್ ಹಾಗೂ ಸೈಜಿಂಗ್ ಕೆಲಸಗಾರರಿಗೆ ತಲಾ 3 ಸಾವಿರ ರೂ.ಗಳಂತೆ ಪರಿಹಾರಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ‘SSLC ವಿದ್ಯಾರ್ಥಿ’ಗಳೇ ಗಮನಿಸಿ : ಶಿಕ್ಷಣ ಇಲಾಖೆಯ ‘ಈ ಆಪ್’ ಹಾಕೊಳ್ಳಿ, ನಿಮ್ಮ ‘ಪರೀಕ್ಷಾ ಸಿದ್ಧತೆ’ಗೆ …

Read More »

ದೂರು ನೀಡಲು ಠಾಣೆಗೆ ಬಂದವರ ಮೇಲೆ ಪಿಎಸ್‌ಐ ಹಲ್ಲೆ; ಎಸ್​ಪಿ ಮೊರೆ ಹೋದ ಕುಟುಂಬಸ್ಥರು

ಬಾಗಲಕೋಟೆ: ದೂರು ನೀಡಲು ಪೊಲೀಸ್ ಠಾಣೆಗೆ ಬಂದವರ ಮೇಲೆ ಪಿಎಸ್‌ಐ ಹಲ್ಲೆ ಮಾಡಿರುವ ಘಟನೆ ಬಾಗಲಕೋಟೆ ತಾಲೂಕಿನ ಕಲಾದಗಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಪಿಎಸ್‌ಐ ರವಿ ಪವಾರ್ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮೊದಲ ಪತ್ನಿಗೆ ಗೊತ್ತಾಗದಂತೆ ತುಳಸಿಗೇರಿ ಗ್ರಾಮದ ನಿವಾಸಿ ರಂಗಪ್ಪ ಎಂಬುವವನು ಎರಡನೇ ಮದುವೆಯಾಗಿದ್ದ. ರಂಗಪ್ಪನ ಮೊದಲ ಪತ್ನಿ ಲಕ್ಷ್ಮೀ ಸಹೋದರ ಸಚಿನ್ ಗಿಡ್ಡಿ, ಲಕ್ಷ್ಮೀ ಭಾವ ಶ್ರೀಕಾಂತ್ ರಂಗಪ್ಪನ ವಿರುದ್ಧ ದೂರು ನೀಡಲು ಠಾಣೆಗೆ …

Read More »

“ಖಾಕಿ” ಭರ್ಜರಿ ಬೇಟೆ: 16 ಲಕ್ಷದ ಚಿನ್ನಾಭರಣ ದೋಚಿದ್ದ ಕಿಡಿಗೇಡಿಗಳು ಅರೆಸ್ಟ್..! ಬಂಧಿತರಿಂದ 11 ಲಕ್ಷ ರೂ. ಮೌಲ್ಯದ 225 ಗ್ರಾಂ ಚಿನ್ನ ವಶ

ಬಾಗಲಕೋಟೆ: ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ, ಮೂವರು ಕಿಡಿಗೇಡಿಗಳನ್ನು ಮುಧೋಳ “ಖಾಕಿ” ಭರ್ಜರಿ ಭರ್ಜರಿ ಬೇಟೆಯಾಡಿದ್ದಾರೆ. ಸಿದ್ಧು, ಸಿದ್ದಪ್ಪ ಜಿಮ್ಮಿ, ಅಡಿವೆವ್ವ ಹಾದಿಮನಿ, ಕಲ್ಮೇಶ , ಮಟ್ಯಾ, ಪುಟ್ಯಾ, ಪುಟ್ಟು , ಪುಟ್ಯಾ, ದುರ್ಗಪ್ಪ ರಾನವ್ವಗೋಳ , ಜಾನಮಟ್ಟಿ, ಮುತ್ತಪ್ಪ ಯಮನಪ್ಪ ಪೂಜಾರಿ ಬಂಧಿತ ಆರೋಪಿಗಳು, ಮುಧೋಳ ತಾಲೂಕಿನ ಮಳಲಿ ಗ್ರಾಮದ ಎಂದು ತಿಳಿದು ಬಂದಿದೆ. ಬಂಧಿತರಿಂದ 11 ಲಕ್ಷ ರೂ. ಮೌಲ್ಯದ 225 ಗ್ರಾಂ ಚಿನ್ನ ಹಾಗೂ …

Read More »

ಅಕ್ರಮ ಸಂಗ್ರಹ: 2261 ಚೀಲ ರಸಗೊಬ್ಬರ ಪತ್ತೆ

ಬಾಗಲಕೋಟೆ: ಹುನಗುಂದ ತಾಲ್ಲೂಕಿನ ಕಮತಗಿಯಲ್ಲಿ ಅಕ್ರಮವಾಗಿ ದಾಸ್ತಾನು ಇಡಲಾಗಿದ್ದ ₹11.05 ಲಕ್ಷ ಮೌಲ್ಯದ 2261 ಚೀಲ ವಿವಿಧ ಬಗೆಯ ರಸಗೊಬ್ಬರವನ್ನು ಕೃಷಿ ಇಲಾಖೆಯ ವಿಚಕ್ಷಣಾ ತಂಡದವರು ಸೋಮವಾರ ವಶಪಡಿಸಿಕೊಂಡಿದ್ದಾರೆ ಕಮತಗಿಯ ವಿನಾಯಕ ಕೃಷಿ ಕೇಂದ್ರ ಹಾಗೂ ಅನ್ನದಾನೇಶ್ವರಿ ಕೃಷಿ ಸೇವಾ ಕೇಂದ್ರಗಳ ಹೆಸರಿನ ಉಗ್ರಾಣಗಳಲ್ಲಿ ರಸಗೊಬ್ಬರದ ಚೀಲಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ, ವಿಚಕ್ಷಣಾ ತಂಡದ ಸಹಾಯಕ ನಿರ್ದೇಶಕರಾದ ಬಿ.ಜಿ.ಮಾಳೇದ, …

Read More »