ಮಹಾಲಿಂಗಪುರ: ಬಾಗಲಕೋಟ ಜಿಲ್ಲೆಯ ಮುಧೋಳ ಮತ್ತು ನೂತನ ರಬಕ” ಬನಹಟ್ಟಿ ತಾಲೂಕಿನಲ್ಲಿ ಪ್ರಸಕ್ತ ವರ್ಷ ನೀರಿಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ, ಆದರೂ ಈ ಭಾಗದ ಜನತೆಗೆ ಪ್ರವಾಹದ ಪರಿಣಾಮ ಬೀರಿದೆ. ಮಹಾರಾಷ್ಟ್ರದಲ್ಲಿ ನಿರಂತರ ಸುರಿಯುತ್ತಿರುವ ಭಾರಿ ಮಳೆಂದಾಗಿ “ರಣ್ಯಕೇಶಿ ನದಿಯು ತುಂಬಿ ಹರಿದು ಧೂಪದಾಳ ಜಲಾಶಯ ಮಾರ್ಗವಾಗಿ ಘಟಪ್ರಭಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಗುರುವಾರ “ಡಕಲ್ ಜಲಾಶಯಕ್ಕೆ ಸುಮಾರು 17114 ಕ್ಯೂಸೆಕ್ ಒಳಹರಿವು ಇದೆ. “ಡಕಲ್ ಜಲಾಶಯದಿಂದ …
Read More »ಹೊಳೆ ಬಸವೇಶ್ವರ ದೇವಸ್ಥಾನಕ್ಕೆ ಜಲದಿಗ್ಬಂಧನ
ಬಾಗಲಕೋಟೆ: ಬೆಳಗಾವಿ ಜಿಲ್ಲೆಯ ಖಾನಾಪುರ ಭಾಗದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಘಟಪ್ರಭಾ ನದಿಯಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಪರಿಣಾಮ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಾಚಕನೂರು ಗ್ರಾಮದ ಹೊಳೆ ಬಸವೇಶ್ವರ ದೇವಸ್ಥಾನ ಜಲದಿಗ್ಬಂಧನ ಎದುರಿಸುವಂತಾಗಿದೆ. ಒಳಹರಿವಿನ ಪ್ರಮಾಣ ಹೆಚ್ಚಾದ ಪರಿಣಾಮದಿಂದಾಗಿ ಭಕ್ತರಿಗೆ ದೇವರ ಪೂಜೆ ದರ್ಶನ ಭಾಗ್ಯ ಇಲ್ಲದಂತಾಗಿದ್ದು, ದೇಗುಲದ ಮುಂಭಾಗದ ಮೆಟ್ಟಿಲು, ಕಟ್ಟೆಯವರೆಗೆ ಎರಡು ಅಡಿಯಷ್ಟು ನೀರು ನಿಂತಿದೆ. ಇದೇ ರೀತಿ ನೀರಿನ ಪ್ರಮಾಣ ಹೆಚ್ಚಾದರೆ …
Read More »ಅನೈತಿಕ ಸಂಬಂಧ ಶಂಕೆ ; ಪತ್ನಿ ಕೊಲೆ, ಮಗನೂ ಭಾಗಿ
ಬಾಗಲಕೋಟೆ: ಮನೆಯಲ್ಲಿ ಪತ್ನಿ ನಿದ್ರೆ ಮಾಡುತ್ತಿರುವಾಗಲೇ ಆಕೆಯ ಕುತ್ತಿಗೆ ಬಿಗಿದು ಗಂಡ ಕೊಲೆ ಮಾಡಿದ್ದಾನೆ. ತನ್ನ ಕಣ್ಣೆದುರಲ್ಲೇ ಅಮ್ಮನನ್ನು ಕೊಲ್ಲುತ್ತಿದ್ದ ಅಪ್ಪನಿಗೆ 14 ವರ್ಷದ ಮಗನೂ ಸಾಥ್ ಕೊಟ್ಟಿದ್ದಾನೆ. ಅಷ್ಟೇ ಅಲ್ಲ ಆತ್ಮಹತ್ಯೆ ಎಂದು ಬಿಂಬಿಸಿ ತರಾತುರಿಯಲ್ಲಿ ಅಂತ್ಯಸಂಸ್ಕಾರ ಮಾಡಲು ಹೋದಾಗ ಕೊಲೆ ರಹಸ್ಯ ಬಯಲಾಗಿದೆ. ಇಂತಹ ದುರ್ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ತುಂಗಳ ಗ್ರಾಮದಲ್ಲಿ ಸಂಭವಿಸಿದೆ. ಮಹಾದೇವಿ ವಡ್ರಾಲ(40) ಕೊಲೆಯಾದ ದುರ್ದೈವಿ. ಪತಿ ಹನುಮಂತ ವಡ್ರಾಲ ಮತ್ತು …
Read More »ಡಾ.ಪದ್ಮಜೀತ ಪಾಟೀಲ್ ಅಂಬ್ಯುಲೆನ್ಸ್ ಸೇವೆ: ಮನೆಯಿಂದ ಕೋವಿಡ್ ಕೇರ್ ಸೆಂಟರ್
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಯಾವದೇ ಆಸ್ಪತ್ರೆಗೆ ತೆರಳಲು ಉಚಿತ ಅಂಬ್ಯುಲೆನ್ಸ್ ಹಾಗು ಕೊರೊನಾದಿಂದ ಮೃತಪಟ್ಟ ಶವ ಸಾಗಿಸಲೂ ಪ್ರತ್ಯೇಕ ವಾಹನದ ಜೊತೆಗೆ ಆಕ್ಸಿಜನ್ ಸಹಿತ ವಾಹನವನ್ನೂ ಉಚಿತ ಸೇವೆ ಮಾಡಲು ಡಾ. ಪದ್ಮಜೀತ್ ನಾಡಗೌಡ ಪಾಟೀಲ ಫೌಂಡೇಶನ್ ಮುಂದಾಗಿದೆ ಎಂದು ಕಾಂಗ್ರೆಸ್ ಮುಖಂಡ ಡಾ. ಪದ್ಮಜೀತ್ ನಾಡಗೌಡ ತಿಳಿಸಿದರು. ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತೇರದಾಳ ವಿಧಾನಸಭಾ ಕ್ಷೇತ್ರದ ಸರ್ವ ಜನತೆಗೆ ಉಚಿತವಾಗಿ …
Read More »ಸೋಂಕಿತರಿಗೆ ಆಪತ್ಬಾಂಧವ ಸರಕಾರಿ ಆಸ್ಪತ್ರೆ
ಬಾಗಲಕೋಟೆ: ಸರ್ಕಾರಿ ಆಸ್ಪತ್ರೆ ಎಂದರೆ ಮೂಗು ಮುರಿಯುವ ಕಾಲವೊಂದಿತ್ತು. ಆದರೆ, ಕೊರೊನಾ ಮೊದಲ ಅಲೆ ಮತ್ತು ಎರಡನೇ ಅಲೆ ಕಾಲಿಟ್ಟಿದ್ದೇ ತಡ, ಬಡವರು-ಶ್ರೀಮಂತರೆನ್ನದೇ ಸರ್ಕಾರಿ ಆಸ್ಪತ್ರೆಯನ್ನೇ ಸ್ಮರಿಸುತ್ತಿದ್ದಾರೆ. ಸದ್ಯ ಇಡೀ ಜಿಲ್ಲೆಯ ಏಕೈಕ ದೊಡ್ಡ ಸರ್ಕಾರಿ ಆಸ್ಪತ್ರೆ ಎಂಬ ಖ್ಯಾತಿ ಪಡೆದ ಜಿಲ್ಲಾ ಸರ್ಕಾರಿ ಆಸ್ಪತ್ರೆ ಕೊರೊನಾ ಸಂಕಷ್ಟದ ಕಾಲದಲ್ಲಿ ಸಾವಿರಾರು ಜನರಿಗೆ ಆಪತ್ಭಾಂದವ ಆಗಿದೆ. ಹೌದು. ಸದ್ಯ ಜಿಲ್ಲಾಸ್ಪತ್ರೆಗೆ ಎಲ್ಲಿಲ್ಲದ ಬೇಡಿಕೆ. ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು, ಶ್ರೀಮಂತರು, ಗಣ್ಯರು, …
Read More »ನೀವು ಉಳಿಯುತ್ತಿರೋ ಇಲ್ಲವೋ ನಾನಂತು ಉಳಿಯಬೇಕು : ಸಚಿವ ಕತ್ತಿ
ಬನಹಟ್ಟಿ : ಕೋವಿಡ್ ಮೂರನೇ ಅಲೆ ಬರುತ್ತಿದೆ. ನೀವು ಉಳಿಯುತ್ತಿರೋ ಇಲ್ಲವೋ ನಾನಂತು ಉಳಿಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಹೇಳಿದರು. ಅವರು ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ-ಬನಹಟ್ಟಿ ನಗರಸಭೆ ಸಭಾ ಭವನದಲ್ಲಿ ನಡೆದ ಸರಕಾರಿ ಹಾಗೂ ಖಾಸಗಿ ವೈದ್ಯರ ಸಭೆಯಲ್ಲಿ ಮಾತನಾಡಿದರು. ಸ್ಥಳೀಯರು ಆಕ್ಷಿಜನ್ ಸಾಂದ್ರಕ ಯಂತ್ರವನ್ನು ಸರಕಾರಿ ಆಸ್ಪತ್ರೆಗೆ ದೇಣಿಗೆಯಾಗಿ ನೀಡಿದ್ದರು. ಈ ವೇಳೆ ರಬಕವಿಯ ಖಾಸಗಿ ವೈದ್ಯ ರವಿ ಜಮಖಂಡಿ ಮಾತನಾಡುವ …
Read More »ರೆಮ್‍ಡಿಸಿವಿರ್ ಇಂಜೆಕ್ಷನ್ ಅನ್ನು ಕದ್ದು ಮಾರುತ್ತಿದ್ದ 10 ಜನ ಗ್ಯಾಂಗ್ ಅನ್ನು ಬಾಗಲಕೋಟೆ ಸಿಇಎನ್ ಪೊಲೀಸರು ಬೇಟೆಯಾಡಿದ್ದಾರೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಕದ್ದು ಮುಚ್ಚಿ ರೆಮ್‍ಡಿಸಿವಿರ್ ಇಂಜೆಕ್ಷನ್ ಅನ್ನು ಕದ್ದು ಮಾರುತ್ತಿದ್ದ 10 ಜನ ಗ್ಯಾಂಗ್ ಅನ್ನು ಬಾಗಲಕೋಟೆ ಸಿಇಎನ್ ಪೊಲೀಸರು ಬೇಟೆಯಾಡಿದ್ದಾರೆ. ಆಸ್ಪತ್ರೆ ಸಿಬ್ಬಂದಿಯೇ ಈ ಕಳ್ಳರಾಗಿರೋದು ಬೆಳಕಿಗೆ ಬಂದಿದೆ. 10 ಜನರಲ್ಲಿ ಮೂವರು ಕೋವಿಡ್ ಆಸ್ಪತ್ರೆ ಸಿಬ್ಬಂದಿ, 7 ಜನ ಖಾಸಗಿ ಆಸ್ಪತ್ರೆ ಸಿಬ್ಬಂದಿ ಆಗಿದ್ದಾರೆ. ರೋಗಿಗಳಿಗೆ ಕೊಡುವ ಇಂಜೆಕ್ಷನ್ ಅನ್ನು ಹೊರತಂದು ಬ್ಲಾಕ್‍ನಲ್ಲಿ 25-30 ಸಾವಿರಕ್ಕೆ ಮಾರಾಟ ಮಾಡುತ್ತಿದ್ದ ವೇಳೆ ಬಲೆಗೆ ಬಿದ್ದಿದ್ದಾರೆ. ಇತ್ತ, ತುಮಕೂರಿನಲ್ಲಿ …
Read More »ಪಾಸಿಟಿವ್ ಇದ್ದರೂ ವಿಷಯ ಮುಚ್ಚಿಟ್ಟು ಕೆಲಸಕ್ಕೆ ಬರುತ್ತಿದ್ದ ಫಾರ್ಮಾಸಿಸ್ಟ್; ಜಿಲ್ಲಾಧಿಕಾರಿಯಿಂದ ಅಮಾನತು ಆದೇಶ
ಬಾಗಲಕೋಟೆ: ರಾಜ್ಯದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ತೀವ್ರತೆ ವೈದ್ಯಕೀಯ ವ್ಯವಸ್ಥೆಗೆ ಸವಾಲೊಡ್ಡಿದ್ದು ಸೋಂಕು ಹರಡದಂತೆ ತಡೆಗಟ್ಟುವುದಕ್ಕೆ ಸರ್ಕಾರ ಕಠಿಣ ನಿಯಮಾವಳಿಗಳ ಮೊರೆ ಹೋಗಿದೆ. ಆದರೆ, ಬಾಗಲಕೋಟೆ ಜಿಲ್ಲೆಯಲ್ಲಿ ಕೊರೊನಾ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕಾಗಿದ್ದ ವ್ಯಕ್ತಿಯೇ ಬೇಜವಾಬ್ದಾರಿತನದಿಂದ ವರ್ತಿಸಿರುವ ಘಟನೆ ನಡೆದಿದೆ. ಜಿಲ್ಲೆಯ ಮುಧೋಳ ತಾಲ್ಲೂಕು ಆಸ್ಪತ್ರೆಯ ಮುಖ್ಯ ಫಾರ್ಮಾಸಿಸ್ಟ್ ನಂದಕುಮಾರ ಬೋನಗೇರಿ ಎಂಬುವವರು ಕೊರೊನಾ ಪಾಸಿಟಿವ್ ಇದ್ದರೂ ವಿಷಯ ಮುಚ್ಚಿಟ್ಟು ಕರ್ತವ್ಯಕ್ಕೆ ಹಾಜರಾಗಿ ಎಲ್ಲರನ್ನೂ ಅಪಾಯಕ್ಕೆ ಸಿಲುಕಿಸಿದ್ದಾರೆ. …
Read More »ದಾರಿ ತಪ್ಪಿ ದೆಹಲಿ ತಲುಪಿದ ವೃದ್ಧೆ;ಕರಳು ಬಳ್ಳಿಗೆ ಸೇರಿಸಿದ ಯೋಧ
ಬಾಗಲಕೋಟೆ: ಮೊಮ್ಮಗನ ಜತೆಗೆ ತಿರುಪತಿ ದರ್ಶನಕ್ಕೆ ಹೋಗಿದ್ದ ಜಿಲ್ಲೆಯ ವೃದ್ಧೆಯೊಬ್ಬರು ರೈಲು ಹತ್ತುವಾಗ ತಪ್ಪಿ ಬೇರೊಂದು ರೈಲು ಏರಿದ್ದರಿಂದ ದೆಹಲಿ ತಲುಪಿದ್ದು, ಆ ವೃದ್ಧೆಯನ್ನು ಸೈನಿಕರೊಬ್ಬರು ಕರಳು ಬಳ್ಳಿಗೆ ಕೂಡಿಸಲು ನೆರವಾಗಿದ್ದಾರೆ. ಹುನಗುಂದ ತಾಲೂಕಿನ ದಾಸಬಾಳ ಗ್ರಾಮದ ಶಿವಮ್ಮ ಪಾಟೀಲ ಎಂಬ ವೃದ್ಧೆ, ಕಳೆದ ಶನಿವಾರ ತಿರುಪತಿಗೆ ಹೋಗಿದ್ದರು. ತಿರುಪತಿ ದರ್ಶನ ಮುಗಿದ ಬಳಿಕ ರೈಲ್ವೆ ನಿಲ್ದಾಣದಲ್ಲಿ ಮೊಮ್ಮಗನೊಂದಿಗೆ ಇದ್ದ ವೃದ್ಧೆ ಗದ್ದಲದಲ್ಲಿ ಪ್ರತ್ಯೇಕಗೊಂಡಿದ್ದರು. ಮೊಮ್ಮಗ ರೈಲು ನಿಲ್ದಾಣದಲ್ಲಿ ವೃದ್ಧೆಗಾಗಿ …
Read More »ಸಿಡಿ ಬಂದ ವೇಗದಲ್ಲೇ ಮರಳಿ ಹೋಗುತ್ತದೆ : ಸಚಿವ ಆರ್. ಶಂಕರ್
ಬಾಗಲಕೋಟೆ : ಮಾಜಿ ಸಚಿವ ರಮೇಶ ಜಾರಕಿಹೋಳಿ ಕುರಿತು ಬಿಡುಗಡೆಯಾಗಿರುವ ಸಿಡಿ, ಎಷ್ಟು ವೇಗವಾಗಿ ಬಂತೋ ಅಷ್ಟೇ ವೇಗದಲ್ಲಿ ಮರಳಿ ಹೋಗುತ್ತದೆ. ಎಲ್ಲರೂ ಸ್ವಲ್ಪ ತಾಳ್ಮೆಯಿಂದ ಕಾಯಿರಿ ಎಂದು ತೋಟಗಾರಿಕೆ ಹಾಗೂ ರೇಷ್ಮೆ ಸಚಿವ ಆರ್. ಶಂಕರ ಹೇಳಿದರು. ತೋಟಗಾರಿಕೆ ವಿವಿಯ 10ನೇ ಘಟಿಕೋತ್ಸವದಲ್ಲಿ ಭಾಗವಹಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ನೂರಕ್ಕೆ ನೂರರಷ್ಟು ಸಿಡಿ ಮರಳಿ ಹೋಗುತ್ತದೆ. ಜನರು ಸಿಡಿ-ಪಿಡಿ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಮೂರು ಉಪ ಚುನಾವಣೆಯಲ್ಲೂ …
Read More »